Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 20:28 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ನಾನು ಪ್ರಮಾಣ ಪೂರ್ವಕವಾಗಿ ಅವರಿಗೆ ವಾಗ್ದಾನ ಮಾಡಿದ ದೇಶಕ್ಕೆ ಅವರನ್ನು ಸೇರಿಸಿದ ಮೇಲೆ ಅವರು ಎತ್ತರವಾದ ಎಲ್ಲಾ ಗುಡ್ಡಗಳನ್ನೂ, ಸೊಂಪಾಗಿ ಬೆಳೆದಿರುವ ಎಲ್ಲಾ ಮರಗಳನ್ನೂ ನೋಡಿ ಅಲ್ಲಿ ಯಜ್ಞಪಶುಗಳನ್ನು ವಧಿಸಿ, ನನ್ನನ್ನು ರೇಗಿಸುವ ನೈವೇದ್ಯವನ್ನರ್ಪಿಸಿ, ಸುಗಂಧ ಹೋಮಮಾಡಿ, ಪಾನದ್ರವ್ಯವನ್ನು ಸುರಿದು, ಬಲಿ ಅರ್ಪಿಸುತ್ತಿದ್ದರು.’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ನಾನು ಪ್ರಮಾಣಪೂರ್ವಕವಾಗಿ ಅವರಿಗೆ ವಾಗ್ದಾನಮಾಡಿದ ನಾಡಿಗೆ ಅವರನ್ನು ಸೇರಿಸಿದ ಮೇಲೆ, ಅವರು ಎತ್ತರವಾದ ಎಲ್ಲ ಗುಡ್ಡಗಳನ್ನೂ ಸೊಂಪಾಗಿ ಬೆಳೆದಿರುವ ಎಲ್ಲ ಮರಗಳನ್ನೂ ನೋಡಿ, ಅಲ್ಲಿ ಯಜ್ಞಪಶುಗಳನ್ನು ವಧಿಸಿ, ನನ್ನನ್ನು ರೇಗಿಸುವ ನೈವೇದ್ಯವನ್ನರ್ಪಿಸಿ, ಸುಗಂಧಹೋಮಮಾಡಿ, ಪಾನದ್ರವ್ಯವನ್ನು ಸುರಿದು, ಬಲಿ ಒಪ್ಪಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ನಾನು ಪ್ರಮಾಣಪೂರ್ವಕವಾಗಿ ಅವರಿಗೆ ವಾಗ್ದಾನಮಾಡಿದ ದೇಶಕ್ಕೆ ಅವರನ್ನು ಸೇರಿಸಿದ ಮೇಲೆ ಅವರು ಎತ್ತರವಾದ ಎಲ್ಲಾ ಗುಡ್ಡಗಳನ್ನೂ ಸೊಂಪಾಗಿ ಬೆಳೆದಿರುವ ಎಲ್ಲಾ ಮರಗಳನ್ನೂ ನೋಡಿ ಅಲ್ಲಿ ಯಜ್ಞಪಶುಗಳನ್ನು ವಧಿಸಿ ನನ್ನನ್ನು ರೇಗಿಸುವ ನೈವೇದ್ಯವನ್ನವರ್ಪಿಸಿ ಸುಗಂಧಹೋಮಮಾಡಿ ಪಾನದ್ರವ್ಯವನ್ನು ಸುರಿದು ಒಪ್ಪಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ನಾನು ಅವರಿಗೆ ಕೊಡುವುದಾಗಿ ವಾಗ್ದಾನ ಮಾಡಿದ ದೇಶಕ್ಕೆ ಅವರನ್ನು ಕರೆದುಕೊಂಡು ಬಂದೆನು. ಆದರೆ ಎತ್ತರವಾದ ಬೆಟ್ಟವನ್ನಾಗಲಿ ಎಲೆಗಳುಳ್ಳ ಮರವನ್ನಾಗಲಿ ಅವರು ಕಂಡಾಗಲೆಲ್ಲಾ ಅವರು ಅಲ್ಲಿಗೆ ಹೋದರು ಮತ್ತು ವಿಗ್ರಹಗಳನ್ನು ಪೂಜಿಸಿದರು. ಅಲ್ಲಿ ಅವರು ಯಜ್ಞಗಳನ್ನೂ ನನ್ನನ್ನು ಕೋಪಗೊಳಿಸುವ ಕಾಣಿಕೆಗಳನ್ನೂ ಧೂಪವನ್ನೂ ಮತ್ತು ಪಾನದ್ರವ್ಯಾರ್ಪಣೆಗಳನ್ನೂ ಅರ್ಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ನಾನು ಪ್ರಮಾಣಪೂರ್ವಕವಾಗಿ ಅವರಿಗೆ ವಾಗ್ದಾನಮಾಡಿದ ದೇಶದಲ್ಲಿ ನಾನು ಅವರನ್ನು ಬರಮಾಡಿದ ಮೇಲೆ ಅವರು ಎತ್ತರವಾದ ಎಲ್ಲಾ ಗುಡ್ಡಗಳನ್ನೂ, ಸೊಂಪಾಗಿ ಬೆಳೆದಿರುವ ಮರಗಳನ್ನೂ ನೋಡಿ, ಅಲ್ಲಿ ತಮ್ಮ ಬಲಿಗಳನ್ನರ್ಪಿಸಿ ಸುವಾಸನೆಗಳನ್ನಿಟ್ಟು ಪಾನದ್ರವ್ಯವನ್ನು ಸುರಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 20:28
24 ತಿಳಿವುಗಳ ಹೋಲಿಕೆ  

ಆ ವಂಶದವರು ಎತ್ತರವಾದ ಎಲ್ಲಾ ಗುಡ್ಡಗಳ ಮೇಲೂ, ಎಲ್ಲಾ ಬೆಟ್ಟಗಳ ತುದಿಗಳಲ್ಲಿಯೂ, ಸೊಂಪಾದ ಎಲ್ಲಾ ಮರಗಳ ಕೆಳಗೂ ತಮ್ಮ ಸಮಸ್ತ ವಿಗ್ರಹಗಳಿಗೆ ಸುಗಂಧಹೋಮ ಮಾಡುತ್ತಿದ್ದ ದಟ್ಟವಾದ ಎಲ್ಲಾ ಏಲಾ ಮರಗಳ ಕೆಳಗೂ ಹತರಾಗಿ ತಮ್ಮ ಯಜ್ಞವೇದಿಗಳ ಸುತ್ತಲೂ ತಮ್ಮ ವಿಗ್ರಹಗಳ ನಡುವೆ ಬಿದ್ದಿರುವಾಗ ನಾನೇ ಯೆಹೋವನು ಎಂದು ಗೊತ್ತಾಗುವುದು.


ಅರಸನಾದ ಯೋಷೀಯನ ಕಾಲದಲ್ಲಿ ಯೆಹೋವನು ನನಗೆ ಹೀಗೆ ಹೇಳಿದನು, “ಭ್ರಷ್ಟಳಾದ ಇಸ್ರಾಯೇಲ್ ಮಾಡಿದ್ದನ್ನು ನೋಡಿದೆಯಾ? ಅವಳು ಎತ್ತರವಾದ ಎಲ್ಲಾ ಗುಡ್ಡಗಳನ್ನು ಹತ್ತಿ, ಸೊಂಪಾಗಿ ಬೆಳೆದಿರುವ ಎಲ್ಲಾ ಮರಗಳ ಕೆಳಗೆ ಹೋಗಿ ವ್ಯಭಿಚಾರಿಯಾಗಿ ನಡೆದಳಷ್ಟೆ.


ನಾನು ನಿಮ್ಮನ್ನು ಫಲವತ್ತಾದ ಸೀಮೆಗೆ ಕರೆತಂದು, ಅದರ ಫಲವನ್ನು ಮತ್ತು ಸಾರವನ್ನು ಅನುಭವಿಸುವ ಹಾಗೆ ಮಾಡಿದೆನು. ಆದರೆ ನೀವು ಆ ನನ್ನ ದೇಶವನ್ನು ಪ್ರವೇಶಿಸಿ, ಅದನ್ನು ಹೊಲೆ ಮಾಡಿ, ನನ್ನ ಸ್ವತ್ತನ್ನು ಅಸಹ್ಯಪಡಿಸಿದಿರಿ.


ಭೂಲೋಕದವರೆಲ್ಲರೂ ಹೋಗುವ ಮಾರ್ಗವನ್ನು ನಾನು ಈಗ ಅನುಸರಿಸಬೇಕಾಗಿದೆ. ನಿಮ್ಮ ದೇವರಾದ ಯೆಹೋವನು ನಿಮ್ಮ ವಿಷಯದಲ್ಲಿ ನುಡಿದ ಆಶೀರ್ವಾದದ ವಚನಗಳಲ್ಲಿ ಒಂದೂ ವ್ಯರ್ಥವಾಗಲಿಲ್ಲ. ಎಲ್ಲವೂ ತಪ್ಪದೆ ನೆರವೇರಿದೆ ಎಂಬುದು ನಿಮಗೆ ಮನದಟ್ಟಾಗಿದೆಯಲ್ಲ.


ಆ ಮೇಲೆ ಸಕಲ ದೇಶ ಶಿರೋಮಣಿಯಾದ ಯಾವ ದೇಶವನ್ನು ವಾಗ್ದಾನಮಾಡಿದೆನೋ, ಹಾಲೂ ಮತ್ತು ಜೇನು ಹರಿಯುವ ಆ ದೇಶಕ್ಕೆ ನಿಮ್ಮನ್ನು ಸೇರಿಸುವುದಿಲ್ಲ ಎಂದು ಅರಣ್ಯದಲ್ಲಿ ಅವರಿಗೆ ಪ್ರಮಾಣ ಮಾಡಿದೆನು.


ಆ ದಿನದಲ್ಲಿ ನಾನು ಅವರಿಗೆ, ‘ಸಕಲ ದೇಶ ಶಿರೋಮಣಿಯಾದ ದೇಶವನ್ನು ನಿಮಗಾಗಿ ನೋಡಿದ್ದೇನೆ; ನಾನು ನಿಮ್ಮನ್ನು ಐಗುಪ್ತ ದೇಶದೊಳಗಿಂದ ಉದ್ಧರಿಸಿ ಹಾಲೂ ಮತ್ತು ಜೇನೂ ಹರಿಯುವ ಆ ದೇಶಕ್ಕೆ ಸೇರಿಸುವೆನು’ ಎಂದು ಪ್ರಮಾಣಮಾಡಿದೆನು.


ನಾನು ನಿನಗೆ ಕೊಟ್ಟ ರೊಟ್ಟಿಯನ್ನೂ, ನಿನ್ನ ಆಹಾರಕ್ಕೆ ನಾನು ಒದಗಿಸಿದ ಗೋದಿಹಿಟ್ಟು, ಎಣ್ಣೆ, ಜೇನು ಇವುಗಳನ್ನೂ ನೀನು ಆ ಮೂರ್ತಿಗಳ ಮುಂದೆ ಸುಗಂಧಹೋಮ ಮಾಡಿದೆ; ಅಯ್ಯೋ, ಹೀಗಾಯಿತಲ್ಲ!” ಇದು ಕರ್ತನಾದ ಯೆಹೋವನ ನುಡಿ.


ತಮ್ಮ ಪೂರ್ವಿಕರಂತೆಯೇ ಅವರೂ ತಮಗೋಸ್ಕರ ಪೂಜಾ ಸ್ಥಳಗಳನ್ನು ನಿರ್ಮಿಸಿಕೊಂಡರು. ಪ್ರತಿಯೊಂದು ದಿಣ್ಣೆಗಳ ಮೇಲೆ ಹಾಗೂ ಚೆನ್ನಾಗಿ ಬೆಳೆದಿರುವ ಪ್ರತಿಯೊಂದು ಮರದ ಕೆಳಗೆ ಕಲ್ಲಿನ ಕಂಬಗಳನ್ನೂ ಮತ್ತು ಅಶೇರ ವಿಗ್ರಹಸ್ತಂಭಗಳನ್ನೂ ನಿಲ್ಲಿಸಿದರು.


ಇವರೂ ಇವರ ಪೂರ್ವಿಕರೂ ಬೆಟ್ಟಗುಡ್ಡಗಳಲ್ಲಿ ಧೂಪಹಾಕಿ, ನನ್ನನ್ನು ಹೀನೈಸಿ ನಡೆಸಿದ ಅಪರಾಧ ಕಾರ್ಯದ ಫಲವನ್ನು ಅದರ ಅಳತೆಗೆ ಸರಿಯಾಗಿ ಇವರ ಮಡಿಲಿಗೆ ಸುರಿಯುವೆನು” ಎಂದು ಯೆಹೋವನು ಹೇಳುತ್ತಾನೆ.


ಯೆರೂಸಲೇಮಿನ ಮನೆಗಳೂ, ಯೆಹೂದದ ಅರಸರ ಮನೆಗಳೂ ಅಂದರೆ ಯಾವ ಯಾವ ಮನೆಗಳ ಮಾಳಿಗೆಗಳ ಮೇಲೆ ಆಕಾಶದ ನಕ್ಷತ್ರಗಣಕ್ಕೆಲ್ಲ ಧೂಪಹಾಕಿ, ಅನ್ಯದೇವತೆಗಳಿಗೆ ಪಾನನೈವೇದ್ಯಗಳನ್ನು ಸುರಿದಿದ್ದಾರೋ, ಆ ಮನೆಗಳೆಲ್ಲಾ ಹೊಲಸಾಗಿ ತೋಫೆತ್ ಎಂಬ ಸ್ಥಳಕ್ಕೆ ಸಮಾನವಾಗುವವು.’”


“ನೀನು ಈ ದುಷ್ಕೃತ್ಯಗಳನ್ನೆಲ್ಲಾ ನಡೆಸಿದ್ದಲ್ಲದೆ ಪ್ರತಿಯೊಂದು ಚೌಕದಲ್ಲಿ ಮಂಟಪವನ್ನು ಮಾಡಿ ಜಗಲಿಯನ್ನು ಕಟ್ಟಿಕೊಂಡಿರುವೆ.


ನೀವು ಹೋಗುವ, ‘ಬಾಮಾ ಎಂಬ ಪೂಜಾಸ್ಥಾನ ಇದು ಎಂಥ ಸ್ಥಳ?’” (ಇಂದಿನ ವರೆಗೂ ಇಂಥಾ ಪೂಜಾಸ್ಥಾನಗಳಿಗೆ ಬಾಮಾ ಎಂದೇ ಹೆಸರು).


ಏಕೆಂದರೆ ಯಜ್ಞಪಶುಗಳನ್ನು ಬಯಲಿನಲ್ಲಿ ವಧಿಸುತ್ತಿದ್ದ ಇಸ್ರಾಯೇಲರು ಇನ್ನು ಮೇಲೆ ಅವುಗಳನ್ನು ದೇವದರ್ಶನದ ಗುಡಾರದ ಬಾಗಿಲಿಗೆ ಯಾಜಕನ ಬಳಿಗೆ ತಂದು, ಯೆಹೋವನ ಮುಂದೆ ಸಮಾಧಾನಯಜ್ಞವಾಗಿ ಯೆಹೋವನಿಗೆ ಸಮರ್ಪಿಸಬೇಕು.


ಇಸ್ರಾಯೇಲರು ತಮ್ಮ ದೇವರಾದ ಯೆಹೋವನಿಗೆ ವಿರುದ್ಧವಾದ ಗುಪ್ತವಾದ ದುಷ್ಟ ಕೃತ್ಯಗಳನ್ನು ನಡಿಸಿದರು. ಕಾವಲುಗಾರರ ಗೋಪುರವುಳ್ಳ ಚಿಕ್ಕ ಊರು ಮೊದಲುಗೊಂಡು ಕೋಟೆಕೊತ್ತಲುಗಳುಳ್ಳ ಪಟ್ಟಣದವರೆಗಿರುವ ಎಲ್ಲಾ ಊರುಗಳಲ್ಲಿ ತಮಗೋಸ್ಕರ ಪೂಜಾಸ್ಥಳಗಳನ್ನು ಏರ್ಪಡಿಸಿಕೊಂಡರು.


ಎಲ್ಲಾ ದಿನ್ನೆಗಳ ಮೇಲೆ ಮತ್ತು ಎಲ್ಲಾ ಹಸುರು ಮರಗಳ ಕೆಳಗೆ ಕಲ್ಲು ಕಂಬ, ಅಶೇರ ವಿಗ್ರಹಸ್ತಂಭ ಇವುಗಳನ್ನು ನಿಲ್ಲಿಸಿದರು.


“ನೀವು ಇಂತಹ ಕೃತ್ಯಗಳನ್ನು ಮಾಡಬಾರದು” ಎಂದು ಯೆಹೋವನು ಅವರಿಗೆ ಆಜ್ಞಾಪಿಸಿದ್ದರೂ ಅವರು ಆತನ ಅಜ್ಞೆಯನ್ನು ಮೀರಿ ಅವರು ವಿಗ್ರಹಗಳನ್ನು ಆರಾಧಿಸಿದರು.


ಇಸ್ರಾಯೇಲ್ ವಂಶವೂ ಮತ್ತು ಯೆಹೂದ ವಂಶವೂ ಚಿಕ್ಕಂದಿನಿಂದ ನನ್ನ ಚಿತ್ತಕ್ಕೆ ವಿರುದ್ಧವಾಗಿಯೇ ನಡೆಯುತ್ತಾ ಬಂದಿವೆ. ಹೌದು, ಇಸ್ರಾಯೇಲ್ ವಂಶದವರು ತಮ್ಮ ಕೈಕೆಲಸದ ಬೊಂಬೆಗಳಿಂದ ನನ್ನನ್ನು ರೇಗಿಸುತ್ತಲೇ ಬಂದಿದ್ದಾರೆ, ಇದು ಯೆಹೋವನ ನುಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು