ಯೆಹೆಜ್ಕೇಲನು 17:18 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಏಕೆಂದರೆ ಇವನು ಇಟ್ಟ ಆಣೆಯನ್ನು ತಿರಸ್ಕರಿಸಿ ಒಡಂಬಡಿಕೆಯನ್ನು ಮೀರಿದನಲ್ಲವೇ? ಕೈಯ ಮೇಲೆ ಕೈಯಿಟ್ಟು ಆಣೆಮಾಡಿದರೆ ಪ್ರಯೋಜನವೇನು? ಇದನ್ನೆಲ್ಲಾ ಮಾಡಿದ್ದರಿಂದ ಇವನು ಪಾರಾಗನು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಏಕೆಂದರೆ ಇವನು ಇಟ್ಟ ಆಣೆಯನ್ನು ತಿರಸ್ಕರಿಸಿ ಒಪ್ಪಂದವನ್ನೂ ಮೀರಿದನಲ್ಲವೇ? ಕೈಯ ಮೇಲೆ ಕೈಯಿಟ್ಟು ಭಾಷೆಮಾಡಿ ಪ್ರಯೋಜನವೇನು? ಅದನ್ನೆಲ್ಲಾ ಮುರಿದುಬಿಟ್ಟನಲ್ಲವೇ? ಇವನು ನನ್ನಿಂದ ಪಾರಾಗನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಇವನು ಇಟ್ಟ ಆಣೆಯನ್ನು ತಿರಸ್ಕರಿಸಿ ಒಡಂಬಡಿಕೆಯನ್ನು ಮೀರಿದನಲ್ಲವೇ; [ಕೈಯ ಮೇಲೆ] ಕೈ ಇಟ್ಟರೇನು? ಇದನ್ನೆಲ್ಲಾ ಮಾಡಿಬಿಟ್ಟನಲ್ಲವೇ? ಇವನು ಪಾರಾಗನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ಆದರೆ ಯೆಹೂದದ ರಾಜನಿಗೆ ತಪ್ಪಿಸಿಕೊಳ್ಳಲು ಸಾಧ್ಯವಾಗುವದಿಲ್ಲ. ಯಾಕೆಂದರೆ ಅವನು ತನ್ನ ಪ್ರಮಾಣವನ್ನು ತಿರಸ್ಕರಿಸಿದನು ಮತ್ತು ತಾನು ಮಾಡಿಕೊಂಡ ಒಡಂಬಡಿಕೆಯನ್ನು ಮುರಿದುಹಾಕಿದನು.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಅವನು ಒಡಂಬಡಿಕೆಯನ್ನು ಮುರಿದು, ಪ್ರಮಾಣ ವಚನವನ್ನು ತಿರಸ್ಕರಿಸಿದನು. ಅವನು ಒಡಂಬಡಿಕೆಯಲ್ಲಿ ತನ್ನ ಹಸ್ತವನ್ನಿಟ್ಟಿದ್ದರೂ ಈ ಎಲ್ಲಾ ಸಂಗತಿಗಳನ್ನು ಮಾಡಿದ್ದರಿಂದ ಅವನು ತಪ್ಪಿಸಿಕೊಳ್ಳಲಾರನು. ಅಧ್ಯಾಯವನ್ನು ನೋಡಿ |
ಯೇಹುವು ಅಲ್ಲಿಂದ ಮುಂದೆ ಹೋಗುತ್ತಿರುವಾಗ, ತನ್ನನ್ನು ಎದುರುಗೊಳ್ಳುವುದಕ್ಕಾಗಿ ಬಂದ ರೇಕಾಬನ ಮಗನಾದ ಯೆಹೋನಾದಾಬನನ್ನು ಕಂಡು ವಂದಿಸಿ, “ನಿನ್ನ ವಿಷಯದಲ್ಲಿ, ನನ್ನ ಹೃದಯವು ಯಥಾರ್ಥವಾಗಿರುವಂತೆ ನಿನ್ನ ಹೃದಯವು ಯಥಾರ್ಥವಾಗಿರುವುದೋ?” ಎಂದು ಕೇಳಿದನು. ಅವನು, “ಹೌದು” ಎಂದು ಉತ್ತರ ಕೊಟ್ಟನು. ಆಗ ಯೇಹುವು, “ಹಾಗಾದರೆ ನಿನ್ನ ಕೈಯನ್ನು ಕೊಡು” ಎನ್ನಲು ಅವನು ತನ್ನ ಕೈಯನ್ನು ಕೊಟ್ಟನು. ಯೇಹುವು ಅವನನ್ನು ಕೈಹಿಡಿದು ತನ್ನ ರಥದಲ್ಲಿ ಕುಳ್ಳಿರಿಸಿಕೊಂಡನು.