ಯೆಹೆಜ್ಕೇಲನು 14:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 “ಒಬ್ಬ ಪ್ರವಾದಿಯು ಮರುಳುಗೊಂಡು ದೈವೋಕ್ತಿಯನ್ನು ನುಡಿದರೆ, ಆ ಪ್ರವಾದಿಯನ್ನು ಮರುಳುಗೊಳಿಸಿದವನು ಯೆಹೋವನಾದ ನಾನೇ; ನಾನು ಅವನ ಮೇಲೆ ಕೈಯೆತ್ತಿ ಇಸ್ರಾಯೇಲರಾದ ನನ್ನ ಜನರೊಳಗಿಂದ ಅವನನ್ನು ಕಿತ್ತು ನಿರ್ನಾಮಮಾಡುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 “ಒಬ್ಬ ಪ್ರವಾದಿ ಮರುಳುಗೊಂಡು ದೈವೋಕ್ತಿಯೊಂದನ್ನು ನುಡಿದರೆ, ಆ ಪ್ರವಾದಿಯನ್ನು ಮರುಳುಗೊಳಿಸಿದವನು ಸರ್ವೇಶ್ವರನಾದ ನಾನೇ. ನಾನು ಅವನ ಮೇಲೆ ಕೈಯೆತ್ತಿ ಇಸ್ರಯೇಲರಾದ ನನ್ನ ಜನರಿಂದ ತೆಗೆದುಹಾಕಿ ಅವನನ್ನು ನಿರ್ನಾಮ ಮಾಡುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಒಬ್ಬ ಪ್ರವಾದಿಯು ಮರುಳುಗೊಂಡು ದೈವೋಕ್ತಿಯನ್ನು ನುಡಿದರೆ ಆ ಪ್ರವಾದಿಯನ್ನು ಮರುಳುಗೊಳಿಸಿದವನು ಯೆಹೋವನಾದ ನಾನೇ; ನಾನು ಅವನ ಮೇಲೆ ಕೈಯೆತ್ತಿ ಇಸ್ರಾಯೇಲ್ಯರಾದ ನನ್ನ ಜನರೊಳಗಿಂದ ಅವನನ್ನು ಕಿತ್ತು ನಿರ್ನಾಮಮಾಡುವೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಆದರೆ ಒಬ್ಬ ಪ್ರವಾದಿಯು ಅವನಿಗೆ ತನ್ನದೇ ಆದ ಉತ್ತರವನ್ನು ಕೊಡುವಷ್ಟು ಮೂರ್ಖನಾಗಿದ್ದರೆ, ಆಗ ನಾನು, ಅವನು ಎಂಥಾ ಮೂರ್ಖನಾಗಿದ್ದಾನೆಂದು ತೋರಿಸುವೆನು. ಅವನ ಮೇಲೆ ನನ್ನ ಸಾಮರ್ಥ್ಯವನ್ನು ಪ್ರಯೋಗಿಸುವೆನು. ಅವನನ್ನು ನಾಶಮಾಡಿ ನನ್ನ ಜನರ ಮಧ್ಯದಿಂದ ಅವನನ್ನು ತೆಗೆದುಬಿಡುವೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 “ ‘ಪ್ರವಾದಿಯು ಮೋಸಹೋಗಿ ವಾಕ್ಯವನ್ನು ಹೇಳಿದರೆ, ಯೆಹೋವ ದೇವರಾದ ನಾನೇ ಆ ಪ್ರವಾದಿಯನ್ನು ಮೋಸಗೊಳಿಸಿರುತ್ತೇನೆ. ನಾನು ನನ್ನ ಕೈಯನ್ನು ಅವನ ವಿರುದ್ಧವಾಗಿ ಚಾಚಿ, ನನ್ನ ಜನರಾದ ಇಸ್ರಾಯೇಲರ ಮಧ್ಯದೊಳಗಿಂದ ಅವನನ್ನು ನಾಶಪಡಿಸುವೆನು. ಅಧ್ಯಾಯವನ್ನು ನೋಡಿ |