ಯೆಹೆಜ್ಕೇಲನು 15:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಇಲ್ಲ, ಸೌದೆಯಾಗಿ ಬೆಂಕಿಯಲ್ಲಿ ಹಾಕುವರು; ಬೆಂಕಿಯು ಅದರ ಎರಡು ಕೊನೆಗಳನ್ನು ಸುಟ್ಟುಬಿಡುವುದು, ಮಧ್ಯಭಾಗವು ಇದ್ದಲಾಗಿ ಯಾವ ಕೆಲಸಕ್ಕೂ ಬರುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಇಲ್ಲ, ಬೆಂಕಿಗೆ ಹಾಕುತ್ತಾರೆ. ಸೌದೆಯಾಗಿ, ಅದನ್ನು ಬೆಂಕಿ ಸುಟ್ಟುಬಿಡುತ್ತದೆ. ಅದರ ಎರಡು ಕೊನೆಗಳೂ ಇದ್ದಲಾಗುತ್ತವೆ. ಅದರ ಮಧ್ಯಭಾಗವು ಬಾರದು ಯಾವ ತರದ ಬಳಕೆಗು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಆಹಾ, ಅದನ್ನು ಸೌದೆಯಾಗಿ ಬೆಂಕಿಯಲ್ಲಿ ಹಾಕುವರು; ಬೆಂಕಿಯು ಅದರ ಎರಡು ಕೊನೆಗಳನ್ನು ಸುಟ್ಟುಬಿಡುವದು, ಮಧ್ಯಭಾಗವು ಇದ್ದಲಾಗುವದು; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಅದು ಕೇವಲ ಬೆಂಕಿಯಲ್ಲಿ ಸುಡಲಿಕ್ಕೆ ಯೋಗ್ಯವಾಗಿದೆ. ಕೆಲವು ಎರಡು ಕೊನೆಯಲ್ಲಿ ಉರಿಯುವವು; ಮಧ್ಯಭಾಗವು ಬೆಂಕಿಯಿಂದ ಕಪ್ಪಾಗಾಗುವುದು. ಕಟ್ಟಿಗೆಯು ಸಂಪೂರ್ಣವಾಗಿ ಸುಟ್ಟುಹೋಗುವುದಿಲ್ಲ. ಆ ಸುಟ್ಟ ಕಟ್ಟಿಗೆಯಿಂದ ಏನನ್ನಾದರೂ ತಯಾರಿಸಬಹುದೋ? ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಇದನ್ನು ಬೆಂಕಿಗೆ ಸೌದೆಯಾಗಿ ಹಾಕುತ್ತಾರೆ. ಬೆಂಕಿಯು ಅದರ ಎರಡು ಕೊನೆಗಳನ್ನು ತಿಂದುಬಿಡುತ್ತದೆ. ಅದರ ಮಧ್ಯ ಭಾಗವು ಸುಟ್ಟು ಹೋಗುತ್ತದೆ. ಇದೇನಾದರೂ ಕೆಲಸಕ್ಕೆ ಬರುವುದೋ? ಅಧ್ಯಾಯವನ್ನು ನೋಡಿ |