ಯೆಹೆಜ್ಕೇಲನು 16:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 “ಆದರೆ ನೀನು ನಿನ್ನ ಸೌಂದರ್ಯದಲ್ಲಿಯೇ ನಂಬಿಕೆಯಿಟ್ಟು, ನಾನು ಪ್ರಸಿದ್ಧಳಾಗಿದ್ದೇನಲ್ಲಾ ಎಂದು ಉಬ್ಬಿಕೊಂಡು ವ್ಯಭಿಚಾರಮಾಡಿದಿ; ಹಾದುಹೋಗುವ ಪ್ರತಿಯೊಬ್ಬನ ಸಂಗಡ ಮಿತಿಮೀರಿ ವ್ಯಭಿಚಾರಮಾಡಿದೆ, ಪ್ರತಿಯೊಬ್ಬನ ಸಂಗಡ ವ್ಯಭಿಚಾರಕ್ಕೆ ಒಳಗಾದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 “ಆದರೆ ನೀನು ನಿನ್ನ ಸೌಂದರ್ಯವನ್ನೇ ನೆಚ್ಚಿಕೊಂಡೆ, ‘ನಾನು ಪ್ರಸಿದ್ಧಳಾದೆ’ ಎಂದು ಉಬ್ಬಿಕೊಂಡು ಸೂಳೆತನಮಾಡಿದೆ; ಹಾದುಹೋಗುವ ಪ್ರತಿಯೊಬ್ಬನ ಸಂಗಡ ಮಿತಿಮೀರಿ ಹಾದರಮಾಡಿದೆ. ಒಬ್ಬೊಬ್ಬನಿಗೂ ಒಳಗಾದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಆದರೆ ನೀನು ನಿನ್ನ ಸೌಂದರ್ಯದಲ್ಲಿಯೇ ನಂಬಿಕೆಯಿಟ್ಟು ನಾನು ಪ್ರಸಿದ್ಧಳಾಗಿದ್ದೇನಲ್ಲಾ ಎಂದು ಉಬ್ಬಿಕೊಂಡು ಸೂಳೆತನಮಾಡಿದಿ; ಹಾದುಹೋಗುವ ಪ್ರತಿಯೊಬ್ಬನ ಸಂಗಡ ವಿುತಿಮೀರಿ ಹಾದರಮಾಡಿದಿ, ಒಬ್ಬೊಬ್ಬನಿಗೂ ಒಳಗಾದಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ದೇವರು ಹೀಗೆಂದನು: “ನೀನು ನಿನ್ನ ಸೌಂದರ್ಯದ ಮೇಲೆ ಭರವಸೆ ಉಳ್ಳವಳಾಗಿದ್ದೆ. ನಿನ್ನ ಪ್ರಖ್ಯಾತಿಯಿಂದಾಗಿ ನನಗೆ ಅಪನಂಬಿಗಸ್ತಳಾದಿ. ನಿನ್ನನ್ನು ಹಾದುಹೋಗುವ ಪ್ರತಿವ್ಯಕ್ತಿಯೊಂದಿಗೆ ನೀನು ವೇಶ್ಯೆಯಂತೆ ನಡೆದುಕೊಂಡಿ. ನೀನು ನಿನ್ನನ್ನು ಅವರಿಗೊಪ್ಪಿಸಿದಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 “ ‘ಆದರೆ ನೀನು ನಿನ್ನ ಸೌಂದರ್ಯದಲ್ಲಿ ಭರವಸೆಯಿಟ್ಟು, ನಿನ್ನ ಕೀರ್ತಿಯ ನಿಮಿತ್ತವಾಗಿ ವೇಶ್ಯೆಯಾದೆ. ಹಾದುಹೋಗುವ ಪ್ರತಿಯೊಬ್ಬನ ಸಂಗಡ ಮಿತಿಮೀರಿ ವ್ಯಭಿಚಾರ ಮಾಡಿದೆ ಮತ್ತು ನಿನ್ನ ಸೌಂದರ್ಯ ಅವನದಾಯಿತು. ಅಧ್ಯಾಯವನ್ನು ನೋಡಿ |