Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 13:22 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ನಾನು ಎದೆಗುಂದಿಸದ ಶಿಷ್ಟನ ಮನಸ್ಸನ್ನು ನೀವು ಸುಳ್ಳಾಡಿ ಕುಂದಿಸಿದ್ದೀರಿ, ದುಷ್ಟನು ತನ್ನ ದುರ್ಮಾರ್ಗವನ್ನು ಬಿಟ್ಟು ತನ್ನ ಪ್ರಾಣವನ್ನು ಉಳಿಸಿಕೊಳ್ಳದಂತೆ ನೀವು ಅವನ ಕೈಗಳನ್ನು ಬಲಪಡಿಸಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 “ನಾನು ಎದೆಗುಂದಿಸದ ಶಿಷ್ಯನ ಮನಸ್ಸನ್ನು ನೀವು ಸುಳ್ಳಾಡಿ ಕುಂದಿಸಿದ್ದೀರಿ; ದುಷ್ಟನು ತನ್ನ ದುರ್ಮಾರ್ಗವನ್ನು ಬಿಟ್ಟು ತನ್ನ ಪ್ರಾಣವನ್ನು ಉಳಿಸಿಕೊಳ್ಳದಂತೆ ನೀವು ಅವನನ್ನು ಪ್ರೋತ್ಸಾಹಿಸಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ನಾನು ವ್ಯಥೆಗೊಳಿಸದ ಶಿಷ್ಟನ ಮನಸ್ಸನ್ನು ನೀವು ಸುಳ್ಳಾಡಿ ಕುಂದಿಸಿದ್ದರಿಂದಲೂ ದುಷ್ಟನು ತನ್ನ ದುರ್ಮಾರ್ಗವನ್ನು ಬಿಟ್ಟು ತನ್ನ ಪ್ರಾಣವನ್ನು ಉಳಿಸಿಕೊಳ್ಳದಂತೆ ನೀವು ಅವನ ಕೈಗಳನ್ನು ಬಲಪಡಿಸಿದ್ದರಿಂದಲೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 “‘ಪ್ರವಾದಿನಿಯರೇ, ನೀವು ಸುಳ್ಳುಗಾರ್ತಿಯರಾಗಿದ್ದೀರಿ. ನಿಮ್ಮ ಸುಳ್ಳುಗಳು ಒಳ್ಳೆಯವರಿಗೆ ದುಃಖವನ್ನು ಬರಮಾಡುವವು. ಒಳ್ಳೆಯ ವ್ಯಕ್ತಿಗಳಿಗೆ ನೋವು ಮಾಡಲು ನನಗೆ ಮನಸ್ಸಿಲ್ಲ. ದುಷ್ಟ ಜನರು ತಮ್ಮ ದುರ್ಮಾರ್ಗಗಳನ್ನು ತೊರೆದುಬಿಡದಂತೆಯೂ ತಮ್ಮ ಪ್ರಾಣಗಳನ್ನು ರಕ್ಷಿಸಿಕೊಳ್ಳದಂತೆಯೂ ನೀವು ಪ್ರೋತ್ಸಾಹಿಸುತ್ತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಏಕೆಂದರೆ ನಾನು ಯಾವನನ್ನು ದುಃಖಪಡಿಸಲಿಲ್ಲವೋ, ಆ ನೀತಿವಂತರ ಹೃದಯಕ್ಕೆ ನೀವು ಸುಳ್ಳಾಡಿ ದುಃಖಪಡಿಸಿದ್ದೀರಿ; ದುಷ್ಟನು ತನ್ನ ದುರ್ಮಾರ್ಗವನ್ನು ಬಿಟ್ಟು, ಪ್ರಾಣವನ್ನು ಉಳಿಸಿಕೊಳ್ಳದಂತೆ ನೀವು ಅವರನ್ನು ಪ್ರೋತ್ಸಾಹಿಸಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 13:22
23 ತಿಳಿವುಗಳ ಹೋಲಿಕೆ  

ಯೆರೂಸಲೇಮಿನ ಪ್ರವಾದಿಗಳಲ್ಲಿಯೂ ನಾನು ಅಸಹ್ಯವನ್ನು ನೋಡಿದ್ದೇನೆ. ಅವರು ವ್ಯಭಿಚಾರಮಾಡಿ, ಮೋಸದಲ್ಲಿ ನಡೆದು, ದುಷ್ಟರಲ್ಲಿ ಯಾರೂ ತನ್ನ ದುಷ್ಟತನವನ್ನು ಬಿಡದಂತೆ ಅವರ ಕೈಗಳನ್ನು ಬಲಪಡಿಸುತ್ತಿದ್ದಾರೆ. ಅವರೆಲ್ಲರು ಸೊದೋಮಿನಂತೆ, ಆ ಪಟ್ಟಣದ ನಿವಾಸಿಗಳು ಗೊಮೋರದ ಹಾಗೆ ನನಗೆ ಕಾಣುತ್ತಾರೆ.


‘ಇಸ್ರಾಯೇಲಿನ ಪ್ರವಾದಿಗಳೇ, ಅಶಾಂತಿಯಿದ್ದರೂ ಶಾಂತಿಯಿದೆ ಎಂಬ ದರ್ಶನಗಳನ್ನು ನೀವು ಕಂಡು ಯೆರೂಸಲೇಮಿನ ವಿಷಯವಾಗಿ ಪ್ರವಾದಿಸಿದ್ದೀರಲ್ಲವೆ? ಗೋಡೆಯು ಇಲ್ಲವಾಯಿತು, ಅದಕ್ಕೆ ಸುಣ್ಣ ಬಳಿದವರೂ ಇಲ್ಲವಾದರು’” ಇದು ಕರ್ತನಾದ ಯೆಹೋವನ ನುಡಿ.


ಯೆಹೋವನು ಕೂಗಿ ಅವನಿಗೆ, “ನೀನು ಯೆರೂಸಲೇಮ್ ಪಟ್ಟಣದಲ್ಲೆಲ್ಲಾ ತಿರುಗಿ ಅದರೊಳಗೆ ನಡೆಯುವ ಸಮಸ್ತ ಅಸಹ್ಯ ಕಾರ್ಯಗಳಿಗಾಗಿ ನರಳಿ ಗೋಳಾಡುತ್ತಿರುವ ಜನರ ಹಣೆಯ ಮೇಲೆ ಗುರುತುಮಾಡು” ಎಂದು ಅಪ್ಪಣೆಕೊಟ್ಟನು.


ನನ್ನನ್ನು ಅಸಡ್ಡೆಮಾಡುವವರಿಗೆ, ‘ನಿಮಗೆ ಶುಭವಾಗುವುದು ಎಂಬುದಾಗಿ ಯೆಹೋವನು ನುಡಿದಿದ್ದಾನೆ’ ಎಂದು ಹೇಳುತ್ತಲೇ ಇದ್ದಾರೆ. ಸ್ವಂತ ಹೃದಯದ ಹಟದಂತೆ ನಡೆಯುವವರೆಲ್ಲರಿಗೂ, ‘ನಿಮಗೆ ಯಾವ ಕೇಡೂ ಸಂಭವಿಸದು’ ಎಂದು ನುಡಿಯುತ್ತಾರೆ.


“ಆದರೆ ದುಷ್ಟನು ತಾನು ಮಾಡುತ್ತಿದ್ದ ಪಾಪಗಳನ್ನೆಲ್ಲಾ ಬಿಟ್ಟುಬಿಟ್ಟು, ನನ್ನ ಸಕಲ ವಿಧಿಗಳನ್ನು ಕೈಕೊಂಡು, ನೀತಿನ್ಯಾಯಗಳನ್ನು ನಡೆಸಿದರೆ ಸಾಯುವುದಿಲ್ಲ, ಖಂಡಿತವಾಗಿ ಜೀವಿಸುವನು.


ನಾನು ಆ ನೆಹೆಲಾಮ್ಯನಾದ ಶೆಮಾಯನನ್ನೂ ಮತ್ತು ಅವನ ಸಂತತಿಯವರನ್ನೂ ದಂಡಿಸುವೆನು; ಅವನು ಯೆಹೋವನಾದ ನನ್ನ ವಿರುದ್ಧವಾಗಿ ದ್ರೋಹದ ಮಾತನ್ನು ಆಡಿದ್ದರಿಂದ ಈ ಜನರ ಮಧ್ಯದಲ್ಲಿ ವಾಸಿಸಲು ಅವನಿಗೆ ಯಾವ ಸಂತಾನವೂ ಇರದು; ನಾನು ನನ್ನ ಜನರಿಗೆ ಉಂಟುಮಾಡಬೇಕೆಂದಿರುವ ಮೇಲನ್ನು ಅವನು ನೋಡದೆ ಹೋಗುವನು; ಇದು ಯೆಹೋವನ ನುಡಿ” ಎಂಬುದೇ.


ಆದಕಾರಣ ಯೆಹೋವನು ಇಂತೆನ್ನುತ್ತಾನೆ, ಇಗೋ, ನಾನು ನಿನ್ನನ್ನು ಭೂಮಿಯ ಮೇಲಿಂದ ತೊಲಗಿಸುವೆನು; ನೀನು ಯೆಹೋವನಾದ ನನ್ನ ವಿರುದ್ಧವಾಗಿ ದ್ರೋಹದ ಮಾತನ್ನು ಆಡಿದ್ದರಿಂದ ಇದೇ ವರ್ಷ ಸಾಯುವಿ” ಎಂದು ಹೇಳಿದನು.


ಪ್ರವಾದಿಗಳ ವಿಷಯ: ನನ್ನ ಹೃದಯವು ನನ್ನೊಳಗೆ ಒಡೆದುಹೋಗಿದೆ; ನನ್ನ ಎಲುಬುಗಳೆಲ್ಲಾ ಕರಗಿಹೋಗಿವೆ. ನಾನು ಯೆಹೋವನಿಗೂ ಆತನ ಪರಿಶುದ್ಧ ವಾಕ್ಯಗಳಿಗೂ ವಶನಾಗಿ ಅಮಲೇರಿದವನಂತಿದ್ದೇನೆ. ಹೌದು, ದ್ರಾಕ್ಷಾರಸಕ್ಕೆ ಸೋತವನ ಹಾಗಿದ್ದೇನೆ.


ಸಮಾಧಾನವಿಲ್ಲದ್ದಿದ್ದರೂ, ‘ಸಮಾಧಾನ’ ಎಂದು ಹೇಳಿ ನನ್ನ ಪ್ರಜೆಯೆಂಬಾಕೆಯ ಗಾಯವನ್ನು ಮೇಲೆ ಮೇಲೆ ವಾಸಿಮಾಡಿದ್ದಾರೆ.


ಸಮಾಧಾನವಿಲ್ಲದಿದ್ದರೂ, ಸಮಾಧಾನ ಎಂದು ಹೇಳಿ ನನ್ನ ಜನರ ಗಾಯವನ್ನು ಮೇಲೆ ಮೇಲೆ ವಾಸಿಮಾಡಿದ್ದಾರೆ.


ಆಗ ನಾನು, “ಅಯ್ಯೋ, ಕರ್ತನಾದ ಯೆಹೋವನೇ, ನೀನು ಈ ಜನರಿಗೂ ಮತ್ತು ಯೆರೂಸಲೇಮಿಗೂ, ‘ನಿಮಗೆ ಸಮಾಧಾನವಾಗುವುದು’ ಎಂದು ಹೇಳಿ ನಿಶ್ಚಯವಾಗಿ ಇವರನ್ನು ಬಹಳ ಮೋಸಗೊಳಿಸಿದ್ದಿ; ಖಡ್ಗವು ಪ್ರಾಣದ ಮಟ್ಟಿಗೂ ಇಳಿಯುತ್ತದಲ್ಲಾ” ಅಂದೆನು.


ನೀವು ನಿಮ್ಮೊಳಗೆ, “ಮೃತ್ಯುವಿನಿಂದ ಒಡಂಬಡಿಕೆಯನ್ನು ಪಡೆದುಕೊಂಡು ಪಾತಾಳದೊಡನೆ ಒಪ್ಪಂದ ಮಾಡಿಕೊಂಡಿದ್ದೇವೆ; ವಿಪರೀತ ಬಾಧೆಯು ದೇಶದೊಳಗೆ ಹಾದುಹೋಗುವಾಗ ಅದು ನಮ್ಮನ್ನು ಮುಟ್ಟದು; ನಾವು ಸುಳ್ಳನ್ನೇ ಆಶ್ರಯಿಸಿಕೊಂಡು ಮೋಸದಲ್ಲಿ ಮೊರೆಹೊಕ್ಕಿದ್ದೇವೆ” ಎಂದು ಅಂದುಕೊಂಡಿದ್ದೀರಿ.


ನೀನು ಸೆರೆಯವರೆಲ್ಲರಿಗೆ ಹೀಗೆ ಹೇಳಿ ಕಳುಹಿಸು, “ನೆಹೆಲಾಮ್ಯನಾದ ಶೆಮಾಯನ ವಿಷಯದಲ್ಲಿ ಯೆಹೋವನು ಇಂತೆನ್ನುತ್ತಾನೆ, ನಾನು ಕಳುಹಿಸದೆ ಹೋದರೂ ಶೆಮಾಯನು ನಿಮಗೆ ಪ್ರವಾದನೆಮಾಡಿ ಸುಳ್ಳಿನಲ್ಲಿ ನಂಬಿಕೆಯನ್ನು ಹುಟ್ಟಿಸಿದ ಕಾರಣ ಇಗೋ,


ಆ ಮೇಲೆ ನೀವು ಮನಸ್ಸನ್ನು ಬೇರೆ ಮಾಡಿಕೊಂಡಿರಿ; ಸ್ವತಂತ್ರರನ್ನಾಗಿ ಬಿಟ್ಟಿದ್ದವರನ್ನು ಪುನಃ ದಾಸದಾಸಿಯರನ್ನಾಗಿ ಸೇರಿಸಿಕೊಂಡು ಅಧೀನಮಾಡಿಕೊಂಡು ನನ್ನ ನಾಮವನ್ನು ಅಪಕೀರ್ತಿಗೆ ಗುರಿಮಾಡಿದಿರಿ” ಎಂಬುದೇ.


ಯೆಹೋವನು, “ಇಗೋ, ನಾನು ಅಪ್ಪಣೆಕೊಟ್ಟು ಆ ಶತ್ರುಗಳು ಈ ಪಟ್ಟಣಕ್ಕೆ ಹಿಂದಿರುಗುವಂತೆ ಮಾಡುವೆನು; ಅವರು ಅದಕ್ಕೆ ವಿರುದ್ಧವಾಗಿ ಯುದ್ಧಮಾಡಿ ಅದನ್ನು ಆಕ್ರಮಿಸಿ ಬೆಂಕಿಯಿಂದ ಸುಟ್ಟುಬಿಡುವರು; ನಾನು ಯೆಹೂದದ ಪಟ್ಟಣಗಳನ್ನು ಜನವಿಲ್ಲದ ಬೀಳುಭೂಮಿಯನ್ನಾಗಿ ಮಾಡುವೆನು” ಎಂದು ನುಡಿಯುತ್ತಾನೆ.


ದುಷ್ಟನು ತಾನು ಮಾಡುತ್ತಿದ್ದ ದುಷ್ಟತನವನ್ನು ಬಿಟ್ಟು, ನೀತಿನ್ಯಾಯಗಳನ್ನು ನಡೆಸಿದರೆ ತನ್ನ ಪ್ರಾಣವನ್ನು ಉಳಿಸಿಕೊಳ್ಳುವನು.


ನೀತಿವಂತರನ್ನು ಹಿಂಸಿಸುವವರೇ, ಲಂಚತೆಗೆದುಕೊಳ್ಳುವವರೇ, ಚಾವಡಿಯಲ್ಲಿ ದರಿದ್ರರ ನ್ಯಾಯವನ್ನು ತಪ್ಪಿಸುವವರೇ. ನಿಮ್ಮ ದ್ರೋಹಗಳು ಬಹಳ, ನಿಮ್ಮ ಪಾಪಗಳು ನನಗೆ ಗೊತ್ತಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು