Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 18:18 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಇವನ ತಂದೆಯೋ, ಸ್ವಕುಲದವರನ್ನು ಬಹಳವಾಗಿ ಅರೆದು, ಸುಲಿದು, ಸ್ವಜನರ ನಡುವೆ ಕೆಟ್ಟದನ್ನು ನಡೆಸಿದ ಕಾರಣ, ಇಗೋ, ತನ್ನ ಅಧರ್ಮದಿಂದಲೇ ಸಾಯುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಇವನ ತಂದೆಯಾದರೊ ಸ್ವಕುಲದವರನ್ನು ಬಹಳವಾಗಿ ಅರೆದು, ಸುಲಿದು, ಸ್ವಜನರ ನಡುವೆ ಕೆಟ್ಟದ್ದನ್ನು ನಡೆಸಿದ ಕಾರಣ, ಇಗೋ, ತನ್ನ ಅಧರ್ಮದಿಂದಲೇ ಸಾಯುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಇವನ ತಂದೆಯೋ ಸ್ವಕುಲದವರನ್ನು ಬಹಳವಾಗಿ ಅರೆದು ಸುಲಿದು ಸ್ವಜನರ ನಡುವೆ ಕೆಟ್ಟದನ್ನು ನಡಿಸಿದ ಕಾರಣ ಇಗೋ, ತನ್ನ ಅಧರ್ಮದಿಂದಲೇ ಸಾಯುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ತಂದೆಯು ಜನರನ್ನು ಹೆದರಿಸಿಯಾಗಲಿ ದರೋಡೆ ಮಾಡಿಯಾಗಲಿ ವಸ್ತುಗಳನ್ನು ತೆಗೆದುಕೊಂಡಿರಬಹುದು. ತನ್ನ ಜನರ ಮಧ್ಯದಲ್ಲಿ ಕೆಟ್ಟದಾಗಿರುವುದನ್ನು ಅವನು ಮಾಡಿರಬಹುದು. ಆ ತಂದೆಯು ತನ್ನ ಪಾಪಗಳ ಸಲುವಾಗಿ ಸಾಯುವನು. ಆದರೆ ತಂದೆಯ ಪಾಪಗಳಿಗಾಗಿ ಮಗನು ಶಿಕ್ಷಿಸಲ್ಪಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಇವನ ತಂದೆಯಾದರೊ ಸ್ವಜನರನ್ನು ಬಲಾತ್ಕಾರ ಮಾಡಿದ್ದರಿಂದಲೂ, ತನ್ನ ಸಹೋದರನನ್ನು ಹಿಂಸಿಸಿ ಸುಲಿಗೆ ಮಾಡಿದ್ದರಿಂದಲೂ, ತನ್ನ ಜನರ ಮಧ್ಯದಲ್ಲಿ ಕೆಟ್ಟದ್ದನ್ನು ಮಾಡಿದ್ದರಿಂದಲೂ ಅವನು ತನ್ನ ಅಕ್ರಮದಲ್ಲಿ ಸಾಯುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 18:18
11 ತಿಳಿವುಗಳ ಹೋಲಿಕೆ  

ನಾನು ದುಷ್ಟನಿಗೆ, ‘ನೀನು ಖಂಡಿತವಾಗಿ ಸಾಯುವೆ’ ಎಂದು ನುಡಿಯುವಾಗ ನೀನು ಅವನನ್ನು ಎಚ್ಚರಿಸದೆಯೂ, ಅವನು ತನ್ನ ಕೆಟ್ಟಮಾರ್ಗವನ್ನು ಬಿಟ್ಟು ತನ್ನ ಪ್ರಾಣವನ್ನು ಉಳಿಸಿಕೊಳ್ಳುವಂತೆ ಅವನಿಗೆ ಬುದ್ಧಿಹೇಳದೆಯೂ ಇದ್ದರೆ ಆ ದುಷ್ಟನು ತನ್ನ ಅಪರಾಧದಿಂದ ಸಾಯಬೇಕಾಗುವುದು; ಅವನ ಮರಣಕ್ಕೆ ನೀನು ಹೊಣೆಯಾಗುವೆ.


ಆದುದರಿಂದ ನೀವು ನಿಮ್ಮ ಪಾಪಗಳಲ್ಲಿಯೇ ಸಾಯುವಿರೆಂದು ನಿಮಗೆ ನಾನು ಹೇಳಿದೆನು. ನೀವು ನನ್ನನ್ನು ಯಾರೆಂದು ನಂಬದೆ ಹೋದರೆ ನಿಮ್ಮ ಪಾಪಗಳಲ್ಲಿಯೇ ಸಾಯುವಿರಿ” ಎಂದು ಹೇಳಿದನು.


ಯೇಸು ತಿರುಗಿ ಅವರಿಗೆ, “ನಾನು ಹೋಗುತ್ತೇನೆ, ನೀವು ನನ್ನನ್ನು ಹುಡುಕುವಿರಿ ಮತ್ತು ನೀವು ನಿಮ್ಮ ಪಾಪದಲ್ಲೇ ಸಾಯುವಿರಿ. ನಾನು ಹೋಗುವಲ್ಲಿಗೆ ನೀವು ಬರಲಾರಿರಿ” ಎಂದನು.


ಶಿಷ್ಟನು ತನ್ನ ಶಿಷ್ಟತನವನ್ನು ಬಿಟ್ಟು, ಅಧರ್ಮಮಾಡಿ, ಅದರಲ್ಲಿ ಸತ್ತರೆ ತಾನು ಮಾಡಿದ ಅಧರ್ಮದಿಂದಲೇ ಸಾಯಬೇಕಾಯಿತು.


ಆದರೆ ಶಿಷ್ಟನು ತನ್ನ ಶಿಷ್ಟತನವನ್ನು ಬಿಟ್ಟು, ಅಧರ್ಮಮಾಡಿ, ದುಷ್ಟನು ನಡೆಸುವ ದುರಾಚಾರಗಳನ್ನೆಲ್ಲಾ ನಡೆಸಿದರೆ ಅವನು ಜೀವಿಸುವನೋ? ಅವನು ಮಾಡಿದ ಯಾವ ಸುಕೃತ್ಯವು ಅವನ ಲೆಕ್ಕಕ್ಕೆ ಸೇರಿಸಲ್ಪಡುವುದಿಲ್ಲ, ಅವನು ಮಾಡುತ್ತಿರುವ ಪಾಪ ಅಪರಾಧಗಳಿಂದಲೇ ಸಾಯುವನು.


ಪಾಪ ಮಾಡುವವನೇ ಸಾಯುವನು; ಮಗನು ತಂದೆಯ ದೋಷಫಲವನ್ನು ಅನುಭವಿಸನು; ಶಿಷ್ಟನ ಶಿಷ್ಟತನದ ಫಲವು ಶಿಷ್ಟನದೇ, ದುಷ್ಟನ ದುಷ್ಟತನದ ಫಲವು ದುಷ್ಟನದೇ.


ಇಗೋ, ಸಕಲ ನರಪ್ರಾಣಿಗಳು ನನ್ನವೇ; ತಂದೆಯೇನು, ಮಗನೇನು, ನರಪ್ರಾಣಿಗಳೆಲ್ಲವೂ ನನ್ನ ಅಧೀನದಲ್ಲಿವೆ; ಪಾಪಮಾಡುವ ಪ್ರಾಣಿಯೇ ಸಾಯುವನು.


ದುಷ್ಟರ ಗತಿಯನ್ನು ಏನು ಹೇಳಲಿ! ಅವರ ಕಾರ್ಯಗಳಿಗೆ ತಕ್ಕ ಪ್ರತಿಫಲವು ಅವರಿಗೆ ದೊರಕುವುದು.


ಸಂಸ್ಥಾನದಲ್ಲಿ ಬಡವರ ಹಿಂಸೆಯನ್ನೂ, ನೀತಿನ್ಯಾಯಗಳ ನಾಶನವನ್ನೂ ನೀನು ನೋಡಿದರೆ ಆಶ್ಚರ್ಯಪಡಬೇಡ. ಏಕೆಂದರೆ ಒಬ್ಬ ಅಧಿಕಾರಿಯ ಮೇಲೆ ಇನ್ನೊಬ್ಬನಿದ್ದಾನೆ. ಅವರಿಬ್ಬರ ಮೇಲೆ ಹೆಚ್ಚಿನ ಅಧಿಕಾರವುಳ್ಳವನಿದ್ದಾನೆ.


ಬಡವನ ಮೇಲೆ ಕೈಮಾಡದೆ, ಬಡ್ಡಿಯನ್ನು ಕೇಳದೆ, ಲಾಭಕ್ಕೆ ಹಣಕೊಡದೆ, ನನ್ನ ವಿಧಿಗಳನ್ನು ಆಚರಿಸಿ, ನನ್ನ ನಿಯಮಗಳನ್ನು ಅನುಸರಿಸಿದರೆ ತನ್ನ ತಂದೆಯ ಅಧರ್ಮದ ನಿಮಿತ್ತ ಸಾಯುವುದಿಲ್ಲ, ಖಂಡಿತವಾಗಿ ಜೀವಿಸುವನು.


“ಆದರೆ ನೀವು, ‘ತಂದೆಯ ದೋಷಫಲವನ್ನು ಮಗನು ಅನುಭವಿಸುವುದು ಖಂಡಿತ’ ಎಂದು ಆಕ್ಷೇಪಿಸುವಿರೋ? ಮಗನು ನೀತಿನ್ಯಾಯಗಳನ್ನು ನಡೆಸಿ, ನನ್ನ ವಿಧಿಗಳನ್ನೆಲ್ಲಾ ಕೈಕೊಂಡು ಆಚರಿಸಿದರೆ ಖಂಡಿತವಾಗಿ ಜೀವಿಸುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು