ಯೆಹೆಜ್ಕೇಲನು 2:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಅವರು ಕೇಳಲಿ ಅಥವಾ ಕೇಳದೇ ಇರಲಿ ಏಕೆಂದರೆ ಅವರು ತಿರುಗಿ ಬೀಳುವ ವಂಶದವರು. ಆದರೆ ಒಬ್ಬ ಪ್ರವಾದಿಯು ತಮ್ಮ ಮಧ್ಯದಲ್ಲಿ ಇದ್ದಾನೆಂದು ತಿಳಿದುಕೊಳ್ಳುವರು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಅವರು ದ್ರೋಹಿ ವಂಶದವರು, ಒಂದು ವೇಳೆ ಕೇಳದೆ ಹೋಗಬಹುದು; ಕೇಳಿದರೂ ಕೇಳದೆ ಹೋದರೂ ಒಬ್ಬ ಪ್ರವಾದಿ ತಮ್ಮ ಮಧ್ಯೆ ಕಾಣಿಸಿಕೊಂಡಿದ್ದಾನೆಂದು ತಿಳಿದುಕೊಳ್ಳುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಅವರು ದ್ರೋಹಿವಂಶದವರು, ಒಂದು ವೇಳೆ ಕೇಳದೆ ಹೋದಾರು; ಕೇಳಿದರೂ ಕೇಳದೆ ಹೋದರೂ ಒಬ್ಬ ಪ್ರವಾದಿಯು ತಮ್ಮ ಮಧ್ಯದಲ್ಲಿ ಕಾಣಿಸಿಕೊಂಡಿದ್ದಾನೆಂದು ತಿಳಿದೇ ಇರುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಜನರು ನಿನ್ನ ಮಾತನ್ನು ಕೇಳಬಹುದು ಅಥವಾ ಕೇಳದಿರಬಹುದು: ಯಾಕೆಂದರೆ ಅವರು ದಂಗೆಕೋರರಾಗಿದ್ದಾರೆ. ನನ್ನ ಮುಂದೆ ಪಾಪಮಾಡುವುದನ್ನು ನಿಲ್ಲಿಸಲಿಲ್ಲ. ಅವರು ಯಾವಾಗಲೂ ನನ್ನ ವಿರುದ್ಧ ದಂಗೆ ಏಳುವರು. ಆದ್ದರಿಂದ ನಾನು ತಿಳಿಸಿದ್ದನ್ನೆ ನೀನು ಹೇಳಬೇಕು. ಆಗ ಅವರು ತಮ್ಮ ಮಧ್ಯೆ ಒಬ್ಬ ಪ್ರವಾದಿ ಇದ್ದಾನೆಂದು ಗ್ರಹಿಸಿಕೊಳ್ಳುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಅವರು ಕೇಳಲಿ ಅಥವಾ ಕೇಳದೇ ಇರಲಿ, ಏಕೆಂದರೆ ಅವರು ತಿರುಗಿಬೀಳುವ ಜನರು, ಆದರೆ ತಮ್ಮೊಳಗೆ ಪ್ರವಾದಿ ಇರುವನೆಂದು ತಿಳಿದುಕೊಂಡರೆ ಸಾಕು. ಅಧ್ಯಾಯವನ್ನು ನೋಡಿ |