Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 15:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ವನ ವೃಕ್ಷಗಳಲ್ಲಿ ದ್ರಾಕ್ಷಿಯ ಗಿಡವನ್ನು ನಾನು ಹೇಗೆ ಬೆಂಕಿಗೆ ಸೌದೆಯನ್ನಾಗಿ ಕೊಟ್ಟಿದ್ದೇನೋ, ಹಾಗೆಯೇ ನಾನು ಯೆರೂಸಲೇಮಿನವರನ್ನು ವಿನಾಶಕ್ಕೆ ಗುರಿಮಾಡಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಇಂತಿರಲು ಸರ್ವೇಶ್ವರನಾದ ದೇವರು ಹೇಳುವುದಿದು: “ವನವೃಕ್ಷಗಳಲ್ಲಿ ದ್ರಾಕ್ಷಾವೃಕ್ಷವನ್ನೆ ಅಗ್ನಿಗೆ ನಾನು ಸೌದೆಯನ್ನಾಗಿಸಿರುವಂತೆ ಕೊಟ್ಟಿರುವೆನು ಜೆರುಸಲೇಮನ್ನು ವಿನಾಶಕ್ಕೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ವನವೃಕ್ಷಗಳಲ್ಲಿ ದ್ರಾಕ್ಷೆಯ ಗಿಡವನ್ನು ನಾನು ಹೇಗೆ ಬೆಂಕಿಗೆ ಸೌದೆಯಾಗಿ ಕೊಟ್ಟಿದ್ದೇನೋ ಹಾಗೆಯೇ ನಾನು ಯೆರೂಸಲೇವಿುನವರನ್ನು [ನಾಶನಕ್ಕೆ] ಕೊಟ್ಟಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ದ್ರಾಕ್ಷಿಬಳ್ಳಿಯು ಕಾಡಿನ ಮರಗಳಲ್ಲಿ ಒಂದರಂತೆ ಪರಿಗಣಿಸಲ್ಪಟ್ಟರೂ, ಬೆಂಕಿಗೆ ಬೇಕಾದ ಇಂಧನಕ್ಕಾಗಿ ನಾನು ಅದರ ಕಟ್ಟಿಗೆಯನ್ನು ನೇಮಿಸಿದ್ದೇನೆ. ಇದೇ ಕೆಲಸವನ್ನು ಜೆರುಸಲೇಮಿನ ನಿವಾಸಿಗಳಿಗೂ ನಾನು ನೇಮಿಸಿದ್ದೇನೆ.” ಇವುಗಳನ್ನು ನನ್ನ ಒಡೆಯನಾದ ಯೆಹೋವನು ಹೇಳಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 “ಆದ್ದರಿಂದ ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ವನವೃಕ್ಷಗಳಲ್ಲಿ ದ್ರಾಕ್ಷಿಗಿಡಗಳನ್ನು ನಾನು ಹೇಗೆ ಬೆಂಕಿಗೆ ಸೌದೆಯಾಗಿ ಮಾಡಿರುವೆನೋ ಹಾಗೆಯೇ ನಾನು ಯೆರೂಸಲೇಮಿನ ನಿವಾಸಿಗಳನ್ನೂ ವಿನಾಶಕ್ಕೆ ಗುರಿಮಾಡಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 15:6
17 ತಿಳಿವುಗಳ ಹೋಲಿಕೆ  

ಆದರೆ ನನ್ನ ಸೇವಕರಾದ ಪ್ರವಾದಿಗಳಿಗೆ ಆಜ್ಞಾಪಿಸಿದ ನನ್ನ ವಾಕ್ಯಗಳೂ ಮತ್ತು ವಿಧಿಗಳೂ ನಿಮ್ಮ ಪೂರ್ವಿಕರನ್ನು ಹಿಂದಟ್ಟಿ ಹಿಡಿದು ಶಾಶ್ವತವಾಗಿ ಉಳಿದಿದೆ. ಅವರು ತಿರುಗಿಕೊಂಡು, ಸೇನಾಧೀಶ್ವರ ಯೆಹೋವನಿಗೆ ‘ನಮ್ಮ ದುಷ್ಕೃತ್ಯಗಳಿಗೆ ತಕ್ಕ ಹಾಗೆ ನಮಗೆ ಏನು ಮಾಡಬೇಕೆಂದು ಸಂಕಲ್ಪಿಸಿದನೋ ಅದನ್ನು ನಮಗೆ ಮಾಡಿದ್ದಾನಲ್ಲಾ’” ಅಂದುಕೊಂಡರು.


“ನರಪುತ್ರನೇ, ದ್ರಾಕ್ಷಿಯ ಗಿಡವು ಉಳಿದ ಗಿಡಗಳಿಗಿಂತ ಎಷ್ಟು ಹೆಚ್ಚು? ವನವೃಕ್ಷಗಳಲ್ಲಿ ದ್ರಾಕ್ಷಾಲತೆಯ ವಿಶೇಷವೇನು?


ಅದನ್ನು ಯೆರೂಸಲೇಮಿಗೂ, ಯೆಹೂದದ ಪಟ್ಟಣಗಳಿಗೂ, ಅರಸರಿಗೂ ಮತ್ತು ಪ್ರಧಾನರಿಗೂ ಕುಡಿಸಿದೆನು. ಇದರಿಂದ ಅವರು ಹಾಳಾಗಿ ಪರಿಹಾಸ್ಯಕ್ಕೂ ಮತ್ತು ಶಾಪಕ್ಕೂ ಗುರಿಯಾಗುವುದಕ್ಕೆ ಆಸ್ಪದವಾಯಿತು.


ತರುವಾಯ ನಾನು ಯೆಹೂದದ ಅರಸನಾದ ಚಿದ್ಕೀಯನನ್ನೂ ಮತ್ತು ಅವರ ಸೇವಕರನ್ನೂ ವ್ಯಾಧಿ, ಖಡ್ಗ ಮತ್ತು ಕ್ಷಾಮಗಳಿಂದ ಹತರಾಗದೆ ಉಳಿದ ಪ್ರಜೆಗಳನ್ನೂ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಕೈಗೂ, ಅವರ ಪ್ರಾಣವನ್ನು ಹುಡುಕುತ್ತಿರುವ ಅವರ ಶತ್ರುಗಳ ಕೈಗೂ ಕೊಟ್ಟುಬಿಡುವೆನು. ಅವನು ಅವರನ್ನು ಕರುಣಿಸದೆ, ಕನಿಕರದಿಂದ ಉಳಿಸದೆ ಕತ್ತಿಯಿಂದ ಸಂಹರಿಸುವನು.


ಹೀಗಿರಲು ಕರ್ತನಾದ ಯೆಹೋವನ ಈ ಮಾತನ್ನು ಕೇಳಿರಿ, “ಆಹಾ, ನನ್ನ ಕೋಪವೆಂಬ ರೋಷಾಗ್ನಿಯು ಈ ಸ್ಥಳದಲ್ಲಿ ಸುರಿಯಲ್ಪಡುವುದು; ಮನುಷ್ಯರ ಮೇಲೆಯೂ, ಪಶುಗಳ ಮೇಲೆಯೂ, ಕಾಡುಮರಗಳ ಮೇಲೆಯೂ, ಭೂಮಿಯ ಬೆಳೆಯ ಮೇಲೆಯೂ ಅದನ್ನು ಸುರಿಯುವೆನು; ಅದು ಆರದೆ ದಹಿಸುವುದು.”


ಜನಾಂಗದ ನಾಶಕ್ಕೆ ಒಂದು ಸಿಂಹವು ತನ್ನ ಪೊದೆಯೊಳಗಿಂದ ಎದ್ದು, ಹೊರಟಿದೆ, ಅದರ ಸ್ಥಳದಿಂದ ತೆರಳಿದೆ. ಅದು ನಿನ್ನ ದೇಶವನ್ನು ಹಾಳುಮಾಡುವುದು, ನಿನ್ನ ಪಟ್ಟಣಗಳು ಪಾಳುಬಿದ್ದು ನಿರ್ಜನ ಪ್ರದೇಶಗಳಾಗುವುವು.


ಇಲ್ಲ, ಸೌದೆಯಾಗಿ ಬೆಂಕಿಯಲ್ಲಿ ಹಾಕುವರು; ಬೆಂಕಿಯು ಅದರ ಎರಡು ಕೊನೆಗಳನ್ನು ಸುಟ್ಟುಬಿಡುವುದು, ಮಧ್ಯಭಾಗವು ಇದ್ದಲಾಗಿ ಯಾವ ಕೆಲಸಕ್ಕೂ ಬರುವುದಿಲ್ಲ.


ಅದು ಸಂಪೂರ್ಣವಾಗಿ ಇದ್ದಾಗ ಯಾವ ಕೆಲಸಕ್ಕೂ ಬರಲಿಲ್ಲ; ಬೆಂಕಿಯಲ್ಲಿ ಸುಟ್ಟು ಇದ್ದಲಾದ ಮೇಲೆ ಯಾವ ಕೆಲಸಕ್ಕೆ ಬಂದೀತು?”


ಅವರ ಮೇಲೆ ಕೋಪ ದೃಷ್ಟಿಯನ್ನಿಡುವೆನು; ಅವರು ಬೆಂಕಿಯೊಳಗಿಂದ ತಪ್ಪಿಸಿಕೊಂಡರೂ, ಬೆಂಕಿಯು ಅವರನ್ನು ನುಂಗಿಬಿಡುವುದು; ನಾನು ಅವರ ಮೇಲೆ ಕೋಪ ದೃಷ್ಟಿಯನ್ನಿಡುವಾಗ ನಾನೇ ಯೆಹೋವನು ಎಂದು ನಿಮಗೆ ಗೊತ್ತಾಗುವುದು.


ಅಲ್ಲಿನ ರೆಂಬೆಗಳು ಒಣಗಿಹೋಗಿ ಮುರಿದುಹೋಗುವವು, ಹೆಂಗಸರು ಬಂದು ಅವುಗಳಿಗೆ ಬೆಂಕಿ ಹಚ್ಚಿ ಉರಿಸುವರು. ಏಕೆಂದರೆ ಆ ಪ್ರಜೆಯು ಬುದ್ಧಿಹೀನವಾದವರೇ. ಆದಕಾರಣ ಸೃಷ್ಟಿಸಿದಾತನು ಅವರಿಗೆ ಕರುಣೆ ತೋರಿಸುವುದಿಲ್ಲ, ನಿರ್ಮಿಸಿದಾತನು ಅವರಿಗೆ ದಯೆತೋರಿಸುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು