Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 14:21 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನಾನು ಖಡ್ಗ, ಕ್ಷಾಮ, ದುಷ್ಟಮೃಗ ಮತ್ತು ವ್ಯಾಧಿ ಎಂಬ ನಾಲ್ಕು ಬಾಧೆಗಳನ್ನು ಯೆರೂಸಲೇಮಿನ ಮೇಲೆ ಒಟ್ಟಿಗೆ ತಂದು, ಜನರನ್ನು, ಪಶುಗಳನ್ನು ನಿರ್ಮೂಲ ಮಾಡುವಾಗ ಹೇಳತಕ್ಕದ್ದೇನು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: “ನಾನು ಖಡ್ಗ, ಕ್ಷಾಮ, ದುಷ್ಟಮೃಗ, ವ್ಯಾಧಿ ಎಂಬ ನಾಲ್ಕು ಬಾಧೆಗಳನ್ನು ಜೆರುಸಲೇಮಿನ ಮೇಲೆ ಒಟ್ಟಿಗೆ ಬರಮಾಡಿ ಜನ ಜಾನುವಾರಗಳನ್ನು ನಿರ್ಮೂಲ ಮಾಡುವಾಗ ಹೇಳತಕ್ಕದ್ದೇನು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ನಾನು ಖಡ್ಗ ಕ್ಷಾಮ ದುಷ್ಟಮೃಗ ವ್ಯಾಧಿ ಎಂಬೀ ನಾಲ್ಕು ಬಾಧೆಗಳನ್ನು ಯೆರೂಸಲೇವಿುನ ಮೇಲೆ ಒಟ್ಟಿಗೆ ತಂದು ಜನಪಶುಗಳನ್ನು ನಿರ್ಮೂಲಮಾಡುವಾಗ ಹೇಳತಕ್ಕದ್ದೇನು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: “ಭಯಂಕರವಾದ ನಾಲ್ಕು ದಂಡನೆಗಳನ್ನು ನಾನು ಜೆರುಸಲೇಮ್ ಪಟ್ಟಣದ ಮೇಲೆ ಕಳುಹಿಸುವೆನು. ಆದ್ದರಿಂದ ಜೆರುಸಲೇಮಿಗೆ ಇನ್ನೂ ಎಷ್ಟು ಹೆಚ್ಚಾಗಿ ಕಷ್ಟಕರವಾಗಬಹುದೆಂದು ಯೋಚಿಸಿರಿ. ನಾನು ಆ ನಗರದ ವಿರುದ್ಧವಾಗಿ ಶತ್ರು ಸೈನಿಕರನ್ನು, ಹಸಿವೆ, ರೋಗ ಮತ್ತು ಕ್ರೂರಜಂತುಗಳನ್ನು ಕಳುಹಿಸುತ್ತೇನೆ. ದೇಶದಲ್ಲಿರುವ ಎಲ್ಲಾ ಜನರನ್ನೂ ಪಶುಗಳನ್ನೂ ನಿರ್ಮೂಲ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 “ನಾನು ಖಡ್ಗ, ಬರಗಾಲ ಕ್ಷಾಮ, ದುಷ್ಟಮೃಗ ವ್ಯಾಧಿಗಳೆಂಬ ನನ್ನ ನಾಲ್ಕು ಕಠಿಣವಾದ ನ್ಯಾಯತೀರ್ಪುಗಳನ್ನು ಯೆರೂಸಲೇಮಿನ ಮೇಲೆ ಕಳುಹಿಸಿ ಮನುಷ್ಯರನ್ನೂ, ಮೃಗಗಳನ್ನೂ ಕಡಿದು ಬಿಟ್ಟ ಮೇಲೆ ಮತ್ತೆ ಏನಾಗುವುದು?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 14:21
18 ತಿಳಿವುಗಳ ಹೋಲಿಕೆ  

ಅವರಿಗೆ ಹೀಗೆ ನುಡಿ, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನನ್ನ ಜೀವದಾಣೆ, ಹಾಳು ಪ್ರದೇಶಗಳಲ್ಲಿರುವವರನ್ನು ಖಡ್ಗವು ಹತಿಸುವುದು; ಬಯಲಿನಲ್ಲಿರುವವರನ್ನು ನಾನು ಮೃಗಗಳಿಗೆ ತುತ್ತುಮಾಡುವೆನು; ಗುಹೆ ದುರ್ಗಗಳಲ್ಲಿರುವವರನ್ನು ವ್ಯಾಧಿಯು ಸಾಯಿಸುವುದು.


ನಾನು ಕಳುಹಿಸುವ ಕ್ಷಾಮದಿಂದಲೂ, ದುಷ್ಟಮೃಗಗಳಿಂದಲೂ ನಿನಗೆ ಪುತ್ರಶೋಕವು ಉಂಟಾಗುವುದು; ವ್ಯಾಧಿಯೂ, ರಕ್ತ ಪ್ರವಾಹವೂ ನಿನ್ನಲ್ಲಿ ವ್ಯಾಪಿಸುವವು; ನಿನ್ನನ್ನು ಖಡ್ಗಕ್ಕೆ ತುತ್ತು ಮಾಡುವೆನು” ಇದು ಯೆಹೋವನಾದ ನನ್ನ ನುಡಿ.


“ನಾನು ಆ ದೇಶದ ಮೇಲೆ ನನ್ನ ಕೋಪವನ್ನು ಹೊಯ್ದು, ರಕ್ತವನ್ನು ಸುರಿಸಿ, ವ್ಯಾಧಿಯನ್ನು ಕಳುಹಿಸಿ, ಜನರನ್ನು, ಪಶುಗಳನ್ನು ನಿರ್ಮೂಲಮಾಡುವ ಪಕ್ಷದಲ್ಲಿ,


“ಖಡ್ಗವೇ, ದೇಶವನ್ನು ಹೊಕ್ಕು ಹೋಗು ಎಂದು ಆಜ್ಞಾಪಿಸಿ, ನಾನು ಅದನ್ನು ಆ ದೇಶಕ್ಕೆ ತಂದು, ಜನ ಪಶುಗಳನ್ನು ಅದರೊಳಗಿಂದ ನಿರ್ಮೂಲಮಾಡುವ ಪಕ್ಷದಲ್ಲಿ,


“ನನ್ನ ಅಪ್ಪಣೆಯ ಮೇರೆಗೆ ದುಷ್ಟ ಮೃಗಗಳು ದೇಶದಲ್ಲಿ ತಿರುಗುತ್ತಾ ಅದನ್ನು ನಿರ್ಜನಗೊಳ್ಳಿಸಿ, ಹಾಳುಮಾಡಿ, ಯಾರೂ ಹಾದು ಹೋಗದಂತೆ ಹೆದರಿಸುವ ಪಕ್ಷದಲ್ಲಿ,


“ನರಪುತ್ರನೇ, ಅಪರಾಧವನ್ನು ನಡೆಸಿ ನನ್ನ ವಿರುದ್ಧವಾಗಿ ಪಾಪಮಾಡಿದ ದೇಶದ ಮೇಲೆ ನಾನು ಕೈಯೆತ್ತಿ, ಅದರ ಆಹಾರ ಸರಬರಾಜನ್ನು ತೆಗೆದುಬಿಟ್ಟು, ಕ್ಷಾಮವನ್ನು ಬರಮಾಡಿ, ಜನರನ್ನು, ಪಶುಗಳನ್ನು ಅದರೊಳಗಿಂದ ನಿರ್ಮೂಲ ಮಾಡುತ್ತೇನೆ.


ನಿನ್ನಲ್ಲಿನ ಮೂರನೆಯ ಒಂದು ಭಾಗದವರು ವ್ಯಾಧಿಯಿಂದ ಸಾಯುವರು, ನಿನ್ನ ಮಧ್ಯದಲ್ಲಿ ಕ್ಷಾಮದಿಂದ ನಾಶವಾಗುವರು; ಇನ್ನೊಂದು ಭಾಗದವರು ನಿನ್ನ ಸುತ್ತಲೂ ಖಡ್ಗದಿಂದ ಹತರಾಗುವರು; ಮತ್ತೊಂದು ಭಾಗದವರನ್ನು ನಾನು ಎಲ್ಲಾ ಕಡೆಯ ಗಾಳಿಗೂ ತೂರಿ ಅವರ ಹಿಂದೆ ಕತ್ತಿಯನ್ನು ಬೀಸುವೆನು.


ಆಗ ಗಾದನು ದಾವೀದನ ಬಳಿಗೆ ಹೋಗಿ, “ನಿನ್ನ ದೇಶದಲ್ಲಿ ಏಳು ವರ್ಷಗಳು ಬರವು ಉಂಟಾಗಬೇಕೋ? ಇಲ್ಲವೆ ನಿನ್ನ ಶತ್ರುಗಳು ನಿನ್ನನ್ನು ಸೋಲಿಸಿ ಮೂರು ತಿಂಗಳಗಳವರೆಗೆ ಓಡಿಸಿಬಿಡಬೇಕೋ? ಇಲ್ಲವೆ ನಿನ್ನ ದೇಶದಲ್ಲಿ ಮೂರು ದಿನಗಳವರೆಗೂ ಘೋರವ್ಯಾಧಿ ಬರಬೇಕೋ? ನನ್ನನ್ನು ಕಳುಹಿಸಿದವನಿಗೆ ಯಾವ ಉತ್ತರವನ್ನು ನಿನ್ನಿಂದ ಪಡೆದು ತಿಳಿಸಲಿ? ಆಲೋಚಿಸಿ ಹೇಳು” ಎಂದನು.


ಯಾವ ಜನಾಂಗ, ಯಾವ ರಾಜ್ಯ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಅಡಿಯಾಳಾಗಲಿಕ್ಕೂ, ಬಾಬೆಲಿನ ಅರಸನ ನೊಗಕ್ಕೆ ಹೆಗಲು ಕೊಡಲಿಕ್ಕೂ ಒಪ್ಪದೆ ಇರುವನೋ ಆ ಜನಾಂಗವನ್ನು ನಾನು ಖಡ್ಗ, ಕ್ಷಾಮ ಮತ್ತು ವ್ಯಾಧಿಗಳಿಂದ ದಂಡಿಸುತ್ತಾ ಬಂದು, ಕಡೆಯಲ್ಲಿ ಅವನ ಕೈಯಿಂದಲೇ ನಿರ್ಮೂಲ ಮಾಡಿಸುವೆನು’ ಇದು ಯೆಹೋವನ ನುಡಿ.


ಇಗೋ, ಮುತ್ತಿಗೆಯ ದಿಬ್ಬಗಳು ಪಟ್ಟಣವನ್ನು ಆಕ್ರಮಿಸುವುದಕ್ಕೆ ಬಂದಿದ್ದಾರೆ; ಪಟ್ಟಣವು ಖಡ್ಗ, ಕ್ಷಾಮ ಮತ್ತು ವ್ಯಾಧಿಗಳಿಂದ ಕ್ಷೀಣವಾಗಿ ವಿರೋಧಿಗಳಾದ ಕಸ್ದೀಯರ ಕೈಗೆ ಸಿಕ್ಕಿದೆ; ನೀನು ನುಡಿದದ್ದು ನೆರವೇರಿದೆ, ಇಗೋ, ನೋಡುತ್ತಿದ್ದಿ.


ನಾನು ಕೆಲವರನ್ನು ಖಡ್ಗ, ಕ್ಷಾಮ, ವ್ಯಾಧಿಗಳಿಂದ ಉಳಿಸಿ ಅವರು ತಮ್ಮ ಅಸಹ್ಯ ಕಾರ್ಯಗಳ ವಿಷಯವನ್ನು ತಾವು ಸೇರಿದ ಜನಾಂಗಗಳಲ್ಲಿ ತಿಳಿಸುವುದಕ್ಕೆ ಅವಕಾಶ ಮಾಡುವೆನು; ನಾನೇ ಯೆಹೋವನು ಎಂದು ಆ ಜನಾಂಗಗಳಿಗೂ ಗೊತ್ತಾಗುವುದು.”


ನೋಹ, ದಾನಿಯೇಲ, ಯೋಬ ಎಂಬುವರು ಆ ದೇಶದಲ್ಲಿದ್ದರೂ ನನ್ನ ಜೀವದಾಣೆ, ತಮ್ಮ ಸದಾಚಾರದಿಂದ ಸ್ವಂತಪ್ರಾಣಗಳನ್ನು ಉಳಿಸಿಕೊಳ್ಳುತ್ತಿದ್ದರೇ ಹೊರತು ತಮ್ಮ ಗಂಡು ಮಗನನ್ನಾಗಲಿ, ಹೆಣ್ಣು ಮಗಳನ್ನಾಗಲಿ ಉಳಿಸಿಕೊಳ್ಳುತ್ತಿರಲಿಲ್ಲ” ಇದು ಕರ್ತನಾದ ಯೆಹೋವನ ನುಡಿ.


ನಿನಗೆ ಈ ಎರಡು ಬಾಧೆಗಳು ಬಂದಿವೆ, ನಿನಗೋಸ್ಕರ ಸಂತಾಪವನ್ನು ತೋರಿಸುವವರು ಯಾರಿದ್ದಾರೆ? ನಾಶವೋ, ಸಂಹಾರವೋ, ಕ್ಷಾಮವೋ, ಶಕ್ತಿಯೋ. ನಾನು ನಿನ್ನನ್ನು ಹೇಗೆ ಸಂತೈಸಲಿ?


“ಹೀಗೆ ನನ್ನ ಸಿಟ್ಟನ್ನು ತೀರಿಸಿಕೊಳ್ಳುವೆನು, ನನ್ನ ರೋಷವನ್ನು ಅವರ ಮೇಲೆ ಸುರಿದು ಶಾಂತನಾಗುವೆನು; ರೋಷದಿಂದ ಮಾತನಾಡಿದವನು ಯೆಹೋವನಾದ ನಾನೇ ಎಂಬುದು ನನ್ನ ಕೋಪವನ್ನು ಅವರ ಮೇಲೆ ಹೊಯ್ದುಬಿಟ್ಟ ಬಳಿಕ ಅವರಿಗೆ ಗೊತ್ತಾಗುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು