Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 16:23 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಅಯ್ಯೋ, ನಿನ್ನ ಗತಿಯನ್ನು ಏನು ಹೇಳಲಿ!” ಎಂಬುದು ಕರ್ತನಾದ ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಅಯ್ಯೋ, ನಿನಗೆ ಧಿಕ್ಕಾರ! ಇದು ಸರ್ವೇಶ್ವರನಾದ ದೇವರ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಅಯ್ಯಯ್ಯೋ, ನಿನ್ನ ಗತಿಯನ್ನು ಏನು ಹೇಳಲಿ ಎಂಬದು ಕರ್ತನಾದ ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 “ಓ ಜೆರುಸಲೇಮೇ, ಎಂಥಾ ಭಯಂಕರ, ನಿನಗೆಂಥಾ ಭಯಂಕರವಾಗಿರುವುದು ಸಂಭವಿಸುತ್ತದೆ!” ಎನ್ನುತ್ತಾನೆ ನನ್ನ ಒಡೆಯನಾದ ಯೆಹೋವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 “ ‘ನಿನಗೆ ಕಷ್ಟ! ಕಷ್ಟ, ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ. ಅವನ ಎಲ್ಲಾ ದುಷ್ಟತನದ ಹೊರತಾಗಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 16:23
12 ತಿಳಿವುಗಳ ಹೋಲಿಕೆ  

ಆದ್ದರಿಂದ ಪರಲೋಕವೇ, ಅದರಲ್ಲಿ ವಾಸಮಾಡುವವರೇ, ಹರ್ಷಗೊಳ್ಳಿರಿ. ಆದರೆ ಭೂಮಿ, ಸಮುದ್ರಗಳೇ ನಿಮ್ಮ ದುರ್ಗತಿಯನ್ನು ಏನೆಂದು ಹೇಳಲಿ ಏಕೆಂದರೆ ಸೈತಾನನು ತನಗಿರುವ ಕಾಲವು ಇನ್ನು ಸ್ವಲ್ಪಮಾತ್ರವೆಂದು ತಿಳಿದು ಮಹಾ ರೋಷವುಳ್ಳವನಾಗಿ ನಿಮ್ಮ ಕಡೆಗೆ ಇಳಿದು ಬಂದಿದ್ದಾನೆ” ಎಂಬುದಾಗಿ ಹೇಳಿತು.


ಆ ಮೇಲೆ ನಾನು ನೋಡಲಾಗಿ ಇಗೋ ಒಂದು ಹದ್ದು ಆಕಾಶದ ಮಧ್ಯದಲ್ಲಿ ಹಾರಾಡುತ್ತಿತ್ತು, ಅದರ ಕೂಗು ನನಗೆ ಕೇಳಿಸಿತು. ಅದು, “ಇನ್ನು ಉಳಿದ ಮೂವರು ದೇವದೂತರು ತುತ್ತೂರಿಯನ್ನು ಊದುವಾಗ ಭೂನಿವಾಸಿಗಳಿಗೆ ಕೇಡು, ಕೇಡು, ಕೇಡು” ಎಂದು ಮಹಾಶಬ್ದದಿಂದ ಕೂಗುವುದನ್ನು ಕೇಳಿಸಿಕೊಂಡೆನು.


ಹೇಗೆಂದರೆ, “ಅಯ್ಯೋ ಖೊರಾಜಿನೇ, ಅಯ್ಯೋ ಬೇತ್ಸಾಯಿದವೇ, ನಿಮ್ಮಲ್ಲಿ ನಡೆದ ಮಹತ್ಕಾರ್ಯಗಳು ತೂರ್ ಮತ್ತು ಸೀದೋನ್ ಪಟ್ಟಣಗಳಲ್ಲಿ ನಡೆದಿದ್ದರೆ ಅಲ್ಲಿನವರು ಎಂದೋ ಗೋಣಿತಟ್ಟು ಸುತ್ತಿಕೊಂಡು ಬೂದಿಯಲ್ಲಿ ಕುಳಿತುಕೊಂಡು ಮಾನಸಾಂತರಪಡುತ್ತಿದ್ದರು.


ಅಯ್ಯೋ, ಅವಿಧೇಯತೆ ಮಲಿನವೂ ಆದ ದಬ್ಬಾಳಿಕೆ ನಡೆಸುವ ನಗರದ ಗತಿಯನ್ನು ಏನು ಹೇಳಲಿ!


ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಆಹಾ, ರಕ್ತಮಯವಾದ ಪಟ್ಟಣವೇ ನಿನಗೆ ಧಿಕ್ಕಾರ, ಒಳಗೆ ಕಿಲುಬು ಹಿಡಿದಿರುವ, ಕಿಲುಬು ಬಿಟ್ಟುಹೋಗದಿರುವ ಹಂಡೆ! ಅದರಿಂದ ಮಾಂಸದ ತುಂಡುಗಳನ್ನು ಸಿಕ್ಕಿ ಸಿಕ್ಕಿದ ಹಾಗೆ ತೆಗೆದುಬಿಡು, ಅದಕ್ಕಾಗಿ ಚೀಟುಗಳನ್ನು ಹಾಕಬೇಡ.


ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ಜನರ ಪ್ರಾಣಗಳನ್ನು ಬೇಟೆಯಾಡಬೇಕೆಂದು, ಎಲ್ಲರ ಮೊಣಕೈಗಳಿಗೆ ತಾಯಿತಗಳನ್ನು ಕಟ್ಟಿ, ಉದ್ದವಾದವರಿಗೂ, ಗಿಡ್ಡವಾದವರಿಗೂ ತಕ್ಕ ಮುಸುಕುಗಳನ್ನು ಸಿದ್ಧಮಾಡಿಕೊಂಡಿರುವ ಸ್ತ್ರೀಯರ ಗತಿಯನ್ನು ಏನೆಂದು ಹೇಳಲಿ! ಸ್ತ್ರೀಯರೇ, ನೀವು ನನ್ನ ಜನರ ಪ್ರಾಣಗಳನ್ನು ಬೇಟೆಯಾಡಿ ಸ್ವಂತ ಪ್ರಾಣಗಳನ್ನು ಉಳಿಸಿಕೊಳ್ಳುವಿರೋ?


ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ಯಾವ ಸಾಕ್ಷಾತ್ಕಾರವೂ ಇಲ್ಲದೆ ಸ್ವಬುದ್ಧಿಯನ್ನೇ ಅನುಸರಿಸುವ ಮೂರ್ಖ ಪ್ರವಾದಿಗಳ ಗತಿಯನ್ನು ಏನೆಂದು ಹೇಳಲಿ!


ಆತನು ಆ ಸುರುಳಿಯನ್ನು ನನ್ನೆದುರಿನಲ್ಲಿ ಬಿಚ್ಚಿದನು; ಅದರ ಎರಡು ಪಕ್ಕಗಳಲ್ಲಿಯೂ ಬರೆದಿತ್ತು; ಅದರಲ್ಲಿ ಬರೆದದ್ದು ಪ್ರಲಾಪ, ಗೋಳಾಟ, ಶೋಕ ಇವುಗಳೇ.


ನಾನು ನಿನ್ನ ವ್ಯಭಿಚಾರಗಳನ್ನು, ನಿನ್ನ ಹೇಕಾರಗಳನ್ನು, ನಿನ್ನ ವ್ಯಭಿಚಾರದ ನಡತೆಯನ್ನು ಗುಡ್ಡಗಳಲ್ಲಿಯೂ, ಬಯಲಿನಲ್ಲಿಯೂ ನೀನು ನಡೆಸಿದ ಅಸಹ್ಯಕಾರ್ಯಗಳನ್ನು ನೋಡಿದ್ದೇನೆ. ಯೆರೂಸಲೇಮೇ, ನಿನ್ನ ಗತಿಯನ್ನು ಏನೆಂದು ಹೇಳಲಿ! ನೀನು ಶುದ್ಧಳಾಗಲು ಇನ್ನೆಷ್ಟು ಕಾಲ ಬೇಕು?


ಈ ನಿನ್ನ ಅಸಹ್ಯಕಾರ್ಯಗಳನ್ನೂ, ವ್ಯಭಿಚಾರವನ್ನು ನೀನು ಪದೇ ಪದೇ ನಡೆಸುತ್ತಿದ್ದಾಗ ನೀನು ಬಟ್ಟೆಯಿಲ್ಲದೆ ಬೆತ್ತಲೆಯಾಗಿ ನಿನ್ನ ರಕ್ತದಲ್ಲಿ ಹೊರಳಾಡುತ್ತಿದ್ದ ನಿನ್ನ ಎಳೆತನವನ್ನು ನೀನು ಜ್ಞಾಪಕಕ್ಕೆ ತಂದುಕೊಳ್ಳಲಿಲ್ಲ.


“ನೀನು ಈ ದುಷ್ಕೃತ್ಯಗಳನ್ನೆಲ್ಲಾ ನಡೆಸಿದ್ದಲ್ಲದೆ ಪ್ರತಿಯೊಂದು ಚೌಕದಲ್ಲಿ ಮಂಟಪವನ್ನು ಮಾಡಿ ಜಗಲಿಯನ್ನು ಕಟ್ಟಿಕೊಂಡಿರುವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು