Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 13:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಆದಕಾರಣ, ನೀನು ಸುಣ್ಣಬಳಿಯುವವರಿಗೆ ಹೀಗೆ ನುಡಿ, ‘ವಿಪರೀತ ಮಳೆಯಾಗಿ ಗೋಡೆಯು ಬಿದ್ದುಹೋಗುವುದು, ಆನೆಕಲ್ಲುಗಳು ಸುರಿಯುವವು; ಬಿರುಗಾಳಿಯು ಗೋಡೆಯನ್ನು ಒಡೆದುಹಾಕುವುದು.’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಆದಕಾರಣ, ನೀನು ಸುಣ್ಣ ಬಳಿಯುವವರಿಗೆ ಹೀಗೆ ನುಡಿ: ‘ವಿಪರೀತ ಮಳೆಯಾಗಿ ಗೋಡೆ ಬಿದ್ದುಹೋಗುವುದು, ಆನೆಕಲ್ಲುಗಳು ಸುರಿಯುವುವು; ಬಿರುಗಾಳಿ ಗೋಡೆಯನ್ನು ಕೆಡವಿಹಾಕುವುದು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಆದಕಾರಣ ನೀನು ಸುಣ್ಣಬಳಿಯುವವರಿಗೆ ಹೀಗೆ ನುಡಿ - ವಿಪರೀತ ಮಳೆಯಾಗಿ ಗೋಡೆಯು ಬಿದ್ದುಹೋಗುವದು, ಆನೆಕಲ್ಲುಗಳು ಸುರಿಯುವವು; ಬಿರುಗಾಳಿಯು ಗೋಡೆಯನ್ನು ಒಡೆದುಹಾಕುವದು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಗೋಡೆಗೆ ಮಡ್ಡಿ ಮಾಡುವವರಿಗೆ ಹೀಗೆ ಹೇಳು: ನಾನು ಆಲಿಕಲ್ಲು ಮತ್ತು ಬಲವಾದ ಮಳೆಯನ್ನು ಕಳುಹಿಸುವೆನು. ಗಾಳಿಯು ಬಲವಾಗಿ ಬೀಸಿ ಸುಂಟರಗಾಳಿಯು ಬರುವುದು. ಆಗ ಗೋಡೆಯು ಮುರಿದುಬೀಳುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಆದ್ದರಿಂದ ಸುಣ್ಣ ಹಚ್ಚುತ್ತಿರುವವನಿಗೆ ಅದು ಬೀಳುವುದೆಂದು ಹೇಳು. ಅಲ್ಲಿ ವಿಪರೀತ ಮಳೆ ಬರುವುದು ಮತ್ತು ದೊಡ್ಡ ಕಲ್ಮಳೆಯು ಬೀಳುವುದು. ಬಿರುಗಾಳಿಯು ಅದನ್ನು ಸೀಳಿಬಿಡುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 13:11
19 ತಿಳಿವುಗಳ ಹೋಲಿಕೆ  

ನಾನು ಗೋಗನ ಸಂಗಡ ವ್ಯಾಜ್ಯಮಾಡುತ್ತಾ ಅವನನ್ನು ವ್ಯಾಧಿಗೂ, ಸಾವಿಗೂ ಗುರಿಮಾಡಿ, ನಾನು ಅವನ ಮೇಲೆಯೂ, ಅವನ ದಂಡುಗಳ ಮೇಲೆಯೂ, ಅವನೊಂದಿಗಿರುವ ಅನೇಕ ಜನಾಂಗಗಳ ಮೇಲೆಯೂ ವಿಪರೀತ ಮಳೆ, ದೊಡ್ಡ ಆನೆಕಲ್ಲು, ಬೆಂಕಿ, ಗಂಧಕ, ಇವುಗಳನ್ನು ಸುರಿಸುವೆನು.


ಆಹಾ, ಕರ್ತನು ಒಬ್ಬ ಮಹಾಬಲಿಷ್ಠನನ್ನು ನೇಮಿಸಿದ್ದಾನೆ; ಅವನು ರಭಸವಾಗಿ ಸುರಿಯುವ ಕಲ್ಮಳೆಯಂತೆಯೂ, ನಾಶಕರವಾದ ಬಿರುಗಾಳಿಯಂತೆಯೂ, ಮುಳುಗಿಸುವ ಅತಿಧಾರಾವೃಷ್ಟಿಯಂತೆಯೂ ಬಲಾತ್ಕಾರದಿಂದ ಆ ಪಟ್ಟಣವನ್ನು ತನ್ನ ಕೈಯಿಂದ ಅಧೋಗತಿಗೆ ತರುವನು.


ಮನೆ ಕಟ್ಟಿದ ಮೇಲೆ ಮಳೆ ಸುರಿಯಿತು; ಪ್ರವಾಹವು ಬಂದವು; ನಾಲ್ಕು ಕಡೆಯಿಂದ ಗಾಳಿ ಬೀಸಿ ಆ ಮನೆಗೆ ಹೊಡೆಯಿತು. ಆಗ ಆ ಮನೆ ಸಂಪೂರ್ಣವಾಗಿ ಕುಸಿದುಬಿತ್ತು. ಆ ಕುಸಿತ ಅಗಾಧವಾದುದು.


ಮನೆ ಕಟ್ಟಿದ ಮೇಲೆ ಮಳೆ ಸುರಿಯಿತು; ಪ್ರವಾಹವು ಬಂದವು; ನಾಲ್ಕು ಕಡೆಯಿಂದ ಗಾಳಿ ಬೀಸಿ ಆ ಮನೆಗೆ ಹೊಡೆಯಿತು. ಆದಾಗ್ಯೂ ಅದರ ಅಸ್ತಿವಾರವು ಬಂಡೆಯ ಮೇಲಿದ್ದುದರಿಂದ ಅದು ಬೀಳಲಿಲ್ಲ.


ಯೆಹೋವನು ದೀರ್ಘಶಾಂತನಾಗಿದ್ದರೂ ಆತನ ಶಕ್ತಿಯು ಅಪಾರ, ಅಪರಾಧಿಗಳನ್ನು ಶಿಕ್ಷಿಸದೆ ಬಿಡನು; ಯೆಹೋವನು ಬಿರುಗಾಳಿಯಲ್ಲಿಯೂ, ತುಫಾನಿನಲ್ಲಿಯೂ ನಡೆಯುತ್ತಾನೆ; ಮೋಡಗಳು ಆತನ ಹೆಜ್ಜೆಯಿಂದೇಳುವ ಧೂಳು.


ಆದರೆ ಕಲ್ಮಳೆ ಸುರಿಯಲು ವನವು ಹಾಳಾಗುವುದು, ಪಟ್ಟಣವು ನೆಲಸಮವಾಗುವುದು.


ಸೇನಾಧೀಶ್ವರನಾದ ಯೆಹೋವನು ಗುಡುಗು, ಭೂಕಂಪ, ಮಹಾಶಬ್ದ, ಬಿರುಗಾಳಿ, ಚಂಡಮಾರುತ, ದಹಿಸುವ ಅಗ್ನಿಯ ಜ್ವಾಲೆ ಇವುಗಳ ಮೂಲಕ ನಿನ್ನನ್ನು ಶಿಕ್ಷಿಸುವನು.


ನೀನು ದೀನರಿಗೆ ಕೋಟೆಯು, ಇಕ್ಕಟ್ಟಿನಲ್ಲಿ ದಿಕಿಲ್ಲದವರಿಗೆ ರಕ್ಷಣಾದುರ್ಗವೂ, ಬಿಸಿಲಿಗೆ ನೆರಳೂ, ಭೀಕರರ ಶ್ವಾಸವು ಗೋಡೆಗೆ ಬಡಿದುಬಿಡುವ ಬಿರುಗಾಳಿಯಂತಿರುವಾಗ ಆಶ್ರಯವೂ ಆಗಿದ್ದೀ.


ಆದುದರಿಂದ ಭಕ್ತರೆಲ್ಲರು ಅಗತ್ಯಕಾಲದಲ್ಲಿ ನಿನ್ನನ್ನು ಪ್ರಾರ್ಥಿಸಲಿ; ಆಗ ಮಹಾಪ್ರವಾಹವು ಅಂಥವರನ್ನು ಮುಟ್ಟುವುದೇ ಇಲ್ಲ.


ಆತನು ದುಷ್ಟರ ಮೇಲೆ ಬೆಂಕಿ ಗಂಧಕಗಳನ್ನು ಸುರಿಸಲಿ. ಉರಿಗಾಳಿಗಳನ್ನು ಅವರಿಗೆ ಪಾನವಾಗಮಾಡಲಿ.


ಮೂಡಣ ಗಾಳಿಯು ಕೊಚ್ಚಿಕೊಂಡು ಹೋಗುವುದರಿಂದ ಅವನು ಹಾರಿ ಹೋಗುವನು, ಅದು ಅವನನ್ನು ಬಡಿದು ಅವನ ಸ್ಥಳದಿಂದ ದೂರಮಾಡುವುದು.


ನಾನು ಇಕ್ಕಟ್ಟಿನ ಕಾಲಕ್ಕಾಗಿಯೂ, ಯುದ್ಧಕದನಗಳ ದಿನಕ್ಕಾಗಿಯೂ ಇಟ್ಟುಕೊಂಡಿರುವ,


ಆಗ ನಾನು ನೋಡಲಾಗಿ; ಇಗೋ, ಉತ್ತರ ದಿಕ್ಕಿನಿಂದ ಬಿರುಗಾಳಿಯು ಬೀಸಿತು, ಎಡೆಬಿಡದೆ ಝಗಝಗಿಸುವ ಜ್ವಾಲೆಯುಳ್ಳ ಮಹಾಮೇಘವು ಕಾಣಿಸಿತು. ಅದರ ಸುತ್ತಲೂ ಮಿಂಚು ಹೊಳೆಯಿತು, ಅದರ ನಡುವೆ, ಆ ಜ್ವಾಲೆಯ ಮಧ್ಯೆ, ಸುವರ್ಣದಂಥ ಕಾಂತಿಯು ಉಂಟಾಯಿತು.


ಇಗೋ, ಗೋಡೆಯು ಬಿದ್ದ ಮೇಲೆ, ‘ನೀವು ಬಳಿದ ಸುಣ್ಣ ಎಲ್ಲಿ?’ ಎಂದು ನಿಮ್ಮನ್ನು ಕೇಳುವರಲ್ಲವೆ?”


ಹಿಮದ ಭಂಡಾರಗಳನ್ನು ಪ್ರವೇಶಿಸಿದ್ದೀಯಾ? ಕಲ್ಮಳೆಯ ಬೊಕ್ಕಸಗಳನ್ನು ನೋಡಿದ್ದೀಯಾ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು