Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 16:55 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

55 ಆಗ ಸಮಾರ್ಯ ಮತ್ತು ಸೊದೋಮ್ ಎಂಬ ನಿನ್ನ ಅಕ್ಕತಂಗಿಯರೂ ಮತ್ತು ಅವರ ಕುಮಾರ್ತೆಯರೂ ತಮ್ಮ ಪೂರ್ವಸ್ಥಿತಿಗೆ ಸೇರುವರು, ನೀನೂ ನಿನ್ನ ಕುಮಾರ್ತೆಯರೂ ನಿಮ್ಮ ಪೂರ್ವಸ್ಥಿತಿಗೆ ಸೇರುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

55 ಆಗ ಸಮಾರಿಯ ಮತ್ತು ಸೊದೋಮ್ ಎಂಬ ನಿನ್ನ ಅಕ್ಕತಂಗಿಯರನ್ನೂ ಅವರ ಕುವರಿಯರನ್ನೂ ನಿನ್ನನ್ನೂ ನಿಮ್ಮ ಪೂರ್ವಸ್ಥಿತಿಗೆ ತರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

55 ಆಗ ಸಮಾರ್ಯ, ಸೊದೋಮ್ ಎಂಬ ನಿನ್ನ ಅಕ್ಕತಂಗಿಯರೂ ಅವರ ಕುಮಾರ್ತೆಯರೂ ತಮ್ಮ ಪೂರ್ವಸ್ಥಿತಿಗೆ ಸೇರುವರು, ನೀನೂ ನಿನ್ನ ಕುಮಾರ್ತೆಯರೂ ನಿಮ್ಮ ಪೂರ್ವಸ್ಥಿತಿಗೆ ಸೇರುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

55 ಆಗ ನೀನೂ ನಿನ್ನ ಸಹೋದರಿಯರೂ ತಿರುಗಿ ಕಟ್ಟಲ್ಪಡುವಿರಿ. ಸೊದೋಮಳೂ ಆಕೆಯ ಸುತ್ತಲಿರುವ ಪಟ್ಟಣಗಳೂ, ಸಮಾರ್ಯಳು ಮತ್ತು ಆಕೆಯ ಸುತ್ತಲಿರುವ ಪಟ್ಟಣಗಳೆಲ್ಲಾ ತಿರುಗಿ ಕಟ್ಟಲ್ಪಡುವವು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

55 ಆಗ ಸಮಾರ್ಯ, ಸೊದೋಮ್ ಎಂಬ ನಿನ್ನ ಅಕ್ಕತಂಗಿಯರೂ, ಅವರ ಪುತ್ರಿಯರೂ ತಮ್ಮ ಪೂರ್ವಸ್ಥಿತಿಗೆ ತಿರುಗುವರು. ನೀನೂ, ನಿನ್ನ ಪುತ್ರಿಯರೂ ಪೂರ್ವಸ್ಥಿತಿಗೆ ತಿರುಗಿಕೊಳ್ಳುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 16:55
5 ತಿಳಿವುಗಳ ಹೋಲಿಕೆ  

ಆಗ ಯೆಹೂದದ ಮತ್ತು ಯೆರೂಸಲೇಮಿನ ನೈವೇದ್ಯವು, ಪೂರ್ವದಿನಗಳಲ್ಲಿ ಪುರಾತನ ಕಾಲದಲ್ಲಿ ಯೆಹೋವನಿಗೆ ಮೆಚ್ಚಿಕೆಯಾದಂತೆ ಆಗಿರುವುದು.


ನಿಮ್ಮಲ್ಲಿ ಬಹು ಜನರನ್ನೂ, ಪಶುಗಳನ್ನೂ ವೃದ್ಧಿಗೊಳಿಸುವೆನು; ಅವು ಹೆಚ್ಚಿ ಅಭಿವೃದ್ಧಿಯಾಗುವವು; ಮೊದಲಿನಂತೆ ನಿಮ್ಮಲ್ಲಿ ನಿವಾಸಿಗಳನ್ನು ತುಂಬಿಸಿ, ಮೊದಲಿಗಿಂತ ನಿಮ್ಮನ್ನು ಉತ್ತಮ ಸ್ಥಿತಿಗೆ ತರುವೆನು; ನಾನೇ ಯೆಹೋವನು ಎಂದು ನಿಮಗೆ ದೃಢವಾಗುವುದು.


“ಸೊದೋಮ್ ಮತ್ತು ಆಕೆಯ ಕುಮಾರ್ತೆಯರು, ಸಮಾರ್ಯ ಮತ್ತು ಆಕೆಯ ಕುಮಾರ್ತೆಯರು, ಇವರ ದುರಾವಸ್ಥೆಯನ್ನು ನಾನು ತಪ್ಪಿಸುವೆನು, ಅದರೊಂದಿಗೆ ನಿನ್ನ ದುರಾವಸ್ಥೆಯನ್ನೂ ತಪ್ಪಿಸುವೆನು.


ಹೀಗಿರಲು ನೀನು ನಿನ್ನ ಲೆಕ್ಕವಿಲ್ಲದ ದುಷ್ಕೃತ್ಯಗಳ ಮೂಲಕ ಅವರನ್ನು ಸಂತೈಸಿದ್ದರಿಂದ ಲಜ್ಜೆಪಡುವಿ, ನಾಚಿಕೆಗೊಳ್ಳುವಿ.


ಅರಾಮಿನ ಕುಮಾರ್ತೆಯರು ಮತ್ತು ಆಕೆಯ ಸುತ್ತಮುತ್ತಲಿನ ಸಮಸ್ತರು, ನಿನ್ನನ್ನು ಎಲ್ಲೆಲ್ಲೂ ಹೀನೈಸುತ್ತಿರುವ ಫಿಲಿಷ್ಟಿಯದ ಕುಮಾರ್ತೆಯರು, ಇವರೆಲ್ಲರ ದೂಷಣೆಗೆ ನೀನು ಗುರಿಯಾಗುವುದಕ್ಕೆ ಮೊದಲು,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು