Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 18:23 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ದುಷ್ಟನ ಸಾವಿನಲ್ಲಿ ನನಗೆ ಸ್ವಲ್ಪವಾದರೂ ಸಂತೋಷವಿಲ್ಲ. ಅವನು ತನ್ನ ದುರ್ಮಾರ್ಗವನ್ನು ಬಿಟ್ಟು ಬಾಳುವುದೇ ನನಗೆ ಸಂತೋಷ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ದುಷ್ಟನ ಸಾವಿನಲ್ಲಿ ನನಗೆ ಲವಲೇಶವಾದರೂ ಸಂತೋಷವಿಲ್ಲ. ಅವನು ತನ್ನ ದುರ್ಮಾರ್ಗವನ್ನು ಬಿಟ್ಟು ಬಾಳುವುದೇ ನನಗೆ ಸಂತೋಷ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ದುಷ್ಟನ ಸಾವಿನಲ್ಲಿ ನನಗೆ ಲೇಶವಾದರೂ ಸಂತೋಷವುಂಟೋ? ಅವನು ತನ್ನ ದುರ್ಮಾರ್ಗವನ್ನು ಬಿಟ್ಟು ಬಾಳುವದೇ ನನಗೆ ಸಂತೋಷ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ನನ್ನ ಒಡೆಯನಾದ ಯೆಹೋವನು ಹೇಳುವುದೇನೆಂದರೆ, “ನನಗೆ ಪಾಪಿಗಳು ಸಾಯುವದರಲ್ಲಿ ಇಷ್ಟವಿಲ್ಲ. ಅವರು ತಮ್ಮ ಜೀವಿತವನ್ನು ಬದಲಾಯಿಸಿ ಜೀವವನ್ನು ಹೊಂದಬೇಕೆಂಬುದೇ ನನ್ನ ಅಪೇಕ್ಷೆಯಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ದುಷ್ಟನು ಸಾಯುವುದರಲ್ಲಿ ನನಗೆ ಸ್ವಲ್ಪ ಸಂತೋಷವಿರುವುದೋ?” ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾನೆ. “ಅವನು ತನ್ನ ದುರ್ಮಾರ್ಗಗಳನ್ನು ಬಿಟ್ಟು ಬದುಕಿದರೆ ನನಗೆ ಸಂತೋಷವಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 18:23
18 ತಿಳಿವುಗಳ ಹೋಲಿಕೆ  

ನನ್ನ ಜೀವದಾಣೆ, ದುಷ್ಟನ ಸಾವಿನಲ್ಲಿ ನನಗೆ ಸ್ವಲ್ಪವೂ ಸಂತೋಷವಿಲ್ಲ; ಅವನು ತನ್ನ ದುರ್ಮಾರ್ಗವನ್ನು ಬಿಟ್ಟುಬಿಡಲಿ; ಇಸ್ರಾಯೇಲಿನ ಮನೆತನದವರೇ ನೀವು ಏಕೆ ಸಾಯಬೇಕು?’” ಇದು ಕರ್ತನಾದ ಯೆಹೋವನ ನುಡಿ.


ಎಲ್ಲಾ ಜನರೂ ರಕ್ಷಣೆಯನ್ನು ಹೊಂದಿ ಸತ್ಯದ ಜ್ಞಾನಕ್ಕೆ ಸೇರಬೇಕೆಂಬುದೇ ಆತನ ಚಿತ್ತವಾಗಿದೆ.


ಕರ್ತನು ತನ್ನ ವಾಗ್ದಾನಗಳನ್ನು ನೆರವೇರಿಸುವುದಕ್ಕೆ ತಡಮಾಡುತ್ತಾನೆಂಬುದಾಗಿ ಕೆಲವರು ತಿಳಿದುಕೊಂಡಿರುವ ಪ್ರಕಾರ ಆತನು ತಡಮಾಡುವವನಲ್ಲ. ಯಾರೊಬ್ಬನೂ ನಾಶವಾಗುವುದರಲ್ಲಿ ಆತನು ಇಷ್ಟಪಡದೆ ಎಲ್ಲರೂ ಪಶ್ಚಾತ್ತಾಪ ಪಡಬೇಕೆಂದು ಅಪೇಕ್ಷಿಸುವವನಾಗಿದ್ದು ನಿಮ್ಮ ವಿಷಯದಲ್ಲಿ ದೀರ್ಘಶಾಂತಿಯುಳ್ಳವನಾಗಿದ್ದಾನೆ.


ಯಾರ ಸಾವಿನಲ್ಲೂ ನನಗೆ ಸಂತೋಷವಿಲ್ಲ; ಪಾಪದಿಂದ ತಿರುಗಿಕೊಂಡು ಜೀವಿಸಿರಿ” ಇದು ಕರ್ತನಾದ ಯೆಹೋವನ ನುಡಿ.


ಆದರೆ ಉಲ್ಲಾಸಪಡುವುದೂ ಸಂತೋಷಗೊಳ್ಳುವುದೂ ನ್ಯಾಯವಾದದ್ದೇ, ಏಕೆಂದರೆ ಈ ನಿನ್ನ ತಮ್ಮ ಸತ್ತವನಾಗಿದ್ದನು, ತಿರುಗಿ ಬದುಕಿ ಬಂದಿದ್ದಾನೆ; ಪೋಲಿಹೋಗಿದ್ದನು, ಸಿಕ್ಕಿದನು’” ಎಂದು ಹೇಳಿದನು.


ಅದರಂತೆ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳುವ ಒಬ್ಬ ಪಾಪಿಯ ವಿಷಯದಲ್ಲಿ ದೇವದೂತರ ಮುಂದೆ ಸಂತೋಷವಾಗುವುದೆಂದು ನಿಮಗೆ ಹೇಳುತ್ತೇನೆ” ಅಂದನು.


ಯೆಹೋವನು ಆನಂದಿಸುವುದು ತನ್ನ ಕೃಪೆಯನ್ನು ನಿರೀಕ್ಷಿಸುವ ಭಕ್ತರಲ್ಲೇ.


ನಿನಗೆ ಯಾವ ದೇವರು ಸಮಾನ? ನೀನು ನಿನ್ನ ಸ್ವತ್ತಿನವರಲ್ಲಿ ಉಳಿದಿರುವ ಅಪರಾಧವನ್ನು ಕ್ಷಮಿಸುವವನೂ, ಅವರ ದ್ರೋಹವನ್ನು ಲಕ್ಷಿಸದವನೂ ಆಗಿದ್ದೀ. ಹೌದು ನಮ್ಮ ದೇವರು ನಿತ್ಯವೂ ಕೋಪಿಸುವವನಲ್ಲ. ಕರುಣೆಯೇ ಆತನಿಗೆ ಇಷ್ಟ.


ಎಫ್ರಾಯೀಮೇ, ನಾನು ನಿನ್ನನ್ನು ಹೇಗೆ ತ್ಯಜಿಸಲಿ! ಇಸ್ರಾಯೇಲೇ, ಹೇಗೆ ನಿನ್ನನ್ನು ಕೈಬಿಡಲಿ! ಅಯ್ಯೋ, ನಿನ್ನನ್ನು ಅದ್ಮಾದ ಗತಿಗೆ ಹೇಗೆ ತರಲಿ! ಚೆಬೋಯಿಮಿನಂತೆ ಹೇಗೆ ನಾಶಮಾಡಲಿ! ನನ್ನ ಮನಸ್ಸು ನನ್ನೊಳಗೆ ತಿರುಗಿತು, ಕರುಳು ತೀರಾ ಮರುಗಿತು.


ಏಕೆಂದರೆ ಕರುಣೆ ತೋರಿಸದೆ ಇರುವವನಿಗೆ ನ್ಯಾಯತೀರ್ಪಿನಲ್ಲಿ ಕರುಣೆಯು ತೋರಿಸಲ್ಪಡುವುದಿಲ್ಲ. ಕರುಣೆಯು ನ್ಯಾಯತೀರ್ಪಿನ ಮೇಲೆ ಜಯ ಹೊಂದುತ್ತದೆ.


ನರಜನ್ಮದವರನ್ನು ಬಾಧಿಸಿ, ವ್ಯಥೆಗೊಳಿಸುವುದು ಆತನಿಗೆ ಇಷ್ಟವಿಲ್ಲ.


ಯೆಹೋವನು ಇಂತೆನ್ನುತ್ತಾನೆ, “ಎಫ್ರಾಯೀಮು ನನಗೆ ಪ್ರಿಯಪುತ್ರ, ಮುದ್ದುಮಗುವಲ್ಲವೇ? ಅವನ ಹೆಸರೆತ್ತಿದಾಗೆಲ್ಲಾ ಅವನನ್ನು ಜ್ಞಾಪಿಸಿಕೊಳ್ಳುತ್ತಲೇ ಬರುತ್ತೇನೆ; ಇದರಿಂದ ನನ್ನ ಕರುಳು ಅವನಿಗಾಗಿ ಮರುಗುತ್ತದಲ್ಲಾ, ಅವನನ್ನು ಕರುಣಿಸುವೆನು.


ಇಂಥ ಸರ್ವಶಕ್ತನಾದ ದೇವರನ್ನು ನಾವು ಕಂಡುಹಿಡಿಯಲಾರೆವು; ಆತನ ಪರಾಕ್ರಮವು ಬಹಳ; ಆತನು ನ್ಯಾಯವನ್ನಾಗಲಿ, ಪರಿಪೂರ್ಣ ಧರ್ಮವನ್ನಾಗಲಿ ಕುಂದಿಸುವುದಿಲ್ಲ.


ನಾವು ಸಾಯುವವರು. ನೆಲದ ಮೇಲೆ ಚೆಲ್ಲಿದ ನೀರು ಪುನಃ ತೆಗೆದುಕೊಳ್ಳಲು ಆಗದಂತೆ ಇರುವ ನೀರಿನಂತೆ ನಾವು. ಮನುಷ್ಯರ ಪ್ರಾಣವನ್ನು ತೆಗೆಯುವುದಕ್ಕೆ ದೇವರಿಗೆ ಇಷ್ಟವಿಲ್ಲ. ತಳ್ಳಲ್ಪಟ್ಟವನು ತಿರುಗಿ ತನ್ನ ಬಳಿಗೆ ಬರುವ ಹಾಗೆ ಆತನು ಸದುಪಾಯಗಳನ್ನು ಕಲ್ಪಿಸುವವನಾಗಿರುತ್ತಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು