Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 16:62 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

62 ನಾನು ಈ ಒಡಂಬಡಿಕೆಯನ್ನು ನಿನ್ನೊಂದಿಗೆ ಮಾಡಿಕೊಳ್ಳುವಾಗ ನಾನೇ ಯೆಹೋವನು ಎಂದು ಗೊತ್ತಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

62 ನಾನು ಈ ಒಡಂಬಡಿಕೆಯನ್ನು ನಿನ್ನೊಂದಿಗೆ ಮಾಡಿಕೊಳ್ಳುವಾಗ ನಾನೇ ಸರ್ವೇಶ್ವರ ಎಂದು ನಿನಗೆ ಗೊತ್ತಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

62 ನಾನು ಈ ಒಡಂಬಡಿಕೆಯನ್ನು ನಿನ್ನೊಂದಿಗೆ ಮಾಡಿಕೊಳ್ಳಲು ನಾನೇ ಯೆಹೋವನು ಎಂದು ನಿನಗೆ ಗೊತ್ತಾಗುವದು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

62 ನಾನು ನಿನ್ನೊಂದಿಗೆ ಒಡಂಬಡಿಕೆ ಮಾಡಿಕೊಳ್ಳುವೆನು. ಮತ್ತು ನಾನೇ ಯೆಹೋವನೆಂದು ನೀನು ತಿಳಿದುಕೊಳ್ಳುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

62 ನಾನು ಈ ಒಡಂಬಡಿಕೆಯನ್ನು ನಿಮ್ಮೊಂದಿಗೆ ಸ್ಥಾಪಿಸುವೆನು. ಆದ್ದರಿಂದ ನಾನೇ ಯೆಹೋವ ದೇವರೆಂದು ನಿಮಗೆ ಗೊತ್ತಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 16:62
11 ತಿಳಿವುಗಳ ಹೋಲಿಕೆ  

ಅವರು ನನ್ನನ್ನು ಯೆಹೋವನೆಂದು ಗ್ರಹಿಸತಕ್ಕ ಹೃದಯವನ್ನು ಅವರಿಗೆ ಅನುಗ್ರಹಿಸುವೆನು. ಅವರು ನನ್ನ ಜನರಾಗಿರುವರು, ನಾನು ಅವರ ದೇವರಾಗಿರುವೆನು; ಅವರು ನನ್ನ ಕಡೆಗೆ ಮನಃಪೂರ್ವಕವಾಗಿ ಹಿಂದಿರುಗಿ ಬರುವರು” ಎಂಬುದೇ.


ನೀವು ರೂಪಿಸಿದ ವಿಗ್ರಹಗಳು ಅಳಿದುಹೋಗುವುವು; ಹತರಾದವರು ನಿಮ್ಮ ಮಧ್ಯದಲ್ಲಿ ಬೀಳುವರು; ಆಗ ನಾನೇ ಯೆಹೋವನು ಎಂದು ನಿಮಗೆ ಗೊತ್ತಾಗುವುದು.


ನಿಮ್ಮ ದೇವರಾದ ಯೆಹೋವನು ನಾನೇ ಎಂದು ನಿಮಗೆ ಮನದಟ್ಟಾಗುವುದು. ಆಗ ನಾನು ನನ್ನ ಪರಿಶುದ್ಧ ಪರ್ವತವಾದ ಚೀಯೋನಿನಲ್ಲಿ ನೆಲೆಸುವುದರಿಂದ, ಯೆರೂಸಲೇಮ್ ಪವಿತ್ರವಾಗಿರುವುದು. ಅನ್ಯರು ಇನ್ನು ಅದರಲ್ಲಿ ಹಾದುಹೋಗುವುದಿಲ್ಲ.


ಆ ಪ್ರಭುವು ಒಂದು ವಾರದ ಮಟ್ಟಿಗೆ ಬಹು ಜನರೊಂದಿಗೆ ದೃಢವಾದ ಒಡಂಬಡಿಕೆಯನ್ನು ಮಾಡಿಕೊಳ್ಳುವನು; ಅರ್ಧಭಾಗ ಯಜ್ಞನೈವೇದ್ಯಗಳನ್ನು ನಿಲ್ಲಿಸುವನು; ಅಸಹ್ಯಗಳನ್ನು ವಾಹನಮಾಡಿಕೊಂಡು ಒಬ್ಬ ಘಾತಕನು ಹಾರಿಬಂದು ನಿಶ್ಚಿತ ಪ್ರಳಯವು ಅವನನ್ನು ಮುಳುಗಿಸುವ ತನಕ ಹಾಳು ಮಾಡುವನು.”


ಹೀಗೆ ಇಸ್ರಾಯೇಲ್ ವಂಶದವರು ನಾನೇ ಅವರ ದೇವರಾದ ಯೆಹೋವನೆಂದು ಅಂದಿನಿಂದ ಯಾವಾಗಲೂ ತಿಳಿದುಕೊಳ್ಳುವರು.


“ನಾನು ನಿಮ್ಮನ್ನು ಲೆಕ್ಕಿಸುವಂತೆ, ದಂಡನೆಯ ಕೋಲಿನ ಕೆಳಗೆ ಹೋಗುವಂತೆ ಮಾಡಿ, ಒಡಂಬಡಿಕೆಯ ಕಟ್ಟಿನಿಂದ ಬಂಧಿಸುವೆನು.


ಆದರೂ ನಾನು ನಿನ್ನ ಯೌವನಕಾಲದಲ್ಲಿ ನಿನ್ನೊಂದಿಗೆ ಮಾಡಿಕೊಂಡ ಒಡಂಬಡಿಕೆಯನ್ನು ಜ್ಞಾಪಕಕ್ಕೆ ತಂದುಕೊಂಡು, ನಿನ್ನ ಸಂಗಡ ಎಂದಿಗೂ ತಪ್ಪದ ಶಾಶ್ವತವಾದ ಒಡಂಬಡಿಕೆಯನ್ನು ಮಾಡಿಕೊಂಡು ದೃಢೀಕರಿಸುವೆನು.


“‘ನಾನು ಅವರೊಂದಿಗೆ ಸಮಾಧಾನದ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು; ದುಷ್ಟಮೃಗಗಳು ದೇಶದಲ್ಲಿ ಇನ್ನಿರದಂತೆ ಮಾಡುವೆನು; ನನ್ನ ಜನರು ಕಾಡಿನಲ್ಲಿ ನಿರ್ಭಯವಾಗಿ ವಾಸಿಸುವರು, ಅರಣ್ಯದಲ್ಲಿ ಹಾಯಾಗಿ ನಿದ್ರಿಸುವರು.


ನಾನು ಅವರೊಂದಿಗೆ ಸಮಾಧಾನದ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು; ಅದು ಶಾಶ್ವತವಾಗಿರುವುದು. ನಾನು ಅವರನ್ನು ನೆಲೆಗೊಳಿಸಿ, ವೃದ್ಧಿಮಾಡಿ, ನನ್ನ ಪವಿತ್ರಾಲಯವನ್ನು ಅವರ ನಡುವೆ ಯುಗಯುಗಾಂತರಕ್ಕೂ ನಿಲ್ಲಿಸುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು