Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 13:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 “ಅಶಾಂತಿಯಿದ್ದರೂ ಅವರು ‘ಶಾಂತಿಯಿದೆ’ ಎಂದು ಹೇಳಿ ನನ್ನ ಜನರನ್ನು ವಂಚಿಸಿದ್ದಾರೆ. ಒಬ್ಬನು ತೆಳುವಾದ ಗೋಡೆಯನ್ನು ಕಟ್ಟಿದ್ದರೂ, ಇಗೋ, ಅದಕ್ಕೆ ಸುಣ್ಣಬಳಿಯುತ್ತಾರೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 “ಅಶಾಂತಿಯಿರುವಾಗಲೂ ಅವರು ಶಾಂತಿಯಿದೆ ಎಂದು ಹೇಳಿ ನನ್ನ ಜನಗಳನ್ನು ವಂಚಿಸಿದ್ದಾರೆ. ಜನರು ದುರ್ಬಲ ಗೋಡೆಯನ್ನು ಕಟ್ಟಿದ್ದಾರೆ. ಅದಕ್ಕೆ ಆ ಪ್ರವಾದಿಗಳು ಸುಣ್ಣ ಬಳಿಯುತ್ತಾರೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಕ್ಷೇಮವಿಲ್ಲದಿದ್ದರೂ ಅವರು ಕ್ಷೇಮ ಎಂದು ಹೇಳಿ ನನ್ನ ಜನರನ್ನು ವಂಚಿಸಿದ್ದಾರಲ್ಲಾ. ಒಬ್ಬನು ತೆಳುವಾದ ಗೋಡೆಯನ್ನು ಕಟ್ಟಿದ್ದರೆ, ಇಗೋ, ಅದಕ್ಕೆ ಸುಣ್ಣ ಬಳಿಯುತ್ತಾರೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 “ಮತ್ತೆಮತ್ತೆ ಆ ಸುಳ್ಳು ಪ್ರವಾದಿಗಳು ನನ್ನ ಜನರಿಗೆ ಸುಳ್ಳು ಹೇಳಿದರು. ಅವರು ಶಾಂತಿ ಇರುವದೆಂದು ಹೇಳಿದರು. ಆದರೆ ಶಾಂತಿ ಇರಲಿಲ್ಲ. ಅದು ಈ ರೀತಿಯಲ್ಲಿದೆ: ಜನರು ಬಲಹೀನವಾದ ಗೋಡೆಯನ್ನು ಕಟ್ಟುತ್ತಾರೆ; ಅದು ಬಲವಾಗಿ ಕಾಣುವಂತೆ ಮಾಡಲು ಪ್ರವಾದಿಗಳು ಅದಕ್ಕೆ ತೆಳುವಾದ ಮಡ್ಡಿ ಮಾಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 “ ‘ಏಕೆಂದರೆ ಸಮಾಧಾನವಿಲ್ಲದಿರುವಾಗ ಅವರು, “ಸಮಾಧಾನವಿದೆ,” ಎಂದು ಹೇಳಿ, ನನ್ನ ಜನರನ್ನು ತಪ್ಪು ದಾರಿಗೆ ನಡೆಸಿದ್ದಾರೆ. ಒಬ್ಬನು ದುರ್ಬಲ ಗೋಡೆಯನ್ನು ಕಟ್ಟಿದರೆ, ಈ ಪ್ರವಾದಿಗಳ ಗುಂಪು ಅದಕ್ಕೆ ಸುಣ್ಣ ಹಚ್ಚಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 13:10
27 ತಿಳಿವುಗಳ ಹೋಲಿಕೆ  

ಅಲ್ಲಿನ ಸುಳ್ಳು ಪ್ರವಾದಿಗಳು ಇವರಿಗಾಗಿ ವ್ಯರ್ಥ ದರ್ಶನವನ್ನೂ, ಸುಳ್ಳು ಕಣಿಯನ್ನೂ ಕಂಡು ಯೆಹೋವನು ಅವರೊಂದಿಗೆ ಮಾತನಾಡದಿದ್ದರೂ, ‘ಕರ್ತನಾದ ಯೆಹೋವನು ಇಂತೆನ್ನುತ್ತಾನೆ’ ಎಂದು ನುಡಿಯುತ್ತಾ ಮೇಲೆ ಸುಣ್ಣ ಹಚ್ಚುತ್ತಾರೆ.


‘ಇಸ್ರಾಯೇಲಿನ ಪ್ರವಾದಿಗಳೇ, ಅಶಾಂತಿಯಿದ್ದರೂ ಶಾಂತಿಯಿದೆ ಎಂಬ ದರ್ಶನಗಳನ್ನು ನೀವು ಕಂಡು ಯೆರೂಸಲೇಮಿನ ವಿಷಯವಾಗಿ ಪ್ರವಾದಿಸಿದ್ದೀರಲ್ಲವೆ? ಗೋಡೆಯು ಇಲ್ಲವಾಯಿತು, ಅದಕ್ಕೆ ಸುಣ್ಣ ಬಳಿದವರೂ ಇಲ್ಲವಾದರು’” ಇದು ಕರ್ತನಾದ ಯೆಹೋವನ ನುಡಿ.


ಅದಕ್ಕೆ ನಾನು, “ಅಯ್ಯೋ, ಕರ್ತನಾದ ಯೆಹೋವನೇ, ಇಗೋ ಪ್ರವಾದಿಗಳು ಈ ಜನರಿಗೆ, ‘ಖಡ್ಗವು ನಿಮ್ಮ ಕಣ್ಣಿಗೆ ಕಾಣದು, ಕ್ಷಾಮವು ನಿಮಗೆ ಸಂಭವಿಸದು; ಯೆಹೋವನು ಈ ಸ್ಥಳದಲ್ಲಿ ತಾನು ಪ್ರಮಾಣ ಮಾಡಿದಂತೆ ಸಮಾಧಾನವನ್ನು ನಿಮಗೆ ಕೊಡುವನು ಎಂದು ನುಡಿಯುತ್ತಾರೆ’” ಎಂಬುದಾಗಿ ಹೇಳಿದೆನು.


ಸಮಾಧಾನವಿಲ್ಲದ್ದಿದ್ದರೂ, ‘ಸಮಾಧಾನ’ ಎಂದು ಹೇಳಿ ನನ್ನ ಪ್ರಜೆಯೆಂಬಾಕೆಯ ಗಾಯವನ್ನು ಮೇಲೆ ಮೇಲೆ ವಾಸಿಮಾಡಿದ್ದಾರೆ.


ಸಮಾಧಾನವಿಲ್ಲದಿದ್ದರೂ, ಸಮಾಧಾನ ಎಂದು ಹೇಳಿ ನನ್ನ ಜನರ ಗಾಯವನ್ನು ಮೇಲೆ ಮೇಲೆ ವಾಸಿಮಾಡಿದ್ದಾರೆ.


ಆದರೆ ಇಸ್ರಾಯೇಲರು ಆತನ ಮಾತನ್ನು ಕೇಳದೆ ಮನಸ್ಸೆಯಿಂದ ಪ್ರೇರೇಪಿತರಾಗಿ ತಮ್ಮ ಮುಂದೆಯೇ ಯೆಹೋವನಿಂದ ಸಂಹೃತವಾದ ಅನ್ಯಜನಾಂಗಗಳಿಗಿಂತಲೂ ದುಷ್ಟರಾದರು.


ನಿನ್ನ ವಿರುದ್ಧ ನನಗೆ ಅಪಾದನೆ ಒಂದಿದೆ. ಯೆಜೆಬೇಲೆಂಬ ಆ ಹೆಂಗಸು ತನ್ನನ್ನು ಪ್ರವಾದಿನಿಯೆಂದು ಹೇಳಿಕೊಂಡು, ಜಾರತ್ವಮಾಡಬಹುದೆಂದೂ ವಿಗ್ರಹಗಳಿಗೆ ನೈವೇದ್ಯ ಮಾಡಿದ ಪದಾರ್ಥಗಳನ್ನು ತಿನ್ನಬಹುದೆಂದೂ ನನ್ನ ದಾಸರಿಗೆ ಬೋಧಿಸುತ್ತಾ ಅವರನ್ನು ತಪ್ಪಾದ ಮಾರ್ಗದಲ್ಲಿ ನಡೆಸುತ್ತಿದ್ದರೂ ನೀನು ಅವಳನ್ನು ತಡೆಯದೆ ಅನುಮತಿಯನ್ನು ಕೊಟ್ಟಿರುವಿ.


ನಿಮ್ಮನ್ನು ಸನ್ಮಾರ್ಗದಿಂದ ತಪ್ಪಿಸಿ ತಪ್ಪುದಾರಿಗೆ ಎಳೆಯುವವರ ಕುರಿತಾಗಿ ಇವುಗಳನ್ನು ನಾನು ನಿಮಗೆ ಬರೆದಿದ್ದೇನೆ.


ಆದರೆ ದುಷ್ಟರೂ, ವಂಚಕರೂ ಇತರರನ್ನು ಮೋಸಮಾಡುತ್ತಾ ತಾವೇ ಮೋಸಹೋಗುತ್ತಾ ಹೆಚ್ಚಾದ ಕೆಟ್ಟತನಕ್ಕೆ ಹೋಗುವರು.


ಆದರೂ ಮುಂಬರುವ ದಿನಗಳಲ್ಲಿ ಕೆಲವರು ವಂಚಿಸುವ ಆತ್ಮಗಳ ನುಡಿಗಳಿಗೂ, ದೆವ್ವಗಳ ಬೋಧನೆಗಳಿಗೂ ಲಕ್ಷ್ಯಕೊಟ್ಟು ಕ್ರಿಸ್ತ ನಂಬಿಕೆಯಿಂದ ಭ್ರಷ್ಟರಾಗುವರೆಂದು ದೇವರಾತ್ಮನು ಸ್ಪಷ್ಟವಾಗಿ ಹೇಳುತ್ತಿದ್ದಾನೆ.


ಈಗ ಅಹಂಕಾರಿಗಳನ್ನು ಭಾಗ್ಯವಂತರೆಂದು ಕೊಂಡಾಡಬೇಕಾಗಿ ಬಂತು; ಹೌದು, ದುಷ್ಕರ್ಮಿಗಳು ಏಳಿಗೆಗೆ ಬಂದಿದ್ದಾರೆ, ದೇವರನ್ನು ಪರೀಕ್ಷಿಸಿದರೂ ಸುರಕ್ಷಿತರಾಗಿದ್ದಾರೆ” ಅಂದುಕೊಂಡಿದ್ದೀರಲ್ಲಾ.


ಗಾಳಿಯನ್ನೂ, ಮೋಸವನ್ನೂ ಹಿಂಬಾಲಿಸುವ ಸುಳ್ಳುಗಾರನೊಬ್ಬನು, “ನಾನು ದ್ರಾಕ್ಷಾರಸ, ಮಧ್ಯಗಳ ವಿಷಯವಾಗಿ ನಿನಗೆ ಪ್ರವಾದನೆ ಮಾಡುವೆನು” ಎಂದು ಹೇಳಿದರೆ, ಈ ಜನರು ಅಂಥವನನ್ನು ಪ್ರವಾದಿಯನ್ನಾಗಿ ಸ್ವೀಕರಿಸಿಕೊಳ್ಳುವರು.


ಸಂಕಟ ಸಂಭವಿಸುವುದು; ಅವರು ಸಮಾಧಾನವನ್ನು ಹುಡುಕಿದರೂ ಸ್ವಲ್ಪವೂ ಸಿಕ್ಕುವುದಿಲ್ಲ.


ನನ್ನ ಜನರು ತಪ್ಪಿಸಿಕೊಂಡ ಕುರಿಗಳು; ಪಾಲಕರು ಅವರನ್ನು ದಾರಿತಪ್ಪಿಸಿ ಪರ್ವತಗಳಲ್ಲಿ ಅಲೆದಾಡಿಸಿದ್ದಾರೆ; ನನ್ನ ಜನರು ತಮ್ಮ ಹಕ್ಕೆಯನ್ನು ಮರೆತು ಬೆಟ್ಟಗುಡ್ಡಗಳಲ್ಲಿ ತಿರುಗಾಡುತ್ತಲಿದ್ದಾರೆ.


ಹಿತ ಸಮಾಚಾರವನ್ನು ಸಾರುವ ಪ್ರವಾದಿಯೋ ಯೆಹೋವನಿಂದ ನಿಜವಾಗಿ ಕಳುಹಿಸಲ್ಪಟ್ಟವನೆಂದು ಅವನ ಮಾತು ಕೈಗೂಡಿದ ಮೇಲೇ ತಿಳಿಯತಕ್ಕದ್ದು” ಎಂದು ಹೇಳಿದನು.


ನನ್ನನ್ನು ಅಸಡ್ಡೆಮಾಡುವವರಿಗೆ, ‘ನಿಮಗೆ ಶುಭವಾಗುವುದು ಎಂಬುದಾಗಿ ಯೆಹೋವನು ನುಡಿದಿದ್ದಾನೆ’ ಎಂದು ಹೇಳುತ್ತಲೇ ಇದ್ದಾರೆ. ಸ್ವಂತ ಹೃದಯದ ಹಟದಂತೆ ನಡೆಯುವವರೆಲ್ಲರಿಗೂ, ‘ನಿಮಗೆ ಯಾವ ಕೇಡೂ ಸಂಭವಿಸದು’ ಎಂದು ನುಡಿಯುತ್ತಾರೆ.


ನಾವು ಸುಖವನ್ನು ನಿರೀಕ್ಷಿಸಿದೆವು, ಯಾವ ಮೇಲೂ ಆಗಲಿಲ್ಲ; ಕ್ಷೇಮಕಾಲವನ್ನು ಎದುರುನೋಡಿದೆವು, ಹಾ, ಅಂಜಿಕೆಯೇ!


ಪ್ರವಾದಿಗಳು ಸುಳ್ಳಾಗಿ ಪ್ರವಾದಿಸುತ್ತಾರೆ, ಯಾಜಕರು ಅವರಿಂದ ಅಧಿಕಾರ ಹೊಂದಿ ದೊರೆತನ ಮಾಡುತ್ತಾರೆ. ನನ್ನ ಜನರು ಇದನ್ನೇ ಪ್ರೀತಿಸುತ್ತಾರೆ; ಕಟ್ಟಕಡೆಗೆ ನೀವು ಏನು ಮಾಡುವಿರಿ?


ಆಗ ನಾನು, “ಅಯ್ಯೋ, ಕರ್ತನಾದ ಯೆಹೋವನೇ, ನೀನು ಈ ಜನರಿಗೂ ಮತ್ತು ಯೆರೂಸಲೇಮಿಗೂ, ‘ನಿಮಗೆ ಸಮಾಧಾನವಾಗುವುದು’ ಎಂದು ಹೇಳಿ ನಿಶ್ಚಯವಾಗಿ ಇವರನ್ನು ಬಹಳ ಮೋಸಗೊಳಿಸಿದ್ದಿ; ಖಡ್ಗವು ಪ್ರಾಣದ ಮಟ್ಟಿಗೂ ಇಳಿಯುತ್ತದಲ್ಲಾ” ಅಂದೆನು.


“ದುಷ್ಟರಿಗೆ ಸಮಾಧಾನವೇ ಇಲ್ಲ” ಎಂದು ನನ್ನ ದೇವರು ನುಡಿಯುತ್ತಾನೆ.


ಇವರು ದಿವ್ಯದರ್ಶಿಗಳಿಗೆ, “ನಿಮಗೆ ದರ್ಶನವಾಗದಿರಲಿ” ಎನ್ನುತ್ತಾರೆ, ಮತ್ತು ಪ್ರವಾದಿಗಳಿಗೆ, “ನಮಗಾಗಿ ನ್ಯಾಯವಾದವುಗಳನ್ನು ಪ್ರವಾದಿಸಬೇಡಿರಿ, ನಯವಾದವುಗಳನ್ನು ನಮಗೆ ನುಡಿಯಿರಿ, ಮೋಸವಾದವುಗಳನ್ನೇ ಪ್ರವಾದಿಸಿರಿ ಎನ್ನುತ್ತಾರೆ.


ಸನ್ಮಾರ್ಗಿಯು ನೆರೆಯವನಿಗೆ ಮಾರ್ಗತೋರಿಸುವನು, ದುರ್ಮಾರ್ಗಿಯು ಮಾರ್ಗತಪ್ಪಿಸುವನು.


ಇತ್ತ ಮೀಕಾಯೆಹುವನ್ನು ಕರೆಯುವುದಕ್ಕೆ ಬಂದಿದ್ದ ದೂತನು ಅವನಿಗೆ, “ಎಲ್ಲಾ ಪ್ರವಾದಿಗಳೂ ಏಕ ಮನಸ್ಸಿನಿಂದ ಅರಸನಿಗೆ ಶುಭವನ್ನೇ ತಿಳಿಸುತ್ತಿದ್ದಾರೆ; ದಯವಿಟ್ಟು ನೀನೂ ಅವರಂತೆ ಶುಭವನ್ನೇ ತಿಳಿಸು” ಎಂದು ಹೇಳಿದನು.


“ಸಮಾಧಾನವಾಗಿಯೂ ನಿರ್ಭಯವಾಗಿಯೂ ಇರುತ್ತೇವೆಂದು” ಜನರು ಹೇಳುತ್ತಿರುವಾಗಲೇ ನಾಶನವು ಅವರ ಮೇಲೆ ಗರ್ಭಿಣಿಗೆ ಪ್ರಸವವೇದನೆ ಬರುವ ಪ್ರಕಾರ ಬರುವುದು, ಅವರು ಹೇಗೂ ತಪ್ಪಿಸಿಕೊಳ್ಳಲಾರರು.


ಆಹಾ, ಸುಳ್ಳು ಕನಸುಗಳನ್ನು ಪ್ರಕಟಿಸಿ, ವಿವರಿಸಿ ತಮ್ಮ ಸುಳ್ಳು ಮಾತುಗಳಿಂದಲೂ, ನಿರ್ಲಕ್ಷದಿಂದಲೂ ನನ್ನ ಜನರಿಗೆ ದಾರಿತಪ್ಪಿಸುವ ಪ್ರವಾದಿಗಳನ್ನು ಎದುರಿಸುವವನಾಗಿದ್ದೇನೆ; ನಾನು ಅವರನ್ನು ಕಳುಹಿಸಲಿಲ್ಲ, ಆಜ್ಞಾಪಿಸಲಿಲ್ಲ. ಅವರಿಂದ ಈ ಜನರಿಗೆ ಯಾವ ಪ್ರಯೋಜನವೂ ಆಗುವುದಿಲ್ಲ. ಇದು ಯೆಹೋವನ ನುಡಿ.


ದಂಡನೆಯ ದಿನಗಳು ಹತ್ತಿರವಾಗಿದೆ, ಮುಯ್ಯಿತೀರಿಸುವ ದಿನಗಳು ಸಮೀಪಿಸಿವೆ. ಅದು ಇಸ್ರಾಯೇಲಿನ ಅನುಭವಕ್ಕೆ ಬಂದೇ ಬರುವವು; ಇಸ್ರಾಯೇಲೇ, ನಿನ್ನ ಅಧರ್ಮವು ಬಹಳವಾಗಿರುವುದರಿಂದಲೂ, ವಿರೋಧವು ಹೆಚ್ಚಾಗಿರುವುದರಿಂದಲೂ, “ಪ್ರವಾದಿಯು ಮೂರ್ಖನು ಮತ್ತು ದೇವರಾತ್ಮ ಪ್ರೇರಿತನು ಹುಚ್ಚನು” ಅಂದುಕೊಳ್ಳುತ್ತೀ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು