Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 18:30 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಇಸ್ರಾಯೇಲ್ ವಂಶದವರೇ, ನಿಮ್ಮ ನಿಮ್ಮ ನಡತೆಗೆ ತಕ್ಕ ಹಾಗೆ ನಾನು ನಿಮಗೆ ತೀರ್ಪುಮಾಡುವೆನು; ಅಧರ್ಮವು ನಿಮ್ಮನ್ನು ನಾಶಮಾಡದಂತೆ ತಿರುಗಿಕೊಂಡು ನಿಮ್ಮ ಅಪರಾಧಗಳನ್ನೆಲ್ಲಾ ಬಿಟ್ಟುಬಿಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 ಹೀಗಿರಲು ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - “ಇಸ್ರಯೇಲ್ ವಂಶದವರೇ, ನಿಮ್ಮ ನಿಮ್ಮ ನಡತೆಗೆ ತಕ್ಕ ಹಾಗೆ ನಾನು ನಿಮಗೆ ತೀರ್ಪು ನೀಡುವೆನು; ಅಧರ್ಮವು ನಿಮ್ಮನ್ನು ನಾಶಮಾಡದಂತೆ ಪಾಪಕ್ಕೆ ವಿಮುಖರಾಗಿರಿ; ನಿಮ್ಮ ಅಪರಾಧಗಳನ್ನೆಲ್ಲಾ ತೊರೆದುಬಿಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಇಸ್ರಾಯೇಲ್ ವಂಶದವರೇ, ನಿಮ್ಮ ನಿಮ್ಮ ನಡತೆಗೆ ತಕ್ಕ ಹಾಗೆ ನಾನು ನಿಮಗೆ ತೀರ್ಪುಮಾಡುವೆನು; ಅಧರ್ಮವು ನಿಮ್ಮನ್ನು ನಾಶಮಾಡದಂತೆ ತಿರುಗಿಕೊಂಡು ನಿಮ್ಮ ಅಪರಾಧಗಳನ್ನೆಲ್ಲಾ ಬಿಟ್ಟುಬಿಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 ಇಸ್ರೇಲರೇ, ನಾನು ಪ್ರತಿಯೊಬ್ಬನನ್ನು ಅವನವನ ಕಾರ್ಯಗಳ ಪ್ರಕಾರ ನ್ಯಾಯತೀರಿಸುವೆನು” ಎಂದು ಹೇಳಿದನು. ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: “ಆದ್ದರಿಂದ ನನ್ನ ಬಳಿಗೆ ಬನ್ನಿರಿ, ದುಷ್ಟತನ ಮಾಡುವದನ್ನು ನಿಲ್ಲಿಸಿರಿ, ಪಾಪವು ನಿಮ್ಮ ನಾಶನಕ್ಕೆ ಕಾರಣವಾಗದಂತೆ ಎಚ್ಚರಿಕೆಯಾಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 “ಆದ್ದರಿಂದ ಇಸ್ರಾಯೇಲ್ ಜನರೇ, ನಿಮ್ಮ ನಿಮ್ಮ ಮಾರ್ಗಗಳ ಪ್ರಕಾರ ಪ್ರತಿಯೊಬ್ಬನಿಗೆ ನ್ಯಾಯತೀರಿಸುವೆನು, ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ. ನಿಮ್ಮ ದುಷ್ಟತನಗಳನ್ನೆಲ್ಲಾ ಬಿಟ್ಟು ತಿರುಗಿಕೊಳ್ಳಿರಿ. ಆಗ ಪಾಪವು ನಿಮ್ಮ ಪತನಕ್ಕೆ ಕಾರಣವಾಗುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 18:30
44 ತಿಳಿವುಗಳ ಹೋಲಿಕೆ  

ಮನುಷ್ಯಕುಮಾರನು ತನ್ನ ತಂದೆಯ ಮಹಿಮೆಯೊಡನೆ ತನ್ನ ದೂತರ ಸಮೇತವಾಗಿ ಬರುವನು. ಆಗ ಆತನು ಒಬ್ಬೊಬ್ಬನಿಗೆ ಅವನು ಮಾಡಿದ ಕೆಲಸಕ್ಕೆ ತಕ್ಕಂತೆ ಪ್ರತಿಫಲವನ್ನು ಕೊಡುವನು.


ಹೇಳಿದ್ದೇನೆಂದರೆ, “ಪಶ್ಚಾತ್ತಾಪಪಡಿರಿ; ಏಕೆಂದರೆ ಪರಲೋಕ ರಾಜ್ಯವು ಸಮೀಪಿಸುತ್ತಿದೆ.”


“ಆದರೆ ದುಷ್ಟನು ತಾನು ಮಾಡುತ್ತಿದ್ದ ಪಾಪಗಳನ್ನೆಲ್ಲಾ ಬಿಟ್ಟುಬಿಟ್ಟು, ನನ್ನ ಸಕಲ ವಿಧಿಗಳನ್ನು ಕೈಕೊಂಡು, ನೀತಿನ್ಯಾಯಗಳನ್ನು ನಡೆಸಿದರೆ ಸಾಯುವುದಿಲ್ಲ, ಖಂಡಿತವಾಗಿ ಜೀವಿಸುವನು.


ಹಾಗೆ ಭಾವಿಸಕೂಡದೆಂದು ನಿಮಗೆ ಹೇಳುತ್ತೇನೆ. ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳದಿದ್ದರೆ ನೀವೆಲ್ಲರೂ ಅವರಂತೆ ನಾಶವಾಗುವಿರಿ.


ಈಗಲೇ ನಿನಗೆ ಅಂತ್ಯವು ಬಂದಿದೆ; ನಾನು ನನ್ನ ಕೋಪವನ್ನು ನಿನ್ನ ಮೇಲೆ ಬರಮಾಡಿ, ನಿನ್ನ ನಡತೆಗೆ ತಕ್ಕಂತೆ ನ್ಯಾಯತೀರಿಸಿ ನಿನ್ನ ಸಮಸ್ತ ಅಸಹ್ಯಕಾರ್ಯಗಳ ಫಲವನ್ನು ನಿನಗೆ ತಿನ್ನಿಸುವೆನು.


ಇಸ್ರಾಯೇಲೇ, ನೀನೂ ನಿನ್ನ ದೇವರ ಕಡೆಗೆ ತಿರುಗಿಕೋ; ನೀತಿ, ಪ್ರೀತಿಗಳನ್ನು ಅನುಸರಿಸಿ ನಿನ್ನ ದೇವರನ್ನು ಎಡೆಬಿಡದೆ ನಿರೀಕ್ಷಿಸಿಕೊಂಡಿರು.


ಆದಕಾರಣ ನೀನು ಇಸ್ರಾಯೇಲ್ ವಂಶದವರಿಗೆ ಹೀಗೆ ನುಡಿ, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನೀವು ನಿಮ್ಮ ವಿಗ್ರಹಗಳನ್ನು ತೊರೆದುಬಿಟ್ಟು ಹಿಂದಿರುಗಿ, ನಿಮ್ಮ ಎಲ್ಲಾ ಅಸಹ್ಯ ವಸ್ತುಗಳ ಕಡೆಗೆ ಬೆನ್ನುಮಾಡಿರಿ.


ಹಾಗಲ್ಲವೆಂದು ನಿಮಗೆ ಹೇಳುತ್ತೇನೆ. ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳದಿದ್ದರೆ ನೀವೆಲ್ಲರೂ ಅವರಂತೆ ನಾಶವಾಗುವಿರಿ” ಎಂದು ಹೇಳಿದನು.


ಮೋಶೆಯ ಧರ್ಮನಿಯಮಗಳಲ್ಲಿ ಬರೆದಂತೆಯೇ ಈ ವಿಪತ್ತೆಲ್ಲಾ ನಮ್ಮ ಮೇಲೆ ಬಂದಿದೆ; ಆದರೂ ನಾವು ನಮ್ಮ ದುರ್ಮಾರ್ಗಗಳನ್ನು ತೊರೆದುಬಿಟ್ಟು ನಿನ್ನ ಸತ್ಯೋಪದೇಶವನ್ನು ಗ್ರಹಿಸಿ ನಡೆಯುವಂತೆ ನಮ್ಮ ದೇವರಾದ ಯೆಹೋವನೆಂಬ ನಿನ್ನ ದಯೆಯನ್ನು ಬೇಡಿಕೊಳ್ಳಲಿಲ್ಲ.


ಆದರೆ ನೀವು, ‘ಯೆಹೋವನ ಮಾರ್ಗವು ಸಮವಲ್ಲ’ ಎಂದು ಹೇಳುತ್ತಿದ್ದೀರಿ; ಇಸ್ರಾಯೇಲ್ ವಂಶದವರೇ, ನಿಮ್ಮ ನಿಮ್ಮ ನಡತೆಗೆ ತಕ್ಕ ಹಾಗೆ ನಾನು ನಿಮಗೆ ತೀರ್ಪುಮಾಡುವೆನು.”


ನನ್ನ ಜೀವದಾಣೆ, ದುಷ್ಟನ ಸಾವಿನಲ್ಲಿ ನನಗೆ ಸ್ವಲ್ಪವೂ ಸಂತೋಷವಿಲ್ಲ; ಅವನು ತನ್ನ ದುರ್ಮಾರ್ಗವನ್ನು ಬಿಟ್ಟುಬಿಡಲಿ; ಇಸ್ರಾಯೇಲಿನ ಮನೆತನದವರೇ ನೀವು ಏಕೆ ಸಾಯಬೇಕು?’” ಇದು ಕರ್ತನಾದ ಯೆಹೋವನ ನುಡಿ.


ಒಳ್ಳೆಯದಾಗಲೀ ಅಥವಾ ಕೆಟ್ಟದ್ದಾಗಲೀ, ಸಕಲ ರಹಸ್ಯ ಸಂಗತಿಗಳನ್ನು ವಿಮರ್ಶಿಸಿ, ನ್ಯಾಯವಿಚಾರಣೆಗೆ ದೇವರು ಪ್ರತಿಯೊಂದು ಕಾರ್ಯವನ್ನು ಗುರಿಮಾಡುವನು.


ನೀವು ಮಾನಸಾಂತರ ಹೊಂದಿರುವಿರಿ ಎಂಬುದಕ್ಕೆ ಯೋಗ್ಯವಾದ ಫಲವನ್ನು ತೋರಿಸಿರಿ.


ನೀನು ನಿನ್ನ ಮೊಂಡತನವನ್ನೂ, ಪಶ್ಚಾತ್ತಾಪವಿಲ್ಲದ ಮನಸ್ಸನ್ನೂ ಅನುಸರಿಸಿ ನ್ಯಾಯತೀರ್ಪಿನ ದಿನದವರೆಗೂ ನಿನಗಾಗಿ ದೇವರ ಕೋಪವನ್ನು ಸಂಗ್ರಹಿಸಿಕೊಳ್ಳುತ್ತಾ ಇದ್ದೀ.


“ನೋಡು! ನಾನು ಬೇಗನೇ ಬರುತ್ತೇನೆ. ನಾನು ಪ್ರತಿಯೊಬ್ಬನಿಗೂ ಅವನವನ ನಡತೆಗೆ ತಕ್ಕಂತೆ ಕೊಡತಕ್ಕ ಪ್ರತಿಫಲವು ನನ್ನಲ್ಲಿದೆ.


ಇದಲ್ಲದೆ ಸತ್ತವರಾದ, ಶ್ರೇಷ್ಠರು ಮತ್ತು ಕನಿಷ್ಠರೆಲ್ಲರು ಸಿಂಹಾಸನದ ಮುಂದೆ ನಿಂತಿರುವುದನ್ನು ಕಂಡೆನು. ಆಗ ಪುಸ್ತಕಗಳು ತೆರೆಯಲ್ಪಟ್ಟವು. ಜೀವಬಾಧ್ಯರ ಪಟ್ಟಿ ಎಂಬ ಇನ್ನೊಂದು ಪುಸ್ತಕವು ತೆರೆಯಲ್ಪಟ್ಟಿತು. ಆ ಪುಸ್ತಕಗಳಲ್ಲಿ ಬರೆದಿರುವ ಪ್ರಕಾರ, ಅವರವರ ಕೃತ್ಯಗಳಿಗೆ ತಕ್ಕಂತೆ ಸತ್ತವರಿಗೆ ನ್ಯಾಯತೀರ್ಪಾಯಿತು.


ಆದ್ದರಿಂದ ನೀನು ಪಶ್ಚಾತ್ತಾಪಪಟ್ಟು ತಿರುಗಿಕೊಳ್ಳದಿದ್ದರೆ ನಾನು ಬೇಗನೆ ನಿನ್ನ ಬಳಿಗೆ ಬಂದು ನನ್ನ ಬಾಯಿಂದ ಹೊರಬರುವ ಕತ್ತಿಯಿಂದ ಅವರ ಮೇಲೆ ಯುದ್ಧ ಮಾಡುವೆನು.


ಆದ್ದರಿಂದ ನೀನು ಎಲ್ಲಿಂದ ಬಿದ್ದಿರುವಿಯೋ ಅದನ್ನು ನಿನ್ನ ನೆನಪಿಗೆ ತಂದುಕೋ. ಮಾನಸಾಂತರಪಟ್ಟು ದೇವರ ಕಡೆಗೆ ತಿರುಗಿ ನೀನು ಮೊದಲು ಮಾಡುತ್ತಿದ್ದ ಕೃತ್ಯಗಳನ್ನು ಮಾಡು. ನೀನು ಮಾನಸಾಂತರಪಡದಿದ್ದರೆ ನಾನು ಬಂದು ನಿನ್ನ ದೀಪಸ್ತಂಭವನ್ನು ಅದರ ಸ್ಥಳದಿಂದ ತೆಗೆದು ಹಾಕುವೆನು.


ಪ್ರತಿಯೊಬ್ಬನ ನಡತೆಯನ್ನು ನೋಡಿ ಪಕ್ಷಪಾತವಿಲ್ಲದೆ ತೀರ್ಪುಮಾಡುವಾತನನ್ನು ನೀವು ತಂದೆಯೆಂದು ಕರೆಯುವವರಾಗಿರುವುದರಿಂದ ಈ ಲೋಕದಲ್ಲಿನ ನಿಮ್ಮ ಪ್ರವಾಸಕಾಲವನ್ನು ಭಯಭಕ್ತಿಯಿಂದ ಕಳೆಯಿರಿ.


ಆ ಮೇಲೆ ದುರಾಶೆಯು ಗರ್ಭಧರಿಸಿ ಪಾಪವನ್ನು ಹೆರುತ್ತದೆ. ಪಾಪವು ಪೂರ್ಣವಾಗಿ ಬೆಳೆದು ಮರಣವನ್ನು ತರುತ್ತದೆ.


ಆಗ ಎಲ್ಲಾ ದೇಶಗಳ ಜನರನ್ನೂ ಆತನ ಸಮ್ಮುಖದಲ್ಲಿ ತಂದು ಸೇರಿಸುವರು. ಕುರುಬನು ಕುರಿಗಳನ್ನೂ, ಆಡುಗಳನ್ನೂ ಬೇರ್ಪಡಿಸುವ ಪ್ರಕಾರ ಆತನು ಅವರನ್ನು ಬೇರ್ಪಡಿಸುವನು.


ಆಗ ಶಿಷ್ಟರಿಗೂ, ದುಷ್ಟರಿಗೂ, ದೇವರನ್ನು ಸೇವಿಸುವವರಿಗೂ, ಸೇವಿಸದೇ ಇರುವವರಿಗೂ ಇರುವ ವ್ಯತ್ಯಾಸವನ್ನು ಮತ್ತೆ ಕಾಣುವಿರಿ.


“‘ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಇಗೋ, ನಾನೇ ಕೊಬ್ಬಿದ ಟಗರುಹೋತಗಳಿಗೂ, ಬಡ ಕುರಿಮೇಕೆಗಳಿಗೂ ನ್ಯಾಯತೀರಿಸುತ್ತೇನೆ.


ಆದರೆ ನೀನು ದುಷ್ಟನನ್ನು ದುರ್ಮಾರ್ಗದಿಂದ ತಪ್ಪಿಸಲು, ಅವನನ್ನು ಎಚ್ಚರಿಸಿದರೂ ಅವನು ಅದನ್ನು ಬಿಡದೆ ಹೋದರೆ ತನ್ನ ಅಪರಾಧದಲ್ಲೇ ಸಾಯುವನು; ನೀನೋ ನಿನ್ನ ಪ್ರಾಣವನ್ನು ಉಳಿಸಿಕೊಳ್ಳುವಿ.


ಅರಸನು ದುಃಖಿಸುವನು, ಭಯವು ಪ್ರಭುವನ್ನು ಮುಸುಕುವುದು, ಸಾಧಾರಣಜನರ ಕೈಗಳು ತತ್ತರಿಸುವವು; ನಾನು ಅವರ ದುರ್ನಡತೆಗೆ ತಕ್ಕ ಪ್ರತಿಕಾರವನ್ನು ಮಾಡಿ, ಅವರ ದುಷ್ಟ ಕಾರ್ಯಗಳಿಗೆ ಸರಿಯಾಗಿ ದಂಡನೆಯನ್ನು ವಿಧಿಸುವೆನು; ಆಗ ನಾನೇ ಯೆಹೋವನು ಎಂದು ಅವರಿಗೆ ಗೊತ್ತಾಗುವುದು.”


ಆಗ ನಾನು ಮನಸ್ಸಿನಲ್ಲಿ, “ದೇವರು ನೀತಿವಂತನಿಗೂ, ಅನೀತಿವಂತನಿಗೂ ನ್ಯಾಯತೀರಿಸುವನು. ಆತನ ನ್ಯಾಯಕ್ರಮಗಳಿಗೂ, ಎಲ್ಲಾ ಕೆಲಸಕಾರ್ಯಗಳಿಗೂ ತಕ್ಕ ಸಮಯ ಉಂಟು” ಎಂದು ಅಂದುಕೊಂಡೆನು.


ಆಮೇಲೆ ಯೆರೂಸಲೇಮಿನಲ್ಲಿಯೂ, ಯೂದಾಯದ ಎಲ್ಲಾ ಸೀಮೆಯಲ್ಲಿಯೂ ಇರುವವರಿಗೆ ಮತ್ತು ಅನ್ಯಜನರಿಗೆ ಸಹ; ನೀವು ದೇವರ ಕಡೆಗೆ ತಿರುಗಿಕೊಳ್ಳಬೇಕೆಂತಲೂ, ಮಾನಸಾಂತರಕ್ಕೆ ಯೋಗ್ಯವಾದ ಕೃತ್ಯಗಳನ್ನು ಮಾಡಬೇಕೆಂತಲೂ ಸಾರಿದೆನು.


“ಒಬ್ಬ ವಿಮೋಚಕನು ಚೀಯೋನಿಗೂ, ದ್ರೋಹವನ್ನು ಬಿಟ್ಟುಬಿಟ್ಟ ಯಾಕೋಬ್ಯರ ಬಳಿಗೂ ಬರುವನು”, ಯೆಹೋವನೇ ಇದನ್ನು ನುಡಿದಿದ್ದಾನೆ.


ಆತನು ನಿಮಗೆ ಹೇಳಿದ ಮಾತೇನೆಂದರೆ, ‘ನೀವೆಲ್ಲರು ನಿಮ್ಮ ನಿಮ್ಮ ದುರ್ಮಾರ್ಗದಿಂದಲೂ ಮತ್ತು ದುಷ್ಕೃತ್ಯಗಳಿಂದಲೂ ಹಿಂದಿರುಗಿರಿ. ನಿಮಗೆ ಶಾಶ್ವತ ಸ್ವತ್ತಾಗಿರಲಿ ಎಂದು ಯೆಹೋವನು ಪುರಾತನ ಕಾಲದಲ್ಲಿ ನಿಮಗೂ ಮತ್ತು ನಿಮ್ಮ ಪೂರ್ವಿಕರಿಗೂ ಅನುಗ್ರಹಿಸಿದ ದೇಶದೊಳಗೆ ನೆಲೆಗೊಳ್ಳಿರಿ.


ಇದಲ್ಲದೆ ನಾನು ನನ್ನ ಸೇವಕರಾದ ಪ್ರವಾದಿಗಳನ್ನೆಲ್ಲಾ ನಿಮ್ಮ ಬಳಿಗೆ ನಿತ್ಯವೂ ಕಳುಹಿಸುತ್ತಾ, ನೀವೆಲ್ಲರೂ ನಿಮ್ಮ ನಿಮ್ಮ ದುರ್ಮಾರ್ಗಗಳಿಂದ ಹಿಂದಿರುಗಿ ನಿಮ್ಮ ನಡತೆಗಳನ್ನು ಸರಿಪಡಿಸಿಕೊಳ್ಳಿರಿ, ಅನ್ಯದೇವತೆಗಳನ್ನು ಹಿಂಬಾಲಿಸಿ ಸೇವಿಸದಿರಿ; ಹೀಗೆ ಮಾಡಿದರೆ ನಾನು ನಿಮಗೂ, ನಿಮ್ಮ ಪೂರ್ವಿಕರಿಗೂ ದಯಪಾಲಿಸಿದ ದೇಶದಲ್ಲಿ ನೀವು ಸುಖವಾಸಿಗಳಾಗಿರುವಿರಿ ಎಂದು ಹೇಳಿಸಿದರೂ ನೀವು ನನ್ನ ಮಾತನ್ನು ಕೇಳಲಿಲ್ಲ, ಕಿವಿಗೊಡಲೂ ಇಲ್ಲ.


ಆದರೆ ಇಸ್ರಾಯೇಲ್ ವಂಶದವರು ಕರ್ತನ ಕ್ರಮವು ಸಮವಲ್ಲ ಎಂದು ಹೇಳುತ್ತಿದ್ದಾರೆ; ಇಸ್ರಾಯೇಲ್ ವಂಶದವರೇ, ನನ್ನ ಕ್ರಮವು ಸರಿಯಿಲ್ಲವೋ? ನಿಮ್ಮ ಕ್ರಮವೇ ಸರಿಯಿಲ್ಲವಷ್ಟೆ.”


ಯೆಹೋವನಾದ ನಾನೇ ಇದನ್ನು ನುಡಿದಿದ್ದೇನೆ, “ಇದು ನಡೆಯುವುದು ನಿಶ್ಚಯ, ನಾನು ನೆರವೇರಿಸುವೆನು; ಹಿಂದೆಗೆಯೆನು, ಕ್ಷಮಿಸೆನು, ಕರುಣಿಸೆನು; ನಿನ್ನ ದುರ್ಮಾರ್ಗ, ದುಷ್ಕೃತ್ಯಗಳಿಗೆ ಸರಿಯಾಗಿ ನಿನಗೆ ನ್ಯಾಯತೀರ್ಪು ಆಗುವುದು” ಇದು ಕರ್ತನಾದ ಯೆಹೋವನ ನುಡಿ.


ಈಗಲಾದರೂ ತಮ್ಮ ದೇವದ್ರೋಹವನ್ನು ಮತ್ತು ಅರಸರ ಶವಗಳನ್ನು ನನ್ನಿಂದ ದೂರ ಮಾಡಲಿ. ಆಗ ನಾನು ಅದರ ಮಧ್ಯದಲ್ಲಿ ಸದಾ ವಾಸಿಸುವೆನು.”


ಈಗ ನಿಮ್ಮ ಪೂರ್ವಿಕರ ದೇವರಾದ ಯೆಹೋವನಿಗೆ ಸ್ತೋತ್ರಮಾಡಿ, ನಿಮ್ಮ ಪಾಪಗಳನ್ನು ಅರಿಕೆಮಾಡಿ, ಆತನ ಚಿತ್ತಕ್ಕನುಸಾರವಾಗಿ ದೇಶನಿವಾಸಿಗಳನ್ನೂ ಮತ್ತು ಅನ್ಯಜನರಿಂದ ತಂದ ಹೆಂಡತಿಯರನ್ನೂ ಬಿಟ್ಟು ಬೇರೆಯಾಗಿರಿ” ಎಂದನು.


ಉದಯವು ಬರುತ್ತದೆ, ರಾತ್ರಿಯೂ ಬರುತ್ತದೆ; ವಿಚಾರಿಸಬೇಕಾದರೆ ಆಮೇಲೆ ಬಂದು ವಿಚಾರಿಸಿರಿ” ಎಂದು ಕಾವಲುಗಾರನು ಹೇಳಿದನು.


“ಭ್ರಷ್ಟರಾದ ಮಕ್ಕಳೇ, ಹಿಂದಿರುಗಿರಿ, ನಿಮ್ಮ ಭ್ರಷ್ಟತ್ವವನ್ನು ಪರಿಹರಿಸುವೆನು” ಎಂದು ಯೆಹೋವನು ನುಡಿಯುತ್ತಾನೆ. ಅದಕ್ಕೆ ಜನರು, “ಇಗೋ, ನಿನ್ನ ಬಳಿಗೆ ಬಂದೆವು, ನೀನು ಯೆಹೋವನು, ನಮ್ಮ ದೇವರು.


ಇಸ್ರಾಯೇಲಿನ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಹೀಗೆನ್ನುತ್ತಾನೆ, ನೀವು ನಿಮ್ಮ ನಡತೆಯನ್ನೂ, ಕೃತ್ಯಗಳನ್ನೂ ತಿದ್ದಿಕೊಳ್ಳಿರಿ; ಹೀಗೆ ಮಾಡಿದರೆ ನಾನು ನಿಮ್ಮನ್ನು ಈ ಸ್ಥಳದಲ್ಲಿ ನೆಲೆಗೊಳಿಸುವೆನು.


ಜನಾಂಗಗಳೊಳಗೆ ಅವರನ್ನು ಚದರಿಸಿ, ದೇಶಗಳಿಗೆ ತೂರಿಬಿಟ್ಟು, ಅವರ ದುರ್ಮಾರ್ಗ, ದುರಾಚಾರಗಳಿಗೆ ಸರಿಯಾಗಿ ನ್ಯಾಯತೀರಿಸಿದೆನು.


ನಿಮ್ಮ ಪೂರ್ವಿಕರಂತಿರಬೇಡಿರಿ; ಪೂರ್ವಕಾಲದ ಪ್ರವಾದಿಗಳು ಅವರಿಗೆ, “ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ, ‘ನಿಮ್ಮ ದುರ್ಮಾರ್ಗ, ದುಷ್ಕೃತ್ಯಗಳಿಂದ ಹಿಂದಿರುಗಿರಿ’ ಎಂದು ಸಾರಿದರೂ ಅವರು ನನ್ನ ಮಾತನ್ನು ಕಿವಿಗೊಟ್ಟು ಕೇಳಲಿಲ್ಲ” ಇದು ಯೆಹೋವನ ನುಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು