Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 16:49 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

49 ಸೊದೋಮೆಂಬ ನಿನ್ನ ತಂಗಿಯ ದೋಷವನ್ನು ನೋಡು; ಹೆಮ್ಮೆಪಡುವುದು, ಹೊಟ್ಟೆತುಂಬಿಸಿಕೊಳ್ಳುವುದು, ಸ್ವಂತ ಸುಖದಲ್ಲಿ ಮುಳುಗಿರುವುದು, ಇವು ಆಕೆಯಲ್ಲಿಯೂ ಮತ್ತು ಆಕೆಯ ಕುಮಾರ್ತೆಯರಲ್ಲಿಯೂ ಇದ್ದವು. ಅಲ್ಲದೆ ಆಕೆಯು ದೀನದರಿದ್ರರಿಗೆ ಬೆಂಬವಾಗಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

49 ಸೊದೋಮೆಂಬ ನಿನ್ನ ತಂಗಿಯ ದೋಷವನ್ನು ನೋಡು; ಗರ್ವಪಡುವುದು, ಹೊಟ್ಟೆ ತುಂಬಿಸಿಕೊಳ್ಳುವುದು, ಸ್ವಸುಖದಲ್ಲಿ ಮುಳುಗಿರುವುದು, ಇವು ಆಕೆಯಲ್ಲಿಯೂ ಆಕೆಯ ಕುವರಿಯರಲ್ಲೂ ಇದ್ದವು. ಅಲ್ಲದೆ ಅವರು ದೀನದಲಿತರಿಗೆ ಬೆಂಬಲವಾಗಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

49 ಸೊದೋಮೆಂಬ ನಿನ್ನ ತಂಗಿಯ ದೋಷವನ್ನು ನೋಡು; ಹೆಮ್ಮೆಪಡುವದು, ಹೊಟ್ಟೆತುಂಬಿಸಿಕೊಳ್ಳುವದು, ಸ್ವಸುಖದಲ್ಲಿ ಮುಳುಗಿರುವದು, ಇವು ಆಕೆಯಲ್ಲಿಯೂ ಆಕೆಯ ಕುಮಾರ್ತೆಯರಲ್ಲಿಯೂ ಇದ್ದವು. ಅಲ್ಲದೆ ಆಕೆಯು ದೀನದರಿದ್ರರಿಗೆ ಬೆಂಬಲವಾಗಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

49 ದೇವರು ಹೇಳಿದ್ದೇನೆಂದರೆ, “ನಿನ್ನ ತಂಗಿ ಸೊದೋಮ್ ಮತ್ತು ಆಕೆಯ ಹೆಣ್ಣುಮಕ್ಕಳು ಕೊಬ್ಬಿದ ಕಣ್ಣುಳ್ಳವರಾಗಿದ್ದರು. ಅವರಿಗೆ ತಿನ್ನಲು ಬೇಕಾದಷ್ಟಿತ್ತು. ಅವರು ಶಾಂತಿಕರವಾದ ಸುಭದ್ರತೆಯಲ್ಲಿ ಜೀವಿಸಿದರು. ಅವರು ಬಡವರಿಗೆ ಸಹಾಯ ಮಾಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

49 “ ‘ಸೊದೋಮ್ ಎಂಬ ನಿನ್ನ ತಂಗಿಯ ಪಾಪವನ್ನು ನೋಡು; ಗರ್ವವ, ಅತಿ ಭೋಜನ, ಸ್ವಾರ್ಥತೆ; ಇವು ಆಕೆಯಲ್ಲಿಯೂ ಆಕೆಯ ಪುತ್ರಿಯರಲ್ಲಿಯೂ ಇದ್ದವು. ಆಕೆಯು ದೀನ ದರಿದ್ರರಿಗೆ ಸಹಾಯ ಮಾಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 16:49
43 ತಿಳಿವುಗಳ ಹೋಲಿಕೆ  

“ನರಪುತ್ರನೇ, ನೀನು ತೂರಿನ ಅರಸನಿಗೆ ಹೀಗೆ ನುಡಿ, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ನೀನು ಉಬ್ಬಿದ ಮನಸ್ಸುಳ್ಳವನಾಗಿ ಆಹಾ, ನಾನೇ ದೇವರು, ಸಮುದ್ರ ಮಧ್ಯದಲ್ಲಿ ದೇವರ ಸ್ಥಾನದಲ್ಲಿ ಕುಳಿತುಕೊಂಡಿರುವೆನು’ ಎಂದು ಹೇಳಿಕೊಂಡಿದ್ದೀ; ನೀನು ದೇವರಲ್ಲ, ಮನುಷ್ಯನೇ. ಆದರೂ ನಿನ್ನನ್ನು ನೀನೇ ದೇವರಿಗೆ ಸಮಾನನೆಂದು ಭಾವಿಸಿಕೊಂಡಿರುವಿ.


ಯೆಹೋವನು ಮಹೋನ್ನತನು; ಆದರೂ ದೀನರನ್ನು ಲಕ್ಷಿಸುತ್ತಾನೆ; ಗರ್ವಿಷ್ಠರನ್ನು ದೂರದಿಂದಲೇ ಗುರುತು ಹಿಡಿಯುತ್ತಾನೆ.


ಲೋಟನು ಕಣ್ಣೆತ್ತಿ ನೋಡಲಾಗಿ, ಯೊರ್ದನ್ ಹೊಳೆಯ ಸುತ್ತಲಿನ ಪ್ರದೇಶವು ಚೋಗರಿನವರೆಗೆ ನೀರಾವರಿಯ ಪ್ರದೇಶವೆಂದು ತಿಳಿದುಕೊಂಡನು. ಯೆಹೋವನು ಸೊದೋಮ್ ಗೊಮೋರ ಪಟ್ಟಣಗಳನ್ನು ನಾಶಮಾಡುವುದಕ್ಕಿಂತ ಮೊದಲು ಆ ಸೀಮೆಯು ಯೆಹೋವನ ವನದಂತೆಯೂ, ಐಗುಪ್ತ ದೇಶದಂತೆಯೂ ನೀರಾವರಿಯ ಪ್ರದೇಶವಾಗಿತ್ತು.


ಮತ್ತು ಲೋಟನ ದಿನಗಳಲ್ಲಿ ನಡೆದ ಪ್ರಕಾರ ನಡೆಯುವುದು. ಅವರು ಊಟಮಾಡುತ್ತಿದ್ದರು, ಕುಡಿಯುತ್ತಿದ್ದರು, ಕೊಂಡುಕೊಳ್ಳುತ್ತಿದ್ದರು, ಮಾರಾಟಮಾಡುತ್ತಿದ್ದರು, ನೆಡುತ್ತಿದ್ದರು ಮತ್ತು ಕಟ್ಟುತ್ತಿದ್ದರು.


ಪರಲೋಕದ ಒಡೆಯನಿಗೆ ವಿರುದ್ಧವಾಗಿ ನಿನ್ನನ್ನು ಹೆಚ್ಚಿಸಿಕೊಂಡಿರುವಿ; ಆತನ ಆಲಯದ ಪಾತ್ರೆಗಳನ್ನು ನಿನ್ನ ಮುಂದೆ ತಂದರಲ್ಲಾ; ನೀನು ನಿನ್ನ ರಾಜ್ಯದ ಮುಖಂಡರ, ಪತ್ನಿ ಹಾಗೂ ಉಪಪತ್ನಿಯರ ಸಂಗಡ ಅವುಗಳಲ್ಲಿ ದ್ರಾಕ್ಷಾರಸವನ್ನು ಕುಡಿದು ಬುದ್ಧಿ, ಕಣ್ಣು, ಕಿವಿ ಇಲ್ಲದ ಬೆಳ್ಳಿ, ಬಂಗಾರ, ತಾಮ್ರ, ಕಬ್ಬಿಣ, ಮರ, ಕಲ್ಲುಗಳ ದೇವರುಗಳನ್ನು ಸ್ತುತಿಸಿದ್ದೀ. ಆದರೆ ನಿನ್ನ ಪ್ರಾಣವು ಯಾರ ಕೈಯಲ್ಲಿದೆಯೋ, ನಿನ್ನ ಸ್ಥಿತಿಗತಿಗಳು ಯಾರ ಅಧೀನವೋ ಆ ದೇವರನ್ನು ಘನಪಡಿಸಲೇ ಇಲ್ಲ.


ಯಾರನ್ನೂ ಹಿಂಸಿಸದೆ, ಒತ್ತೆಯನ್ನು ಕೇಳದೆ, ಯಾರ ಸೊತ್ತನ್ನೂ ಅಪಹರಿಸದೆ, ಹಸಿದವನಿಗೆ ಅನ್ನಕೊಟ್ಟು, ಬೆತ್ತಲೆಯಿರುವವನಿಗೆ ಹೊದಿಕೆಯನ್ನು ಹೊದಿಸಿ,


ದೀನದರಿದ್ರರನ್ನು ಹಿಂಸಿಸಿ, ಜನರ ಸೊತ್ತನ್ನು ಅಪಹರಿಸಿ, ಸಾಲಗಾರನ ಒತ್ತೆಯನ್ನು ಬಿಗಿಹಿಡಿದು, ವಿಗ್ರಹಗಳ ಕಡೆಗೆ ಕಣ್ಣೆತ್ತಿ,


ಅವರ ಮುಖಭಾವವೇ ಅವರಿಗೆ ವಿರುದ್ಧ ಸಾಕ್ಷಿಯಾಗಿದೆ. ತಮ್ಮ ಪಾಪವನ್ನು ಮರೆಮಾಡದೇ ಸೊದೋಮಿನವರಂತೆ ಪ್ರಕಟಿಸುತ್ತಾರೆ. ಅಯ್ಯೋ, ಅವರ ಆತ್ಮದ ಗತಿಯೇ! ತಮಗೆ ತಾವೇ ಕೇಡು ಮಾಡಿಕೊಂಡಿದ್ದಾರೆ.


ಭಂಗಕ್ಕೆ ಮೊದಲು ಗರ್ವದ ಹೃದಯ, ಮಾನಕ್ಕೆ ಮುಂಚೆ ದೀನತೆ.


ಯೌವನಸ್ಥರೇ, ಅದೇ ರೀತಿಯಾಗಿ ಹಿರಿಯರಿಗೆ ಅಧೀನರಾಗಿರಿ. ನೀವೆಲ್ಲರೂ ದೀನಮನಸ್ಸೆಂಬ ವಸ್ತ್ರವನ್ನು ಧರಿಸಿಕೊಂಡು ಒಬ್ಬರಿಗೊಬ್ಬರು ಸೇವೆ ಮಾಡಿರಿ. ಏಕೆಂದರೆ “ದೇವರು ಅಹಂಕಾರಿಗಳನ್ನು ವಿರೋಧಿಸುತ್ತಾನೆ. ದೀನರಿಗಾದರೋ ಕೃಪೆಯನ್ನು ಅನುಗ್ರಹಿಸುತ್ತಾನೆ.”


ಉನ್ನತ ಸ್ಥಾನದಲ್ಲಿ ಬಂಡೆಯ ಬಿರುಕುಗಳೊಳಗೆ ವಾಸಿಸುತ್ತಾ, ನನ್ನನ್ನು ನೆಲಕ್ಕೆ ಇಳಿಸಬಲ್ಲವರು ಯಾರು? ಎಂದುಕೊಳ್ಳುವ ಜನರೇ, ನಿಮ್ಮ ಹೃದಯದ ಒಣ ಹೆಮ್ಮೆಯು ನಿಮ್ಮನ್ನು ಮೋಸಗೊಳಿಸಿದೆ.


“ನನ್ನ ಮಹಿಮೆಯು ಪ್ರಸಿದ್ಧಿಗೆ ಬರುವಂತೆ ನನ್ನ ಸಾಮರ್ಥ್ಯ ಬಲದಿಂದ ರಾಜನಿವಾಸಕ್ಕಾಗಿ ನಾನು ಕಟ್ಟಿಸಿಕೊಂಡಿರುವುದು ಇಗೋ, ಮಹಾ ಪಟ್ಟಣವಾದ ಈ ಬಾಬೆಲ್” ಎಂದು ಕೊಚ್ಚಿಕೊಂಡನು.


“‘ನಿನ್ನ ಸೌಂದರ್ಯದ ನಿಮಿತ್ತ ನಿನ್ನ ಹೃದಯವು ಉಬ್ಬಿಕೊಂಡಿತು; ನಿನ್ನ ಪ್ರಕಾಶದ ನಿಮಿತ್ತ ನಿನ್ನ ಬುದ್ಧಿಯನ್ನು ಹಾಳು ಮಾಡಿಕೊಂಡೆ; ನಾನು ನಿನ್ನನ್ನು ನೆಲಕ್ಕೆ ಹಾಕಿ, ನಿನ್ನನ್ನು ಅರಸರು ನೋಡುವಂತೆ ಅವರ ಕಣ್ಣ ಮುಂದೆ ಹಾಕುವೆನು.


ನೀನು ನಿನ್ನನ್ನು ಸಂಹರಿಸುವವರ ಎದುರಿಗೆ ನಾನು ದೇವರು ಎಂದು ಹೇಳುವೆಯೋ? ನಿನ್ನನ್ನು ಸಂಹರಿಸುವವನ ಕೈಯಲ್ಲಿ ನೀನು ದೇವರಲ್ಲ, ನರಪ್ರಾಣಿಯೇ.


ಮೋವಾಬ್ಯರ ಅಹಂಕಾರವನ್ನು, ಗರ್ವವನ್ನು, ಕೊಚ್ಚಿಕೊಳ್ಳುವಿಕೆಯನ್ನು, ಕೋಪವನ್ನು ನಾವು ಕೇಳಿದ್ದೇವೆ. ಅವರು ಕೊಚ್ಚಿಕೊಳ್ಳುವುದೆಲ್ಲಾ ಬರೀ ವ್ಯರ್ಥವೇ.


ಬಡವನ ಕೂಗಿಗೆ ಕಿವಿಮುಚ್ಚಿಕೊಳ್ಳುವವನು, ತಾನೇ ಮೊರೆಯಿಡುವಾಗ ಯಾರೂ ಉತ್ತರಕೊಡರು.


ಗರ್ವದ ದೃಷ್ಟಿ, ಕೊಬ್ಬಿದ ಹೃದಯ, ದುಷ್ಟರ ಭಾಗ್ಯ, ಇವು ಧರ್ಮವಿರುದ್ಧ.


ಗರ್ವದಿಂದ ಭಂಗ, ಉಬ್ಬಿನಿಂದ ದೊಬ್ಬು.


ಅಹಂಕಾರಿಗಳೆಲ್ಲಾ ಯೆಹೋವನಿಗೆ ಅಸಹ್ಯ, ಅವರಿಗೆ ದಂಡನೆ ಖಂಡಿತ.


ಆದರೆ ಯೆಶುರೂನು ಚೆನ್ನಾಗಿ ತಿಂದು, ಕೊಬ್ಬಿ, ತನ್ನನ್ನು ಸೃಷ್ಟಿಸಿದ ದೇವರನ್ನು ಬಿಟ್ಟು ತನ್ನ ಆಶ್ರಯದುರ್ಗವನ್ನು ತಿರಸ್ಕರಿಸಿದನು.


ಅವರು ದಾರಿ ಬಿಡು ಎಂದು ಹೇಳಿ, “ಇವನು ಯಾರೋ ಒಬ್ಬ ಪರದೇಶಿಯಾಗಿ ಬಂದು ಈಗ ನ್ಯಾಯಾಧಿಪತಿಯಾಗಬೇಕೆಂದಿದ್ದಾನೆ; ಆ ಮನುಷ್ಯರಿಗೆ ಕೇಡು ಮಾಡುವುದಕ್ಕಿಂತ ಹೆಚ್ಚಾಗಿ ನಿನಗೇ ಕೇಡು ಮಾಡುತ್ತೇವೆ” ಎಂದು ಹೇಳಿ ಲೋಟನ ಮೇಲೆ ಬಿದ್ದು ಬಹಳವಾಗಿ ತುಳಿದು ಬಾಗಿಲನ್ನು ಮುರಿಯಲು ಸಮೀಪಕ್ಕೆ ಬಂದರು.


“ನಿಮ್ಮ ವಿಷಯದಲ್ಲಿ ಜಾಗರೂಕರಾಗಿರಿ. ಅತಿ ಭೋಜನದ ಮದದಿಂದಲೂ, ಅಮಲಿನಿಂದಲೂ, ಪ್ರಾಪಂಚಿಕವಾದ ಚಿಂತೆಗಳಿಂದಲೂ ನಿಮ್ಮ ಹೃದಯಗಳು ಭಾರವಾಗಿರಲಾಗಿ ಆ ದಿನವು ನಿಮ್ಮ ಮೇಲೆ ಉರುಲಿನಂತೆ ಫಕ್ಕನೆ ಬಂದೀತು.


ಈಗ ನೆಬೂಕದ್ನೆಚ್ಚರನಾದ ನಾನು ಪರಲೋಕ ರಾಜನನ್ನು ಹೊಗಳಿ, ಕೊಂಡಾಡಿ ಕೀರ್ತಿಸುತ್ತೇನೆ. ಆತನ ಕಾರ್ಯಗಳೆಲ್ಲಾ ಸತ್ಯ, ಆತನ ಮಾರ್ಗಗಳೆಲ್ಲಾ ನ್ಯಾಯ; ಸೊಕ್ಕಿನಿಂದ ನಡೆಯುವವರನ್ನು ತಗ್ಗಿಸಬಲ್ಲನು.


“ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ಐಗುಪ್ತದ ಅರಸನಾದ ಫರೋಹನೇ, ನಿನ್ನ ನದಿಗಳ ಮಧ್ಯದಲ್ಲಿ ಮಲಗಿಕೊಂಡು, ‘ಈ ನದಿ ನನ್ನದೇ, ನನಗಾಗಿಯೇ ಅದನ್ನು ಮಾಡಿಕೊಂಡಿದ್ದೇನೆ’ ಎಂದು ಹೇಳಿಕೊಳ್ಳುವ ದೊಡ್ಡ ಮೊಸಳೆಯೇ, ಇಗೋ, ನಾನು ನಿನ್ನ ವಿರುದ್ಧವಾಗಿದ್ದೇನೆ.


ಮುಟ್ಟಿನ ಹೆಂಗಸನ್ನು ಸೇರದೆ, ಯಾರನ್ನೂ ಹಿಂಸಿಸದೆ, ಸಾಲಮಾಡಿದವನ ಒತ್ತೆಯನ್ನು ಬಿಗಿಹಿಡಿಯದೆ, ಯಾರ ಸೊತ್ತನ್ನೂ ಅಪಹರಿಸದೆ, ಹಸಿದವನಿಗೆ ಅನ್ನಕೊಟ್ಟು, ಬೆತ್ತಲೆಯಿರುವವನಿಗೆ ಹೊದಿಕೆಯನ್ನು ಹೊದಿಸಿ,


ಇದಲ್ಲದೆ ಯೆಹೋವನು, “ಸೊದೋಮ್ ಗೊಮೋರಗಳ ದೊಡ್ಡ ಮೊರೆ ನನಗೆ ಮುಟ್ಟಿತು; ಆ ಊರಿನವರ ಮೇಲೆ ಹೊರಿಸಿರುವ ಪಾಪವು ಎಷ್ಟೋ ಘೋರವಾದದ್ದು,


ಭೂಲೋಕದಲ್ಲಿ ನೀವು ಸುಖಭೋಗಿಗಳಾಗಿ ನಿಮ್ಮ ಇಚ್ಛೆಪೂರೈಸಿಕೊಳ್ಳುವವರಾಗಿ ಜೀವಿಸಿದ್ದೀರಿ; ವಧೆಯ ದಿನಕ್ಕಾಗಿಯೋ ಎಂಬಂತೆ ನಿಮ್ಮ ಹೃದಯಗಳನ್ನು ಕೊಬ್ಬಿಸಿಕೊಂಡಿದ್ದೀರಿ.


ಈ ಸಾಕ್ಷಿಗಳ ಶವಗಳು ಮಹಾ ಪಟ್ಟಣದ ಬೀದಿಯಲ್ಲಿ ಬಿದ್ದಿರುವವು. ಆ ಪಟ್ಟಣಕ್ಕೆ ಸಾಂಕೇತಿಕವಾಗಿ ಸೊದೋಮ್ ಎಂದು, ಐಗುಪ್ತ ಎಂದೂ ಹೆಸರುಗಳುಂಟು. ಇವರ ಒಡೆಯನು ಸಹ ಅಲ್ಲಿಯೇ ಶಿಲುಬೆಗೆ ಹಾಕಲ್ಪಟ್ಟಿದ್ದನು.


ಆದರೆ ಸೊದೋಮ್ ಪಟ್ಟಣದ ಜನರು ಯೆಹೋವನ ದೃಷ್ಟಿಯಲ್ಲಿ ಬಹು ದುಷ್ಟರೂ ಪಾಪಿಷ್ಠರು ಆಗಿದ್ದರು.


ಆಗ ಯೆಹೋವನು ಸೊದೋಮ್ ಗೊಮೋರಗಳ ಮೇಲೆ ಆಕಾಶದಿಂದ ಅಗ್ನಿಗಂಧಕಗಳನ್ನು ಸುರಿಸಿ


ಸೊದೋಮಿನ ಅಧಿಪತಿಗಳೇ, ಯೆಹೋವನ ಮಾತನ್ನು ಆಲಿಸಿರಿ. ಗೊಮೋರದ ಪ್ರಜೆಗಳೇ ನಮ್ಮ ದೇವರ ಧರ್ಮೋಪದೇಶವನ್ನು ಕೇಳಿರಿ.


ಮೋವಾಬು ಚಿಕ್ಕಂದಿಂದಲೂ ನೆಮ್ಮದಿಯಾಗಿದೆ; ಅದು ಮಡ್ಡಿಯ ಮೇಲೆ ನಿಂತಿರುವ ದ್ರಾಕ್ಷಾರಸದಂತಿದೆ; ಅದನ್ನು ಪಾತ್ರೆಯಿಂದ ಪಾತ್ರೆಗೆ ಯಾರೂ ಹೊಯ್ಯಲಿಲ್ಲ, ಅದು ಸೆರೆಹೋಗಲಿಲ್ಲ; ಆದಕಾರಣ ಅದರ ರುಚಿಯು ಅದರಲ್ಲಿದೆ, ಅದರ ವಾಸನೆಯು ಬೇರ್ಪಡಲಿಲ್ಲ.”


ನಿನ್ನ ಉತ್ತರಕ್ಕೆ ತನ್ನ ಕುಮಾರ್ತೆಯರೊಂದಿಗೆ ವಾಸಿಸುವ ಸಮಾರ್ಯ ನಿನ್ನ ಅಕ್ಕ, ನಿನ್ನ ದಕ್ಷಿಣಕ್ಕೆ ನಿನ್ನ ಕುಮಾರ್ತೆಯರೊಂದಿಗೆ ವಾಸಿಸುವ ಸೊದೋಮ್ ನಿನ್ನ ತಂಗಿ.


“ಅಲ್ಲಿ ವಿನೋದ ಪ್ರಿಯರ ದೊಡ್ಡ ಗುಂಪಿನ ಶಬ್ದವು ಇತ್ತು. ಮರುಭೂಮಿಯಿಂದ ಕುಡುಕರನ್ನೂ ಕರೆಯಿಸಿಕೊಂಡು ಅವರು ನಾಡಿನ ಜನರೊಂದಿಗೆ ಸೇರಿ, ನಿನ್ನ ಕೈಗೆ ಕಡಗವನ್ನು ತೊಡಿಸಿ, ತಲೆಗೆ ಸುಂದರ ಕಿರೀಟವನ್ನಿಟ್ಟರು.


“ನಾನೇ ಇರುವವಳು, ನನ್ನ ಹೊರತು ಇನ್ನು ಯಾರೂ ಇಲ್ಲ, ನಾನು ವಿಧವೆಯಾಗಿ ಕುಳಿತುಕೊಳ್ಳುವುದಿಲ್ಲ, ಪುತ್ರಶೋಕವನ್ನು ಅನುಭವಿಸುವುದಿಲ್ಲ” ಎಂದು ಅಂದುಕೊಳ್ಳುವವಳೇ, ಭೋಗಾಸಕ್ತಳೇ, ನೆಮ್ಮದಿಯಾಗಿ ನೆಲೆಗೊಂಡಿರುವವಳೇ, ಈಗ ಇದನ್ನು ಕೇಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು