Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 13:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “‘ನಾನು ಸಿಟ್ಟುಗೊಂಡು ಗೋಡೆಯನ್ನು ಬಿರುಗಾಳಿಯಿಂದ ಒಡೆದುಹಾಕುವೆನು; ಅದನ್ನು ನಾಶ ಮಾಡಲಿಕ್ಕೆ ನನ್ನ ಕೋಪದಿಂದ ವಿಪರೀತ ಮಳೆಯುಂಟಾಗುವುದು, ನನ್ನ ರೋಷದಿಂದ ಆನೆಕಲ್ಲುಗಳು ಸುರಿಯುವವು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 “ಹೀಗಿರಲು ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: ‘ನಾನು ಸಿಟ್ಟುಗೊಂಡು ಗೋಡೆಯನ್ನು ಬಿರುಗಾಳಿಯಿಂದ ಕೆಡವಿಹಾಕುವೆನು; ಅದನ್ನು ನಾಶಮಾಡಲು ನನ್ನ ಕೋಪದಿಂದ ವಿಪರೀತ ಮಳೆಯುಂಟಾಗುವುದು; ರೋಷದಿಂದ ಆನೆಕಲ್ಲುಗಳು ಸುರಿಯುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ನಾನು ಸಿಟ್ಟುಗೊಂಡು ಗೋಡೆಯನ್ನು ಬಿರುಗಾಳಿಯಿಂದ ಒಡೆದುಹಾಕುವೆನು; ಅದನ್ನು ನಾಶಮಾಡಲಿಕ್ಕೆ ನನ್ನ ಕೋಪದಿಂದ ವಿಪರೀತ ಮಳೆಯುಂಟಾಗುವದು, [ನನ್ನ] ರೋಷದಿಂದ ಆನೆಕಲ್ಲುಗಳು ಸುರಿಯುವವು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ನನ್ನ ಒಡೆಯನಾದ ಯೆಹೋವನು ಹೀಗೆ ಹೇಳುತ್ತಾನೆ, “ನಾನು ಸಿಟ್ಟುಗೊಂಡಿದ್ದೇನೆ. ಮತ್ತು ನಿಮಗೆ ವಿರುದ್ಧವಾಗಿ ಬಿರುಗಾಳಿಯನ್ನು ಕಳುಹಿಸುತ್ತೇನೆ. ನಾನು ಕೋಪಗೊಂಡಿದ್ದೇನೆ. ಆದ್ದರಿಂದ ಭಾರೀ ಮಳೆಯು ಬೀಳುವಂತೆ ಮಾಡುವೆನು. ನಾನು ಕೋಪಗೊಂಡಿದ್ದರಿಂದ ನಾಶಕರವಾದ ಆಲಿಕಲ್ಲು ಆಕಾಶದಿಂದ ಬೀಳುವಂತೆ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 “ ‘ಆದ್ದರಿಂದ ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ಅದನ್ನು ನನ್ನ ರೋಷದಲ್ಲಿ ಬಿರುಗಾಳಿಯಿಂದ ಸೀಳಿಬಿಡುವೆನು. ಅದನ್ನು ನಾಶಪಡಿಸುವ ಹಾಗೆ ನನ್ನ ಕೋಪದಿಂದ ವಿಪರೀತ ಮಳೆಯೂ, ನನ್ನ ಉರಿಯಿಂದ ಕಲ್ಮಳೆಯ ಕಲ್ಲುಗಳು ಸುರಿಯುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 13:13
20 ತಿಳಿವುಗಳ ಹೋಲಿಕೆ  

ಆಗ ಯೆಹೋವನು ತನ್ನ ಗಂಭೀರವಾದ ಧ್ವನಿಯನ್ನು ಕೇಳಮಾಡಿ, ತೀವ್ರಕೋಪ, ಕಬಳಿಸುವ ಅಗ್ನಿಜ್ವಾಲೆ, ಬಿರುಗಾಳಿ, ಅತಿವೃಷ್ಟಿ, ಕಲ್ಮಳೆ ಇವುಗಳಿಂದ ತನ್ನ ಶಿಕ್ಷಾಹಸ್ತವನ್ನು ತೋರ್ಪಡಿಸುವನು.


ಮತ್ತು ಆಕಾಶದಿಂದ ಮನುಷ್ಯರ ಮೇಲೆ ದೊಡ್ಡ ಆಲಿಕಲ್ಲಿನ ಮಳೆ ಸುರಿಯಿತು. ಒಂದೊಂದು ಅಲಿಕಲ್ಲು ಸುಮಾರು ನಲ್ವತ್ತು ಕಿಲೊಗ್ರಾಮಿನಷ್ಟು ತೂಕವಾಗಿತ್ತು. ಆ ಆಲಿಕಲ್ಲಿನ ಮಳೆಯ ಉಪದ್ರವವು ಬಹಳ ವಿಪರೀತವಾದ್ದರಿಂದ ಆ ಮಳೆಯಲ್ಲಿ ಸಿಕ್ಕಿಕೊಂಡ ಮನುಷ್ಯರು ದೇವರನ್ನು ದೂಷಿಸಿದರು.


ಆಗ ಪರಲೋಕದಲ್ಲಿರುವ ದೇವಾಲಯವು ತೆರೆಯಿತು. ಆತನ ಆಲಯದಲ್ಲಿ ಆತನ ಒಡಂಬಡಿಕೆಯ ಮಂಜೂಷವು ಕಾಣಿಸಿತು. ಇದಲ್ಲದೆ, ಗರ್ಜನೆ, ಗುಡುಗು, ಮಿಂಚುಗಳು, ಭೂಕಂಪವು, ದೊಡ್ಡ ಆಲಿಕಲ್ಲಿನ ಮಳೆಯೂ ಸುರಿಯಿತು.


ಬೆಂಕಿ, ಕಲ್ಮಳೆ, ಹಿಮ, ಹಬೆ ಇವುಗಳು, ಆತನ ಅಪ್ಪಣೆಯನ್ನು ನೆರವೇರಿಸುವ ಬಿರುಗಾಳಿಯು,


ಮೊದಲನೆಯ ದೇವದೂತನು ತನ್ನ ತುತ್ತೂರಿಯನ್ನೂದಲು ರಕ್ತ ಮಿಶ್ರಿತವಾದ ಆಲಿಕಲ್ಲಿನ ಮಳೆಯೂ ಬೆಂಕಿಯೂ ಭೂಮಿಯ ಮೇಲೆ ಸುರಿಯಿತು. ಭೂಮಿಯ ಮೂರರಲ್ಲಿ ಒಂದು ಭಾಗವು ಸುಟ್ಟು ಹೋಯಿತು. ಮರಗಳಲ್ಲಿ ಮೂರರಲ್ಲೊಂದು ಭಾಗ ಸುಟ್ಟು ಹೋದವು. ಹಸಿರು ಹುಲ್ಲೆಲ್ಲಾ ಸುಟ್ಟು ಹೋಯಿತು.


ನಾನು ನಿಮ್ಮ ದುಡಿತದ ಫಲವನ್ನೆಲ್ಲಾ ಆನೆಕಲ್ಲು ಮಳೆಯಿಂದಲೂ, ಬಿಸಿಗಾಳಿಗೂ ಹಾಳುಮಾಡಿ ನಿಮ್ಮನ್ನು ಬಾಧಿಸಿದರೂ, ನೀವು ನನ್ನ ಕಡೆಗೆ ತಿರುಗಿಕೊಳ್ಳಲಿಲ್ಲ” ಇದು ಯೆಹೋವನ ನುಡಿ.


ಆಗ ಯೆಹೋವನು ದೊಡ್ಡ ಬಿರುಗಾಳಿಯನ್ನು ಸಮುದ್ರದ ಮೇಲೆ ಬರಮಾಡಿದನು. ಸಮುದ್ರದಲ್ಲಿ ದೊಡ್ಡ ತುಫಾನು ಎದ್ದು ಹಡಗು ಒಡೆದುಹೋಗುವ ಹಾಗಾಯಿತು.


ಆಹಾ, ಯೆಹೋವನ ರೋಷವೆಂಬ ಬಿರುಗಾಳಿಯು, ಸುಂಟರಗಾಳಿಯು ಹೊರಟಿದೆ. ಅದು ದುಷ್ಟರ ತಲೆಯ ಮೇಲೆ ಹೊಡೆಯುವುದು.


ಆತನು ಅಪ್ಪಣೆಕೊಡಲು ಬಿರುಗಾಳಿಯುಂಟಾಗಿ, ಅದರಲ್ಲಿ ತೆರೆಗಳನ್ನು ಎಬ್ಬಿಸಿತು.


ಆತನು ಅವರ ದೇಶದಲ್ಲಿ ಕಲ್ಮಳೆಯನ್ನು, ಅಗ್ನಿಜ್ವಾಲೆಯನ್ನು ಬರಮಾಡಿ,


ನಾನು ನಿಮ್ಮ ಮೇಲೆ ಕೋಪಗೊಂಡವನಾಗಿ ನಿಮ್ಮ ಪಾಪಗಳ ನಿಮಿತ್ತ ಏಳರಷ್ಟಾಗಿ ಶಿಕ್ಷಿಸುವೆನು.


ನಾನು ಇಕ್ಕಟ್ಟಿನ ಕಾಲಕ್ಕಾಗಿಯೂ, ಯುದ್ಧಕದನಗಳ ದಿನಕ್ಕಾಗಿಯೂ ಇಟ್ಟುಕೊಂಡಿರುವ,


ಆಗ ನಾನು ನೋಡಲಾಗಿ; ಇಗೋ, ಉತ್ತರ ದಿಕ್ಕಿನಿಂದ ಬಿರುಗಾಳಿಯು ಬೀಸಿತು, ಎಡೆಬಿಡದೆ ಝಗಝಗಿಸುವ ಜ್ವಾಲೆಯುಳ್ಳ ಮಹಾಮೇಘವು ಕಾಣಿಸಿತು. ಅದರ ಸುತ್ತಲೂ ಮಿಂಚು ಹೊಳೆಯಿತು, ಅದರ ನಡುವೆ, ಆ ಜ್ವಾಲೆಯ ಮಧ್ಯೆ, ಸುವರ್ಣದಂಥ ಕಾಂತಿಯು ಉಂಟಾಯಿತು.


ಇಗೋ, ಗೋಡೆಯು ಬಿದ್ದ ಮೇಲೆ, ‘ನೀವು ಬಳಿದ ಸುಣ್ಣ ಎಲ್ಲಿ?’ ಎಂದು ನಿಮ್ಮನ್ನು ಕೇಳುವರಲ್ಲವೆ?”


ಹಿಮದ ಭಂಡಾರಗಳನ್ನು ಪ್ರವೇಶಿಸಿದ್ದೀಯಾ? ಕಲ್ಮಳೆಯ ಬೊಕ್ಕಸಗಳನ್ನು ನೋಡಿದ್ದೀಯಾ?


ಅಯ್ಯೋ, ಕರ್ತನು ಕೋಪಗೊಂಡು ಚೀಯೋನ್ ನಗರಿಗೆ ಮೋಡವು ಕವಿಯುವಂತೆ ಮಾಡಿದ್ದಾನಲ್ಲಾ! ಆತನು ತನ್ನ ಸಿಟ್ಟನ್ನು ತೀರಿಸಿಕೊಂಡ ದಿನದಲ್ಲಿ ತನ್ನ ಪಾದಪೀಠವನ್ನು ನೆನಪಿಗೆ ತಾರದೆ ಇಸ್ರಾಯೇಲಿನ ಶಿರೋಮಣಿಯನ್ನು ಆಕಾಶದಿಂದ ಭೂಮಿಗೆ ತಳ್ಳಿಬಿಟ್ಟನು.


ಆತನು ಶತ್ರುವಿನ ಮೇಲೆತ್ತಿದ ಬಲಗೈಯನ್ನು ಹಿಂದೆಗೆದು, ಇಸ್ರಾಯೇಲಿನ ಕೊಂಬನ್ನು ರೋಷಾಗ್ನಿಯಿಂದ ತೀರಾ ಕಡಿದುಹಾಕಿ, ಸುತ್ತಮುತ್ತಲು ನುಂಗುವ ಅಗ್ನಿಜ್ವಾಲೆಯಂತೆ ಯಾಕೋಬನ್ನು ದಹಿಸಿಬಿಟ್ಟಿದ್ದಾನೆ.


ವೈರಿಯ ಹಾಗೆ ಬಿಲ್ಲನ್ನು ಬೊಗ್ಗಿಸಿ, ವಿರೋಧಿಯಂತೆ ಬಲಗೈಯೆತ್ತಿ ನಿಂತು, ಸುಂದರ ಪ್ರಜೆಯನ್ನೆಲ್ಲಾ ಸಂಹರಿಸಿದ್ದಾನೆ; ಚೀಯೋನ್ ಗುಡಾರದ ಮೇಲೆ ತನ್ನ ರೋಷಾಗ್ನಿಯನ್ನು ಸುರಿಸಿದ್ದಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು