Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 16:60 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

60 ಆದರೂ ನಾನು ನಿನ್ನ ಯೌವನಕಾಲದಲ್ಲಿ ನಿನ್ನೊಂದಿಗೆ ಮಾಡಿಕೊಂಡ ಒಡಂಬಡಿಕೆಯನ್ನು ಜ್ಞಾಪಕಕ್ಕೆ ತಂದುಕೊಂಡು, ನಿನ್ನ ಸಂಗಡ ಎಂದಿಗೂ ತಪ್ಪದ ಶಾಶ್ವತವಾದ ಒಡಂಬಡಿಕೆಯನ್ನು ಮಾಡಿಕೊಂಡು ದೃಢೀಕರಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

60 ಆದರೂ ನಾನು ನಿನ್ನ ಯೌವನಕಾಲದಲ್ಲಿ ನಿನ್ನೊಂದಿಗೆ ಮಾಡಿಕೊಂಡ ಒಡಂಬಡಿಕೆಯನ್ನು ನೆನಪಿಗೆ ತಂದುಕೊಂಡು ನಿನ್ನೊಂದಿಗೆ ಶಾಶ್ವತವಾದ ಒಡಂಬಡಿಕೆಯನ್ನು ಮಾಡಿಕೊಂಡು ದೃಢೀಕರಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

60 ಹೀಗಾದರೂ ನಾನು ನಿನ್ನ ಯೌವನಕಾಲದಲ್ಲಿ ನಿನ್ನೊಂದಿಗೆ ಮಾಡಿಕೊಂಡ ಒಡಂಬಡಿಕೆಯನ್ನು ಜ್ಞಾಪಕಕ್ಕೆ ತಂದುಕೊಂಡು ನಿನ್ನ ಸಂಗಡ ಎಂದಿಗೂ ತಪ್ಪದ ಒಡಂಬಡಿಕೆಯನ್ನು ಮಾಡಿಕೊಂಡು ದೃಢೀಕರಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

60 ಆದರೆ ನೀನು ಎಳೆಯವಳಾಗಿದ್ದಾಗ ನಿನ್ನೊಡನೆ ನಾನು ಮಾಡಿಕೊಂಡ ಒಡಂಬಡಿಕೆಯನ್ನು ಜ್ಞಾಪಕ ಮಾಡಿಕೊಳ್ಳುತ್ತೇನೆ. ನಾನು ಅದನ್ನು ಶಾಶ್ವತವಾದ ಒಡಂಬಡಿಕೆಯನ್ನಾಗಿ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

60 ಆದರೂ ನಿನ್ನ ಯೌವನದ ದಿನಗಳಲ್ಲಿ ನಾನು ನಿನ್ನ ಸಂಗಡ ಮಾಡಿದ ನನ್ನ ಒಡಂಬಡಿಕೆಯನ್ನು ಜ್ಞಾಪಕಮಾಡಿಕೊಂಡು, ನಿನಗಾಗಿ ನಿತ್ಯವಾದ ಒಡಂಬಡಿಕೆಯೊಂದನ್ನು ಸ್ಥಾಪಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 16:60
24 ತಿಳಿವುಗಳ ಹೋಲಿಕೆ  

ಹೊಸ ಒಡಂಬಡಿಕೆಗೆ ಮಧ್ಯಸ್ಥನಾಗಿರುವ ಯೇಸುವಿನ ಬಳಿಗೂ, ಹೇಬೆಲನ ರಕ್ತಕ್ಕಿಂತ ಉತ್ತಮವಾಗಿ ಮಾತನಾಡುವ ಪ್ರೋಕ್ಷಣ ರಕ್ತದ ಬಳಿಗೂ ಬಂದಿದ್ದೀರಿ.


‘ಆ ದಿನಗಳ ತರುವಾಯ ನಾನು ಇಸ್ರಾಯೇಲ್ ವಂಶದವರೊಂದಿಗೆ ಮಾಡಿಕೊಳ್ಳುವ ಒಡಂಬಡಿಕೆಯು’ ಹೀಗಿರುವುದು, ‘ನಾನು ನನ್ನ ಆಜ್ಞೆಗಳನ್ನು ಅವರ ಮನಸ್ಸಿನಲ್ಲಿ ಇಡುವೆನು. ನಾನು ಅವರ ಹೃದಯಗಳ ಮೇಲೆ ಅವುಗಳನ್ನು ಬರೆಯುವೆನು. ನಾನು ಅವರಿಗೆ ದೇವರಾಗಿರುವೆನು. ಅವರು ನನ್ನ ಜನರಾಗಿರುವರು.


ನಾನು ಹಾದುಹೋಗುತ್ತಾ ನಿನ್ನನ್ನು ನೋಡಲು ಇಗೋ, ನೀನು ಮದುವೆಗೆ ಸಿದ್ಧಳಾಗಿದ್ದಿ; ಆಗ ನಾನು ನನ್ನ ಹೊದಿಕೆಯನ್ನು ನಿನಗೆ ಹೊದಿಸಿ ನಿನ್ನ ಮಾನವನ್ನು ಕಾಪಾಡಿದೆನು; ಇದಲ್ಲದೆ ನಾನು ನಿನಗೆ ಪ್ರಮಾಣಮಾಡಿ ಒಡಂಬಡಿಕೆ ಮಾಡಿಕೊಂಡೆ ಆದುದರಿಂದ ನೀನು ನನ್ನವಳಾದೆ’” ಇದು ಕರ್ತನಾದ ಯೆಹೋವನ ನುಡಿ.


ಚೀಯೋನಿಗೆ ಅಭಿಮುಖರಾಗಿ ಮಾರ್ಗವನ್ನು ವಿಚಾರಿಸಿ, ಬನ್ನಿರಿ, ಯೆಹೋವನನ್ನು ಆಶ್ರಯಿಸಿ, ಎಂದಿಗೂ ಮರೆಯದ ಶಾಶ್ವತವಾದ ಒಡಂಬಡಿಕೆಯನ್ನು ಆತನೊಂದಿಗೆ ಮಾಡಿಕೊಳ್ಳೋಣ’ ಎಂದು ಹೇಳುವರು.


ಕಿವಿಯನ್ನು ನನ್ನ ಕಡೆಗೆ ತಿರುಗಿಸಿರಿ, ನನ್ನ ಬಳಿಗೆ ಬನ್ನಿರಿ; ಆಲಿಸಿದರೆ ಬದುಕಿ ಬಾಳುವಿರಿ. ನಾನು ದಾವೀದನಿಗೆ ಖಂಡಿತವಾಗಿ ವಾಗ್ದಾನಮಾಡಿದ ಕೃಪಾವರಗಳನ್ನು ನಿಮಗೆ ಕೊಡುತ್ತೇನೆ” ಎಂಬ ಶಾಶ್ವತವಾದ ಒಡಂಬಡಿಕೆಯನ್ನು ನಿಮ್ಮೊಂದಿಗೆ ಮಾಡಿಕೊಳ್ಳುವೆನು.


ತನ್ನ ಒಡಂಬಡಿಕೆಯನ್ನು ನೆನಪುಮಾಡಿಕೊಂಡು, ತನ್ನ ಕೃಪಾತಿಶಯದಿಂದ ಅವರನ್ನು ಕನಿಕರಿಸಿದನು.


ನಾನು ಯಾಕೋಬ್ ಇಸಾಕ್ ಅಬ್ರಹಾಮ್ ಇವರಿಗೆ ಮಾಡಿದ ಒಡಂಬಡಿಕೆಯನ್ನು ನೆನಪಿಗೆ ತಂದುಕೊಂಡು ನೆರವೇರಿಸುವೆನು; ಅವರ ಸ್ವದೇಶವನ್ನೂ ನಾನು ದಯೆಯಿಂದ ಜ್ಞಾಪಿಸಿಕೊಳ್ಳುವೆನು.


ನಿತ್ಯವಾದ ಒಡಂಬಡಿಕೆಯನ್ನು, ರಕ್ತದಿಂದ ನಿಶ್ಚಯಪಡಿಸುವುದಕ್ಕಾಗಿ, ಸಭೆಯೆಂಬ ಹಿಂಡಿಗೆ ಮಹಾಪಾಲಕನಾಗಿರುವ ನಮ್ಮ ಕರ್ತನಾದ ಯೇಸುವನ್ನು ಸತ್ತವರೊಳಗಿಂದ ಬರಮಾಡಿದ, ಶಾಂತಿದಾಯಕನಾದ ದೇವರು, ನೀವು ಆತನ ಚಿತ್ತವನ್ನು ನೆರವೇರಿಸುವ ಹಾಗೆ ಸಕಲ ಸತ್ಕಾರ್ಯಗಳಿಗೆ ಬೇಕಾದ ಅನುಕೂಲತೆಗಳನ್ನು ನಿಮಗೆ ದಯಪಾಲಿಸಿ, ಆತನು ಯೇಸು ಕ್ರಿಸ್ತನ ಮೂಲಕ ತನಗೆ ಮೆಚ್ಚಿಕೆಯಾದದ್ದನ್ನು ನಮ್ಮಲ್ಲಿ ನೆರವೇರಿಸಲಿ. ಯುಗಯುಗಾಂತರಗಳಲ್ಲಿಯೂ ಆತನಿಗೆ ಮಹಿಮೆ ಉಂಟಾಗಲಿ. ಆಮೆನ್.


ಆತನು ನಮ್ಮ ಪೂರ್ವಿಕರಿಗೆ ದಯೆಯನ್ನು ತೋರಿಸುವುದರ ಮೂಲಕ ನಮ್ಮ ಮೂಲಪಿತೃವಾದ ಅಬ್ರಹಾಮನಿಗೆ ಪ್ರಮಾಣಮಾಡಿ ಕೊಟ್ಟ ತನ್ನ ಪರಿಶುದ್ಧವಾದ ಒಡಂಬಡಿಕೆಯನ್ನು ನೆನಪಿಸಿಕೊಳ್ಳುವವನಾಗಿದ್ದಾನೆ.


ಅವಳ ದ್ರಾಕ್ಷಿಯ ತೋಟಗಳನ್ನು ಅಲ್ಲಿರುವಾಗಲೇ ಅವಳಿಗೆ ಹಿಂದಕ್ಕೆ ಕೊಡುವೆನು. ಆಕೋರಿನ ತಗ್ಗನ್ನೇ ಅವಳ ಸುಖ ನಿರೀಕ್ಷೆಗೆ ದ್ವಾರವನ್ನಾಗಿ ಮಾಡುವೆನು. ಯೌವನದಲ್ಲಿ, ಐಗುಪ್ತದೇಶದೊಳಗಿಂದ ಹೊರಟುಬಂದ ದಿನದಲ್ಲಿ ಇದ್ದಂತೆ ಅಲ್ಲಿ ಆಕೆಯು ಮುಳುಗುವಳು.”


“ನೀನು ಹೋಗಿ ಯೆರೂಸಲೇಮಿನ ಕಿವಿಗೆ ಮುಟ್ಟುವಂತೆ ಈ ಮಾತುಗಳನ್ನು ಸಾರು, ‘ಯೆಹೋವನು ಹೀಗೆನ್ನುತ್ತಾನೆ, ನೀನು ಯೌವನದಲ್ಲಿ ನನ್ನ ಮೇಲೆ ಇಟ್ಟಿದ್ದ ಪ್ರೀತಿಯನ್ನೂ, ವಿವಾಹಕಾಲದ ನಿನ್ನ ಪ್ರೇಮವನ್ನೂ, ನೀನು ಬಿತ್ತನೆ ಮಾಡದ ಅರಣ್ಯದಲ್ಲಿ ನನ್ನನ್ನು ಹಿಂಬಾಲಿಸಿದ ನಿನ್ನ ಪಾತಿವ್ರತ್ಯವನ್ನೂ ನಿನ್ನ ಹಿತಕ್ಕಾಗಿ ಜ್ಞಾಪಕದಲ್ಲಿಟ್ಟಿದ್ದೇನೆ.


ಆತನು ತನ್ನ ವಾಗ್ದಾನವನ್ನು ಸಾವಿರ ತಲೆಗಳವರೆಗೂ, ತನ್ನ ಒಡಂಬಡಿಕೆಯನ್ನು ನಿತ್ಯವೂ ನೆನಪಿನಲ್ಲಿಟ್ಟುಕೊಳ್ಳುತ್ತಾನೆ.


ನನ್ನ ಮನೆಯು ಯೆಹೋವನ ಸನ್ನಿಧಿಯಲ್ಲಿ ಹೀಗೆಯೇ ಸ್ಥಿರವಾಗಿರುತ್ತದಲ್ಲವೇ? ಆತನು ನನ್ನೊಡನೆ ಒಡಂಬಡಿಕೆ ಮಾಡಿಕೊಂಡಿದ್ದಾನಲ್ಲವೋ? ಅದು ಎಂದಿಗೂ ಬಿದ್ದುಹೋಗದೆ ಎಲ್ಲಾ ವಿಷಯಗಳಲ್ಲಿಯೂ ಖಚಿತವಾಗಿರುತ್ತದೆ. ನನ್ನ ರಕ್ಷಣೆಯ ಮೂಲವೂ, ನನ್ನ ಅಭಿಲಾಷೆಯನ್ನು ಪೂರ್ತಿಗೊಳಿಸುವವನೂ ಆತನೇ ಅಲ್ಲವೋ?


ಅವರ ಪೂರ್ವಿಕರ ಸಂಗಡ ಮಾಡಿಕೊಂಡ ಒಡಂಬಡಿಕೆಯನ್ನು ನೆನಪಿಗೆ ತಂದುಕೊಂಡು ಅವರಿಗೆ ಹಿತವನ್ನು ಮಾಡುವೆನು. ನಾನು ಅವರಿಗೆ ದೇವರಾಗಿರಬೇಕೆಂದು ಅವರ ಪೂರ್ವಿಕರನ್ನು ಎಲ್ಲಾ ಜನಾಂಗಗಳ ಎದುರಿನಲ್ಲಿಯೇ ಐಗುಪ್ತದೇಶದೊಳಗಿಂದ ಬರಮಾಡಿದೆನಲ್ಲವೇ. ನಾನು ಯೆಹೋವನು” ಎಂಬುದೇ.


ಆಗ ನಾನು ನಿಮ್ಮನ್ನೂ, ಎಲ್ಲಾ ಜೀವರಾಶಿಗಳನ್ನೂ ಕುರಿತು ಮಾಡಿದ ಒಡಂಬಡಿಕೆಯನ್ನು ಜ್ಞಾಪಕಮಾಡಿಕೊಳ್ಳುವೆನು. ಇನ್ನು ಮುಂದೆ ನೀರು ಹೆಚ್ಚಿ ಎಲ್ಲಾ ಭೂಜೀವಿಗಳನ್ನು ಹಾಳುಮಾಡುವ ಪ್ರಳಯವಾಗುವುದಿಲ್ಲ.


“‘ನಾನು ಅವರೊಂದಿಗೆ ಸಮಾಧಾನದ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು; ದುಷ್ಟಮೃಗಗಳು ದೇಶದಲ್ಲಿ ಇನ್ನಿರದಂತೆ ಮಾಡುವೆನು; ನನ್ನ ಜನರು ಕಾಡಿನಲ್ಲಿ ನಿರ್ಭಯವಾಗಿ ವಾಸಿಸುವರು, ಅರಣ್ಯದಲ್ಲಿ ಹಾಯಾಗಿ ನಿದ್ರಿಸುವರು.


ಯೆಹೋವನು ಯಾಕೋಬ್ಯನನ್ನು ಕನಿಕರಿಸಿ, ಪುನಃ ಇಸ್ರಾಯೇಲರನ್ನು ಆರಿಸಿಕೊಂಡು, ಅವರನ್ನು ಅವರ ಸ್ವದೇಶಕ್ಕೆ ಸೇರಿಸುವನು; ಪರದೇಶಿಗಳು ಅವರೊಂದಿಗೆ ಕೂಡಿ ಬಂದು, ಯಾಕೋಬನ ಮನೆತನಕ್ಕೆ ಸೇರಿಕೊಳ್ಳುವರು.


ಯೆಹೋವನೆಂಬ ನಾನು ನ್ಯಾಯವನ್ನು ಪ್ರೀತಿಸುತ್ತೇನೆ. ಕೊಳ್ಳೆಯನ್ನೂ, ಅನ್ಯಾಯವನ್ನೂ ದ್ವೇಷಿಸುತ್ತೇನೆ. ನಾನು ಇವರ ನಷ್ಟಕ್ಕೆ ಬದಲಾಗಿ ಪ್ರತಿಫಲವನ್ನು ಪ್ರಾಮಾಣಿಕವಾಗಿ ಕೊಟ್ಟು, ಇವರೊಂದಿಗೆ ನಿತ್ಯವಾದ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು