ಯೆಹೆಜ್ಕೇಲನು 14:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 “ಏಕೆಂದರೆ ಇಸ್ರಾಯೇಲ್ ವಂಶದವರಲ್ಲಾಗಲಿ ಮತ್ತು ಇಸ್ರಾಯೇಲಿನೊಳಗೆ ವಾಸವಾಗಿರುವ ವಿದೇಶಿಗಳಲ್ಲಾಗಲಿ ಯಾವನು ನನ್ನಿಂದ ದೂರವಾಗಿ, ತನ್ನ ವಿಗ್ರಹಗಳನ್ನು ಮನಸ್ಸಿನಲ್ಲಿ ನೆಲೆಗೊಳಿಸಿ, ತನಗೆ ಪಾಪಕಾರಿಯಾದ ವಿಘ್ನವನ್ನು ತನ್ನ ಮುಂದೆ ಇಟ್ಟುಕೊಂಡು ಪ್ರವಾದಿಯ ಬಳಿಗೆ ಬಂದು ಅವನ ಮೂಲಕ ದೈವೋತ್ತರವನ್ನು ಕೇಳಿಕೊಳ್ಳುವನೋ ಅವನಿಗೆ ಯೆಹೋವನಾದ ನಾನೇ ಉತ್ತರಕೊಡುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 “ಏಕೆಂದರೆ ಇಸ್ರಯೇಲ್ ವಂಶದವರಲ್ಲಾಗಲಿ ಇಸ್ರಯೇಲಿನಲ್ಲಿ ನೆಲೆಸಿರುವ ವಿದೇಶಿಗಳಲ್ಲಾಗಲಿ ಯಾವನಾದರೂ ನನ್ನಿಂದ ಅಗಲಿ ವಿಗ್ರಹಗಳನ್ನು ಹೃದಯದಲ್ಲಿ ನೆಲೆಗೊಳಿಸಿಕೊಂಡು ಪಾಪಕಾರಿಯಾದ ಆ ವಿಘ್ನವನ್ನು ತನ್ನ ಮುಂದೆಯೇ ಇಟ್ಟುಕೊಂಡು, ಪ್ರವಾದಿಯ ಬಳಿಗೆ ಬಂದು, ಅವನ ಮೂಲಕ ದೈವೋತ್ತರವನ್ನು ಕೇಳಿಕೊಂಡರೆ ಅವನಿಗೆ ಸರ್ವೇಶ್ವರನಾದ ನಾನೇ ಉತ್ತರಕೊಡುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಏಕಂದರೆ ಇಸ್ರಾಯೇಲ್ ವಂಶದವರಲ್ಲಾಗಲಿ ಇಸ್ರಾಯೇಲಿನೊಳಗೆ ವಾಸವಾಗಿರುವ ವಿದೇಶಿಗಳಲ್ಲಾಗಲಿ ಯಾವನು ನನ್ನಿಂದ ಅಗಲಿ ತನ್ನ ಬೊಂಬೆಗಳನ್ನು ಮನಸ್ಸಿನಲ್ಲಿ ನೆಲೆಗೊಳಿಸಿ ತನಗೆ ಪಾಪಕಾರಿಯಾದ ವಿಘ್ನವನ್ನು ತನ್ನ ಮುಂದೆ ಇಟ್ಟುಕೊಂಡು ಪ್ರವಾದಿಯ ಬಳಿಗೆ ಬಂದು ಅವನ ಮೂಲಕ ದೈವೋತ್ತರವನ್ನು ಕೇಳಿಕೊಳ್ಳುವನೋ ಅವನಿಗೆ ಯೆಹೋವನಾದ ನಾನೇ ಉತ್ತರಕೊಟ್ಟು ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಯೆಹೋವನಾದ ನಾನೇ ಸ್ವತಃ ಪ್ರತಿಯೊಬ್ಬನಿಗೂ ಉತ್ತರಿಸುವೆನು ಅಂದರೆ ಅವನು ತನ್ನನ್ನು ಪಾಪಕ್ಕೆ ಬೀಳಿಸುವ ವಿಗ್ರಹಗಳನ್ನು ಹೊಂದಿದ್ದರೂ ಆ ವಿಗ್ರಹಗಳನ್ನು ಪೂಜಿಸುತ್ತಿದ್ದರೂ ಮತ್ತು ನನ್ನಿಂದ ತನ್ನನ್ನು ಬೇರ್ಪಡಿಸಿಕೊಳ್ಳುತ್ತಿದ್ದರೂ ನನ್ನ ಉಪದೇಶಕ್ಕಾಗಿ ನನ್ನ ಬಳಿಗೆ ಬಂದರೆ ಅವನು ಇಸ್ರೇಲನಾಗಿದ್ದರೂ ಇಸ್ರೇಲಿನಲ್ಲಿ ವಾಸವಾಗಿರುವ ಪರದೇಶಿಯಾಗಿದ್ದರೂ ನಾನು ಶಾಪವೆಂಬ ಉತ್ತರ ಕೊಡುವೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 “ ‘ಏಕೆಂದರೆ ಇಸ್ರಾಯೇಲ್ ವಂಶದವರಲ್ಲಾಗಲಿ ಇಸ್ರಾಯೇಲಿನಲ್ಲಿ ನೆಲೆಸಿರುವ ವಿದೇಶಿಗಳಲ್ಲಾಗಲಿ, ಯಾವನಾದರೂ ನನ್ನಿಂದ ಅಗಲಿ ವಿಗ್ರಹಗಳನ್ನು ಹೃದಯದಲ್ಲಿ ನೆಲೆಗೊಳಿಸಿಕೊಂಡು ಪಾಪಕಾರಿಯಾದ ಆ ವಿಘ್ನವನ್ನು ತನ್ನ ಮುಂದೆಯೇ ಇಟ್ಟುಕೊಂಡು, ಪ್ರವಾದಿಯ ಬಳಿಗೆ ಬಂದು, ಅವನ ಮೂಲಕ ದೈವೋತ್ತರವನ್ನು ಕೇಳಿಕೊಂಡರೆ, ಯೆಹೋವ ದೇವರಾದ ನಾನೇ ಉತ್ತರಕೊಡುವೆನು. ಅಧ್ಯಾಯವನ್ನು ನೋಡಿ |