Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 20:22 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 “ಆದರೂ ನಾನು ಯಾವ ಜನಾಂಗಗಳ ಮುಂದೆ ಅವರನ್ನು ಪಾರು ಮಾಡಿದೆನೋ ಆ ಜನಾಂಗಗಳ ಮುಂದೆ ನನ್ನ ಹೆಸರು ಅಪಕೀರ್ತಿಗೆ ಗುರಿಯಾಗಬಾರದೆಂದು ನನ್ನ ಹೆಸರಿನ ನಿಮಿತ್ತವೇ ಸಹಿಸಿಕೊಂಡು ಕೈಯನ್ನು ಹಿಂದಕ್ಕೆ ತೆಗೆದುಕೊಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಆದರೂ ನಾನು ಯಾವ ಜನಾಂಗಗಳ ಮುಂದೆ ಅವರನ್ನು ಬಿಡುಗಡೆ ಮಾಡಿದೆನೋ, ಆ ಜನಾಂಗಗಳ ಮುಂದೆ ನನ್ನ ಹೆಸರು ಅಪಕೀರ್ತಿಗೆ ಗುರಿಯಾಗಬಾರದೆಂದು ನನ್ನ ಹೆಸರಿನ ನಿಮಿತ್ತವೇ ಸಹಿಸಿಕೊಂಡು, ಕೈಯನ್ನು ಹಿಂದಕ್ಕೆ ತೆಗೆದುಕೊಂಡೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಆದರೂ ನಾನು ಯಾವ ಜನಾಂಗಗಳ ಮುಂದೆ ಅವರನ್ನು ಪಾರುಮಾಡಿದೆನೋ ಆ ಜನಾಂಗಗಳ ಮುಂದೆ ನನ್ನ ಹೆಸರು ಅಪಕೀರ್ತಿಗೆ ಗುರಿಯಾಗಬಾರದೆಂದು ನನ್ನ ಹೆಸರಿನ ನಿವಿುತ್ತವೇ ಸಹಿಸಿಕೊಂಡು ಕೈಯನ್ನು ಹಿಂದಕ್ಕೆ ತೆಗೆದುಕೊಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಆದರೆ ನಾನು ನನ್ನನ್ನು ಹಾಗೆ ಮಾಡದಂತೆ ತಡೆದೆನು. ಇಸ್ರೇಲರನ್ನು ಈಜಿಪ್ಟಿನಿಂದ ಹೊರತರುವದನ್ನು ಬೇರೆ ಜನಾಂಗದವರು ನೋಡಿರುತ್ತಾರೆ. ಆದ್ದರಿಂದ ನಾನು ಅವರನ್ನು ನಾಶಮಾಡಲಿಲ್ಲ. ನನ್ನ ಹೆಸರಿನ ಘನತೆಯನ್ನು ಉಳಿಸಿಕೊಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಆದರೂ ನಾನು ನನ್ನ ಕೈಯನ್ನು ಹಿಂತೆಗೆದು, ನಾನು ಅವರನ್ನು ಯಾರ ಕಣ್ಣುಗಳ ಮುಂದೆ ಹೊರಗೆ ಬರಮಾಡಿದೆನೋ, ಆ ಜನಾಂಗಗಳ ದೃಷ್ಟಿಯಲ್ಲಿ ನನ್ನ ಹೆಸರು ಅಪವಿತ್ರವಾಗದ ಹಾಗೆ, ನನ್ನ ಹೆಸರಿಗೋಸ್ಕರವೇ ಕೆಲಸ ಮಾಡಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 20:22
14 ತಿಳಿವುಗಳ ಹೋಲಿಕೆ  

‘ಆದರೂ ಯಾವ ಜನಾಂಗಗಳ ಮುಂದೆ ಅವರನ್ನು ಪಾರುಮಾಡಿದೆನೋ, ಆ ಜನಾಂಗಗಳ ಮುಂದೆ ನನ್ನ ಹೆಸರು ಅಪಕೀರ್ತಿಗೆ ಗುರಿಯಾಗಬಾರದೆಂದು ನನ್ನ ಹೆಸರಿನ ನಿಮಿತ್ತವೇ ಸಹಿಸಿಕೊಂಡೆನು.


‘ಆದರೂ ನಿಮ್ಮನ್ನು ಐಗುಪ್ತ ದೇಶದೊಳಗಿಂದ ಪಾರುಮಾಡುವೆನು ಎಂಬುದಾಗಿ ಜನಾಂಗಗಳ ಮುಂದೆಯೇ ನನ್ನನ್ನು ಇವರಿಗೆ ಪ್ರಕಟಿಸಿಕೊಂಡೆನಲ್ಲಾ ಎಂದು ಯೋಚಿಸಿ, ಅವರ ಸುತ್ತಣ ಆ ಜನಾಂಗಗಳ ಮುಂದೆ ನನ್ನ ಹೆಸರು ಅಪಕೀರ್ತಿಗೆ ಗುರಿಯಾಗದಂತೆ ನನ್ನ ಹೆಸರಿನ ನಿಮಿತ್ತವೇ ಸಹಿಸಿಕೊಂಡೆನು.


ನಿನ್ನ ನಾಮದ ಮೇಲೆ ದೃಷ್ಟಿಯಿಡು, ನಿನ್ನ ಮಹಿಮೆಯ ಸಿಂಹಾಸನವನ್ನು ಅಸಡ್ಡೆಮಾಡಬೇಡ. ಅವಮಾನಪಡಿಸಬೇಡ; ನೀನು ನಮ್ಮೊಂದಿಗೆ ಮಾಡಿಕೊಂಡ ಒಡಂಬಡಿಕೆಯನ್ನು ಜ್ಞಾಪಕಕ್ಕೆ ತಂದುಕೋ, ಅದನ್ನು ಭಂಗಪಡಿಸದಿರು.


ಆದರೂ ಆತನು ಕರುಣಾಳುವೂ, ಅಪರಾಧಿಗಳನ್ನು ಸಂಹರಿಸದೆ ಕ್ಷಮಿಸುವವನೂ ಆಗಿ, ತನ್ನ ಸಿಟ್ಟನ್ನೆಲ್ಲಾ ಏರಗೊಡಿಸದೆ, ಅದನ್ನು ಹಲವು ಸಾರಿ ತಡೆಯುತ್ತಾ ಬಂದನು.


ಆದರೂ ನಾನು ಅವರನ್ನು ನಾಶ ಮಾಡಲಿಲ್ಲ; ನನ್ನ ಕಟಾಕ್ಷವು ಅವರನ್ನು ಉಳಿಸಿತು; ನಾನು ಅವರನ್ನು ಅರಣ್ಯದಲ್ಲಿ ನಿರ್ಮೂಲಮಾಡಲಿಲ್ಲ.’”


ಯೆಹೋವನೇ, ನಮ್ಮ ಅಪರಾಧಗಳು ನಮಗೆ ವಿರುದ್ಧವಾಗಿ ಸಾಕ್ಷಿಕೊಟ್ಟರೂ, ನಿನ್ನ ಹೆಸರಿನ ನಿಮಿತ್ತ ಕಾರ್ಯವನ್ನು ಸಾಧಿಸು. ನಮ್ಮ ದ್ರೋಹಗಳು ಬಹಳ, ನಿನ್ನ ವಿರುದ್ಧವಾಗಿ ಪಾಪವನ್ನು ಮಾಡಿದ್ದೇವೆ.


ನನ್ನ ಮೇಲೆತ್ತಿರುವ ನಿನ್ನ ಕೈಯನ್ನು ದೂರಮಾಡು, ನಿನ್ನ ಭಯವು ನನ್ನನ್ನು ಹೆದರಿಸದಿರಲಿ.


ಸ್ವಾಮೀ, ಕೇಳು! ಸ್ವಾಮೀ, ಕ್ಷಮಿಸು! ಸ್ವಾಮೀ, ಲಾಲಿಸು, ಕಾರ್ಯವನ್ನು ಸಾಧಿಸು! ತಡಮಾಡಬೇಡ! ನನ್ನ ದೇವರೇ, ನಿನ್ನ ಜನವೂ, ಪಟ್ಟಣವೂ ನಿನ್ನ ಹೆಸರಿನವುಗಳಾದ ಕಾರಣ ನಿನ್ನ ಹೆಸರನ್ನು ಕಾಪಾಡಿಕೋ!”


ನಮ್ಮ ದೇವರೇ, ನಿನ್ನ ಸೇವಕನ ಪ್ರಾರ್ಥನೆಯ ವಿಜ್ಞಾಪನೆಗಳನ್ನು ಈಗ ಲಾಲಿಸು; ಹಾಳಾಗಿರುವ ನಿನ್ನ ಪವಿತ್ರಾಲಯವನ್ನು ಕರ್ತನಾದ ನಿನ್ನ ಹೆಸರಿನ ನಿಮಿತ್ತವೇ ಪ್ರಸನ್ನಮುಖದಿಂದ ನೋಡು.


ಯೆಹೋವನು ಚೀಯೋನ್ ನಗರಿಯ ಕೋಟೆಯನ್ನು ನಾಶಪಡಿಸಬೇಕೆಂದು ನೂಲನ್ನು ಎಳೆದಿದ್ದಾನೆ; ಹಾಳು ಮಾಡುತ್ತಿರುವ ತನ್ನ ಕೈಯನ್ನು ಹಿಂದೆಗೆಯದೆ ಪೌಳಿಗೋಡೆಯೂ ಮತ್ತು ಕೋಟೆಯೂ ಮೊರೆಯುವಂತೆ ಮಾಡಿದ್ದಾನೆ; ಅವೆರಡೂ ಕುಸಿದುಹೋಗಿವೆ.


ನಮ್ಮನ್ನಲ್ಲ, ಯೆಹೋವನೇ, ನಮ್ಮನ್ನಲ್ಲ, ನಿನ್ನ ಪ್ರೀತಿ, ಸತ್ಯತೆಗಳ ನಿಮಿತ್ತವಾಗಿ ನಿನ್ನ ಹೆಸರನ್ನೇ ಘನಪಡಿಸು.


ಯೆಹೋವನೇ, ನನ್ನ ಪಾಪವು ಬಹುಘೋರವಾಗಿದೆ; ಆದರೂ ನಿನ್ನ ಹೆಸರಿನ ನಿಮಿತ್ತ ಅದನ್ನು ಕ್ಷಮಿಸು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು