ಯೆಹೆಜ್ಕೇಲನು 16:25 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ಒಂದೊಂದು ಬೀದಿಯ ಕೊನೆಯಲ್ಲಿಯೂ ನೀನು ಜಗಲಿಯನ್ನು ಕಟ್ಟಿಕೊಂಡು, ನಿನ್ನ ಸೌಂದರ್ಯವನ್ನು ನೀಚ ಕೆಲಸಕ್ಕೆ ಒಪ್ಪಿಸಿ, ಹಾದುಹೋಗುವವರೆಲ್ಲರನ್ನು ಸೇರಿಸಿ ವ್ಯಭಿಚಾರವನ್ನು ಹೆಚ್ಚಾಗಿ ನಡೆಸಿರುವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)25 ಒಂದೊಂದು ಬೀದಿಯ ಕೊನೆಯಲ್ಲಿ ನೀನು ಜಗಲಿಯನ್ನು ಕಟ್ಟಿಕೊಂಡು, ನಿನ್ನ ಸೌಂದರ್ಯವನ್ನು ನೀಚಕೆಲಸಕ್ಕೆ ಒಪ್ಪಿಸಿ, ಹಾದುಹೋಗುವವರೆಲ್ಲರನ್ನೂ ಸೇರಿ ಸೂಳೆತನವನ್ನು ಅಧಿಕಗೊಳಿಸಿರುವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)25 ಒಂದೊಂದು ಬೀದಿಯ ಕೊನೆಯಲ್ಲಿಯೂ ನೀನು ಜಗಲಿಯನ್ನು ಕಟ್ಟಿಕೊಂಡು ನಿನ್ನ ಸೌಂದರ್ಯವನ್ನು ನೀಚ ಕೆಲಸಕ್ಕೆ ಒಪ್ಪಿಸಿ ಹಾದುಹೋಗುವವರೆಲ್ಲರನ್ನು ಸೇರಿ ಸೂಳೆತನವನ್ನು ಹೆಚ್ಚಾಗಿ ನಡಿಸಿದ್ದೀ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್25 ಪ್ರತೀ ರಸ್ತೆಯ ಪ್ರಾರಂಭದಲ್ಲಿ ಅಂಥಾ ಪೂಜಾಸ್ಥಳಗಳನ್ನು ನಿರ್ಮಿಸಿದ್ದೀ. ನೀನು ನಿನ್ನ ಸೌಂದರ್ಯವನ್ನು ಹಾಳುಮಾಡಿಕೊಂಡಿ. ನೀನು ಅಸಹ್ಯವಾದ ಕಾರ್ಯಗಳನ್ನು ಮಾಡಲು ನಿನ್ನ ಸೌಂದರ್ಯವನ್ನು ಬಳಸಿಕೊಂಡೆ. ಹಾದಿಯಲ್ಲಿ ಹೋಗುವ ಪ್ರತಿಯೊಬ್ಬ ಗಂಡಸಿಗೂ ನೀನು ಲೈಂಗಿಕ ತೃಪ್ತಿ ನೀಡಿ ನಿನ್ನ ಸೂಳೆತನವನ್ನು ಹೆಚ್ಚಿಸಿಕೊಂಡೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ25 ಪ್ರತಿಯೊಂದು ದಾರಿಯ ಕೊನೆಯಲ್ಲಿಯೂ ಎತ್ತರದ ದೇವಾಲಯವನ್ನು ನಿರ್ಮಿಸಿ, ನಿನ್ನ ಸೌಂದರ್ಯವನ್ನು ದುರುಪಯೋಗಪಡಿಸಿಕೊಂಡು, ಹಾದುಹೋಗುವ ಪ್ರತಿಯೊಬ್ಬನಿಗೂ ನಿನ್ನ ಕಾಲುಗಳನ್ನು ಅಗಲಿಸಿದೆ; ನಿನ್ನ ವ್ಯಭಿಚಾರವನ್ನು ವೃದ್ಧಿಸಿದೆ. ಅಧ್ಯಾಯವನ್ನು ನೋಡಿ |