Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 20:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಏಳನೆಯ ವರ್ಷದ, ಐದನೆಯ ತಿಂಗಳಿನ ಹತ್ತನೆಯ ದಿನದಲ್ಲಿ ಇಸ್ರಾಯೇಲಿನ ಹಿರಿಯರಲ್ಲಿ ಕೆಲವರು ಯೆಹೋವನನ್ನು ಪ್ರಶ್ನೆ ಕೇಳುವುದಕ್ಕೆ ಬಂದು ನನ್ನ ಮುಂದೆ ಕುಳಿತುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಏಳನೆಯ ವರ್ಷದ ಐದನೆಯ ತಿಂಗಳಿನ ಹತ್ತನೆಯ ದಿನದಲ್ಲಿ ಇಸ್ರಯೇಲಿನ ಹಿರಿಯರಲ್ಲಿ ಕೆಲವರು ಸರ್ವೇಶ್ವರನನ್ನು ಪ್ರಶ್ನಿಸುವುದಕ್ಕೆ ಬಂದು ನನ್ನ ಮುಂದೆ ಕುಳಿತುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 [ಯೆಹೋಯಾಖೀನನು ಸೆರೆಯಾದ] ಏಳನೆಯ ವರುಷದ ಐದನೆಯ ತಿಂಗಳಿನ ಹತ್ತನೆಯ ದಿನದಲ್ಲಿ ಇಸ್ರಾಯೇಲಿನ ಹಿರಿಯರಲ್ಲಿ ಕೆಲವರು ಯೆಹೋವನನ್ನು ಪ್ರಶ್ನೆಕೇಳುವದಕ್ಕೆ ಬಂದು ನನ್ನ ಮುಂದೆ ಕೂತುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಮಾರ್ಗದರ್ಶನಕ್ಕಾಗಿ ಯೆಹೋವನನ್ನು ಕೇಳಲು ಒಂದು ದಿನ ಇಸ್ರೇಲಿನ ಹಿರಿಯರಲ್ಲಿ ಕೆಲವರು ನನ್ನ ಬಳಿಗೆ ಬಂದರು. ಅದು ಸೆರೆವಾಸದ ಏಳನೆ ವರ್ಷದ ಐದನೆ ತಿಂಗಳಿನ ಹತ್ತನೆಯ ದಿನ. ಹಿರಿಯರು ನನ್ನ ಎದುರಿನಲ್ಲಿ ಕುಳಿತುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಏಳನೆಯ ವರ್ಷದ, ಐದನೆಯ ತಿಂಗಳಿನ, ಹತ್ತನೆಯ ದಿನದಲ್ಲಿ ಇಸ್ರಾಯೇಲಿನ ಹಿರಿಯರಲ್ಲಿ ಕೆಲವರು ಯೆಹೋವ ದೇವರ ಬಳಿಗೆ ವಿಚಾರಣೆಗಾಗಿ ಬಂದು ನನ್ನ ಮುಂದೆ ಕುಳಿತುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 20:1
27 ತಿಳಿವುಗಳ ಹೋಲಿಕೆ  

ಯೆಹೋಯಾಖೀನನು ಸೆರೆಯಾದ ಆರನೆಯ ವರ್ಷದ, ಆರನೆಯ ತಿಂಗಳಿನ, ಐದನೆಯ ದಿನದಲ್ಲಿ ನಾನೂ ಮತ್ತು ಯೆಹೂದದ ಹಿರಿಯರೂ ನನ್ನ ಮನೆಯೊಳಗೆ ಎದುರಾಗಿ ಕುಳಿತಿರಲು ಕರ್ತನಾದ ಯೆಹೋವನ ಹಸ್ತಸ್ಪರ್ಶದಿಂದ ನಾನು ಪರವಶನಾದೆನು.


ನಾವು ಸೆರೆಯಾದ ಇಪ್ಪತ್ತೈದನೆಯ ವರ್ಷದ, ಮೊದಲನೆಯ ತಿಂಗಳಿನ, ಹತ್ತನೆಯ ದಿನದಲ್ಲಿ, ಪಟ್ಟಣವು ಹಾಳಾದ ಮೇಲೆ ಹದಿನಾಲ್ಕನೆಯ ವರ್ಷದ ಆ ದಿನದಲ್ಲೇ ಯೆಹೋವನ ಹಸ್ತಸ್ಪರ್ಶದಿಂದ ನಾನು ಪರವಶನಾಗಲು, ಆತನು ನನ್ನನ್ನು ಅಲ್ಲಿಗೆ ಬರಮಾಡಿದನು.


(ಯೆಹೋಯಾಖೀನನು ಸೆರೆಯಾದ) ಹನ್ನೆರಡನೆಯ ವರ್ಷದ, ಹನ್ನೆರಡನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು,


ಹನ್ನೊಂದನೆಯ ವರ್ಷದ, ಮೂರನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು,


ಹನ್ನೊಂದನೆಯ ವರ್ಷದ, ಮೊದಲನೆಯ ತಿಂಗಳಿನ ಏಳನೆಯ ದಿನದಲ್ಲಿ ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು,


ಇಪ್ಪತ್ತೇಳನೆಯ ವರ್ಷದ, ಮೊದಲನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು,


ಹತ್ತನೆಯ ವರ್ಷದ, ಹತ್ತನೆಯ ತಿಂಗಳಿನ ಹನ್ನೆರಡನೆಯ ದಿನದಲ್ಲಿ ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು,


ಹನ್ನೊಂದನೆಯ ವರ್ಷದ, ತಿಂಗಳಿನ ಮೊದಲನೆಯ ದಿನದಲ್ಲಿ ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು,


ಒಂಭತ್ತನೆಯ ವರ್ಷದ, ಹತ್ತನೆಯ ತಿಂಗಳಿನ, ಹತ್ತನೆಯ ದಿನದಲ್ಲಿ ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು,


ಅರಸನಾದ ಯೆಹೋಯಾಖೀನನು ಸೆರೆಯಾದ ಐದನೆಯ ವರ್ಷದ ನಾಲ್ಕನೆಯ ತಿಂಗಳಿನ ಐದನೆಯ ದಿನದಲ್ಲಿ,


“ನಾನು ಯೆಹೂದ್ಯನು, ಕಿಲಿಕ್ಯದ ತಾರ್ಸದಲ್ಲಿ ಹುಟ್ಟಿದವನು, ಆದರೆ ಈ ಪಟ್ಟಣದಲ್ಲೇ ಬೆಳೆದವನು. ಗಮಲಿಯೇಲನ ಪಾದಸನ್ನಿಧಿಯಲ್ಲಿ, ನಮ್ಮ ಪೂರ್ವಿಕರ ಧರ್ಮಶಾಸ್ತ್ರದಲ್ಲಿ ಪೂರ್ಣ ಶಿಕ್ಷಣವನ್ನು ಪಡೆದವನು; ನೀವೆಲ್ಲರೂ ಈಹೊತ್ತು ದೇವರ ವಿಷಯದಲ್ಲಿ ಅಭಿಮಾನಿಗಳಾಗಿರುವಂತೆಯೇ, ನಾನೂ ಅಭಿಮಾನಿಯಾಗಿದ್ದೆನು.


ಆಕೆಗೆ ಮರಿಯಳೆಂಬ ಒಬ್ಬ ತಂಗಿ ಇದ್ದಳು. ಈಕೆಯು ಯೇಸುವಿನ ಪಾದಗಳ ಬಳಿಯಲ್ಲಿ ಕುಳಿತುಕೊಂಡು ಆತನ ವಾಕ್ಯವನ್ನು ಕೇಳುತ್ತಿದ್ದಳು.


ಜನರು ನಡೆದ ಸಂಗತಿಯನ್ನು ನೋಡುವುದಕ್ಕೆ ಹೊರಟು ಯೇಸುವಿದ್ದಲ್ಲಿಗೆ ಬಂದಾಗ ದೆವ್ವಗಳು ಬಿಟ್ಟುಹೋಗಿದ್ದ ಆ ಮನುಷ್ಯನು ಬಟ್ಟೆಯನ್ನು ಧರಿಸಿಕೊಂಡು ಸ್ವಸ್ಥಬುದ್ಧಿಯಿಂದ ಯೇಸುವಿನ ಪಾದಗಳ ಬಳಿಯಲ್ಲಿ ಕುಳಿತಿರುವುದನ್ನು ಕಂಡು ಹೆದರಿದರು.


ಮೂರು ದಿನದ ಮೇಲೆ ಆತನನ್ನು ದೇವಾಲಯದಲ್ಲಿ ಕಂಡರು. ಆತನು ಬೋಧಕರ ನಡುವೆ ಕುಳಿತುಕೊಂಡು ಅವರ ಉಪದೇಶವನ್ನು ಕೇಳುತ್ತಾ ಪ್ರಶ್ನೆಮಾಡುತ್ತಾ ಇದ್ದನು.


ಆತನ ಬಳಿಗೆ ತಮ್ಮ ಶಿಷ್ಯರನ್ನು ಹೆರೋದ್ಯರ ಜೊತೆಮಾಡಿ ಕಳುಹಿಸಿದರು. ಇವರು ಯೇಸುವಿಗೆ, “ಗುರುವೇ, ನೀನು ಸತ್ಯವಂತನು, ದೇವರ ಮಾರ್ಗವನ್ನು ಸತ್ಯವಾಗಿ ಬೋಧಿಸುವವನು, ಯಾರಿಗೂ ಹೆದರದವನು; ನೀನು ಜನರ ದಾಕ್ಷಿಣ್ಯಕ್ಕೆ ತಕ್ಕಂತೆ ಮಾತನಾಡುವವನಲ್ಲ ಎಂದು ಬಲ್ಲೆವು.


ಆಮೇಲೆ ಅರಸನಾದ ಚಿದ್ಕೀಯನು ಅವನನ್ನು ಕರೆಕಳುಹಿಸಿ, “ಯೆಹೋವನಿಂದ ದೈವೋಕ್ತಿಯು ದೊರೆಯಿತೋ?” ಎಂದು ತನ್ನ ಮನೆಯಲ್ಲಿ ರಹಸ್ಯವಾಗಿ ವಿಚಾರಿಸಲು ಯೆರೆಮೀಯನು, “ಹೌದು, ದೊರೆಯಿತು, ನೀನು ಬಾಬೆಲಿನ ಅರಸನ ಕೈಯಲ್ಲಿ ಸಿಕ್ಕಿಬೀಳುವಿ” ಅಂದನು.


ಅವರಂತು ದಿನದಿನವೂ ನನ್ನ ದರ್ಶನಕ್ಕಾಗಿ ಬಂದು, ನನ್ನ ಮಾರ್ಗವನ್ನು ತಿಳಿದುಕೊಳ್ಳುವುದರಲ್ಲಿ ಹೆಚ್ಚಳಪಡುತ್ತಾರೆ; ತನ್ನ ದೇವರ ನಿಯಮಗಳನ್ನು ಬಿಡದೆ ಧರ್ಮವನ್ನಾಚರಿಸುವ ಜನಾಂಗವೋ ಎಂಬಂತೆ, ಧೈರ್ಯವಾಗಿ ನನ್ನಿಂದ ನ್ಯಾಯವಿಧಿಗಳನ್ನು ಕೇಳಿಕೊಂಡು ದೇವದರ್ಶನದಲ್ಲಿ ಆನಂದಿಸುತ್ತಾರೆ.


ಯೆಹೋವನು ಹೇಳುವುದೇನೆಂದರೆ, “ಈ ಜನರು ಮಾತಿನಿಂದ ನನ್ನನ್ನು ಸಮೀಪಿಸಿ, ತುಟಿಯಿಂದ ನನ್ನನ್ನು ಸನ್ಮಾನಿಸುತ್ತಾರೆ, ಮನಸ್ಸನ್ನೋ ದೂರಮಾಡಿಕೊಂಡು, ಬಾಯಿಪಾಠವಾಗಿ ಕಲಿತಿರುವ ಮನುಷ್ಯರ ಆಜ್ಞೆಗೆ ಸರಿಯಾದ ಭಯಭಕ್ತಿಯನ್ನು ಮಾತ್ರ ನನ್ನಲ್ಲಿಟ್ಟಿದ್ದಾರೆ.


ಎಲೀಷನು ಇಸ್ರಾಯೇಲರ ಅರಸನಿಗೆ, “ನನಗೂ ನಿನಗೂ ಏನು ಸಂಬಂಧ? ನಿನ್ನ ತಂದೆತಾಯಿಗಳ ಪ್ರವಾದಿಗಳ ಬಳಿಗೆ ಹೋಗು” ಎಂದು ಹೇಳಿದನು. ಅದಕ್ಕೆ ಇಸ್ರಾಯೇಲರ ಅರಸನು, “ಹಾಗೆ ಹೇಳಬೇಡ, ಯೆಹೋವನು ಈ ಮೂರು ಮಂದಿ ಅರಸರಾದ ನಮ್ಮನ್ನು ಮೋವಾಬ್ಯರ ಕೈಗೆ ಒಪ್ಪಿಸುವುದಕ್ಕೋಸ್ಕರ ಇಲ್ಲಿಗೆ ಬರಮಾಡಿದನಲ್ಲವೇ?” ಎಂದನು.


ಎಲೀಷನು ಊರಿನ ಹಿರಿಯರೊಡನೆ ತನ್ನ ಮನೆಯಲ್ಲಿ ಕುಳಿತುಕೊಂಡಿದ್ದನು. ಅರಸನು ತನ್ನ ಹತ್ತಿರವಿದ್ದ ಒಬ್ಬ ಆಳನ್ನು ಕಳುಹಿಸಿದನು. ಅವನು ಇನ್ನೂ ದೂರದಲ್ಲಿರುವಾಗಲೇ ಎಲೀಷನು ಹಿರಿಯರಿಗೆ, “ನೋಡಿರಿ, ಆ ಕೊಲೆಗಾರನ ಮಗನು ನನ್ನ ತಲೆಯನ್ನು ಹಾರಿಸುವುದಕ್ಕೆ ಆಳನ್ನು ಕಳುಹಿಸಿದ್ದಾನೆ. ಆಳು ಇಲ್ಲಿಗೆ ಬಂದ ಕೂಡಲೆ ನೀವು ಬಾಗಿಲನ್ನು ಮುಚ್ಚಿ ಅವನು ಒಳಗೆ ಬಾರದಂತೆ ಅದನ್ನು ಒತ್ತಿ ಹಿಡಿಯಿರಿ. ಅವನ ಹಿಂದೆಯೇ ಬರುತ್ತಿರುವ ಅವನ ಒಡೆಯನ ಕಾಲಿನ ಸಪ್ಪಳವು ಕೇಳಿಸುತ್ತಿದೆಯಲ್ಲಾ” ಎಂದು ಹೇಳಿದನು.


“ದಯಮಾಡಿ ಯೆಹೋವನ ಚಿತ್ತವೇನೆಂದು ಆತನನ್ನು ನಮಗೋಸ್ಕರ ವಿಚಾರಿಸು; ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ನಮ್ಮ ವಿರುದ್ಧವಾಗಿ ಯುದ್ಧ ಮಾಡುತ್ತಿದ್ದಾನಲ್ಲಾ; ಒಂದು ವೇಳೆ ಯೆಹೋವನು ತನ್ನ ಸಮಸ್ತ ಅದ್ಭುತಕಾರ್ಯಗಳಿಗೆ ಅನುಗುಣವಾಗಿ ನಮ್ಮ ಪಕ್ಷವನ್ನು ವಹಿಸಿ ಈ ಶತ್ರುವು ನಮ್ಮ ಕಡೆಯಿಂದ ತೊಲಗುವಂತೆ ಮಾಡಿಯಾನು” ಎಂದು ಅವರ ಮೂಲಕ ವಿಜ್ಞಾಪಿಸಿದಾಗ ಯೆಹೋವನಿಂದ ಯೆರೆಮೀಯನಿಗೆ ದೈವೋಕ್ತಿಯು ದೊರೆಯಿತು.


ಇಸ್ರಾಯೇಲ್ ವಂಶದ ಎಪ್ಪತ್ತು ಮಂದಿ ಹಿರಿಯರೂ ಮತ್ತು ಅವರ ಮಧ್ಯದಲ್ಲಿ ಶಾಫಾನನ ಮಗನಾದ ಯಾಜನ್ಯನೂ ತಮ್ಮ ತಮ್ಮ ಕೈಗಳಲ್ಲಿ ಧೂಪಾರತಿಗಳನ್ನು ಹಿಡಿದುಕೊಂಡು ಆ ಚಿತ್ರಗಳ ಮುಂದೆ ನಿಂತಿದ್ದರು; ಧೂಪದ ಸುವಾಸನೆಯ ಧೂಮವು ಮೇಘವಾಗಿ ಏರುತ್ತಿತ್ತು.


ಆಗ ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು