Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 17:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನನ್ನ ಜೀವದಾಣೆ, ಇವನು ಯಾರಿಂದ ಅರಸನಾಗಿ ನೇಮಿಸಲ್ಪಟ್ಟನೋ, ಯಾವನಿಗೆ ಮಾಡಿದ ಪ್ರಮಾಣವನ್ನು ತಿರಸ್ಕರಿಸಿದನೋ, ಯಾರ ಒಡಂಬಡಿಕೆಯನ್ನು ಮೀರಿದನೋ, ಆ ಅರಸನ ಬಳಿಯಲ್ಲಿ, ಅಂದರೆ ಬಾಬೆಲೆಂಬ ಅವನ ವಾಸಸ್ಥಾನದಲ್ಲಿ ಇವನು ಸಾಯುವುದು ಖಂಡಿತ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 “ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ನನ್ನ ಜೀವದಾಣೆ, ಇವನು ಯಾವನಿಂದ ಅರಸನಾಗಿ ನೇಮಕಗೊಂಡನೋ, ಯಾವನಿಗೆ ಮಾಡಿದ ಪ್ರಮಾಣವನ್ನು ತಿರಸ್ಕರಿಸಿದನೋ, ಯಾವನ ಒಪ್ಪಂದವನ್ನು ಮೀರಿದನೋ, ಆ ಅರಸನ ಬಳಿಯಲ್ಲೆ, ಅಂದರೆ ಬಾಬಿಲೋನೆಂಬ ಅವನ ವಾಸಸ್ಥಾನದಲ್ಲೆ, ಇವನು ಸಾಯುವುದು ಖಂಡಿತ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ನನ್ನ ಜೀವದಾಣೆ, ಇವನು ಯಾವನಿಂದ ಅರಸನಾಗಿ ನೇವಿುಸಲ್ಪಟ್ಟನೋ, ಯಾವನಿಗೆ ಮಾಡಿದ ಪ್ರಮಾಣವನ್ನು ತಿರಸ್ಕರಿಸಿದನೋ, ಯಾವನ ಒಡಂಬಡಿಕೆಯನ್ನು ಮೀರಿದನೋ, ಆ ಅರಸನ ಬಳಿಯಲ್ಲಿ, ಅಂದರೆ ಬಾಬೆಲೆಂಬ ಅವನ ವಾಸಸ್ಥಾನದಲ್ಲಿ ಇವನು ಸಾಯುವದು ಖಂಡಿತ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ನನ್ನ ಒಡೆಯನಾದ ಯೆಹೋವನು ಹೇಳುವುದೇನೆಂದರೆ, “ನನ್ನ ಜೀವದಾಣೆ, ಈ ಹೊಸ ರಾಜನು ಬಾಬಿಲೋನಿನಲ್ಲಿ ಸಾಯುವನು. ಈ ಮನುಷ್ಯನನ್ನು ಯೆಹೂದದ ರಾಜನನ್ನಾಗಿ ಮಾಡಿದ ರಾಜ ನೆಬೂಕದ್ನೆಚ್ಚರನ ನಾಡಿನಲ್ಲಿ ಇವನು ಸಾಯುವನು. ಈ ಮನುಷ್ಯನು ಆ ರಾಜನೊಡನೆ ಮಾಡಿದ ಪ್ರಮಾಣವನ್ನು ತಿರಸ್ಕರಿಸಿ ಆ ರಾಜನೊಡನೆ ಮಾಡಿಕೊಂಡಿದ್ದ ಒಪ್ಪಂದವನ್ನು ಮುರಿದು ಹಾಕಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 “ ‘ನಿಶ್ಚಯವಾಗಿ ಯಾವನಿಂದ ಅರಸನಾಗಿ ಆಯ್ಕೆಗೊಂಡನೋ ಎಂದರೆ ಯಾವನ ಪ್ರಮಾಣವನ್ನು ತಿರಸ್ಕರಿಸಿದನೋ, ಯಾವನ ಒಡಂಬಡಿಕೆಯನ್ನು ಮೀರಿದನೋ, ನನ್ನ ಜೀವದಾಣೆ ಅವನು ಇರುವಲ್ಲಿಯೇ ಬಾಬಿಲೋನಿನ ಮಧ್ಯದಲ್ಲಿ ಇವನು ಸಾಯುವನು, ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 17:16
25 ತಿಳಿವುಗಳ ಹೋಲಿಕೆ  

ನಾನು ಅವನಿಗೆ ನನ್ನ ಬಲೆಯೊಡ್ಡುವೆನು, ನಾನು ಹಾಕಿದ ಉರುಲಿನಲ್ಲಿ ಸಿಕ್ಕಿಬೀಳುವನು; ಕಸ್ದೀಯರ ದೇಶವಾದ ಬಾಬಿಲೋನಿಗೆ ಅವನನ್ನು ಒಯ್ಯುವೆನು, ಅಲ್ಲೇ ಇದ್ದು ಸಾಯುವನು, ಆದರೂ ಆ ದೇಶವನ್ನು ನೋಡುವುದಿಲ್ಲ.


ಇದಲ್ಲದೆ ಬಾಬೆಲಿನ ಅರಸನು ಚಿದ್ಕೀಯನ ಎರಡು ಕಣ್ಣುಗಳನ್ನೂ ಕಿತ್ತು, ಅವನಿಗೆ ಬೇಡಿ ಹಾಕಿ ಬಾಬಿಲೋನಿಗೆ ತೆಗೆದುಕೊಂಡು ಹೋಗಿ, ಅವನು ಜೀವದಿಂದ ಇರುವವರೆಗೆ ಸೆರೆಯಲ್ಲಿ ಇಟ್ಟನು.


ರಾಜವಂಶದವನೊಬ್ಬನನ್ನು ಆರಿಸಿ ಅವನೊಂದಿಗೆ ಒಡಂಬಡಿಕೆ ಮಾಡಿಕೊಂಡು ಅವನಿಂದ ಆಣೆಯಿಡಿಸಿದನು.


ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನೀನು ಒಡಂಬಡಿಕೆಯನ್ನು ಮೀರಿ ನಿನ್ನ ಆಣೆಯನ್ನು ತಿರಸ್ಕರಿಸಿರುವೆ ನೀನು ಮಾಡಿದ್ದಕ್ಕೆ ತಕ್ಕದ್ದನ್ನು ನಾನು ನಿನಗೆ ಮಾಡುವೆನು.


ಇದಲ್ಲದೆ ಚಿದ್ಕೀಯನ ಕಣ್ಣುಗಳನ್ನು ಕೀಳಿಸಿ ಅವನನ್ನು ಬಾಬಿಲೋನಿಗೆ ಸಾಗಿಸಬೇಕೆಂದು ಬೇಡಿಹಾಕಿಸಿದನು.


ಅವನು ಭ್ರಷ್ಟರನ್ನು ಬಿಟ್ಟುಬಿಟ್ಟವನೂ, ಯೆಹೋವನಲ್ಲಿ ಭಯಭಕ್ತಿಯುಳ್ಳವರನ್ನು ಸನ್ಮಾನಿಸುವವನೂ, ನಷ್ಟವಾದರೂ ಪ್ರಮಾಣತಪ್ಪದವನೂ ಆಗಿರಬೇಕು.


ಬಾಬೆಲಿನ ಅರಸನು ಯೆಹೋಯಾಖೀನನಿಗೆ ಬದಲಾಗಿ ಅವನ ಚಿಕ್ಕಪ್ಪನಾದ ಮತ್ತನ್ಯ ಎಂಬುವವನನ್ನು ಅರಸನನ್ನಾಗಿ ನೇಮಿಸಿ ಅವನಿಗೆ ಚಿದ್ಕೀಯನೆಂದು ಹೆಸರಿಟ್ಟನು.


ಗಿಬ್ಯೋನ್ಯರು ಇಸ್ರಾಯೇಲ್ಯರ ಕುಲಕ್ಕೆ ಸೇರಿದವರಲ್ಲ. ಸಂಹೃತರಾಗದೆ ಉಳಿದ ಅಮೋರಿಯರಷ್ಟೆ. ಇಸ್ರಾಯೇಲ್ಯರು ತಾವು ಇವರನ್ನು ಕೊಲ್ಲುವುದಿಲ್ಲವೆಂದು ಪ್ರಮಾಣಮಾಡಿದ್ದರು. ಆದರೂ ಸೌಲನು ಇಸ್ರಾಯೇಲ್ ಮತ್ತು ಯೆಹೂದ ಕುಲಗಳ ಮೇಲೆ ತನಗಿದ್ದ ಅಭಿಮಾನದ ನಿಮಿತ್ತ ಇವರನ್ನು ನಿರ್ನಾಮಗೊಳಿಸಬೇಕೆಂದಿದ್ದನು.


ನಾವು ಇಟ್ಟ ಆಣೆಯ ನಿಮಿತ್ತ ದೇವರ ಕೋಪವು ನಮ್ಮ ಮೇಲೆ ಬಾರದಂತೆ ಅವರನ್ನು ಜೀವದಿಂದುಳಿಸಬೇಕು. ನಾವು ಹೀಗೆ ಮಾಡೋಣ, ಅವರನ್ನು ಜೀವದಿಂದ ಉಳಿಸಿ ಬಿಟ್ಟುಬಿಡೋಣ


ಯಾವನಾದರೂ ಯೆಹೋವನಿಗೆ ಹರಕೆ ಮಾಡಿದರೆ ಇಲ್ಲವೆ ತಾನು ಅಶುದ್ಧವಾದುದನ್ನು ಮುಟ್ಟದೆ ಇರುವೆನೆಂದು ಆಣೆಯಿಟ್ಟುಕೊಂಡರೆ ಅವನು ತನ್ನ ಮಾತನ್ನು ಮೀರದೆ ಹೇಳಿದಂತೆಯೇ ನೆರವೇರಿಸಬೇಕು.


ನಿನ್ನ ದೇವರಾದ ಯೆಹೋವನ ಹೆಸರನ್ನು ಅಯೋಗ್ಯಕಾರ್ಯಕ್ಕಾಗಿ ಎತ್ತಬಾರದು. ಯೆಹೋವನು ತನ್ನ ಹೆಸರನ್ನು ಅಯೋಗ್ಯಕಾರ್ಯಕ್ಕಾಗಿ ಎತ್ತುವವನನ್ನು ಶಿಕ್ಷಿಸದೆ ಬಿಡುವುದಿಲ್ಲ.


ಅಪ್ಪಣೆಕೊಡದೆ ಹೋದರೆ, ನಾನು ನಿನ್ನ ದೇಶದಲ್ಲೆಲ್ಲಾ ಕಪ್ಪೆಗಳಿಂದ ಉಪದ್ರವ ಕೊಡುವೆನು.


ಮಮತೆಯಿಲ್ಲದವರೂ, ಸಮಾಧಾನಹೊಂದದವರೂ, ಚಾಡಿಹೇಳುವವರೂ, ದಮೆಯಿಲ್ಲದವರೂ, ಕ್ರೂರರೂ, ಒಳ್ಳೆಯದನ್ನು ದ್ವೇಷಿಸುವವರೂ,


ಜಾರರು, ಸಲಿಂಗಕಾಮಿಗಳು, ನರಚೋರರು, ಸುಳ್ಳುಗಾರರು, ಅಸತ್ಯವಾದಿಗಳು, ಸ್ವಸ್ಥಬೋಧನೆಗೆ ವಿರುದ್ಧವಾಗಿರುವಂಥವುಗಳನ್ನು ಮಾಡುವವರು, ಈ ಮೊದಲಾದ ಅನೀತಿವಂತರಿಗಾಗಿ ನೇಮಕವಾಗಿದೆ ಎಂದು ನಮಗೆ ತಿಳಿದಿದೆ.


ತಂದೆತಾಯಿಗಳ ಮಾತನ್ನು ಕೇಳದವರೂ ವಿವೇಕವಿಲ್ಲದವರೂ, ಮಾತಿಗೆ ತಪ್ಪುವವರೂ, ಮಮತೆಯಿಲ್ಲದವರೂ, ಕರುಣೆಯಿಲ್ಲದವರೂ ಆದರು.


“ನಾನು ನ್ಯಾಯತೀರಿಸುವುದಕ್ಕೆ ನಿಮ್ಮ ಬಳಿಗೆ ಬರುವೆನು; ಮಾಟಗಾರನು, ವ್ಯಭಿಚಾರಿಯೂ, ಸುಳ್ಳುಸಾಕ್ಷಿ ಹೇಳುವವನು, ಕೂಲಿ ಹಿಡಿದು ಕೂಲಿಯವನನ್ನು ಮೋಸಪಡಿಸುವವನು, ವಿಧವೆಯರನ್ನು ಮತ್ತು ಅನಾಥರನ್ನೂ ಬಾಧಿಸುವವನು, ವಿದೇಶಿಯ ನ್ಯಾಯತಪ್ಪಿಸುವವನು ಅಂತು ನನಗೆ ಹೆದರದಿರುವ ಇವರೆಲ್ಲರಿಗೆ ವಿರುದ್ಧವಾಗಿ ನಾನು ಶೀಘ್ರವಾಗಿ ನ್ಯಾಯತೀರಿಸಿ ಸಾಕ್ಷಿಯಾಗಿರುವೆನು” ಇದು ಸೇನಾಧೀಶ್ವರನಾದ ಯೆಹೋವನ ನುಡಿ.


ಹರಟೆಹರಟುತ್ತಾರೆ, ಸುಳ್ಳಾಣೆಯಿಡುತ್ತಾರೆ, ಸಂಧಾನ ಮಾಡಿಕೊಳ್ಳುತ್ತಾರೆ; ಅಲ್ಲಿನ ನ್ಯಾಯವು ನೇಗಿಲಗೆರೆಗಳಲ್ಲಿ ಹುಟ್ಟುವ ವಿಷದ ಕಳೆಗಳಂತಿದೆ.


ಆಹಾ, ನಾಟಿಕೊಂಡಿದ್ದ ಆ ಲತೆಯು ಸಮೃದ್ಧವಾಗಿಯೇ ಇರುವುದೋ? ಮೂಡಣ ಗಾಳಿಯು ಬಡಿಯುವಾಗ ಬಾಡೇ ಬಾಡುವುದಲ್ಲವೇ? ಬೆಳೆದ ಪಾತಿಯಲ್ಲಿಯೇ ಒಣಗಿಹೋಗುವುದು.”


ಯೆಹೋವನು ಯೆರೂಸಲೇಮಿನವರ ಮೇಲೆಯೂ ಬೇರೆ ಎಲ್ಲಾ ಯೆಹೂದ್ಯರ ಮೇಲೆಯೂ ಇದನ್ನೆಲ್ಲಾ ಬರಮಾಡಿ ಕೊನೆಯಲ್ಲಿ ಅವರನ್ನು ತನ್ನ ಸನ್ನಿಧಿಯಿಂದ ನಾಶಮಾಡುವಷ್ಟು ರೋಷವುಳ್ಳವನಾಗಿದ್ದನು. ಆದರೆ ಚಿದ್ಕೀಯನು ಬಾಬೆಲಿನ ಅರಸನಿಗೆ ವಿರುದ್ಧವಾಗಿ ತಿರುಗಿಬಿದ್ದನು.


ಯೆಹೂದದ ಅರಸನಾದ ಚಿದ್ಕೀಯನನ್ನೂ ಮತ್ತು ಅವನ ಪ್ರಧಾನರನ್ನೂ ಅವರ ಪ್ರಾಣ ಹುಡುಕುವ ಶತ್ರುಗಳ ಕೈಗೆ ಅಂದರೆ ನಿಮ್ಮನ್ನು ಬಿಟ್ಟುಹೋಗಿರುವ ಬಾಬೆಲಿನ ಅರಸನ ಕೈಗೆ ಕೊಡುವೆನು” ಎನ್ನುತ್ತಾನೆ.


ಪುರನಿವಾಸಿಗಳು ತಾವು ಆ ಅರಸನಿಂದ ಮಾಡಿಸಿಕೊಂಡ ಪ್ರಮಾಣಗಳಲ್ಲಿ ಭರವಸವಿಟ್ಟು, ಈ ಶಕುನವು ಸುಳ್ಳೆಂದು ಭಾವಿಸುವರು; ಆದರೆ ಅವನು ಅವರ ಅಧರ್ಮವನ್ನು ಬಯಲಿಗೆ ತರಲು ಅವನ ಕೈಗೆ ಸಿಕ್ಕಿಬೀಳುವರು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು