Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 20:25 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 “ಇದಲ್ಲದೆ, ನಾನೇ ಯೆಹೋವನು ಎಂದು ಅವರು ತಿಳಿದುಕೊಳ್ಳುವಂತೆ ನಾನು ಅವರಿಗೆ ಅಹಿತವಾದ ಆಜ್ಞೆಗಳನ್ನೂ, ಜೀವಾಧಾರವಲ್ಲದ ವಿಧಿಗಳನ್ನೂ ನೇಮಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 “ಇದಲ್ಲದೆ, ‘ನಾನೇ ಸರ್ವೇಶ್ವರ’ ಎಂದು ಅವರು ತಿಳಿದುಕೊಳ್ಳುವಂತೆ ನಾನು ಅವರಿಗೆ ಅಹಿತವಾದ ಆಜ್ಞೆಗಳನ್ನೂ ಜೀವಾಧಾರವಲ್ಲದ ವಿಧಿಗಳನ್ನೂ ನೇಮಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಇದಲ್ಲದೆ ನಾನೇ ಯೆಹೋವನು ಎಂದು ಅವರು ತಿಳುಕೊಳ್ಳುವಂತೆ ನಾನು ಅವರಿಗೆ ಅಹಿತವಾದ ಆಜ್ಞೆಗಳನ್ನೂ ಜೀವಾಧಾರವಲ್ಲದ ವಿಧಿಗಳನ್ನೂ ನೇವಿುಸಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಆಗ ನಾನು ಅವರಿಗೆ ಒಳ್ಳೆಯದಲ್ಲದ ಕಟ್ಟಳೆಗಳನ್ನು ಕೊಟ್ಟೆನು. ಜೀವವನ್ನು ಕೊಡಲು ಅಸಾಧ್ಯವಾದ ನಿಯಮಗಳನ್ನು ವಿಧಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ನಾನೇ ಯೆಹೋವ ದೇವರು ಎಂದು ಅವರು ತಿಳಿದುಕೊಳ್ಳುವಂತೆ ನಾನು ಅವರಿಗೆ ಅಹಿತವಾದ ನಿಯಮಗಳನ್ನೂ, ಅವರು ಬದುಕಬಾರದ ನ್ಯಾಯಗಳನ್ನೂ ಕೊಟ್ಟೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 20:25
9 ತಿಳಿವುಗಳ ಹೋಲಿಕೆ  

ಆದುದರಿಂದ ಇವರು ಹಟಮಾರಿಗಳು; ತಮ್ಮ ಮನಸ್ಸಿನಂತೆ ನಡೆಯಲಿ ಎಂದು ಬಿಟ್ಟುಬಿಟ್ಟೆನು.


ಇಸ್ರಾಯೇಲ್ ವಂಶದವರೇ, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಹೋಗಿರಿ, ನಿಮ್ಮ ವಿಗ್ರಹಗಳನ್ನು ಸೇವಿಸಿಕೊಳ್ಳಿರಿ; ಇನ್ನು ಮುಂದೆ ನನ್ನ ಮಾತನ್ನು ಕೇಳಿಯೇ ಕೇಳುವಿರಿ, ಇನ್ನು ಮೇಲಾದರೂ ನನ್ನ ಪರಿಶುದ್ಧ ನಾಮವನ್ನು ನಿಮ್ಮ ಬಲಿಗಳಿಂದಲೂ, ವಿಗ್ರಹಗಳಿಂದಲೂ ನೀವು ಅಪಕೀರ್ತಿಗೆ ಗುರಿಮಾಡುವುದೇ ಇಲ್ಲ.”


ಅದಕ್ಕೆ ತಕ್ಕಂತೆ ನಾನು ಇವರಿಗೋಸ್ಕರ ಕುತಂತ್ರಗಳನ್ನು ಆರಿಸಿಕೊಂಡು ಇವರು ಅಂಜುತ್ತಿದ್ದ ವಿಪತ್ತುಗಳನ್ನು ಬರಮಾಡುವೆನು; ಏಕೆಂದರೆ ನಾನು ಕೂಗಿದಾಗ ಯಾರೂ ಉತ್ತರಕೊಡಲಿಲ್ಲ, ನಾನು ಹೇಳಿದಾಗ ಇವರು ಕೇಳಲಿಲ್ಲ; ನನ್ನ ಚಿತ್ತಕ್ಕೆ ವಿರುದ್ಧವಾದದ್ದನ್ನು ನಡೆಸಿ ನನಗೆ ಇಷ್ಟವಿಲ್ಲದ್ದನ್ನು ಆರಿಸಿಕೊಂಡರು.”


ಅವರು ತಮ್ಮ ಚೊಚ್ಚಲಮಕ್ಕಳನ್ನು ಆಹುತಿಕೊಟ್ಟು ಅರ್ಪಿಸುತ್ತಿದ್ದ ಬಲಿಗಳಿಂದಲೇ ಅವರನ್ನು ಹೊಲೆಗೆಡಿಸಿ, ಕೇವಲ ದುರಾವಸ್ಥೆಗೆ ತಂದೆನು.”


ನಿಮಗೂ ನಿಮ್ಮ ಪೂರ್ವಿಕರಿಗೂ ಗೊತ್ತಿಲ್ಲದ ಜನಾಂಗದವರ ದೇಶಕ್ಕೆ ಯೆಹೋವನು ನಿಮ್ಮನ್ನೂ ಮತ್ತು ನೀವು ನೇಮಿಸಿಕೊಳ್ಳುವ ಅರಸರನ್ನೂ ಒಯ್ಯುವನು; ಅಲ್ಲಿ ನೀವು ಮರದ ದೇವರುಗಳನ್ನೂ ಮತ್ತು ಕಲ್ಲಿನ ದೇವರುಗಳನ್ನೂ ಸೇವಿಸುವಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು