Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 18:17 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಬಡವನ ಮೇಲೆ ಕೈಮಾಡದೆ, ಬಡ್ಡಿಯನ್ನು ಕೇಳದೆ, ಲಾಭಕ್ಕೆ ಹಣಕೊಡದೆ, ನನ್ನ ವಿಧಿಗಳನ್ನು ಆಚರಿಸಿ, ನನ್ನ ನಿಯಮಗಳನ್ನು ಅನುಸರಿಸಿದರೆ ತನ್ನ ತಂದೆಯ ಅಧರ್ಮದ ನಿಮಿತ್ತ ಸಾಯುವುದಿಲ್ಲ, ಖಂಡಿತವಾಗಿ ಜೀವಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಬಡವನ ಮೇಲೆ ಕೈಮಾಡದೆ, ಬಡ್ಡಿಯನ್ನು ಕೇಳದೆ, ಲಾಭಕ್ಕೆ ಹಣಕೊಡದೆ, ನನ್ನ ವಿಧಿಗಳನ್ನು ಆಚರಿಸಿ, ನನ್ನ ನಿಯಮಗಳನ್ನು ಅನುಸರಿಸಿದರೆ, ತನ್ನ ತಂದೆಯ ಅಧರ್ಮದ ನಿಮಿತ್ತ ಸಾಯನು, ಅವನು ಜೀವಿಸುವುದು ನಿಶ್ಚಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಬಡವನ ಮೇಲೆ ಕೈಮಾಡದೆ ಬಡ್ಡಿಯನ್ನು ಕೇಳದೆ ಲಾಭಕ್ಕೆ ಹಣಕೊಡದೆ ನನ್ನ ವಿಧಿಗಳನ್ನು ಆಚರಿಸಿ ನನ್ನ ನಿಯಮಗಳನ್ನು ಅನುಸರಿಸಿದರೆ ತನ್ನ ತಂದೆಯ ಅಧರ್ಮದ ನಿವಿುತ್ತ ಸಾಯನು, ಬಾಳೇ ಬಾಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಅವನು ಬಡವರಿಗೆ ನೋವು ಮಾಡುವುದಿಲ್ಲ. ಅವನು ಹಣವನ್ನು ಸಾಲಕೊಡುವಾಗ ಬಡ್ಡಿಹಾಕುವುದಿಲ್ಲ. ಅವನು ನನ್ನ ಕಟ್ಟಳೆಗಳಿಗೆ ವಿಧೇಯನಾಗುವನು. ಮತ್ತು ನನ್ನ ನಿಯಮಗಳನ್ನು ಅನುಸರಿಸುವನು. ಈ ಒಳ್ಳೆಯ ಮಗನು ತಂದೆಯ ದುಷ್ಟತನದ ಕಾರಣಕ್ಕಾಗಿ ಮರಣಶಿಕ್ಷೆಯನ್ನು ಅನುಭವಿಸುವದಿಲ್ಲ. ಆ ಒಳ್ಳೆಯ ಮಗನು ಬಾಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ತನ್ನ ಕೈಯನ್ನು ಪಾಪ ಮಾಡುವುದರಿಂದ ಹಿಂತೆಗೆದು ಬಡ್ಡಿಯನ್ನೂ, ಲಾಭವನ್ನೂ ತೆಗೆದುಕೊಳ್ಳದೆ, ನನ್ನ ವಿಧಿಗಳನ್ನು ಪಾಲಿಸಿ, ನನ್ನ ನಿಯಮಗಳಲ್ಲಿ ನಡೆದರೆ, ಅವನು ತನ್ನ ತಂದೆಯ ಅಕ್ರಮಗಳ ನಿಮಿತ್ತ ಸಾಯುವುದಿಲ್ಲ, ಅವನು ನಿಶ್ಚಯವಾಗಿ ಬದುಕುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 18:17
28 ತಿಳಿವುಗಳ ಹೋಲಿಕೆ  

“ನಿಮ್ಮ ಪೂರ್ವಿಕರ ಕಾಲದಿಂದಲೂ ನೀವು ನನ್ನ ವಿಧಿಗಳನ್ನು ಅನುಸರಿಸಿ ನಡೆಯಲ್ಲಿಲ್ಲ. ನನ್ನ ಕಡೆಗೆ ಪುನಃ ತಿರುಗಿರಿ; ತಿರುಗಿದರೆ, ನಾನು ನಿಮ್ಮ ಕಡೆಗೆ ಪುನಃ ತಿರುಗುವೆನು” ಇದು ಸೇನಾಧೀಶ್ವರನಾದ ಯೆಹೋವನ ನುಡಿ. “ಯಾವ ವಿಷಯದಲ್ಲಿ ತಿರುಗೋಣ?” ಎನ್ನುತ್ತೀರಿ.


ಆದಕಾರಣ, ಅರಸನೇ, ಈ ನನ್ನ ಬುದ್ಧಿವಾದವು ನಿನಗೆ ಒಪ್ಪಿಗೆಯಾಗಲಿ, ನೀನು ಧರ್ಮವನ್ನು ಆಚರಿಸಿ ನಿನ್ನ ಪಾಪಗಳನ್ನು ನಾಶಗೊಳಿಸು, ಬಡವರಿಗೆ ಕರುಣೆಯನ್ನು ತೋರಿಸಿ ನಿನ್ನ ಅಪರಾಧಗಳನ್ನು ಧ್ವಂಸಮಾಡು; ಇದರಿಂದ ನಿನ್ನ ನೆಮ್ಮದಿಯ ಕಾಲವು ಹೆಚ್ಚಾದೀತು” ಎಂದು ಅರಿಕೆ ಮಾಡಿದನು.


ನಾನು ನೀತಿವಂತನಿಗೆ, ‘ನೀನು ಖಂಡಿತವಾಗಿ ಬದುಕುವಿ’ ಎಂದು ಹೇಳುವಾಗ, ಅವನು ತನ್ನ ನೀತಿಯ ಮೇಲೆ ಭರವಸವಿಟ್ಟು ಪಾಪ ಮಾಡಿದರೆ, ಅವನು ಮಾಡಿದ ಯಾವ ಸುಕೃತ್ಯವೂ ಅವನ ಲೆಕ್ಕಕ್ಕೆ ಸೇರಿಸಲ್ಪಡುವುದಿಲ್ಲ; ಅವನು ಮಾಡುವ ಪಾಪದಿಂದಲೇ ಅವನು ಸಾಯುವನು.


ಇಸ್ರಾಯೇಲ್ ವಂಶದವರಿಗೆ ಹೀಗೆ ಹೇಳು, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನಿಮ್ಮ ಪೂರ್ವಿಕರಂತೆ ನಿಮ್ಮನ್ನು ನೀವೇ ಹೊಲಸು ಮಾಡಿಕೊಳ್ಳುತ್ತೀರೋ? ಅವರು ಪೂಜಿಸುತ್ತಿದ್ದ ಅಸಹ್ಯ ವಸ್ತುಗಳನ್ನು ನೀವೂ ಪೂಜಿಸಿ ದೇವದ್ರೋಹ ಮಾಡುತ್ತೀರೋ?


ಆ ಮೇಲೆ ನಾನು ಅರಣ್ಯದಲ್ಲಿ ಅವರ ಸಂತಾನದವರಿಗೆ, “ನೀವು ನಿಮ್ಮ ತಂದೆಗಳ ಆಜ್ಞೆಗಳನ್ನು ಅನುಸರಿಸದೆ, ಅವರ ವಿಧಿಗಳನ್ನು ಕೈಕೊಳ್ಳದೆ, ಅವರ ವಿಗ್ರಹಗಳಿಂದ ನಿಮ್ಮನ್ನು ಹೊಲಸು ಮಾಡಿಕೊಳ್ಳದೆ ಇರಬೇಕು.


ಅವನು ಯೋಚಿಸಿ, ತಾನು ಮಾಡುತ್ತಿದ್ದ ಅಪರಾಧಗಳನ್ನೆಲ್ಲಾ ಬಿಟ್ಟದ್ದರಿಂದ ಸಾಯುವುದಿಲ್ಲ, ಖಂಡಿತವಾಗಿ ಜೀವಿಸುವನು.


ಅಸಹ್ಯಕಾರ್ಯವನ್ನು ಮಾಡಿ, ಸಾಲಕ್ಕೆ ಬಡ್ಡಿತೆಗೆದು, ಲಾಭಕ್ಕೆ ಹಣಕೊಟ್ಟು, ಬಲಾತ್ಕಾರಿಯೂ ಮತ್ತು ರಕ್ತಸುರಿಸುವವನೂ ಆಗಿದ್ದರೆ ಜೀವಿಸುವನೇ? ಖಂಡಿತ ಜೀವಿಸುವುದಿಲ್ಲ; ಈ ದುರಾಚಾರಗಳನ್ನೆಲ್ಲಾ ನಡೆಸಿದನಲ್ಲವೇ? ಅವನು ಸಾಯುವುದು ಖಂಡಿತ; ತನ್ನ ಮರಣ ದಂಡನೆಗೆ ತಾನೇ ಕಾರಣ.


ನೀನು ನೀತಿವಂತನನ್ನು ಪಾಪ ಮಾಡದಂತೆ ಎಚ್ಚರಿಸಿದ ಮೇಲೆ ಅವನು ಪಾಪಮಾಡದೆ ಎಚ್ಚರಗೊಂಡ ಕಾರಣ ಜೀವದಿಂದ ಉಳಿಯುವನು; ನೀನೂ ನಿನ್ನ ಪ್ರಾಣವನ್ನು ಉಳಿಸಿಕೊಳ್ಳುವೆ.”


ದೀನದರಿದ್ರರ ವ್ಯಾಜ್ಯವನ್ನು ತೀರಿಸುತ್ತಿದ್ದನು; ಆಗ ಸುಖವಾಗಿತ್ತು. ನನ್ನನ್ನು ಅರಿಯುವುದೆಂದರೆ ಇದೇ ಎಂಬುದು ಯೆಹೋವನ ನುಡಿ.


ಯೆಹೋವನೇ, ನನ್ನ ಬಲವೇ, ಬಲವಾದ ನನ್ನ ದುರ್ಗವೇ, ಇಕ್ಕಟ್ಟಿನ ದಿನದಲ್ಲಿ ನನ್ನ ಆಶ್ರಯವೇ, ಲೋಕದ ಕಟ್ಟಕಡೆಯಿಂದ ಜನಾಂಗಗಳು ನಿನ್ನ ಬಳಿಗೆ ಸೇರಿ, “ನಮ್ಮ ಪೂರ್ವಿಕರು ಶುದ್ಧ ಸುಳ್ಳನ್ನು, ಮಾಯವನ್ನು, ಪ್ರಯೋಜನವಿಲ್ಲದವುಗಳನ್ನು ಪಾರಂಪರ್ಯವಾಗಿ ಹೊಂದಿದ್ದಾರೆ” ಎಂದು ಅರಿಕೆ ಮಾಡುವರು.


ಬಡವರನ್ನು ನ್ಯಾಯವಾಗಿ ಆಳ್ವಿಕೆ ಮಾಡುವ ರಾಜನ ಸಿಂಹಾಸನವು ಶಾಶ್ವತವು.


ಶಿಷ್ಟನು ಬಡವರ ನ್ಯಾಯವನ್ನು ತಿಳಿದಿರುವನು, ದುಷ್ಟನಿಗೆ ಅದನ್ನು ಗ್ರಹಿಸುವಷ್ಟು ವಿವೇಕವಿಲ್ಲ.


ಬಡವರನ್ನು ಹಿಂಸಿಸುವವನು ಸೃಷ್ಟಿಕರ್ತನನ್ನು ಹೀನೈಸುವನು, ಗತಿಯಿಲ್ಲದವರನ್ನು ಕರುಣಿಸುವವನು ಆತನನ್ನು ಘನಪಡಿಸುವನು.


ದರಿದ್ರರಿಗೆ ತಂದೆಯಾಗಿ, ಪರಿಚಯವಿಲ್ಲದವನ ವ್ಯಾಜ್ಯವನ್ನೂ ವಿಚಾರಿಸುತ್ತಿದ್ದೆನು.


ಆದುದರಿಂದ ನಿಮಗಿಂತ ಮುಂಚೆ ನಡೆಯುತ್ತಿದ್ದ ಅಸಹ್ಯವಾದ ಆಚರಣೆಗಳನ್ನು ನಡೆಸಿ ನಿಮ್ಮನ್ನು ಅಶುದ್ಧಮಾಡಿಕೊಳ್ಳದೆ ನನ್ನ ನಿಯಮಗಳನ್ನೇ ಅನುಸರಿಸಿ ನಡೆಯಬೇಕು; ನಾನು ನಿಮ್ಮ ದೇವರಾದ ಯೆಹೋವನು’” ಎಂದು ಹೇಳಿದನು.


ಆದುದರಿಂದ ಸ್ವದೇಶದವರಾದ ನಿಮ್ಮಲ್ಲಿಯೂ ಮತ್ತು ನಿಮ್ಮ ನಡುವೆ ವಾಸವಾಗಿರುವ ಅನ್ಯದೇಶದವರಲ್ಲಿಯೂ ಯಾರೂ ಈ ಅಸಹ್ಯವಾದ ಕಾರ್ಯಗಳಲ್ಲಿ ಒಂದನ್ನಾದರೂ ನಡೆಸದೆ ಎಲ್ಲರೂ ನನ್ನ ಆಜ್ಞಾವಿಧಿಗಳನ್ನು ಅನುಸರಿಸಿ ನಡೆಯಬೇಕು.


ಯೆಹೋವನೆಂಬ ನಾನೇ ನಿಮ್ಮ ದೇವರಾಗಿರುವುದರಿಂದ ನನ್ನ ನಿರ್ಣಯಗಳ ಪ್ರಕಾರವೇ ನೀವು ನಡೆಯಬೇಕು, ನನ್ನ ನಿಯಮಗಳನ್ನು ಅನುಸರಿಸಬೇಕು.


ಆದರೆ ಜಕ್ಕಾಯನು ನಿಂತುಕೊಂಡು “ಕರ್ತನಿಗೆ, ಕರ್ತನೇ, ನೋಡು, ನನ್ನ ಆಸ್ತಿಯಲ್ಲಿ ಅರ್ಧವನ್ನು ಬಡವರಿಗೆ ಕೊಡುತ್ತೇನೆ ಮತ್ತು ನಾನು ಅನ್ಯಾಯವಾಗಿ ಯಾರಿಂದ ಏನಾದರೂ ಕಿತ್ತುಕೊಂಡಿದ್ದೇಯಾದರೆ ನಾಲ್ಕರಷ್ಟು ಹಿಂದಕ್ಕೆ ಕೊಡುತ್ತೇನೆ” ಎಂದು ಹೇಳಿದನು.


ಯಾರು ಪ್ರಶಂಸೆ, ಗೌರವ, ಮತ್ತು ಭ್ರಷ್ಟರಹಿತ ಜೀವನ ಹೊಂದಬೇಕೆಂದು ಒಳ್ಳೆಯದನ್ನು ಬೇಸರಗೊಳ್ಳದೆ ಮಾಡುತ್ತಾರೋ, ಅವರಿಗೆ ನಿತ್ಯಜೀವವನ್ನು ಕೊಡುವನು.


ಯೆಹೋವನ ಧರ್ಮಶಾಸ್ತ್ರವನ್ನು ಅನುಸರಿಸಿ, ಸದಾಚಾರಿಗಳಾಗಿ ನಡೆಯುವವರು ಧನ್ಯರು.


ಇವನ ತಂದೆಯೋ, ಸ್ವಕುಲದವರನ್ನು ಬಹಳವಾಗಿ ಅರೆದು, ಸುಲಿದು, ಸ್ವಜನರ ನಡುವೆ ಕೆಟ್ಟದನ್ನು ನಡೆಸಿದ ಕಾರಣ, ಇಗೋ, ತನ್ನ ಅಧರ್ಮದಿಂದಲೇ ಸಾಯುವನು.


ಅವರು ಆತನ ಮಾರ್ಗದಲ್ಲಿ ನಡೆಯುತ್ತಾರೆ, ಅನ್ಯಾಯ ಮಾಡುವುದೇ ಇಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು