Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 18:19 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 “ಆದರೆ ನೀವು, ‘ತಂದೆಯ ದೋಷಫಲವನ್ನು ಮಗನು ಅನುಭವಿಸುವುದು ಖಂಡಿತ’ ಎಂದು ಆಕ್ಷೇಪಿಸುವಿರೋ? ಮಗನು ನೀತಿನ್ಯಾಯಗಳನ್ನು ನಡೆಸಿ, ನನ್ನ ವಿಧಿಗಳನ್ನೆಲ್ಲಾ ಕೈಕೊಂಡು ಆಚರಿಸಿದರೆ ಖಂಡಿತವಾಗಿ ಜೀವಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 “ಆದರೆ ನೀವು, - ‘ತಂದೆಯ ದೋಷಫಲವನ್ನು ಮಗನು ಹೇಗೆ ಅನುಭವಿಸುವುದಿಲ್ಲ?’ ಎಂದು ಆಕ್ಷೇಪಿಸುವಿರೋ? ಮಗನು ನೀತಿನ್ಯಾಯಗಳನ್ನು ನಡೆಸಿ ನನ್ನ ವಿಧಿಗಳನ್ನೆಲ್ಲಾ ಕೈಗೊಂಡು ಆಚರಿಸಿದರೆ ಖಂಡಿತ ಜೀವಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಆದರೆ ನೀವು - ತಂದೆಯ ದೋಷಫಲವನ್ನು ಮಗನು ಹೇಗೆ ಅನುಭವಿಸುವದಿಲ್ಲ ಎಂದು ಆಕ್ಷೇಪಿಸುವಿರೋ? ಮಗನು ನೀತಿನ್ಯಾಯಗಳನ್ನು ನಡಿಸಿ ನನ್ನ ವಿಧಿಗಳನ್ನೆಲ್ಲಾ ಕೈಕೊಂಡು ಆಚರಿಸಿದರೆ ಬಾಳೇ ಬಾಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 “‘ತಂದೆಯ ಪಾಪಗಳಿಗಿರುವ ಪ್ರತಿಫಲಗಳಲ್ಲಿ ಯಾವುದನ್ನೂ ಮಗನು ಹೊತ್ತುಕೊಳ್ಳದಿರುವದೇಕೆ?’ ಎಂದು ನೀವು ಕೇಳಬಹುದು. ಮಗನು ನ್ಯಾಯವಾದುದ್ದನ್ನು ಮತ್ತು ಸರಿಯಾದುದ್ದನ್ನು ಮಾಡಿದ್ದಾನೆ. ಅವನು ಎಚ್ಚರಿಕೆಯಿಂದ ನನ್ನ ಎಲ್ಲಾ ನಿಯಮಗಳಿಗೆ ವಿಧೇಯನಾಗಿದ್ದನು. ಆದ್ದರಿಂದ ಅವನು ಬಾಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 “ಆದರೂ ಇನ್ನೂ ನೀವು ಹೇಳುವುದೇನು? ‘ಮಗನು ತಂದೆಯ ಅಕ್ರಮವನ್ನು ಹೊರುವುದಿಲ್ಲವೇ?’ ಎಂದು ಹೇಳುವಿರಿ. ಮಗನು ನ್ಯಾಯವನ್ನೂ, ನೀತಿಯನ್ನೂ ಮಾಡಿ, ನನ್ನ ನಿಯಮಗಳನ್ನೆಲ್ಲಾ ಕೈಗೊಂಡು ನಡೆದರೆ ಅವನು ನಿಶ್ಚಯವಾಗಿ ಬದುಕುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 18:19
14 ತಿಳಿವುಗಳ ಹೋಲಿಕೆ  

ಅವುಗಳಿಗೆ ಅಡ್ಡ ಬೀಳಬಾರದು, ಪೂಜೆ ಮಾಡಬಾರದು. ನಿನ್ನ ದೇವರಾದ ಯೆಹೋವನೆಂಬ ನಾನು ನನಗೆ ಸಲ್ಲತಕ್ಕ ಗೌರವವನ್ನು ಮತ್ತೊಬ್ಬನಿಗೆ ಬಿಟ್ಟುಕೊಡುವುದಿಲ್ಲ. ಆದುದರಿಂದ ನನ್ನನ್ನು ದ್ವೇಷಿಸುವವರ ವಿಷಯದಲ್ಲಿ ತಂದೆಗಳ ದೋಷಫಲವನ್ನು ಮಕ್ಕಳ ಮೇಲೆ, ಮೂರು ನಾಲ್ಕು ತಲೆಗಳವರೆಗೆ ಬರಮಾಡುವೆನು.


“ಹಿಜ್ಕೀಯನ ಮಗನೂ ಯೆಹೂದದ ಅರಸನೂ ಆದ ಮನಸ್ಸೆಯು ಯೆರೂಸಲೇಮಿನಲ್ಲಿ ನಡೆಸಿದ್ದಕ್ಕೆ ಪ್ರತಿಯಾಗಿ, ನಾನು ಅವರನ್ನು ಲೋಕದ ಸಮಸ್ತ ರಾಜ್ಯಗಳಿಗೆ ಭಯಾಸ್ಪದವಾಗುವಂತೆ ಮಾಡುವೆನು.


ನನ್ನ ನಿಯಮಗಳನ್ನು ಅನುಸರಿಸಿ, ನನ್ನ ವಿಧಿಗಳನ್ನು ಕೈಕೊಂಡು, ಸತ್ಯಪರನಾಗಿಯೇ ನಡೆದರೆ ಇಂಥವನು ಸದ್ಧರ್ಮಿಯಾಗಿರುವುದರಿಂದ ಖಂಡಿತವಾಗಿ ಜೀವಿಸುವನು” ಇದು ಕರ್ತನಾದ ಯೆಹೋವನ ನುಡಿ.


“ತಂದೆಗಳು ಹುಳಿ ದ್ರಾಕ್ಷಿಯನ್ನು ತಿಂದರು ಆದರೆ, ಮಕ್ಕಳ ಹಲ್ಲುಗಳು ಚಳಿತುಹೋಗಿವೆ ಎಂಬ ಗಾದೆಯನ್ನು ನೀವು ಇಸ್ರಾಯೇಲ್ ದೇಶದ ವಿಷಯವಾಗಿ ಹೇಳುವುದೇಕೆ?”


ಅವುಗಳಿಗೆ ಅಡ್ಡಬೀಳಲೂ ಬಾರದು, ಪೂಜೆಮಾಡಲೂ ಬಾರದು. ನಿನ್ನ ದೇವರಾದ ಯೆಹೋವನೆಂಬ ನಾನು ನನಗೆ ಸಲ್ಲತಕ್ಕ ಗೌರವವನ್ನು ಮತ್ತೊಬ್ಬನಿಗೆ ಸಲ್ಲಗೊಡಿಸದವನಾದ್ದರಿಂದ, ನನ್ನನ್ನು ದ್ವೇಷಿಸುವವರ ವಿಷಯದಲ್ಲಿ ಪೂರ್ವಿಕರ ದೋಷಫಲವನ್ನು ಮಕ್ಕಳ ಮೇಲೆ ಮೂರು ನಾಲ್ಕು ತಲೆಗಳ ವರೆಗೆ ಬರಮಾಡುವವನಾಗಿದ್ದೇನೆ.


ಇಸ್ರಾಯೇಲ್ ವಂಶದವರಿಗೆ ಹೀಗೆ ಹೇಳು, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನಿಮ್ಮ ಪೂರ್ವಿಕರಂತೆ ನಿಮ್ಮನ್ನು ನೀವೇ ಹೊಲಸು ಮಾಡಿಕೊಳ್ಳುತ್ತೀರೋ? ಅವರು ಪೂಜಿಸುತ್ತಿದ್ದ ಅಸಹ್ಯ ವಸ್ತುಗಳನ್ನು ನೀವೂ ಪೂಜಿಸಿ ದೇವದ್ರೋಹ ಮಾಡುತ್ತೀರೋ?


ಏಕೆಂದರೆ ನನ್ನ ಜನರು ನನ್ನ ಆಜ್ಞೆಗಳನ್ನು ಕೈಕೊಳ್ಳದೆ, ನನ್ನ ವಿಧಿಗಳನ್ನು ನಿರಾಕರಿಸಿ ನಾನು ನೇಮಿಸಿದ ಸಬ್ಬತ್ ದಿನಗಳನ್ನು ಹೊಲೆಮಾಡಿ, ತಮ್ಮ ಪೂರ್ವಿಕರ ವಿಗ್ರಹಗಳ ಮೇಲೆ ಕಣ್ಣುಹಾಕಿದ್ದರಿಂದ, ನಾನು ನಿಮ್ಮನ್ನು ಜನಾಂಗಗಳಲ್ಲಿ ಚದರಿಸಿ, ದೇಶ ದೇಶಗಳಿಗೆ ಚೆಲ್ಲಾಪಿಲ್ಲಿಯಾಗಿಸುವೆನು.” ಎಂದು ಅರಣ್ಯದಲ್ಲಿ ಅವರಿಗೆ ಪ್ರಮಾಣಮಾಡಿದೆನು.


ನಮ್ಮ ಪೂರ್ವಿಕರು ಪಾಪಮಾಡಿ ಇಲ್ಲದೆ ಹೋದರು; ಅವರ ದೋಷಫಲವನ್ನು ನಾವು ಅನುಭವಿಸಬೇಕಾಯಿತು.


ಆದರೂ ಮನಸ್ಸೆಯ ದುಷ್ಕೃತ್ಯಗಳ ದೆಸೆಯಿಂದ ಯೆಹೂದ್ಯರ ಮೇಲಿದ್ದ ಯೆಹೋವನ ಉಗ್ರಕೋಪವು ಇಳಿಯಲಿಲ್ಲ.


ಇವನ ತಂದೆಯೋ, ಸ್ವಕುಲದವರನ್ನು ಬಹಳವಾಗಿ ಅರೆದು, ಸುಲಿದು, ಸ್ವಜನರ ನಡುವೆ ಕೆಟ್ಟದನ್ನು ನಡೆಸಿದ ಕಾರಣ, ಇಗೋ, ತನ್ನ ಅಧರ್ಮದಿಂದಲೇ ಸಾಯುವನು.


“ನರಪುತ್ರನೇ, ಇಸ್ರಾಯೇಲ್ ವಂಶದವರಿಗೆ ಹೀಗೆ ನುಡಿ, ‘ಅಯ್ಯೋ, ನಮ್ಮ ದ್ರೋಹಗಳ ಮತ್ತು ಪಾಪಗಳ ಭಾರವು ನಮ್ಮ ಮೇಲೆ ಬಿದ್ದಿದೆ; ಅವುಗಳಿಂದ ಕ್ಷೀಣವಾಗಿ ಹೋಗುತ್ತಿದ್ದೇವೆ; ನಾವು ಹೇಗೆ ಬದುಕುವೆವು? ಅಂದುಕೊಳ್ಳುತ್ತೀರಲ್ಲಾ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು