Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 14:17 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 “ಖಡ್ಗವೇ, ದೇಶವನ್ನು ಹೊಕ್ಕು ಹೋಗು ಎಂದು ಆಜ್ಞಾಪಿಸಿ, ನಾನು ಅದನ್ನು ಆ ದೇಶಕ್ಕೆ ತಂದು, ಜನ ಪಶುಗಳನ್ನು ಅದರೊಳಗಿಂದ ನಿರ್ಮೂಲಮಾಡುವ ಪಕ್ಷದಲ್ಲಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 “ ‘ಖಡ್ಗವೇ, ಆ ನಾಡನ್ನು ಹೊಕ್ಕುಹೋಗು’ ಎಂದು ಆಜ್ಞಾಪಿಸಿ ನಾನು ಅದನ್ನು ಆ ನಾಡಿಗೆ ತಂದು, ಜನ ಹಾಗು ಜಾನುವಾರುಗಳನ್ನು ಅದರೊಳಗಿಂದ ನಿರ್ಮೂಲಮಾಡುವ ಪಕ್ಷದಲ್ಲಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಖಡ್ಗವೇ, ದೇಶವನ್ನು ಹೊಕ್ಕು ಹೋಗು ಎಂದು ಆಜ್ಞಾಪಿಸಿ ನಾನು ಅದನ್ನು ಆ ದೇಶಕ್ಕೆ ತಂದು ಜನಪಶುಗಳನ್ನು ಅದರೊಳಗಿಂದ ನಿರ್ಮೂಲಮಾಡುವ ಪಕ್ಷದಲ್ಲಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ದೇವರು ಹೇಳಿದ್ದೇನೆಂದರೆ, “ಒಂದುವೇಳೆ, ಅವರ ವಿರುದ್ಧ ಹೋರಾಡಲು ನಾನು ಶತ್ರುಸೈನ್ಯವೊಂದನ್ನು ಕಳುಹಿಸಿದರೆ, ಎಲ್ಲಾ ಜನರು ಮತ್ತು ಎಲ್ಲಾ ಪ್ರಾಣಿಗಳು ನಾಶವಾಗುತ್ತಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 “ಇಲ್ಲವೆ ನಾನು ಆ ದೇಶದ ಮೇಲೆ ಖಡ್ಗವನ್ನು ತರಿಸಿ, ‘ಖಡ್ಗವೇ, ಆ ದೇಶದಲ್ಲಿ ಹಾದುಹೋಗು,’ ಎಂದು ಹೇಳಿ, ಅದು ಮನುಷ್ಯರನ್ನೂ, ಮೃಗಗಳನ್ನೂ ಅದರೊಳಗಿಂದ ಕಡಿದುಬಿಟ್ಟಾಗ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 14:17
18 ತಿಳಿವುಗಳ ಹೋಲಿಕೆ  

ಶತ್ರುಗಳ ಕತ್ತಿಯ ಮೂಲಕವಾಗಿ ನಿಮ್ಮನ್ನು ಸಂಹರಿಸುವೆನು; ನೀವು ನನ್ನ ನಿಬಂಧನೆಯನ್ನು ಮೀರಿದ್ದರಿಂದ ಆ ಕತ್ತಿಯು ಪ್ರತಿದಂಡನೆಮಾಡುವುದು. ನೀವು ನಿಮ್ಮ ಪಟ್ಟಣಗಳಲ್ಲಿ ಕೂಡಿರುವಾಗ ನಿಮ್ಮಲ್ಲಿ ಅಂಟುರೋಗ ಉಂಟಾಗುವಂತೆ ಮಾಡುವೆನು; ಹೀಗೆ ನೀವು ಶತ್ರುಗಳ ಕೈಗೆ ಬೀಳುವಿರಿ.


ಮನುಷ್ಯರನ್ನೂ, ಪಶುಗಳನ್ನೂ, ಮತ್ತು ಆಕಾಶದ ಪಕ್ಷಿಗಳನ್ನೂ, ಸಮುದ್ರದ ಮೀನುಗಳನ್ನೂ ನಾಶಪಡಿಸುವೆನು; ವಿಗ್ರಹಗಳೆಂಬ ವಿಘ್ನಗಳನ್ನೂ, ಅವುಗಳಿಗೆ ಅಡ್ಡಬೀಳುವ ದುಷ್ಟರನ್ನೂ ಸಂಹರಿಸುವೆನು; ಭೂಮಿಯ ಮೇಲಿಂದ ದುಷ್ಟರ ಸಂತಾನವನ್ನೂ ಕಿತ್ತುಹಾಕುವೆನು” ಇದು ಯೆಹೋವನ ನುಡಿ.


ನಿನ್ನಲ್ಲಿನ ಮೂರನೆಯ ಒಂದು ಭಾಗದವರು ವ್ಯಾಧಿಯಿಂದ ಸಾಯುವರು, ನಿನ್ನ ಮಧ್ಯದಲ್ಲಿ ಕ್ಷಾಮದಿಂದ ನಾಶವಾಗುವರು; ಇನ್ನೊಂದು ಭಾಗದವರು ನಿನ್ನ ಸುತ್ತಲೂ ಖಡ್ಗದಿಂದ ಹತರಾಗುವರು; ಮತ್ತೊಂದು ಭಾಗದವರನ್ನು ನಾನು ಎಲ್ಲಾ ಕಡೆಯ ಗಾಳಿಗೂ ತೂರಿ ಅವರ ಹಿಂದೆ ಕತ್ತಿಯನ್ನು ಬೀಸುವೆನು.


ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನಾನು ಎದೋಮಿನ ಮೇಲೆ ಕೈಯೆತ್ತಿ, ಅದರೊಳಗಿಂದ ಜನರನ್ನೂ ಮತ್ತು ಪಶುಗಳನ್ನೂ ನಿರ್ಮೂಲಮಾಡಿ, ತೇಮಾನಿನಿಂದ ದೆದಾನಿನವರೆಗೂ ಅದನ್ನು ಹಾಳುಮಾಡಿ, ಪ್ರಜೆಗಳನ್ನು ಖಡ್ಗಕ್ಕೆ ಸಿಕ್ಕಿಸುವೆನು.


“ನರಪುತ್ರನೇ, ಅಪರಾಧವನ್ನು ನಡೆಸಿ ನನ್ನ ವಿರುದ್ಧವಾಗಿ ಪಾಪಮಾಡಿದ ದೇಶದ ಮೇಲೆ ನಾನು ಕೈಯೆತ್ತಿ, ಅದರ ಆಹಾರ ಸರಬರಾಜನ್ನು ತೆಗೆದುಬಿಟ್ಟು, ಕ್ಷಾಮವನ್ನು ಬರಮಾಡಿ, ಜನರನ್ನು, ಪಶುಗಳನ್ನು ಅದರೊಳಗಿಂದ ನಿರ್ಮೂಲ ಮಾಡುತ್ತೇನೆ.


ಅಯ್ಯೋ, ಯೆಹೋವನ ಖಡ್ಗವೇ, ಇನ್ನೆಷ್ಟರವರೆಗೆ ವಿಶ್ರಾಂತಿಗೊಳ್ಳದೆ ಇರುವಿ? ನಿನ್ನನ್ನು ಒರೆಯಲ್ಲಿ ಅಡಗಿಸಿಕೋ! ಶಾಂತವಾಗಿ, ಸುಮ್ಮನಿರು!


ಹೀಗಿರಲು ದೇಶವು ನರಳುವುದು, ಅದರಲ್ಲಿ ವಾಸಿಸುವ ಸಕಲ ಭೂಜಂತುಗಳೂ ಮತ್ತು ಆಕಾಶದ ಪಕ್ಷಿಗಳೂ ಬಳಲಿ ಹೋಗುವವು; ಸಮುದ್ರದ ಮೀನುಗಳು ಸಹ ನಶಿಸಿ ಹೋಗುವವು.


“ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ಇಗೋ, ನಾನು ನಿನ್ನ ಮೇಲೆ ಖಡ್ಗವನ್ನು ಬರಮಾಡಿ, ಜನರನ್ನೂ, ಪಶುಗಳನ್ನೂ ನಿನ್ನೊಳಗಿಂದ ನಿರ್ಮೂಲ ಮಾಡುವೆನು.


ನಾನು ಕಳುಹಿಸುವ ಕ್ಷಾಮದಿಂದಲೂ, ದುಷ್ಟಮೃಗಗಳಿಂದಲೂ ನಿನಗೆ ಪುತ್ರಶೋಕವು ಉಂಟಾಗುವುದು; ವ್ಯಾಧಿಯೂ, ರಕ್ತ ಪ್ರವಾಹವೂ ನಿನ್ನಲ್ಲಿ ವ್ಯಾಪಿಸುವವು; ನಿನ್ನನ್ನು ಖಡ್ಗಕ್ಕೆ ತುತ್ತು ಮಾಡುವೆನು” ಇದು ಯೆಹೋವನಾದ ನನ್ನ ನುಡಿ.


ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ಜನ, ಪಶುಗಳಿಲ್ಲದೆ ಹಾಳಾಗಿರುವ ಈ ಪ್ರಾಂತ್ಯವೂ, ಇಲ್ಲಿನ ಎಲ್ಲಾ ಊರುಗಳೂ ಕುರುಬರು ತಮ್ಮ ಹಿಂಡುಗಳನ್ನು ತಂಗಿಸುವುದಕ್ಕೆ ಪುನಃ ಆಸರೆಯಾಗುವವು.


ನಾನು ಉತ್ತರ ದಿಕ್ಕಿನ ಜನಾಂಗಗಳನ್ನೆಲ್ಲಾ ಕರೆಯಿಸಿ, ಬಾಬೆಲಿನ ಅರಸನೂ ನನ್ನ ಸೇವಕನೂ ಆದ ನೆಬೂಕದ್ನೆಚ್ಚರನನ್ನು ಬರಮಾಡುವೆನು. ಇವರೆಲ್ಲರನ್ನು ಈ ದೇಶದ ಮೇಲೂ, ಇದರ ನಿವಾಸಿಗಳ ಮೇಲೂ ಸುತ್ತಲಿನ ಸಕಲ ಜನಾಂಗಗಳ ಮೇಲೂ ಬೀಳಿಸಿ, ಅವುಗಳನ್ನು ತುಂಬಾ ಹಾಳುಗೈದು, ಪರಿಹಾಸ್ಯಕ್ಕೂ, ನಿತ್ಯನಾಶನಕ್ಕೂ ಈಡುಮಾಡುವೆನು.


ಖಡ್ಗವು ವಿಶ್ರಾಂತಿಗೊಳ್ಳುವುದು ಹೇಗೆ? ಅಷ್ಕೆಲೋನಿನ ಮತ್ತು ಕರಾವಳಿಯ ವಿಷಯವಾಗಿ ಯೆಹೋವನು ಅದಕ್ಕೆ ಅಪ್ಪಣೆಕೊಟ್ಟನಲ್ಲಾ; ಅಲ್ಲಿಗೆ ಅದನ್ನು ನೇಮಿಸಿದ್ದಾನೆ.”


ಈ ಮೂವರು ಪುರುಷರು ಆ ದೇಶದಲ್ಲಿದ್ದರೂ ನನ್ನ ಜೀವದಾಣೆ, ತಾವು ಉಳಿದುಕೊಳ್ಳುತ್ತಿದ್ದರೇ ಹೊರತು ತಮ್ಮ ಗಂಡು ಮಕ್ಕಳನ್ನಾಗಲಿ, ಹೆಣ್ಣು ಮಕ್ಕಳನ್ನಾಗಲಿ ಉಳಿಸಿಕೊಳ್ಳುತ್ತಿರಲಿಲ್ಲ” ಇದು ಕರ್ತನಾದ ಯೆಹೋವನ ನುಡಿ.


ಆ ಮೇಲೆ ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು,


“ನರಪುತ್ರನೇ, ನಿನ್ನ ಜನರನ್ನು ಸಂಬೋಧಿಸಿ, ಅವರಿಗೆ ಹೀಗೆ ನುಡಿ, ‘ನಾನು ದೇಶದ ಮೇಲೆ ಖಡ್ಗವನ್ನು ಬೀಳಮಾಡುವಾಗ, ಆ ದೇಶದವರು ತಮ್ಮಲ್ಲಿ ಒಬ್ಬ ಮನುಷ್ಯನನ್ನು ಆರಿಸಿ, ತಮಗೆ ಕಾವಲುಗಾರನನ್ನಾಗಿ ನೇಮಿಸಿಕೊಳ್ಳಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು