ಯೆಹೆಜ್ಕೇಲನು 17:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಅದು ಮೊಳೆತು ದ್ರಾಕ್ಷಾಲತೆಯಾಗಿ ತುಂಬಾ ಹರಡಿಕೊಂಡು ತನ್ನ ರೆಂಬೆಗಳನ್ನು ಆ ಹದ್ದಿನ ಕಡೆಗೆ ಚಾಚಿ ಅದರ ಕೆಳಗೆ ತನ್ನ ಬೇರುಗಳನ್ನು ಬಿಟ್ಟಿತು; ಅದು ಲತೆಯಾಗಿ ಬೆಳೆದು, ರೆಂಬೆಗಳನ್ನು ಹರಡಿಸಿ, ಚಿಗುರುಗಳನ್ನು ಹೊರಡಿಸಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಅದು ಗುಜ್ಜಾಗಿ ಬೆಳೆದು ದ್ರಾಕ್ಷಾಲತೆಯಾಗಿ ವಿಶಾಲವಾಗಿ ಹರಡಿಕೊಂಡು, ತನ್ನ ರೆಂಬೆಗಳನ್ನು ಆ ಹದ್ದಿನ ಕಡೆಗೆ ಚಾಚಿ, ಅದರ ಕೆಳಗೂ ಬೇರು ಬಿಟ್ಟಿತು; ಅದು ಲತೆಯಾಗಿ ಬೆಳೆದು, ರೆಂಬೆಗಳನ್ನು ಹರಡಿಸಿ, ಚಿಗುರುಗಳನ್ನು ಹೊರಡಿಸಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಅದು ಗುಜ್ಜಾಗಿ ಬೆಳೆದು ದ್ರಾಕ್ಷಾಲತೆಯಾಗಿ ತುಂಬಾ ಹರಡಿಕೊಂಡು ತನ್ನ ರೆಂಬೆಗಳನ್ನು ಆ ಹದ್ದಿನ ಕಡೆಗೆ ಚಾಚಿ ಅದರ ಕೆಳಗೆ ತನ್ನ ಬೇರುಗಳನ್ನು ಬಿಟ್ಟಿತು; ಅದು ಲತೆಯಾಗಿ ರೆಂಬೆಗಳನ್ನು ಹರಡಿಸಿ ಚಿಗುರುಗಳನ್ನು ಹೊರಡಿಸಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಆ ಬೀಜವು ಚಿಗುರಿ, ಚಿಕ್ಕ ಜಾತಿಯ ದ್ರಾಕ್ಷಾಲತೆಯಂತೆ ನೆಲದ ಮೇಲೆ ಹಬ್ಬಿಕೊಂಡು, ತನ್ನ ಕೊಂಬೆಗಳನ್ನು ಗರುಡದ ಕಡೆಗೆ ಚಾಚಿಕೊಂಡು ತನ್ನ ಬೇರುಗಳನ್ನು ಬಿಟ್ಟಿತು: ಅಂತೆಯೇ ಅದು ಲತೆಯಾಗಿ ಕೊಂಬೆಗಳನ್ನು ಬೆಳೆಸಿ, ಎಲೆಗಳನ್ನು ಹೊರಡಿಸಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಅದು ಮೊಳೆತು ತಗ್ಗಾದ ಪ್ರಮಾಣದಲ್ಲಿ ಹಬ್ಬುವ ದ್ರಾಕ್ಷಿಗಿಡವಾಯಿತು. ಅದರ ರೆಂಬೆಗಳು ಅವನ ಕಡೆಗೆ ತಿರುಗಿಕೊಂಡವು. ಅದರ ಬೇರುಗಳು ಅದರ ಕೆಳಗಿದ್ದವು. ಹೀಗೆ ಅದು ದ್ರಾಕ್ಷಿಗಿಡವಾಯಿತು. ಕೊಂಬೆಗಳು ಹುಟ್ಟಿಕೊಂಡು ಬಳ್ಳಿಗಳು ಹಬ್ಬಿದವು. ಅಧ್ಯಾಯವನ್ನು ನೋಡಿ |