ಯೆಹೆಜ್ಕೇಲನು 20:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಆ ಮೇಲೆ ಸಕಲ ದೇಶ ಶಿರೋಮಣಿಯಾದ ಯಾವ ದೇಶವನ್ನು ವಾಗ್ದಾನಮಾಡಿದೆನೋ, ಹಾಲೂ ಮತ್ತು ಜೇನು ಹರಿಯುವ ಆ ದೇಶಕ್ಕೆ ನಿಮ್ಮನ್ನು ಸೇರಿಸುವುದಿಲ್ಲ ಎಂದು ಅರಣ್ಯದಲ್ಲಿ ಅವರಿಗೆ ಪ್ರಮಾಣ ಮಾಡಿದೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಆಮೇಲೆ, ‘ನಾಡುಗಳಲ್ಲೆಲ್ಲಾ ಶ್ರೇಷ್ಠವಾದ ನಾಡಿಗೆ, ಹಾಲೂ ಜೇನೂ ಹರಿಯುವ ಆ ವಾಗ್ದತ್ತನಾಡಿಗೆ ನಿಮ್ಮನ್ನು ಸೇರಿಸೆನು’ ಎಂದು ಮರುಭೂಮಿಯಲ್ಲಿ ಅವರಿಗೆ ಪ್ರಮಾಣಮಾಡಿ ಹೇಳಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಆಮೇಲೆ ಸಕಲದೇಶಶಿರೋಮಣಿಯಾದ ಯಾವ ದೇಶವನ್ನು ಅವರಿಗೆ ವಾಗ್ದಾನ ಮಾಡಿದೆನೋ ಹಾಲೂ ಜೇನೂ ಹರಿಯುವ ಆ ದೇಶಕ್ಕೆ ನಿಮ್ಮನ್ನು ಸೇರಿಸೆನೆಂದು ಅರಣ್ಯದಲ್ಲಿ ಅವರಿಗೆ ಪ್ರಮಾಣ ಮಾಡಿದೆನು; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಅವರು ಅಡವಿಯಲ್ಲಿದ್ದಾಗ ನಾನು ಮತ್ತೊಂದು ಪ್ರಮಾಣವನ್ನು ಮಾಡಿದೆನು. ನಾನು ಅವರಿಗೆ ಕೊಟ್ಟಿದ್ದ ದೇಶಕ್ಕೆ ಅವರನ್ನು ಹೋಗಗೊಡಿಸುವದಿಲ್ಲ ಎಂದು ಪ್ರಮಾಣ ಮಾಡಿದೆನು. ಆ ದೇಶವು ಅತ್ಯುತ್ತಮವಾಗಿತ್ತು. ಎಲ್ಲಾ ದೇಶಗಳಿಗಿಂತ ಬಹು ಸುಂದರವಾದ ದೇಶ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಆದರೂ ಹಾಲೂ ಜೇನೂ ಹರಿಯುವಂಥ ದೇಶಗಳಿಗೆ ಕೀರ್ತಿಯಾಗಿರುವಂಥ ಆ ದೇಶದಲ್ಲಿ ಅವರನ್ನು ಸೇರಿಸುವುದಿಲ್ಲವೆಂದು ಮರುಭೂಮಿಯಲ್ಲಿ ಅವರಿಗೆ ನನ್ನ ಕೈಯೆತ್ತಿ ಪ್ರಮಾಣಮಾಡಿದೆನು. ಅಧ್ಯಾಯವನ್ನು ನೋಡಿ |