Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 16:17 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಮತ್ತು ನಾನು ನನ್ನ ಬೆಳ್ಳಿ ಬಂಗಾರದಿಂದ ನಿನಗೆ ಮಾಡಿಸಿಕೊಟ್ಟಿದ್ದ ನಿನ್ನ ಚಂದವಾದ ಆಭರಣಗಳನ್ನು ನೀನು ತೆಗೆದು ಅವುಗಳಿಂದ ಪುರುಷ ಮೂರ್ತಿಗಳನ್ನು ರೂಪಿಸಿಕೊಂಡು ಅವುಗಳೊಡನೆ ವ್ಯಭಿಚಾರ ಮಾಡಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ನಾನು ನನ್ನ ಬೆಳ್ಳಿಬಂಗಾರದಿಂದ ನಿನಗೆ ಮಾಡಿಸಿಕೊಟ್ಟಿದ್ದ ಅಂದಚೆಂದವಾದ ಆಭರಣಗಳನ್ನು ತೆಗೆದು, ಅವುಗಳಿಂದ ಪುರುಷಮೂರ್ತಿಗಳನ್ನು ರೂಪಿಸಿಕೊಂಡು, ಅವುಗಳೊಡನೆ ಹಾದರ ಮಾಡಿದೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಮತ್ತು ನಾನು ನನ್ನ ಬೆಳ್ಳಿಬಂಗಾರದಿಂದ ಮಾಡಿಸಿ ನಿನಗೆ ಕೊಟ್ಟಿದ್ದ ನಿನ್ನ ಚಂದವಾದ ಆಭರಣಗಳನ್ನು ನೀನು ತೆಗೆದು ಅವುಗಳಿಂದ ಪುರುಷಮೂರ್ತಿಗಳನ್ನು ರೂಪಿಸಿಕೊಂಡು ಅವುಗಳೊಡನೆ ಹಾದರಮಾಡಿದಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ನಾನು ನಿನಗೆ ಕೊಟ್ಟ ಬೆಳ್ಳಿಬಂಗಾರಗಳ ಆಭರಣಗಳಿಂದ ನೀನು ಗಂಡು ವಿಗ್ರಹಗಳನ್ನು ಮಾಡಿಕೊಂಡು ಅವುಗಳೊಂದಿಗೆ ಸೂಳೆಯಂತೆ ವರ್ತಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಇದಲ್ಲದೆ ನಾನು ನಿನಗೆ ಬೆಳ್ಳಿಬಂಗಾರದಿಂದ ಮಾಡಿಸಿಕೊಟ್ಟಿದ್ದ ನಿನ್ನ ಅಂದವಾದ ಆಭರಣಗಳನ್ನು ತೆಗೆದು, ಅವುಗಳಿಂದ ಪುರುಷಮೂರ್ತಿಗಳನ್ನು ಮಾಡಿಕೊಂಡು ಅದರ ಸಂಗಡ ವ್ಯಭಿಚಾರ ಮಾಡಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 16:17
14 ತಿಳಿವುಗಳ ಹೋಲಿಕೆ  

ಇಸ್ರಾಯೇಲ್ ಸೊಂಪಾಗಿ ಬೆಳೆದ ದ್ರಾಕ್ಷಾಲತೆಯಾಗಿದೆ; ಹಣ್ಣುಬಿಟ್ಟುಕೊಂಡಿದೆ; ಅದರ ಹಣ್ಣುಗಳು ಹೆಚ್ಚಿದಷ್ಟೂ ಯಜ್ಞವೇದಿಗಳನ್ನು ಹೆಚ್ಚಿಸಿಕೊಂಡಿದೆ; ಅದರ ಭೂಮಿಯು ಎಷ್ಟು ಒಳ್ಳೆಯದೋ, ಅಷ್ಟು ಒಳ್ಳೆಯ ವಿಗ್ರಹ ಸ್ತಂಭಗಳನ್ನು ನಿರ್ಮಾಣ ಮಾಡಿಕೊಂಡಿದೆ.


ಅವಳು ನನ್ನನ್ನು ಮರೆತು ಮೂಗುತಿ ಮೊದಲಾದ ಒಡವೆಗಳಿಂದ ತನ್ನನ್ನು ಶೃಂಗರಿಸಿಕೊಂಡು, ವ್ಯಭಿಚಾರಿಗಳ ಹಿಂದೆ ಹೋಗಿ ಬಾಳ್ ದೇವತೆಗಳ ಉತ್ಸವ ದಿನಗಳಲ್ಲಿ ಧೂಪಹಾಕಿದ್ದಕ್ಕೆ ನಾನು ಅವಳನ್ನು ದಂಡಿಸುವೆನು, ಇದು ಯೆಹೋವನ ನುಡಿ.”


ಮತ್ತು ನಾನು ನಿನ್ನ ಕೈಗಳಿಗೆ ಬಳೆಗಳನ್ನು, ಕಂಠಕ್ಕೆ ಮಾಲೆಯನ್ನು,


ಕಲ್ಲು ಮರಗಳನ್ನು ಪೂಜಿಸಿ ವ್ಯಭಿಚಾರ ಮಾಡುವುದು ಲಘುವೆಂದು ಭಾವಿಸಿಕೊಂಡ ಆಕೆ ತನ್ನ ವ್ಯಭಿಚಾರದಿಂದ ದೇಶವನ್ನು ಅಪವಿತ್ರಪಡಿಸಿದಳು.


ಮೂಗಿಗೆ ಮೂಗುತಿಯನ್ನು, ಶಿರಸ್ಸಿಗೆ ಸುಂದರ ಕಿರೀಟವನ್ನು ಇಟ್ಟು, ನಿನ್ನನ್ನು ಆಭರಣಗಳಿಂದ ಸಿಂಗರಿಸಿದೆನು.


ನಿನ್ನ ಒಡವೆಗಳು ಬೆಳ್ಳಿಬಂಗಾರದವು; ನಿನ್ನ ಉಡುಪು ನಯವಾದ ನಾರುಮಡಿ, ರೇಷ್ಮೆಯ ಹೊದಿಕೆ, ಕಸೂತಿಯ ಬಟ್ಟೆ; ನಿನ್ನ ಆಹಾರವು ಗೋದಿಹಿಟ್ಟು, ಜೇನು, ಎಣ್ಣೆ; ನಿನ್ನ ಲಾವಣ್ಯವು, ಅತಿಮನೋಹರ; ನೀನು ವೃದ್ಧಿಗೊಂಡು ರಾಣಿಯಾದೆ.


ನೀನು ಪೂಜಾ ಸ್ಥಾನಗಳನ್ನು ಕಟ್ಟಿಕೊಂಡು ನಿನ್ನ ಚಿತ್ರವಿಚಿತ್ರ ವಸ್ತ್ರಗಳಿಂದ ಅವುಗಳನ್ನು ಅಲಂಕರಿಸಿ ಅಲ್ಲಿ ವ್ಯಭಿಚಾರ ನಡಿಸಿದೆ. ಇದು ನಡೆಯತಕ್ಕದ್ದಲ್ಲ. ಆಗಬಾರದಾಗಿತ್ತು.


ನಿನ್ನ ಕಸೂತಿಯ ಬಟ್ಟೆಗಳನ್ನು ತೆಗೆದು ಮೂರ್ತಿಗಳಿಗೆ ಹೊದಿಸಿ, ಅವುಗಳ ಮುಂದೆ ನನ್ನ ತೈಲವನ್ನೂ ನನ್ನ ಧೂಪವನ್ನೂ ಅರ್ಪಿಸಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು