Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 18:25 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 “ಆದರೆ ನೀವು, ‘ಕರ್ತನ ಕ್ರಮವು ಸರಿಯಲ್ಲ’ ಎಂದು ಹೇಳುತ್ತಿದ್ದೀರಿ; ಇಸ್ರಾಯೇಲ್ ವಂಶದವರೇ, ನನ್ನ ಕ್ರಮವು ಸರಿಯಲ್ಲವೋ? ನಿಮ್ಮ ಕ್ರಮವೇ ಸರಿಯಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 “ಆದರೆ ನೀವು, ‘ಸರ್ವೇಶ್ವರನ ಕ್ರಮ ಸರಿಯಲ್ಲ’ ಎಂದು ಹೇಳುತ್ತಿದ್ದೀರಿ; ಇಸ್ರಯೇಲ್ ವಂಶದವರೇ, ನನ್ನ ಕ್ರಮವು ಸರಿಯಲ್ಲವೆ? ನಿಮ್ಮ ಕ್ರಮವೇ ಸರಿಯಲ್ಲವಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಆದರೆ ನೀವು - ಕರ್ತನ ಕ್ರಮವು ಸಮವಲ್ಲ ಎಂದು ಹೇಳುತ್ತಿದ್ದೀರಿ; ಇಸ್ರಾಯೇಲ್ ವಂಶದವರೇ, ನನ್ನ ಕ್ರಮವು ಸಮವಲ್ಲವೋ? ನಿಮ್ಮ ಕ್ರಮವೇ ಸಮವಲ್ಲವಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ದೇವರು ಹೇಳಿದ್ದೇನೆಂದರೆ: “ಒಂದುವೇಳೆ ನೀವು ಹೇಳಬಹುದು: ‘ನನ್ನ ಒಡೆಯನಾದ ದೇವರ ಕ್ರಮವು ದೃಢವಾಗಿಲ್ಲ.’ ಆದರೆ, ಇಸ್ರೇಲಿನ ಜನರೇ, ಕೇಳಿರಿ. ನಿಮ್ಮ ನಡತೆಯೇ ದೃಢವಾಗಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 “ಆದರೆ ನೀವು, ‘ಯೆಹೋವ ದೇವರ ಮಾರ್ಗವು ಸರಿಯಲ್ಲ’ ಎಂದು ಹೇಳುತ್ತೀರಿ. ಇಸ್ರಾಯೇಲ್ ಜನರೇ, ಈಗ ಕೇಳಿರಿ, ನನ್ನ ಮಾರ್ಗವು ಸರಿಯಲ್ಲವೇ? ನಿಜಕ್ಕೂ ನಿಮ್ಮ ಮಾರ್ಗಗಳೇ ಸರಿಯಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 18:25
29 ತಿಳಿವುಗಳ ಹೋಲಿಕೆ  

ಆದರೆ ನಿನ್ನ ಜನರು ಕರ್ತನ ಮಾರ್ಗವು ಸಮವಲ್ಲವೆಂದು ಹೇಳುತ್ತಿದ್ದಾರೆ, ಆದರೆ ಅವರ ಮಾರ್ಗವೇ ಸಮವಿಲ್ಲ.


ನೀವು ಯೆಹೋವನನ್ನು ನಿಮ್ಮ ಮಾತುಗಳಿಂದ ಬೇಸರಗೊಳಿಸಿದ್ದೀರಿ. “ಯಾವ ವಿಷಯದಲ್ಲಿ ಆತನನ್ನು ಬೇಸರಗೊಳಿಸಿದ್ದೇವೆ ಅನ್ನುತ್ತೀರಾ? ಪ್ರತಿಯೊಬ್ಬ ದುರಾಚಾರಿಯು ಯೆಹೋವನ ದೃಷ್ಟಿಗೆ ಒಳ್ಳೆಯವನು. ಅವರೇ ಆತನಿಗೆ ಇಷ್ಟ. ನ್ಯಾಯತೀರಿಸುವ ದೇವರು ಎಲ್ಲಿದ್ದಾನೆ?” ಎಂದು ನೀವು ಕೇಳುವುದರಿಂದ ಆತನ ಗಮನದಲ್ಲಿ ಇದ್ದೀರಿ.


ಅದರ ಮಧ್ಯ ನೆಲೆಗೊಂಡಿರುವ ಯೆಹೋವನು ನೀತಿಸ್ವರೂಪನು; ಎಂದಿಗೂ ಅನ್ಯಾಯವನ್ನು ಮಾಡನು; ಪ್ರತಿ ಬೆಳಿಗ್ಗೆ ತನ್ನ ನ್ಯಾಯವನ್ನು ತಪ್ಪದೆ ಪ್ರಕಾಶಗೊಳಿಸುವನು; ಅನ್ಯಾಯಗಾರನೋ ನಾಚಿಕೆಪಡುವುದಿಲ್ಲ.


ಆದರೆ ನೀವು, ‘ಯೆಹೋವನ ಮಾರ್ಗವು ಸಮವಲ್ಲ’ ಎಂದು ಹೇಳುತ್ತಿದ್ದೀರಿ; ಇಸ್ರಾಯೇಲ್ ವಂಶದವರೇ, ನಿಮ್ಮ ನಿಮ್ಮ ನಡತೆಗೆ ತಕ್ಕ ಹಾಗೆ ನಾನು ನಿಮಗೆ ತೀರ್ಪುಮಾಡುವೆನು.”


ಯೆಹೋವನೇ, ನೀನು ಧರ್ಮಸ್ವರೂಪನಾಗಿರುವುದರಿಂದ ನಾನು ನಿನ್ನೊಡನೆ ವ್ಯಾಜ್ಯವಾಡಲಾರೆನು. ಆದರೂ ನಿನ್ನ ಸಂಗಡ ನ್ಯಾಯವನ್ನು ಚರ್ಚಿಸುವೆನು. ದುಷ್ಟರ ನಡತೆ ಏಕೆ ಸಫಲವಾಗುತ್ತದೆ?


ಆ ರೀತಿಯಾಗಿ ದುಷ್ಟರಿಗೂ ಶಿಷ್ಟರಿಗೂ ಭೇದ ಮಾಡದೆ ದುಷ್ಟರ ಸಂಗಡ ನೀತಿವಂತರನ್ನೂ ಸಂಹರಿಸುವುದು ನಿನ್ನಿಂದ ಎಂದಿಗೂ ಆಗಬಾರದು; ಸರ್ವಲೋಕಕ್ಕೆ ನ್ಯಾಯತೀರಿಸುವವನು ನ್ಯಾಯವನ್ನೇ ನಡಿಸುವನಲ್ಲವೇ” ಎಂದು ಹೇಳಲು.


ಆದರೆ ಇಸ್ರಾಯೇಲ್ ವಂಶದವರು ಕರ್ತನ ಕ್ರಮವು ಸಮವಲ್ಲ ಎಂದು ಹೇಳುತ್ತಿದ್ದಾರೆ; ಇಸ್ರಾಯೇಲ್ ವಂಶದವರೇ, ನನ್ನ ಕ್ರಮವು ಸರಿಯಿಲ್ಲವೋ? ನಿಮ್ಮ ಕ್ರಮವೇ ಸರಿಯಿಲ್ಲವಷ್ಟೆ.”


ಅವರು ದೇವರಿಂದ ದೊರಕುವ ನೀತಿಯನ್ನರಿಯದೆ ಸ್ವಂತ ನೀತಿಯನ್ನೇ; ಸ್ಥಾಪಿಸಬೇಕೆಂದು ಪ್ರಯತ್ನಿಸುತ್ತಾ ಇದ್ದುದ್ದರಿಂದ ದೇವರ ನೀತಿಗೆ ಅಧೀನರಾಗಲಿಲ್ಲ.


ಎಲೋ ಮನುಷ್ಯನೇ ಹಾಗೆನ್ನಬೇಡ ದೇವರಿಗೆ ವಿರುದ್ಧವಾಗಿ ಮಾತನಾಡುವುದಕ್ಕೆ ನೀನು ಎಷ್ಟರವನು? ರೂಪಿಸಲ್ಪಟ್ಟದ್ದು ರೂಪಿಸಿದವನಿಗೆ, “ಏಕೆ ನನ್ನನ್ನು ಹೀಗೆ ರೂಪಿಸಿದೆ”, ಎಂದು ಕೇಳುವುದುಂಟೇ?


ಯಾಕೆಂದರೆ ಯಾವ ಮನುಷ್ಯನಾದರೂ ನೇಮನಿಷ್ಠೆಗಳನ್ನು ಅನುಸರಿಸಿ ದೇವರ ಸನ್ನಿಧಿಯಲ್ಲಿ ನೀತಿವಂತನೆಂದು ನಿರ್ಣಯಿಸಲ್ಪಡುವುದಿಲ್ಲ. ಧರ್ಮಶಾಸ್ತ್ರದಿಂದ ಪಾಪದ ಅರಿವು ಉಂಟಾಗುತ್ತದಷ್ಟೆ.


ಆದರೆ ನಮ್ಮ ಅನ್ಯಾಯದ ನಡವಳಿಕೆಯಿಂದ ದೇವರು ನೀತಿವಂತನೆಂದು ಪ್ರಸಿದ್ಧಿಗೆ ಬರುವುದಾದರೆ ನಾವು ಏನು ಹೇಳೋಣ? ಉಗ್ರದಂಡನೆಯನ್ನು ಮಾಡುವ ದೇವರು ಅನ್ಯಾಯಗಾರನೋ? ಎಂದಿಗೂ ಇಲ್ಲ. ಈ ಮಾತನ್ನು ಮನುಷ್ಯನ ರೀತಿಯಲ್ಲಿ ಆಡುತ್ತಿದ್ದೇನೆ.


ಯೆಹೋವನ ಮಾರ್ಗಗಳೆಲ್ಲಾ ನೀತಿಯುಳ್ಳವುಗಳು, ಆತನು ಎಲ್ಲಾ ಕಾರ್ಯಗಳಲ್ಲಿ ಕೃಪೆ ತೋರಿಸುವವನು.


ನೀವು ಹೀಗೆ ಮಾಡಿದರೂ ನಾನು ಮೌನವಾಗಿದ್ದೆನು. ಆದುದರಿಂದ, ‘ದೇವರೂ ನಮ್ಮಂಥವನೇ’ ಎಂದು ತಿಳಿದುಕೊಂಡಿರಿ. ಈಗಲಾದರೋ ನಾನು ಎಲ್ಲವನ್ನು, ನಿಮ್ಮ ಮುಂದೆ ವಿವರಿಸಿ ನಿಮ್ಮನ್ನು ಅಪರಾಧಿಗಳೆಂದು ಸ್ಥಾಪಿಸುವೆನು.


ದೇವರು ತಾನೇ ನ್ಯಾಯಾಧಿಪತಿ; ಆತನು ನೀತಿಸ್ವರೂಪನೆಂದು ಆಕಾಶಮಂಡಲವು ಘೋಷಿಸುತ್ತದೆ. ಸೆಲಾ


ನನ್ನ ನೀತಿಯನ್ನು ಖಂಡಿಸಿಬಿಡುವಿಯಾ? ನಿನ್ನ ನ್ಯಾಯವನ್ನು ಸ್ಥಾಪಿಸಿಕೊಳ್ಳಲಿಕ್ಕೆ ನನ್ನನ್ನು ಕೆಟ್ಟವನೆಂದು ನಿರ್ಣಯಿಸುವೆಯೋ?


“ನೀತಿಯಿಂದ ನನಗೇನು ಪ್ರಯೋಜನವಾಯಿತು? ಪಾಪಮಾಡದೆ ಇದ್ದುದರಿಂದ ನನಗಾದ ಹೆಚ್ಚು ಲಾಭವೇನು?


ಆಮೇಲೆ ಬೂಜ್ ಕುಲಕ್ಕೂ, ರಾಮ್ ಗೋತ್ರಕ್ಕೂ ಸೇರಿದ ಬರಕೇಲನ ಮಗನಾದ ಎಲೀಹುವಿಗೆ ಸಿಟ್ಟೇರಿತು; ಯೋಬನು ದೇವರಿಗಿಂತಲೂ ತಾನೇ ನ್ಯಾಯವಂತನೆಂದು ಎಣಿಸಿಕೊಂಡಿದ್ದರಿಂದ ಅವನ ಮೇಲೆ ಎಲೀಹುವಿಗೆ ಸಿಟ್ಟು ಬಂತು.


ನಮಗೆ ಶರಣನಾದ ದೇವರು ಮಾಡುವ ಕಾರ್ಯದಲ್ಲಿ ಯಾವ ಕುಂದೂ ಇಲ್ಲ; ಆತನು ನಡೆಸುವುದೆಲ್ಲಾ ನ್ಯಾಯ; ಆತನು ನಿರ್ವಂಚಕನಾದ ನಂಬಿಗಸ್ತ ದೇವರು, ನೀತಿಯುಳ್ಳವನೂ ಮತ್ತು ಯಥಾರ್ಥನೂ ಆಗಿದ್ದಾನೆ.


ಶಿಷ್ಟನು ತನ್ನ ಶಿಷ್ಟತನವನ್ನು ಬಿಟ್ಟು, ಅಧರ್ಮಮಾಡಿ, ಅದರಲ್ಲಿ ಸತ್ತರೆ ತಾನು ಮಾಡಿದ ಅಧರ್ಮದಿಂದಲೇ ಸಾಯಬೇಕಾಯಿತು.


ನೀನು ದೇವರಿಗೆ ವಿರುದ್ಧವಾಗಿ ತಿರುಗಿಬಿದ್ದು ವ್ಯರ್ಥವಾದ ಮಾತುಗಳನ್ನು ಸುಮ್ಮನೆ ಸುರಿಸುತ್ತೀಯಲ್ಲಾ!


ಮನುಷ್ಯನು ಮೂರ್ಖತನದಿಂದ ತನ್ನ ಗತಿಯನ್ನು ಕೆಡಿಸಿಕೊಂಡು, ಯೆಹೋವನ ಮೇಲೆ ಕುದಿಯುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು