ಯೆಹೆಜ್ಕೇಲನು 20:21 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 “ಆದರೆ ಆ ಸಂತಾನದವರಾದರೋ ನನ್ನ ಮೇಲೆ ತಿರುಗಿ ಬಿದ್ದರು; ನನ್ನ ಆಜ್ಞೆಗಳನ್ನು ಅನುಸರಿಸಲಿಲ್ಲ; ಕೈಗೊಂಡವರಿಗೆ ಜೀವಾಧಾರವಾದ ನನ್ನ ವಿಧಿಗಳನ್ನು ಅನುಸರಿಸಿ ನಡೆಯಲಿಲ್ಲ; ನಾನು ನೇಮಿಸಿದ ಸಬ್ಬತ್ ದಿನಗಳನ್ನು ಹೊಲೆ ಮಾಡಿದರು; ಆದುದರಿಂದ ನಾನು ಅರಣ್ಯದಲ್ಲಿ ಇವರ ಮೇಲೆ ನನ್ನ ರೋಷಾಗ್ನಿಯನ್ನು ಸುರಿಸಿ, ನನ್ನ ಕೋಪವನ್ನು ತೀರಿಸಿಕೊಳ್ಳುವೆನು” ಅಂದುಕೊಂಡೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 “ಆದರೆ ಆ ಸಂತಾನದವರು ನನ್ನನ್ನು ಪ್ರತಿಭಟಿಸಿದರು; ನನ್ನ ಆಜ್ಞೆಗಳನ್ನು ಅನುಸರಿಸಲಿಲ್ಲ; ಕೈಗೊಂಡವರಿಗೆ ಜೀವಾಧಾರವಾದ ನನ್ನ ವಿಧಿಗಳನ್ನು ಅನುಸರಿಸಿ ನಡೆಯಲಿಲ್ಲ; ನಾನು ನೇಮಿಸಿದ ಸಬ್ಬತ್ ದಿನಗಳನ್ನು ಅಪವಿತ್ರಮಾಡಿದರು. ಆದುದರಿಂದ ನಾನು ‘ಮರುಭೂಮಿಯಲ್ಲೇ ಇವರ ಮೇಲೆ ನನ್ನ ರೋಷಾಗ್ನಿಯನ್ನು ಹರಿಸಿ, ನನ್ನ ಕೋಪವನ್ನು ತೀರಿಸಿಕೊಳ್ಳುವೆನು’ ಎಂದುಕೊಂಡೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ಆ ಸಂತಾನದವರಾದರೋ ನನ್ನ ಮೇಲೆ ತಿರುಗಿಬಿದ್ದರು; ನನ್ನ ಆಜ್ಞೆಗಳನ್ನು ಅನುಸರಿಸಲಿಲ್ಲ; ಕೈಕೊಂಡವರಿಗೆ ಜೀವಾಧಾರವಾದ ನನ್ನ ವಿಧಿಗಳನ್ನು ಕೈಕೊಂಡು ನಡಿಸಲಿಲ್ಲ; ನಾನು ನೇವಿುಸಿದ ಸಬ್ಬತ್ ದಿನಗಳನ್ನು ಹೊಲೆಮಾಡಿದರು; ಆದದರಿಂದ ನಾನು ಅರಣ್ಯದಲ್ಲಿ ಇವರ ಮೇಲೆ ನನ್ನ ರೋಷಾಗ್ನಿಯನ್ನು ಸುರಿಸಿ ನನ್ನ ಕೋಪವನ್ನು ತೀರಿಸಿಕೊಳ್ಳುವೆನು ಅಂದುಕೊಂಡೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 “‘ಆದರೆ ಅವರ ಮಕ್ಕಳು ನನಗೆ ವಿರುದ್ಧವಾಗಿ ದಂಗೆ ಎದ್ದರು. ಅವರು ನನ್ನ ಕಟ್ಟಳೆಗಳನ್ನು ಅನುಸರಿಸಲಿಲ್ಲ. ಅವರು ನನ್ನ ಆಜ್ಞೆಗಳಿಗೆ ವಿಧೇಯರಾಗಲಿಲ್ಲ. ನಾನು ಹೇಳಿದ್ದನ್ನು ಅವರು ಮಾಡಲಿಲ್ಲ. ಅವು ಒಳ್ಳೆಯ ಕಟ್ಟಳೆಗಳಾಗಿದ್ದವು. ಅವುಗಳಿಗೆ ವಿಧೇಯರಾಗುವವರು ಜೀವಿಸುವರು. ಅವರು ನನ್ನ ಸಬ್ಬತ್ ದಿವಸಗಳನ್ನು ಆಚರಿಸಲಿಲ್ಲ. ಆದ್ದರಿಂದ ಮರುಭೂಮಿಯಲ್ಲಿ ಅವರನ್ನು ಸಂಪೂರ್ಣವಾಗಿ ನಿರ್ಮೂಲ ಮಾಡಲು ನಿರ್ಧರಿಸಿದೆನು. ನನ್ನ ಕೋಪದ ತೀಕ್ಷ್ಣತೆಯನ್ನು ಅವರು ತಿಳಿದುಕೊಳ್ಳಬೇಕೆಂದು ತೀರ್ಮಾನಿಸಿದೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 “ ‘ಆದರೆ ಮಕ್ಕಳು ನನಗೆ ವಿರೋಧವಾಗಿ ತಿರುಗಿಬಿದ್ದರು. ಯಾವವುಗಳನ್ನು ಮನುಷ್ಯನು ಮಾಡಿದರೆ ಬದುಕುವನೋ, ಆ ನನ್ನ ನಿಯಮಗಳಲ್ಲಿ ನಡೆಯಲಿಲ್ಲ ಮತ್ತು ನನ್ನ ನ್ಯಾಯಗಳನ್ನು ಜಾಗರೂಕತೆಯಿಂದ ಪಾಲಿಸಿ ನಡೆಯಲಿಲ್ಲ. ನನ್ನ ಸಬ್ಬತ್ ದಿನಗಳನ್ನು ಅಪವಿತ್ರಪಡಿಸಿದಿರಿ. ಆಗ ಅವರ ಮೇಲೆ ನನ್ನ ರೋಷವನ್ನು ಸುರಿದುಬಿಡುವೆನೆಂದೂ, ನನ್ನ ಕೋಪವನ್ನು ಮರುಭೂಮಿಯಲ್ಲಿ ಅವರ ಮೇಲೆ ತೀರಿಸಿ ಬಿಡುವೆನೆಂದೂ ಹೇಳಿದೆನು. ಅಧ್ಯಾಯವನ್ನು ನೋಡಿ |
“ನಮ್ಮ ಪೂರ್ವಿಕರು ಈ ಗ್ರಂಥದಲ್ಲಿ ಬರೆದಿರುವ ಯೆಹೋವನ ಆಜ್ಞೆಗಳನ್ನೆಲ್ಲಾ ಕೈಕೊಳ್ಳದೆ ಹೋದುದರಿಂದಲೇ ಯೆಹೋವನು ತನ್ನ ಮಹಾರೌದ್ರವನ್ನು ನಮ್ಮ ಮೇಲೆ ಸುರಿದಿದ್ದಾನೆ; ಆದುದರಿಂದ ನೀವು ನನಗೋಸ್ಕರವೂ ಹಾಗೂ ಇಸ್ರಾಯೇಲ್ಯರಲ್ಲಿ, ಯೆಹೂದ್ಯರಲ್ಲಿ ಉಳಿದಿರುವವರಿಗೋಸ್ಕರವೂ ಯೆಹೋವನ ಬಳಿಗೆ ಹೋಗಿ ನಮಗೆ ಸಿಕ್ಕಿರುವ ಈ ಗ್ರಂಥದ ವಾಕ್ಯಗಳ ಅರ್ಥವನ್ನು ವಿವರವಾಗಿ ತಿಳಿದು ಬರಲು” ಆಜ್ಞಾಪಿಸಿದನು.