Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 15:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಜನರು ದ್ರಾಕ್ಷಿಯ ಕಟ್ಟಿಗೆಯನ್ನು ತೆಗೆದುಕೊಂಡು ಅದರಿಂದ ಯಾವ ಕೆಲಸವನ್ನಾದರೂ ಮಾಡುವರೋ ಅಥವಾ ಅದರ ಮೇಲೆ ಯಾವ ವಸ್ತುವನ್ನಾದರೂ ನೇತು ಹಾಕುವುದಕ್ಕೆ ಅದರಿಂದ ಗೂಟವನ್ನು ಮಾಡಿಕೊಳ್ಳುವರೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ದ್ರಾಕ್ಷಿಯ ಕಟ್ಟಿಗೆಯನ್ನು ಬಳಸಿ ಮಾಡುತ್ತಾರೆಯೆ ಏನನ್ನಾದರು? ಸಾಮಗ್ರಿಗಳನ್ನು ತಗಲಿಹಾಕಲು ಅದರಿಂದ ಮಾಡುತ್ತಾರೆಯೇ ಗೂಟವನ್ನಾದರು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ದ್ರಾಕ್ಷೆಯ ಕಟ್ಟಿಗೆಯನ್ನು ತೆಗೆದುಕೊಂಡು ಅದರಿಂದ ಯಾವದನ್ನಾದರೂ ಮಾಡುವರೋ? ಯಾವ ಸಾಮಾನನ್ನಾದರೂ ತಗಲಿಹಾಕುವದಕ್ಕೆ ಅದರಿಂದ ಗೂಟವನ್ನು ಮಾಡಿಕೊಳ್ಳುವರೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ದ್ರಾಕ್ಷಾಬಳ್ಳಿಯ ಕಟ್ಟಿಗೆಯಿಂದ ಏನನ್ನಾದರೂ ತಯಾರಿಸಬಹುದೋ? ಇಲ್ಲ. ಅದನ್ನು ಗೂಟವನ್ನಾಗಿ ಮಾಡಿ ಅದರಲ್ಲಿ ಪಾತ್ರೆಗಳನ್ನು ತೂಗುಹಾಕಬಹುದೋ? ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಇದರಿಂದ ಕಟ್ಟಿಗೆಯನ್ನು ತೆಗೆದುಕೊಂಡು ಯಾವ ಕೆಲಸವನ್ನಾದರೂ ಮಾಡುವರೋ ಅಥವಾ ಅದರ ಮೇಲೆ ಯಾವನನ್ನಾದರೂ ನೇತುಹಾಕುವುದಕ್ಕೆ ಅದರಿಂದ ಗೂಟವನ್ನು ಮಾಡಿಕೊಳ್ಳುವರೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 15:3
7 ತಿಳಿವುಗಳ ಹೋಲಿಕೆ  

ಉಪ್ಪು ಒಳ್ಳೆಯ ಪದಾರ್ಥವೇ; ಉಪ್ಪು ಸಪ್ಪಗಾದರೆ ಅದನ್ನು ಇನ್ಯಾತರಿಂದ ರುಚಿಗೊಳಿಸಲು ಸಾಧ್ಯ? ನಿಮ್ಮೊಳಗೆ ಉಪ್ಪು ಇರಲಿ, ಒಬ್ಬರಿಗೊಬ್ಬರು ಸಮಾಧಾನದಿಂದಿರಿ.”


“ನೀವು ಭೂಮಿಗೆ ಉಪ್ಪಾಗಿದ್ದೀರಿ. ಉಪ್ಪು ಸಪ್ಪಗಾದರೆ ಅದಕ್ಕೆ ಬೇರೆ ಯಾವುದರಿಂದ ಉಪ್ಪಿನ ರುಚಿಯನ್ನು ಕೊಡಲು ಸಾಧ್ಯ? ಜನರು ಅದನ್ನು ಹೊರಗೆಹಾಕಿ ದಾರಿಹೋಕರು ತುಳಿಯುವುದಕ್ಕೆ ಅದು ಯೋಗ್ಯವೇ ಹೊರತು ಮತ್ತ್ಯಾವ ಕೆಲಸಕ್ಕೂ ಬರುವುದಿಲ್ಲ.


ಇದಲ್ಲದೆ ಯೆಹೋವನು, “ಯೆಹೂದದ ಅರಸನಾದ ಚಿದ್ಕೀಯ, ಅವನ ಪ್ರಧಾನರು, ಈ ದೇಶದಲ್ಲಿ ನಿಂತಿರುವ ಯೆರೂಸಲೇಮಿನವರ ಶೇಷ, ಐಗುಪ್ತ ದೇಶಕ್ಕೆ ವಲಸೆಯಾದವರು, ಕೆಟ್ಟು ಯಾರೂ ತಿನ್ನದ ಹಾಗೆ ಕೇವಲ ಅಸಹ್ಯವಾದ ಅಂಜೂರದ ಹಣ್ಣುಗಳ ಗತಿಗೆ ಇವರನ್ನು ತರುವೆನು.


ಹೆಬೆರನ ಹೆಂಡತಿಯಾದ ಯಾಯೇಲಳು ಕೈಯಲ್ಲಿ ಗುಡಾರದ ಗೂಟವನ್ನೂ, ಒಂದು ಸುತ್ತಿಗೆಯನ್ನೂ ತೆಗೆದುಕೊಂಡು ಅವನು ಆಯಾಸದಿಂದ ಗಾಢನಿದ್ರೆಯಲ್ಲಿದ್ದಾಗ, ಮೆಲ್ಲಗೆ ಹತ್ತಿರ ಹೋಗಿ, ಅವನ ತಲೆಯಲ್ಲಿ ಆ ಗೂಟವನ್ನು ಹೊಡೆದು ನೆಲಕ್ಕೆ ನಾಟಿಸಿದಳು; ಅವನು ಸತ್ತನು.


“ನರಪುತ್ರನೇ, ದ್ರಾಕ್ಷಿಯ ಗಿಡವು ಉಳಿದ ಗಿಡಗಳಿಗಿಂತ ಎಷ್ಟು ಹೆಚ್ಚು? ವನವೃಕ್ಷಗಳಲ್ಲಿ ದ್ರಾಕ್ಷಾಲತೆಯ ವಿಶೇಷವೇನು?


ಇಲ್ಲ, ಸೌದೆಯಾಗಿ ಬೆಂಕಿಯಲ್ಲಿ ಹಾಕುವರು; ಬೆಂಕಿಯು ಅದರ ಎರಡು ಕೊನೆಗಳನ್ನು ಸುಟ್ಟುಬಿಡುವುದು, ಮಧ್ಯಭಾಗವು ಇದ್ದಲಾಗಿ ಯಾವ ಕೆಲಸಕ್ಕೂ ಬರುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು