ಯೆಹೆಜ್ಕೇಲನು 18:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಅಸಹ್ಯಕಾರ್ಯವನ್ನು ಮಾಡಿ, ಸಾಲಕ್ಕೆ ಬಡ್ಡಿತೆಗೆದು, ಲಾಭಕ್ಕೆ ಹಣಕೊಟ್ಟು, ಬಲಾತ್ಕಾರಿಯೂ ಮತ್ತು ರಕ್ತಸುರಿಸುವವನೂ ಆಗಿದ್ದರೆ ಜೀವಿಸುವನೇ? ಖಂಡಿತ ಜೀವಿಸುವುದಿಲ್ಲ; ಈ ದುರಾಚಾರಗಳನ್ನೆಲ್ಲಾ ನಡೆಸಿದನಲ್ಲವೇ? ಅವನು ಸಾಯುವುದು ಖಂಡಿತ; ತನ್ನ ಮರಣ ದಂಡನೆಗೆ ತಾನೇ ಕಾರಣ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಅಸಹ್ಯಕಾರ್ಯವನ್ನು ಮಾಡಿ, ಸಾಲಕ್ಕೆ ಬಡ್ಡಿ ತೆಗೆದು, ಲಾಭಕ್ಕೆ ಹಣಕೊಟ್ಟು, ಹಿಂಸಾಚಾರಿಯೂ, ರಕ್ತಸುರಿಸುವವನೂ ಆಗಿದ್ದರೆ, ಜೀವಿಸುವನೇ? ಖಂಡಿತ ಜೀವಿಸನು; ಈ ದುರಾಚಾರಗಳನ್ನೆಲ್ಲಾ ನಡೆಸಿದನಲ್ಲವೇ? ಅವನು ಸಾಯುವುದು ನಿಶ್ಚಯ; ತನ್ನ ಮರಣಕ್ಕೆ ತಾನೇ ಕಾರಣ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಸಾಲಕ್ಕೆ ಬಡ್ಡಿತೆಗೆದು ಲಾಭಕ್ಕೆ ಹಣಕೊಟ್ಟು ಬಲಾತ್ಕಾರಿಯೂ ರಕ್ತ ಸುರಿಸುವವನೂ ಆಗಿದ್ದರೆ ಬಾಳುವನೇ? ಬಾಳಲೇ ಬಾಳನು; ಈ ದುರಾಚಾರಗಳನ್ನೆಲ್ಲಾ ನಡಿಸಿದನಲ್ಲಾ; ಸತ್ತೇ ಸಾಯುವನು; ತನ್ನ ಮರಣದಂಡನೆಗೆ ತಾನೇ ಕಾರಣ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಆ ಕೆಟ್ಟ ಮಗನಿಂದ ಯಾರಾದರೂ ಸಾಲ ತೆಗೆದುಕೊಂಡಿದ್ದರೆ ಅವನು ಅವರಿಂದ ಬಡ್ಡಿಯನ್ನು ಕಡ್ಡಾಯವಾಗಿ ವಸೂಲು ಮಾಡಿದ್ದಿರಬಹುದು. ಹೀಗಿರುವದರಿಂದ ಆ ಕೆಟ್ಟ ಮಗನು ಹೆಚ್ಚುಕಾಲ ಬದುಕುವುದಿಲ್ಲ. ಅವನು ಭಯಂಕರ ಕೃತ್ಯಗಳನ್ನು ಮಾಡಿರುವದರಿಂದ ಕೊಲ್ಲಲ್ಪಡುವನು. ಅವನ ಮರಣಕ್ಕೆ ಅವನೇ ಜವಾಬ್ದಾರನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಸಾಲಕ್ಕೆ ಬಡ್ಡಿ ತೆಗೆದುಕೊಂಡು, ಲಾಭ ಪಡೆಯುವವನು ಆಗಿದ್ದರೆ, ಅವನು ಬದುಕುವನೋ? ಅವನು ಬದುಕುವುದಿಲ್ಲ, ಅವನು ಈ ಅಸಹ್ಯಗಳನ್ನೆಲ್ಲಾ ಮಾಡಿದ್ದರಿಂದ ಅವನು ಸಾಯುವುದು ನಿಶ್ಚಯ; ತನ್ನ ಮರಣಕ್ಕೆ ತಾನೇ ಕಾರಣ. ಅಧ್ಯಾಯವನ್ನು ನೋಡಿ |