Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 19:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಬೆಂಕಿಯು ಅದರ ಕೊಂಬೆಗಳಿಂದ ಹೊರಟು ಅದರ ಫಲವನ್ನು ನುಂಗಿ ಬಿಟ್ಟಿದೆ. ಆದುದರಿಂದ ರಾಜದಂಡಕ್ಕೆ ಯೋಗ್ಯವಾದ ಯಾವ ಗಟ್ಟಿ ಕೊಂಬೆಯೂ ಅದರಲ್ಲಿ ಉಳಿದಿಲ್ಲ.’ ಇದು ಶೋಕ ಗೀತೆ, ಶೋಕ ಗೀತೆಯಾಗಿ ವಾಡಿಕೆಯಲ್ಲಿದೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಅದರ ಕಾಂಡದಿಂದ ಹೊರಟ ಬೆಂಕಿಯು ದಹಿಸಿಬಿಟ್ಟಿದೆ ಅದರ ಫಲಗಳನು ಎಂದೇ ಇನ್ನು ಉಳಿದಿಲ್ಲ ಅದರೊಳು ರಾಜದಂಡಕೆ ಯೋಗ್ಯವಾದ ಗಟ್ಟಿಕೊಂಬೆಯು.” ಇದೊಂದು ಶೋಕ ಗೀತೆ; ರೂಢಿಯಲ್ಲಿ ಇರುವ ಜಾನಪದ ಗೀತೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಬೆಂಕಿಯು ದಂಡರೂಪವಾದ ಅದರ ಶಾಖೆಗಳಿಂದ ಹೊರಟು ಅದರ ಫಲವನ್ನು ನುಂಗಿಬಿಟ್ಟದ್ದರಿಂದ ರಾಜದಂಡಕ್ಕೆ ಯೋಗ್ಯವಾದ ಯಾವ ಗಟ್ಟಿಕೊಂಬೆಯೂ ಅದರಲ್ಲಿ ಉಳಿದಿಲ್ಲ. ಇದು ಶೋಕಗೀತ, ಶೋಕಗೀತವಾಗಿ ವಾಡಿಕೆಯಲ್ಲಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಅದರ ಸ್ವಂತ ಕಾಂಡದಿಂದಲೇ ಬೆಂಕಿಯು ಹೊರಟುಬಂದು ಅದರ ಚಿಕ್ಕ ಕೊಂಬೆಗಳನ್ನು ಮತ್ತು ಫಲಗಳನ್ನು ನಾಶಮಾಡಿತು. ಈಗ ಬಲವಾದ ಕಾಂಡ ಅದರಲ್ಲಿಲ್ಲ. ಆಳುವದಕ್ಕೆ ರಾಜದಂಡವೂ ಅದರಲ್ಲಿಲ್ಲ.’ ಇದು ಮರಣದ ಶೋಕಗೀತೆ. ಇದನ್ನು ಶೋಕಗೀತೆಯನ್ನಾಗಿಯೇ ಬಳಸಲಾಗುತ್ತಿದೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಅದರ ಕೊಂಬೆಗಳ ಬಳ್ಳಿಗಳೊಳಗಿಂದ ಬೆಂಕಿಯು ಹೊರಟು, ಅದರಲ್ಲಿ ಫಲವನ್ನು ತಿಂದುಬಿಟ್ಟಿದೆ. ಅದರಲ್ಲಿ ಆಳುವುದಕ್ಕೆ ರಾಜದಂಡಕ್ಕಾಗಿ ತಕ್ಕ ಬಲವುಳ್ಳ ಬಳ್ಳಿಯು ಈಗ ಇಲ್ಲ.’ ಇದು ಪ್ರಲಾಪವಾಗಿದೆ. ಪ್ರಲಾಪಕ್ಕಾಗಿಯೇ ಇದೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 19:14
27 ತಿಳಿವುಗಳ ಹೋಲಿಕೆ  

ಅದರಲ್ಲಿ ಆಳುವವರ ರಾಜದಂಡಗಳಿಗೆ ಯೋಗ್ಯವಾದ ಗಟ್ಟಿಕೊಂಬೆಗಳಿದ್ದವು, ಅವುಗಳ ಎತ್ತರವು ಉಳಿದ ರೆಂಬೆಗಳಿಗಿಂತ ಹೆಚ್ಚಾಗಿತ್ತು, ಬಹಳ ರೆಂಬೆಗಳ ಮಧ್ಯದಲ್ಲಿ ಉದ್ದುದ್ದವಾಗಿ ಕಾಣಿಸಿದವು.


“ಇಸ್ರಾಯೇಲಿನ ರಾಜರ ವಿಷಯವಾಗಿ ಈ ಶೋಕ ಗೀತೆಯನ್ನು ಹಾಡು,


ಯೆಹೋವನು ಯೆರೂಸಲೇಮಿನವರ ಮೇಲೆಯೂ ಬೇರೆ ಎಲ್ಲಾ ಯೆಹೂದ್ಯರ ಮೇಲೆಯೂ ಇದನ್ನೆಲ್ಲಾ ಬರಮಾಡಿ ಕೊನೆಯಲ್ಲಿ ಅವರನ್ನು ತನ್ನ ಸನ್ನಿಧಿಯಿಂದ ನಾಶಮಾಡುವಷ್ಟು ರೋಷವುಳ್ಳವನಾಗಿದ್ದನು. ಆದರೆ ಚಿದ್ಕೀಯನು ಬಾಬೆಲಿನ ಅರಸನಿಗೆ ವಿರುದ್ಧವಾಗಿ ತಿರುಗಿಬಿದ್ದನು.


ಅದಕ್ಕೆ ಅವರು, “ಅವನನ್ನು ಕೊಲ್ಲಿಸು, ಕೊಲ್ಲಿಸು, ಶಿಲುಬೆಗೆ ಹಾಕಿಸು” ಎಂದು ಕೂಗಿದರು. ಅದಕ್ಕೆ ಪಿಲಾತನು, “ನಿಮ್ಮ ಅರಸನನ್ನು ಶಿಲುಬೆಗೆ ಹಾಕಿಸಲೋ?” ಎಂದು ಹೇಳಿದಕ್ಕೆ, ಮುಖ್ಯಯಾಜಕರು, “ಕೈಸರನೇ, ಹೊರತು ನಮಗೆ ಬೇರೆ ಅರಸನಿಲ್ಲ” ಎಂದು ಉತ್ತರ ಕೊಟ್ಟರು.


ತರುವಾಯ ಆತನು ಯೆರೂಸಲೇಮ್ ಪಟ್ಟಣದ ಸಮೀಪಕ್ಕೆ ಬಂದಾಗ ಆ ಪಟ್ಟಣವನ್ನು ನೋಡಿ ಅದರ ವಿಷಯವಾಗಿ ಕಣ್ಣೀರಿಡುತ್ತಾ,


“ಆ ದಿನದಲ್ಲಿ ನಾನು ದಾವೀದನ ಬಿದ್ದುಹೋಗಿರುವ ಗುಡಾರವನ್ನು ಎತ್ತಿ, ಅದರ ಬಿರುಕುಗಳನ್ನು ಮುಚ್ಚುವೆನು, ಹಾಳಾದದ್ದನ್ನು ಎಬ್ಬಿಸಿ, ಹಿಂದಿನ ದಿನಗಳಲ್ಲಿ ಮಾಡಿದ ಹಾಗೆ ಕಟ್ಟುವೆನು.


“ನಮಗೆ ರಾಜನೇ ಇಲ್ಲ; ನಾವು ಯೆಹೋವನಲ್ಲಿ ಭಯಭಕ್ತಿಯಿಟ್ಟವರಲ್ಲ. ರಾಜನಾದರೋ ನಮಗಾಗಿ ಏನು ಮಾಡಿಯಾನು?” ಎಂದು ಈಗ ಅವರು ಅಂದುಕೊಳ್ಳಬೇಕಾಯಿತು.


ಇದರಂತೆ ರಾಜಮುಖಂಡ, ಯಜ್ಞ, ಸ್ತಂಭ, ಏಫೋದು, ವಿಗ್ರಹಗಳಿಲ್ಲದೆ ಇಸ್ರಾಯೇಲರು ಬಹಳ ದಿನಗಳು ತಾಳಿಕೊಂಡಿರುವರು.


ಆ ವನಕ್ಕೆ ಹೀಗೆ ಪ್ರವಾದಿಸು, ಯೆಹೋವನ ಮಾತನ್ನು ಕೇಳು, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ಆಹಾ, ನಾನು ನಿನ್ನೊಳಗೆ ಬೆಂಕಿಯನ್ನು ಹೊತ್ತಿಸುವೆನು, ಅದು ನಿನ್ನಲ್ಲಿನ ಎಲ್ಲಾ ಹಸಿರು ಮರಗಳನ್ನೂ, ಒಣಮರಗಳನ್ನೂ ನುಂಗಿ ಬಿಡುವುದು; ಧಗಧಗಿಸುವ ಉರಿಯು ಆರದೆ ದಕ್ಷಿಣದಿಂದ ಉತ್ತರದವರೆಗೆ ಎಲ್ಲರ ಮುಖಗಳು ಸುಟ್ಟು ಹೋಗುವವು.


ಇಲ್ಲ, ಸೌದೆಯಾಗಿ ಬೆಂಕಿಯಲ್ಲಿ ಹಾಕುವರು; ಬೆಂಕಿಯು ಅದರ ಎರಡು ಕೊನೆಗಳನ್ನು ಸುಟ್ಟುಬಿಡುವುದು, ಮಧ್ಯಭಾಗವು ಇದ್ದಲಾಗಿ ಯಾವ ಕೆಲಸಕ್ಕೂ ಬರುವುದಿಲ್ಲ.


ಯಾವನು ನಮಗೆ ಜೀವಶ್ವಾಸವೋ, ಯಾವನು ಯೆಹೋವನ ಅಭಿಷಿಕ್ತನೋ, ಯಾವನನ್ನು ಆಶ್ರಯಿಸಿ ಜನಾಂಗಗಳ ಮಧ್ಯದಲ್ಲಿ ಉಳಿಯುವೆವು ಎಂದು ನಾವು ನಂಬಿಕೊಂಡಿದ್ದೆವೋ ಅವನು ಅವರ ಗುಂಡಿಗಳಲ್ಲಿ ಸಿಕ್ಕಿಬಿದ್ದನು.


ಯೆಹೋವನು ಯೆರೂಸಲೇಮಿನವರ ಮೇಲೆಯೂ ಮತ್ತು ಬೇರೆ ಎಲ್ಲಾ ಯೆಹೂದ್ಯರ ಮೇಲೆಯೂ ಇದನ್ನೆಲ್ಲಾ ಬರಮಾಡಿ, ಕಡೆಯಲ್ಲಿ ಅವರನ್ನು ತನ್ನ ಸನ್ನಿಧಿಯಿಂದ ತಳ್ಳಿಬಿಡುವಷ್ಟು ರೋಷವುಳ್ಳವನಾದನು. ಚಿದ್ಕೀಯನು ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನಿಗೆ ವಿರುದ್ಧವಾಗಿ ತಿರುಗಿಬಿದ್ದನು.


ನಿನ್ನ ಸಮಸ್ತ ಪತ್ನಿಯರೂ, ಗಂಡು ಮತ್ತು ಹೆಣ್ಣುಮಕ್ಕಳು ಕಸ್ದೀಯರ ಬಳಿಗೆ ತರಲ್ಪಡುವರು; ನೀನೂ ಅವರಿಂದ ತಪ್ಪಿಸಿಕೊಳ್ಳಲಾರದೆ ಬಾಬೆಲಿನ ಅರಸನ ಕೈಗೆ ಸಿಕ್ಕಿಕೊಳ್ಳುವಿ; ಈ ಪಟ್ಟಣವು ನಿನ್ನ ನಿಮಿತ್ತ ಬೆಂಕಿಯಿಂದ ಸುಟ್ಟುಹೋಗುವುದು” ಎಂದು ಹೇಳಿದನು.


ಅವರು ಯಾಕೋಬ್ ವಂಶದವರನ್ನು ನುಂಗಿಬಿಟ್ಟು, ಅವರ ವಾಸಸ್ಥಳಗಳನ್ನು ಹಾಳುಮಾಡಿದ್ದಾರೆ.


ನಮ್ಮ ಪಾಪಗಳ ನಿಮಿತ್ತವಾಗಿ ನಿನ್ನಿಂದ ನಮ್ಮ ಮೇಲೆ ನೇಮಿಸಲ್ಪಟ್ಟ ರಾಜರಿಗೆ ಈ ದೇಶದ ಹೇರಳವಾದ ಹುಟ್ಟುವಳಿಯು ಹೋಗುತ್ತಾ ಇದೆ. ದೈಹಿಕವಾಗಿ ನಮ್ಮ ಮೇಲೆ ಹಾಗೂ ನಮ್ಮ ಪಶುಗಳ ಮೇಲೆ ಅವರು ಮನಸ್ಸಿಗೆ ಬಂದಂತೆ ಅಧಿಕಾರ ನಡಿಸುತ್ತಿದ್ದಾರೆ. ನಾವು ಮಹಾಸಂಕಟದಲ್ಲಿದ್ದೇವೆ” ಎಂದು ಪ್ರಾರ್ಥಿಸಿದರು.


ಇದಲ್ಲದೆ, ಅರಸನಾದ ನೆಬೂಕದ್ನೆಚ್ಚರನಿಗೆ ಅಧೀನನಾಗಿರುತ್ತೇನೆ ಎಂದು ದೇವರ ಮೇಲೆ ಆಣೆಯಿಟ್ಟು ಪ್ರಮಾಣಮಾಡಿಸಿದ್ದ ನೆಬೂಕದ್ನೆಚ್ಚರನಿಗೆ ವಿರುದ್ಧವಾಗಿ ತಿರುಗಿಬಿದ್ದದ್ದಲ್ಲದೆ ಇಸ್ರಾಯೇಲ್ ದೇವರಾದ ಯೆಹೋವನ ಕಡೆಗೆ ತಿರುಗಿಕೊಳ್ಳದೆ ಹಠಮಾರಿಯಾಗಿ ತನ್ನ ಮನಸ್ಸನ್ನು ಕಠಿಣ ಮಾಡಿಕೊಂಡನು.


ಅದು, ‘ನೀವು ಯಥಾರ್ಥಮನಸ್ಸಿನಿಂದ ನನಗೆ ರಾಜ್ಯಾಭಿಷೇಕ ಮಾಡಬೇಕೆಂದಿರುವುದಾದರೆ ಬಂದು ನನ್ನ ನೆರಳನ್ನು ಆಶ್ರಯಿಸಿಕೊಳ್ಳಿರಿ; ಇಲ್ಲವಾದರೆ ನನ್ನಿಂದ ಬೆಂಕಿಹೊರಟು ಲೆಬನೋನಿನ ದೇವದಾರು ವೃಕ್ಷಗಳನ್ನು ದಹಿಸಿಬಿಡುವುದು’ ಎಂದಿತು.


ರಾಜದಂಡವನ್ನು ಹಿಡಿಯತಕ್ಕವನು ಶಿಲೋವಿನಿಂದ ಬರುವ ತನಕ ಆ ದಂಡವು ಯೆಹೂದನ ಕೈಯಿಂದ ತಪ್ಪುವುದಿಲ್ಲ. ಮುದ್ರೆ ಕೋಲು ಅವನ ಪಾದಗಳ ಬಳಿಯಿಂದ ಕದಲುವುದಿಲ್ಲ. ಅನ್ಯಜನಾಂಗಗಳೂ ಅವನಿಗೆ ವಿಧೇಯರಾಗಿರುವರು.


ಯೆಹೋವನು ನಿನ್ನ ರಾಜದಂಡದ ಆಳ್ವಿಕೆಯನ್ನು ಚೀಯೋನಿನ ಹೊರಗೂ ಹಬ್ಬಿಸುವನು; ನಿನ್ನ ವೈರಿಗಳ ಮಧ್ಯದಲ್ಲಿ ದೊರೆತನ ಮಾಡು.


ಆಹಾ, ನಾಟಿಕೊಂಡಿದ್ದ ಆ ಲತೆಯು ಸಮೃದ್ಧವಾಗಿಯೇ ಇರುವುದೋ? ಮೂಡಣ ಗಾಳಿಯು ಬಡಿಯುವಾಗ ಬಾಡೇ ಬಾಡುವುದಲ್ಲವೇ? ಬೆಳೆದ ಪಾತಿಯಲ್ಲಿಯೇ ಒಣಗಿಹೋಗುವುದು.”


ಅದನ್ನು ಹೊತ್ತಿಸಿದವನು ಯೆಹೋವನಾದ ನಾನೇ ಎಂಬುದು ಸಕಲ ನರಪ್ರಾಣಿಗಳಿಗೂ ಗೋಚರವಾಗುವುದು; ಅದು ಆರಿಹೋಗದು.’


ಇವರು ನಿನ್ನ ವಿಷಯದಲ್ಲಿ ಗೋಳಾಟವನ್ನೆತಿ, ನಾವಿಕರ ನಿವಾಸವೇ, ಹೆಸರುವಾಸಿಯ ಪುರಿಯೇ, ಸಮುದ್ರದಿಂದ ಬಲಗೊಂಡ ನಗರಿಯೇ, ನೀನು ಎಷ್ಟೋ ಹಾಳಾದಿ! ಸಮುದ್ರದ ಸಂಚಾರಿಗಳಿಗೆಲ್ಲಾ ಭಯಾಸ್ಪದರಾಗಿದ್ದ ನಿನ್ನ ನಿವಾಸಿಗಳು ಎಷ್ಟೋ ಹಾಳಾದವು!


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು