Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 16:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ನಾನು ಹಾದುಹೋಗುತ್ತಾ ನಿನ್ನನ್ನು ನೋಡಲು ಇಗೋ, ನೀನು ಮದುವೆಗೆ ಸಿದ್ಧಳಾಗಿದ್ದಿ; ಆಗ ನಾನು ನನ್ನ ಹೊದಿಕೆಯನ್ನು ನಿನಗೆ ಹೊದಿಸಿ ನಿನ್ನ ಮಾನವನ್ನು ಕಾಪಾಡಿದೆನು; ಇದಲ್ಲದೆ ನಾನು ನಿನಗೆ ಪ್ರಮಾಣಮಾಡಿ ಒಡಂಬಡಿಕೆ ಮಾಡಿಕೊಂಡೆ ಆದುದರಿಂದ ನೀನು ನನ್ನವಳಾದೆ’” ಇದು ಕರ್ತನಾದ ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 “ನಾನು ಪುನಃ ಹಾದುಹೋಗುತ್ತಾ ನಿನ್ನನ್ನು ನೋಡಲು ಇಗೋ, ನೀನು ಮದುವೆಗೆ ಸಿದ್ಧಳಾಗಿದ್ದೆ; ಆಗ ನಾನು ನನ್ನ ಹೊದಿಕೆಯ ಸೆರಗನ್ನು ನಿನಗೆ ಹೊದಿಸಿ, ನಿನ್ನ ಮಾನವನ್ನು ಕಾಪಾಡಿದೆ; ಇದಲ್ಲದೆ ನಾನು ನಿನಗೆ ಮಾತುಕೊಟ್ಟು ಒಡಂಬಡಿಕೆ ಮಾಡಿಕೊಂಡೆ. ಆದ್ದರಿಂದ ನೀನು ನನ್ನವಳಾದೆ; ಇದು ಸರ್ವೇಶ್ವರನಾದ ದೇವರ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ನಾನು ಹಾದುಹೋಗುತ್ತಾ ನಿನ್ನನ್ನು ನೋಡಲು ಇಗೋ, ನೀನು ಮದುವೆಗೆ ಸಿದ್ಧಳಾಗಿದ್ದಿ; ಆಗ ನಾನು ನನ್ನ ಹೊದಿಕೆಯ ನೆರಿಗೆಯನ್ನು ನಿನ್ನ ಮೇಲೆ ಹಾಕಿ ನಿನ್ನ ಮಾನವನ್ನು ಕಾಪಾಡಿದೆನು; ಇದಲ್ಲದೆ ನಾನು ನಿನಗೆ ಮಾತುಕೊಟ್ಟು ಒಡಂಬಡಿಕೆ ಮಾಡಿಕೊಂಡದರಿಂದ ನೀನು ನನ್ನವಳಾದಿ; ಇದು ಕರ್ತನಾದ ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ನಾನು ಮತ್ತೆ ಹಾದುಹೋಗುವಾಗ ನಿನ್ನನ್ನು ನೋಡಲಾಗಿ ನೀನು ಸಂಭೋಗಿಸಲು ತಯಾರಾಗಿದ್ದೆ. ನಾನು ನನ್ನ ಹೊದಿಕೆಯನ್ನು ನಿನ್ನ ಮೇಲೆ ಹಾಕಿ ನಿನ್ನ ಬೆತ್ತಲೆ ದೇಹವನ್ನು ಮುಚ್ಚಿದೆನು. ನಿನ್ನನ್ನು ವಿವಾಹವಾಗಲು ಮಾತುಕೊಟ್ಟೆನು. ನಾನು ನಿನ್ನೊಡನೆ ಒಡಂಬಡಿಕೆ ಮಾಡಿಕೊಂಡೆನು. ಆಗ ನೀನು ನನ್ನವಳಾದೆ.’” ಇದು ನನ್ನ ಒಡೆಯನಾದ ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 “ ‘ಈಗ ನಾನು ನಿನ್ನ ಬಳಿ ಹಾದುಹೋಗುವಾಗ ನಿನ್ನನ್ನು ನೋಡಲು, ನಿನ್ನ ಕಾಲವು ಪ್ರೇಮಿಸುವ ಕಾಲವಾಗಿತ್ತು. ಆಗ ನಾನು ನನ್ನ ಸೆರಗನ್ನು ನಿನ್ನ ಮೇಲೆ ಹೊದಿಸಿ, ನಿನ್ನ ಮಾನವನ್ನು ಕಾಪಾಡಿದೆ. ಹೌದು, ನಾನು ನಿನಗೆ ಆಣೆಯಿಟ್ಟು ಒಡಂಬಡಿಕೆ ಮಾಡಿಕೊಂಡಿದ್ದರಿಂದ ನೀನು ನನ್ನವಳಾದೆ, ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 16:8
25 ತಿಳಿವುಗಳ ಹೋಲಿಕೆ  

ಹೆದರಿ ಆಕೆಯನ್ನು “ನೀನು ಯಾರು?” ಎಂದು ಕೇಳಲು ಆಕೆಯು “ನಾನು ನಿನ್ನ ದಾಸಿಯಾದ ರೂತಳು, ನೀನು ಸಮೀಪಬಂಧುವಾಗಿರುವುದರಿಂದ ನಿನ್ನ ಹೊದಿಕೆಯ ಅಂಚನ್ನು ನನ್ನ ಮೇಲೆ ಹಾಕು” ಅಂದಳು.


ಆದರೆ ನಾವು ಪಾಪಿಗಳಾಗಿದ್ದಾಗಲೇ ಕ್ರಿಸ್ತನು ನಮಗೋಸ್ಕರ ಪ್ರಾಣಕೊಟ್ಟದ್ದರಲ್ಲಿ ದೇವರು ನಮ್ಮ ಮೇಲೆ ತನಗಿರುವ ಪ್ರೀತಿಯನ್ನು ದೃಢಪಡಿಸಿದ್ದಾನೆ.


ನೀನು ನನ್ನ ದೃಷ್ಟಿಯಲ್ಲಿ ಅಮೂಲ್ಯನೂ, ಮಾನ್ಯನೂ, ಪ್ರಿಯನೂ ಆಗಿರುವುದರಿಂದ, ನಾನು ನಿನ್ನ ಬದಲಾಗಿ ಮನುಷ್ಯರನ್ನೂ, ನಿನ್ನ ಪ್ರಾಣಕ್ಕೆ ಪ್ರತಿಯಾಗಿ ಜನಾಂಗಗಳನ್ನೂ ಕೊಡುವೆನು.


ಇಸ್ರಾಯೇಲ್ ಇನ್ನೂ ಬಾಲ್ಯದಲ್ಲಿದ್ದಾಗ ನಾನು ಅದರ ಮೇಲೆ ಪ್ರೀತಿಯಿಟ್ಟು, ಆ ನನ್ನ ಮಗನನ್ನು ಐಗುಪ್ತ ದೇಶದಿಂದ ಕರೆದೆನು.


ನಿಮ್ಮ ದೇವರಾದ ಯೆಹೋವನು ಕನಿಕರವುಳ್ಳ ದೇವರಾದುದರಿಂದ ಆತನು ನಿಮ್ಮನ್ನು ಅಲಕ್ಷ್ಯಮಾಡುವುದಿಲ್ಲ, ವಿನಾಶಕ್ಕೆ ಬಿಡುವುದಿಲ್ಲ. ಆತನು ನಿಮ್ಮ ಪೂರ್ವಿಕರ ಸಂಗಡ ಪ್ರಮಾಣಪೂರ್ವಕವಾಗಿ ಮಾಡಿಕೊಂಡ ಒಡಂಬಡಿಕೆಯನ್ನು ಮರೆಯುವುದಿಲ್ಲ.


ನಿನ್ನ ಸೇವಕರಾದ ಅಬ್ರಹಾಮ್, ಇಸಾಕ್ ಹಾಗು ಯಾಕೋಬರನ್ನು ನೆನಪಿಗೆ ತಂದುಕೋ. ನೀನು ನಿನ್ನ ಜೀವದಾಣೆ ಪ್ರಮಾಣ ಮಾಡಿ ಅವರಿಗೆ, ‘ನಾನು ನಿಮ್ಮ ಸಂತತಿಯನ್ನು ಹೆಚ್ಚಿಸಿ ಆಕಾಶದ ನಕ್ಷತ್ರಗಳಷ್ಟು ಅಸಂಖ್ಯವಾಗಿ ಈ ಪ್ರದೇಶವನ್ನೆಲ್ಲಾ ನಿಮ್ಮ ಸಂತತಿಯವರಿಗೆ ಕೊಡುವೆನೆಂದೂ ಇಸ್ರಾಯೇಲರು ಈ ದೇಶವನ್ನು ಶಾಶ್ವತವಾಗಿ ಸ್ವಾಧೀನ ಮಾಡಿಕೊಳ್ಳುವರೆಂದೂ ಮಾತುಕೊಡಲಿಲ್ಲವೇ’” ಅಂದನು.


ಯೆಹೋವನು ದಯದಿಂದ ನಿಮ್ಮನ್ನು ಸ್ವಕೀಯಜನವನ್ನಾಗಿ ಆರಿಸಿಕೊಂಡ ಮೇಲೆ ಆತನು ತನ್ನ ಮಹೋನ್ನತ ನಾಮದ ನಿಮಿತ್ತ ನಿಮ್ಮನ್ನು ಕೈಬಿಡುವುದೇ ಇಲ್ಲ.


“‘ನಾನು ಹಾದುಹೋಗುತ್ತಾ, ನಿನ್ನ ರಕ್ತದಲ್ಲೇ ಹೊರಳಾಡುತ್ತಿದ್ದ ನಿನ್ನನ್ನು ನೋಡಿ, ನೀನು ರಕ್ತದಿಂದ ಹೊಲೆಯಾಗಿದ್ದರೂ ಬದುಕು’ ಎಂದು ಹೇಳಿದೆನು. ಹೌದು, ‘ನೀನು ರಕ್ತದಿಂದ ಹೊಲೆಯಾಗಿದ್ದರೂ ಬದುಕು’ ಎಂದು ಹೇಳಿ ಬದುಕಿಸಿದೆನು.


‘ನಾನು ನಿನ್ನನ್ನು ಪ್ರೀತಿಸಿರುವುದು ಶಾಶ್ವತ ಪ್ರೇಮದಿಂದಲೇ; ಆದಕಾರಣ ನಿನ್ನನ್ನು ಮಮತೆಯಿಂದ ಸೆಳೆದುಕೊಂಡಿದ್ದೇನೆ,


ಯೆಹೋವನು ಇಂತೆನ್ನುತ್ತಾನೆ, “ನಾನು ನಿಮ್ಮನ್ನು ಪ್ರೀತಿಸಿದ್ದೇನೆ.” ನೀವೋ “ಯಾವ ವಿಷಯದಲ್ಲಿ ನಮ್ಮನ್ನು ಪ್ರೀತಿಸಿದ್ದೀ?” ಅಂದುಕೊಳ್ಳುತ್ತೀರಲ್ಲಾ. ಏಸಾವನು ಯಾಕೋಬನ ಅಣ್ಣನಲ್ಲವೆ?


ಈ ಒಡಂಬಡಿಕೆಯು ನಾನು ಇವರ ಪೂರ್ವಿಕರನ್ನು ಕೈ ಹಿಡಿದು ಐಗುಪ್ತ ದೇಶದೊಳಗಿಂದ ಕರೆದುಕೊಂಡು ಬಂದಾಗ ಅವರ ಸಂಗಡ ಮಾಡಿಕೊಂಡ ಒಡಂಬಡಿಕೆಯಂಥದಲ್ಲ; ನಾನು ಅವರಿಗೆ ಪತಿಯಾಗಿದ್ದರೂ ಆ ನನ್ನ ಒಡಂಬಡಿಕೆಯನ್ನು ಅವರು ಮೀರಿದರಷ್ಟೆ.


“ನೀನು ನಿನ್ನ ಒಬ್ಬನೇ ಮಗನನ್ನು ಸಮರ್ಪಿಸುವುದಕ್ಕೆ ಹಿಂದೆಗೆಯದೆ ಹೋದುದರಿಂದ, ಯೆಹೋವನಾದ ನಾನು ನಿನಗೆ ಪ್ರಮಾಣವಾಗಿ ಹೇಳುವುದೇನಂದರೆ


ಅವಳು ತನ್ನೊಂದಿಗೆ ವ್ಯಭಿಚಾರ ಮಾಡಿದವರನ್ನು ಅನುಸರಿಸಿ ಹೋದರೂ ಅವರು ಸಿಕ್ಕುವುದಿಲ್ಲ. ಆಗ ಅವಳು, “‘ನಾನು ಮದುವೆಯಾದ ಗಂಡನ ಬಳಿಗೆ ಹಿಂದಿರುಗಿ ಹೋಗುವೆನು, ಈಗಿನ ನನ್ನ ಸ್ಥಿತಿಗಿಂತ ಆಗಿನ ಸ್ಥಿತಿಯು ಎಷ್ಟೋ ಲೇಸು’ ಅಂದುಕೊಳ್ಳುವಳು.


ಅವಳ ದ್ರಾಕ್ಷಿಯ ತೋಟಗಳನ್ನು ಅಲ್ಲಿರುವಾಗಲೇ ಅವಳಿಗೆ ಹಿಂದಕ್ಕೆ ಕೊಡುವೆನು. ಆಕೋರಿನ ತಗ್ಗನ್ನೇ ಅವಳ ಸುಖ ನಿರೀಕ್ಷೆಗೆ ದ್ವಾರವನ್ನಾಗಿ ಮಾಡುವೆನು. ಯೌವನದಲ್ಲಿ, ಐಗುಪ್ತದೇಶದೊಳಗಿಂದ ಹೊರಟುಬಂದ ದಿನದಲ್ಲಿ ಇದ್ದಂತೆ ಅಲ್ಲಿ ಆಕೆಯು ಮುಳುಗುವಳು.”


ಭಯವೂ, ಹೆದರಿಕೆಯೂ, ಅವರಿಗುಂಟಾಗುವುದು. ನಿನ್ನ ಭುಜಬಲದ ಶಕ್ತಿಯಿಂದ ಅವರು ಕಲ್ಲಿನಂತೆ ಸ್ತಬ್ಧರಾಗುವರು. ಅಷ್ಟರಲ್ಲಿ ಯೆಹೋವನೇ, ನೀನು ಕಾಪಾಡಿದ ನಿನ್ನ ಪ್ರಜೆಗಳು ದಾಟಿ ಹೋಗಿ ದೇಶವನ್ನು ಸೇರುವರು.


ಈಗಲಾದರೋ, ಯಾಕೋಬನ ವಂಶವೇ, ಇಸ್ರಾಯೇಲ್ ಸಂತಾನವೇ, ನಿನ್ನನ್ನು ಸೃಷ್ಟಿಸಿ ರೂಪಿಸಿದವನಾದ ಯೆಹೋವನು ಹೀಗೆನ್ನುತ್ತಾನೆ, “ಭಯಪಡಬೇಡ, ನಾನು ನಿನ್ನನ್ನು ವಿಮೋಚಿಸಿದೆನಲ್ಲಾ, ನಿನ್ನ ಹೆಸರು ಹಿಡಿದು ಕರೆದೆನಲ್ಲಾ, ನೀನು ನನ್ನವನೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು