ಯೆಹೆಜ್ಕೇಲನು 13:19 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ನೀವು ಜವೆಗೋದಿಯ ಹಿಡಿಗಳನ್ನೂ, ರೊಟ್ಟಿಯ ಚೂರುಗಳನ್ನೂ ಆಶಿಸಿ ಸುಳ್ಳು ಮಾತಿಗೆ ಕಿವಿಗೊಡುವ ನನ್ನ ಜನರಿಗೆ ಸುಳ್ಳು ಹೇಳುವುದರಿಂದ ಜೀವಿಸತಕ್ಕವರನ್ನು ಸಾಯಿಸಿ, ಸಾಯತಕ್ಕವರನ್ನು ಉಳಿಸಿ, ನನ್ನ ಜನರ ನಡುವೆ ನನ್ನ ಘನತೆಗೆ ಕುಂದುತಂದಿದ್ದೀರಿ.’ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ನೀವು ಹಿಡಿಯುವಷ್ಟೆ ಜವೆಗೋಧಿಗೆ, ಚೂರುಪಾರು ರೊಟ್ಟಿಗೆ ಆಸೆಪಟ್ಟು, ಸುಳ್ಳುಮಾತಿಗೆ ಕಿವಿಗೊಡುವ ನನ್ನ ಜನರಿಗೆ ಸುಳ್ಳು ಹೇಳಿ, ಜೀವಿಸತಕ್ಕವರನ್ನು ಸಾಯಿಸಿ, ಸಾಯತಕ್ಕವರನ್ನು ಉಳಿಸಿ, ನನ್ನ ಜನರ ನಡುವೆ ನನ್ನ ಘನತೆಗೆ ಕುಂದುತಂದಿದ್ದೀರಿ.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ನೀವು ಜವೆಗೋದಿಯ ಹಿಡಿಗಳನ್ನೂ ರೊಟ್ಟಿಯ ಚೂರುಗಳನ್ನೂ ಆಶಿಸಿ ಸುಳ್ಳುಮಾತಿಗೆ ಕಿವಿಗೊಡುವ ನನ್ನ ಜನರಿಗೆ ಸುಳ್ಳು ಹೇಳುವದರಿಂದ ಸಾಯದಿರತಕ್ಕವರನ್ನು ಸಾಯಿಸಿ ಸಾಯತಕ್ಕವರನ್ನು ಉಳಿಸಿ ನನ್ನ ಜನರ ನಡುವೆ ನನ್ನ ಘನತೆಗೆ ಕುಂದು ತಂದಿದ್ದೀರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ಜನರೆದುರಿನಲ್ಲಿ ನನಗೆ ನೀವು ಮಹತ್ವವನ್ನು ಕೊಡುವದಿಲ್ಲ. ಸ್ವಲ್ಪ ಬಾರ್ಲಿಗಾಗಿಯೂ ಕೆಲವು ತುಂಡು ರೊಟ್ಟಿಗಾಗಿಯೂ ನೀವು ನನಗೆ ವಿರುದ್ಧವಾಗಿ ವರ್ತಿಸುತ್ತೀರಿ. ನನ್ನ ಜನರಿಗೆ ನೀವು ಸುಳ್ಳನ್ನು ಆಡುತ್ತೀರಿ. ಅವರಿಗೆ ಸುಳ್ಳೆಂದರೆ ಬಹಳ ಪ್ರೀತಿ. ನೀವು ಸಾಯತಕ್ಕಲ್ಲದವರನ್ನು ಸಾವಿಗೀಡು ಮಾಡುತ್ತೀರಿ. ಬದುಕತಕ್ಕಲ್ಲದವರನ್ನು ಜೀವಂತವಾಗಿಡುತ್ತೀರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ಸುಳ್ಳಿಗೆ ಕಿವಿಗೊಡುವ ನನ್ನ ಜನರಿಗೆ ಸುಳ್ಳು ಹೇಳಿ, ಸಾಯದಿರುವವರನ್ನು ಸಾಯಿಸಿ, ಸಾಯುವವರನ್ನು ಬದುಕಿಸಿ, ಒಂದು ಹಿಡಿ ಜವೆಗೋಧಿಗೂ, ತುಂಡು ರೊಟ್ಟಿಗೂ ನನ್ನನ್ನು ನನ್ನ ಜನರೊಳಗೆ ಅಪವಿತ್ರಗೊಳಿಸುವಿರೋ? ಅಧ್ಯಾಯವನ್ನು ನೋಡಿ |