Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 16:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ನಿನ್ನ ಒಡವೆಗಳು ಬೆಳ್ಳಿಬಂಗಾರದವು; ನಿನ್ನ ಉಡುಪು ನಯವಾದ ನಾರುಮಡಿ, ರೇಷ್ಮೆಯ ಹೊದಿಕೆ, ಕಸೂತಿಯ ಬಟ್ಟೆ; ನಿನ್ನ ಆಹಾರವು ಗೋದಿಹಿಟ್ಟು, ಜೇನು, ಎಣ್ಣೆ; ನಿನ್ನ ಲಾವಣ್ಯವು, ಅತಿಮನೋಹರ; ನೀನು ವೃದ್ಧಿಗೊಂಡು ರಾಣಿಯಾದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ನಿನ್ನ ಒಡವೆಗಳು ಬೆಳ್ಳಿಬಂಗಾರದವು; ನಿನ್ನ ಉಡುಪು ನಯವಾದ ನಾರುಮಡಿ, ರೇಷ್ಮೆಯ ಹೊದಿಕೆ, ಕಸೂತಿಯ ವಸ್ತ್ರ; ನಿನ್ನ ಆಹಾರವು ಗೋದಿಹಿಟ್ಟು, ಜೇನುತುಪ್ಪ ಮತ್ತು ಎಣ್ಣೆ; ನಿನ್ನ ಲಾವಣ್ಯವು ಅತಿ ಮನೋಹರ; ನೀನು ಹೀಗೆ ವೃದ್ಧಿಗೊಂಡು ರಾಣಿಯಾದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ನಿನ್ನ ಒಡವೆಗಳು ಬೆಳ್ಳಿಬಂಗಾರದವು; ನಿನ್ನ ಉಡುಪು ನಯವಾದ ನಾರುಮಡಿ, ರೇಷ್ಮೆಯ ಹೊದಿಕೆ, ಕಸೂತಿಯ ಬಟ್ಟೆ; ನಿನ್ನ ಆಹಾರವು ಗೋದಿಹಿಟ್ಟು, ಜೇನು, ಎಣ್ಣೆ; ನಿನ್ನ ಲಾವಣ್ಯವು ಅತಿಮನೋಹರ; ನೀನು ವೃದ್ಧಿಗೊಂಡು ರಾಣಿಯಾದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ನಿನ್ನ ಚಿನ್ನ, ಬೆಳ್ಳಿ, ಆಭರಣ, ನಾರುಮಡಿ, ರೇಷ್ಮೆ ಮತ್ತು ಕಸೂತಿ ಹಾಕಿದ ಬಟ್ಟೆಗಳಲ್ಲಿ ನೀನು ಸುಂದರಳಾಗಿ ಕಾಣಿಸುತ್ತಿದ್ದೆ. ನೀನು ಉತ್ತಮವಾದ ಆಹಾರವನ್ನು ಊಟ ಮಾಡಿದೆ: ಉತ್ತಮ ಗೋಧಿಹಿಟ್ಟು, ಜೇನುತುಪ್ಪ ಮತ್ತು ಆಲೀವ್ ಎಣ್ಣೆ. ನೀನು ಅತ್ಯಂತ ಸುಂದರಿಯಾದೆ. ಮತ್ತು ನೀನು ರಾಣಿಯಾಗಿದ್ದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ನಿನ್ನ ಒಡವೆಗಳು ಬೆಳ್ಳಿ ಬಂಗಾರಗಳು, ನಿನ್ನ ಉಡುಪು ನಯವಾದ ನಾರುಮಡಿ, ರೇಷ್ಮೆಯ ಹೊದಿಕೆ, ಕಸೂತಿಯ ಬಟ್ಟೆ, ನಿನ್ನ ಆಹಾರವು ನಯವಾದ ಹಿಟ್ಟು, ಜೇನು, ಎಣ್ಣೆ ತಿನ್ನುತ್ತಿದ್ದೆ. ನಿನ್ನ ಲಾವಣ್ಯವು ಅತಿ ಮನೋಹರವಾಗಿ ವೃದ್ಧಿಗೊಂಡು ನೀನು ರಾಣಿಯಾದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 16:13
25 ತಿಳಿವುಗಳ ಹೋಲಿಕೆ  

ಅತ್ಯಂತ ರಮಣೀಯವಾದ ಚೀಯೋನಿನಲ್ಲಿರುವ, ದೇವರು ಪ್ರಕಾಶಿಸುತ್ತಾನೆ.


ಸೊಲೊಮೋನನು ಯೂಫ್ರೆಟಿಸ್ ನದಿ ಮೊದಲುಗೊಂಡು ಫಿಲಿಷ್ಟಿಯರ ಮತ್ತು ಐಗುಪ್ತ್ಯರ ದೇಶಗಳವರೆಗೂ ಇರುವ ಎಲ್ಲಾ ರಾಜ್ಯಗಳವರನ್ನು ಆಳುತ್ತಿದ್ದನು. ಅವರು ಅವನ ಜೀವಮಾನದಲ್ಲೆಲ್ಲಾ ಅವನಿಗೆ ಅಧೀನರಾಗಿ ಕಪ್ಪಕಾಣಿಕೆಗಳನ್ನು ಸಲ್ಲಿಸುತ್ತಿದ್ದರು.


ರಾಜಾಧಿರಾಜನ ಪಟ್ಟಣವಿರುವ ಚೀಯೋನ್ ಪರ್ವತವು ಉತ್ತರದಿಕ್ಕಿನಲ್ಲಿ ಉನ್ನತವಾಗಿಯೂ, ರಮ್ಯವಾಗಿಯೂ, ಭೂಲೋಕದಲ್ಲೆಲ್ಲಾ ಕಂಗೊಳಿಸುತ್ತಿರುವುದು.


ಅವರ ತಾಯಿ ವ್ಯಭಿಚಾರ ಮಾಡಿದ್ದಾಳೆ, ಹೆತ್ತವಳು ನಾಚಿಕೆಗೇಡಿಯಾಗಿ ನಡೆದಿದ್ದಾಳೆ. ‘ತನಗೆ ಬೇಕಾದ ಅನ್ನ ಪಾನಗಳನ್ನೂ, ಉಣ್ಣೆ ನಾರುಗಳನ್ನೂ, ತೈಲವನ್ನೂ ಪಾನಕಗಳನ್ನೂ ತನಗೆ ಕೊಡುವ ಹಾಗೂ ತನ್ನೊಂದಿಗೆ ವ್ಯಭಿಚಾರದಲ್ಲಿ ತೊಡಗಿಸಿಕೊಂಡವರ ಹಿಂದೆ ಹೋಗುವೆನು ಅಂದುಕೊಂಡಿದ್ದಾಳೆ.’”


ನಾನು ನಿನಗೆ ಕೊಟ್ಟ ರೊಟ್ಟಿಯನ್ನೂ, ನಿನ್ನ ಆಹಾರಕ್ಕೆ ನಾನು ಒದಗಿಸಿದ ಗೋದಿಹಿಟ್ಟು, ಎಣ್ಣೆ, ಜೇನು ಇವುಗಳನ್ನೂ ನೀನು ಆ ಮೂರ್ತಿಗಳ ಮುಂದೆ ಸುಗಂಧಹೋಮ ಮಾಡಿದೆ; ಅಯ್ಯೋ, ಹೀಗಾಯಿತಲ್ಲ!” ಇದು ಕರ್ತನಾದ ಯೆಹೋವನ ನುಡಿ.


ಹಾದುಹೋಗುವವರೆಲ್ಲರೂ ನಿನ್ನನ್ನು ನೋಡಿ ಚಪ್ಪಾಳೆಹೊಡೆಯುತ್ತಾರೆ, ಯೆರೂಸಲೇಮ್ ನಗರಿಯನ್ನು ಕಂಡು, “ಆಹಾ, ಪರಿಪೂರ್ಣಸುಂದರಿ, ಸಮಸ್ತಲೋಕ ಸಂತೋಷಿಣಿ ಎನ್ನಿಸಿಕೊಳ್ಳುತ್ತಿದ್ದ ಪುರಿಯು ಇದೇ ಏನು? ಛೀ ಛೀ” ಎಂದು ತಲೆಯಾಡಿಸುತ್ತಾರೆ.


ಚೀಯೋನೇ, ಕಣ್ಣೆತ್ತು, ಉತ್ತರ ದಿಕ್ಕಿನಿಂದ ಬರುವವರನ್ನು ನೋಡು. ನಿನಗೆ ಒಪ್ಪಿಸಿದ ಹಿಂಡು, ನಿನ್ನ ಅಂದವಾದ ಹಿಂಡೂ ಎಲ್ಲಿ?


ನಮ್ಮ ಪೂರ್ವಿಕರು ನಿನ್ನನ್ನು ಕೀರ್ತಿಸುತ್ತಿದ್ದ ಸುಂದರ ಪವಿತ್ರಾಲಯವನ್ನು ಬೆಂಕಿಯು ಸುಟ್ಟುಬಿಟ್ಟಿದೆ, ನಮ್ಮ ಅಮೂಲ್ಯ ವಸ್ತುಗಳೆಲ್ಲಾ ನಾಶವಾಗಿವೆ.


ಆತನು ನಿನ್ನ ಪ್ರಾಂತ್ಯದೊಳಗೆ ಸೌಭಾಗ್ಯವನ್ನು ಉಂಟುಮಾಡುತ್ತಾನೆ, ಶ್ರೇಷ್ಠವಾದ ಗೋದಿಯಿಂದ ನಿನ್ನನ್ನು ತೃಪ್ತಿಗೊಳಿಸುತ್ತಾನೆ.


ನಾನು ಅವರಿಗೆ ಶ್ರೇಷ್ಠವಾದ ಗೋದಿಯನ್ನು ಊಟಕ್ಕೆ ಕೊಟ್ಟು, ಬಂಡೆಯೊಳಗಿನ ಜೇನಿನಿಂದ ತೃಪ್ತಿಪಡಿಸುವೆನು” ಎಂಬುದೇ.


ಅವರು ನಮಗೆ, ‘ನಾವು ಪರಲೋಕ ಮತ್ತು ಭೂಲೋಕಗಳ ದೇವರ ಸೇವಕರು. ಅನೇಕಾನೇಕ ವರ್ಷಗಳ ಹಿಂದೆ ಕಟ್ಟಿದ್ದ ಆಲಯವನ್ನು ಪುನಃ ಕಟ್ಟುತ್ತಿದ್ದೇವೆ. ಇಸ್ರಾಯೇಲರ ಒಬ್ಬ ಮಹಾರಾಜನು ಅದನ್ನು ಕಟ್ಟಿಸಿದ್ದನು.


ಅವರು ಯೆರೂಸಲೇಮಿನಲ್ಲಿ ಬಲಿಷ್ಠರಾಗಿ ರಾಜ್ಯ ಆಳುತ್ತಾ, ಹೊಳೆಯಾಚೆಯ ಎಲ್ಲಾ ಪ್ರದೇಶಗಳಲ್ಲಿ ಅಧಿಕಾರನಡಿಸುತ್ತಾ, ಕಪ್ಪ, ತೆರಿಗೆ ಸುಂಕಗಳನ್ನು ತೆಗೆದುಕೊಳ್ಳುತ್ತಾ ಇದ್ದರೆಂದು ಕಂಡುಬಂದಿತು.


ದಾವೀದನು ಇಸ್ರಾಯೇಲ್ಯರ ಅರಸನಾಗಿ, ಎಲ್ಲಾ ಪ್ರಜೆಗಳನ್ನು ನೀತಿನ್ಯಾಯಗಳಿಂದ ನಡೆಸುತ್ತಾ ಬಂದನು.


ಅಮ್ಮೋನಿಯರ ಅರಸನಾದ ನಾಹಾಷನು ನಿಮ್ಮ ಮೇಲೆ ಯುದ್ಧಕ್ಕೆ ಬರುತ್ತಾನೆಂದು ನಿಮಗೆ ಗೊತ್ತಾಗಲು, ನಿಮ್ಮ ದೇವರಾದ ಯೆಹೋವನು ನಿಮ್ಮ ಅರಸನಾಗಿದ್ದರೂ ನೀವು, ‘ನಮಗೊಬ್ಬ ಅರಸನನ್ನು ನೇಮಿಸು’ ಎಂದು ನನ್ನನ್ನು ಬೇಡಿಕೊಂಡಿರಿ.


ಆ ಆಳು ಮುಂದೆ ಹೋದಾಗ ಸಮುವೇಲನು ತೈಲದ ಕೊಂಬಿನಿಂದ ಅವನ ತಲೆಯ ಮೇಲೆ ತೈಲವನ್ನು ಹೊಯ್ದು ಅವನನ್ನು ಮುದ್ದಿಟ್ಟು ಅವನಿಗೆ, “ಯೆಹೋವನು ತನ್ನ ಸ್ವತ್ತನ್ನು ಅಳುವುದಕ್ಕೋಸ್ಕರ ನಿಜವಾಗಿ ನಿನ್ನನ್ನು ಅಭಿಷೇಕಿಸಿದ್ದಾನೆ.


ಆ ದೇಶದಲ್ಲಿ ಗೋದಿ, ಜವೆಗೋದಿ, ದ್ರಾಕ್ಷಿ, ಅಂಜೂರ, ದಾಳಿಂಬ ಇವುಗಳು ಬೆಳೆಯುತ್ತವೆ; ಎಣ್ಣೆ ಮರಗಳೂ ಮತ್ತು ಜೇನೂ ಸಿಕ್ಕುತ್ತವೆ.


ನಿನಗೆ ಅತ್ಯಧಿಕವಾದ ಸಂತಾನವನ್ನು ಕೊಡುವೆನು ನಿನ್ನಿಂದ ಜನಾಂಗಗಳು ಉತ್ಪತ್ತಿಯಾಗಿ ಅರಸರು ಹುಟ್ಟುವರು.


ಇದಲ್ಲದೆ ನಾನು ಕಸೂತಿಯ ಬಟ್ಟೆಯನ್ನು ನಿನಗೆ ತೊಡಿಸಿ, ಕಡಲಪ್ರಾಣಿಯ ಕೆಂಪು ಚರ್ಮದ ಕೆರಗಳನ್ನು ನಿನ್ನ ಕಾಲಿಗೆ ಮೆಟ್ಟಿಸಿ, ನಯವಾದ ನಾರು ಮಡಿಯನ್ನು ನಿನಗೆ ಉಡಿಸಿ, ರೇಷ್ಮೆಯ ಹೊದಿಕೆಯನ್ನು ನಿನಗೆ ಹೊದಿಸಿದೆನು.


ಮತ್ತು ನಾನು ನನ್ನ ಬೆಳ್ಳಿ ಬಂಗಾರದಿಂದ ನಿನಗೆ ಮಾಡಿಸಿಕೊಟ್ಟಿದ್ದ ನಿನ್ನ ಚಂದವಾದ ಆಭರಣಗಳನ್ನು ನೀನು ತೆಗೆದು ಅವುಗಳಿಂದ ಪುರುಷ ಮೂರ್ತಿಗಳನ್ನು ರೂಪಿಸಿಕೊಂಡು ಅವುಗಳೊಡನೆ ವ್ಯಭಿಚಾರ ಮಾಡಿದೆ.


“ದೂತನನ್ನು ಕಳುಹಿಸಿ, ಪುರುಷರನ್ನು ದೂರದಿಂದ ಕರೆಯಿಸಿಕೊಂಡರು; ಇಗೋ, ಅವರು ಬಂದರು; ಎಲೈ ಹೆಂಗಸೇ, ಅವರಿಗಾಗಿ ನೀನು ಸ್ನಾನಮಾಡಿ ಕಣ್ಣಿಗೆ ಕಾಡಿಗೆ ಹಚ್ಚಿ, ನಿನ್ನನ್ನು ಆಭರಣಗಳಿಂದ ಶೃಂಗರಿಸಿಕೊಂಡೆ.


“ನಿನ್ನ ಕೈಕೆಲಸದ ವಸ್ತುಗಳು ಅಪಾರವಾಗಿದ್ದುದರಿಂದ ಅರಾಮಿನವರೂ ನಿನ್ನವರಾಗಿ ವ್ಯಾಪಾರಮಾಡಿ, ಕೆಂಪರಲು, ರಕ್ತಾಂಬರ, ಕಸೂತಿಯ ವಸ್ತ್ರ, ನಾರುಬಟ್ಟೆ, ಹವಳ, ಮಾಣಿಕ್ಯ ಮೊದಲಾದ ಸರಕುಗಳನ್ನು ನಿನಗೆ ತಂದು ಸುರಿದರು.


ಹಾಲು ತುಪ್ಪದಲ್ಲಿ ನನ್ನ ಪಾದಗಳನ್ನು ತೊಳೆಯುತ್ತಿದ್ದೆ, ಬಂಡೆಯು ನನಗೋಸ್ಕರ ಎಣ್ಣೆಯನ್ನು ಪ್ರವಾಹವಾಗಿ ಸುರಿಸುತ್ತಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು