Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 20:34 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

34 ಹೌದು, ನಾನು ಶಿಕ್ಷಾಹಸ್ತವನ್ನೆತ್ತಿ ಭುಜಪರಾಕ್ರಮವನ್ನು ತೋರಿಸಿ, ರೋಷಾಗ್ನಿಯನ್ನು ಸುರಿಸುತ್ತಾ ನಿಮ್ಮನ್ನು ಜನಾಂಗಗಳೊಳಗಿಂದ ಪಾರುಮಾಡಿ ನೀವು ಚದರಿಹೋಗಿರುವ ದೇಶಗಳಿಂದ ನಿಮ್ಮನ್ನು ಕೂಡಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

34 ಹೌದು, ನಾನು ಶಿಕ್ಷಾಹಸ್ತವನ್ನೆತ್ತಿ, ಭುಜಪರಾಕ್ರಮವನ್ನು ತೋರಿಸಿ, ರೋಷಾಗ್ನಿಯನ್ನು ಹರಿಸುತ್ತಾ, ನಿಮ್ಮನ್ನು ಜನಾಂಗಗಳಿಂದ ಬಿಡುಗಡೆಮಾಡಿ, ನೀವು ಚದರಿಹೋಗಿರುವ ದೇಶಗಳಿಂದ ನಿಮ್ಮನ್ನು ಒಂದುಗೂಡಿಸಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

34 ಹೌದು, ನಾನು ಶಿಕ್ಷಾಹಸ್ತವನ್ನೆತ್ತಿ ಭುಜಪರಾಕ್ರಮವನ್ನು ತೋರಿಸಿ ರೋಷಾಗ್ನಿಯನ್ನು ಸುರಿಸುತ್ತಾ ನಿಮ್ಮನ್ನು ಜನಾಂಗಗಳೊಳಗಿಂದ ಪಾರುಮಾಡಿ ನೀವು ಚದರಿಹೋಗಿರುವ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

34 ಪರದೇಶಗಳಿಂದ ನಾನು ನಿಮ್ಮನ್ನು ಹೊರತರುವೆನು. ನಾನು ಆ ದೇಶಗಳಲ್ಲಿ ನಿಮ್ಮನ್ನು ಚದರಿಸಿದೆನು. ಆದರೆ ಆ ದೇಶಗಳಿಂದ ನಾನು ನಿಮ್ಮನ್ನು ಒಟ್ಟುಗೂಡಿಸಿ ಹಿಂದಕ್ಕೆ ಬರಮಾಡುವೆನು. ನನ್ನ ಬಲವಾದ ಕೈಯನ್ನು ಮತ್ತು ಶಕ್ತಿಯುತವಾದ ತೋಳನ್ನು ಮೇಲೆತ್ತಿ ನಿಮ್ಮನ್ನು ಶಿಕ್ಷಿಸಿ ನನ್ನ ಕೋಪವನ್ನು ಪ್ರದರ್ಶಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

34 ಬಲವಾದ ಕೈಯಿಂದಲೂ, ಚಾಚಿದ ತೋಳಿನಿಂದಲೂ, ಸುರಿಸಿದ ರೋಷದಿಂದಲೂ, ನಿಮ್ಮನ್ನು ಜನರೊಳಗಿಂದ ಹೊರತಂದು ನೀವು ಚದರಿಹೋಗಿರುವ ದೇಶಗಳೊಳಗಿಂದ ನಿಮ್ಮನ್ನು ಒಂದಾಗಿ ಕೂಡಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 20:34
13 ತಿಳಿವುಗಳ ಹೋಲಿಕೆ  

ನನಗೆ ತಿರುಗಿ ಬಿದ್ದು ದ್ರೋಹಿಗಳಾದವರನ್ನು ನಿಮ್ಮೊಳಗಿಂದ ಕಳುಹಿಸಿ ಬಿಡುವೆನು; ಅವರು ಪ್ರವಾಸಿಗಳಾಗಿದ್ದ ದೇಶದಿಂದ ನಾನು ಅವರನ್ನು ಪಾರು ಮಾಡಿದರೂ, ಅವರು ಇಸ್ರಾಯೇಲ್ ದೇಶಕ್ಕೆ ಸೇರುವುದೇ ಇಲ್ಲ; ನಾನೇ ಯೆಹೋವನು” ಎಂದು ನಿಮಗೆ ಗೊತ್ತಾಗುವುದು.


“ತಪ್ಪಿಸಿಕೊಂಡದ್ದನ್ನು ಹುಡುಕುವೆನು, ಓಡಿಸಿದ್ದನ್ನು ಮಂದೆಗೆ ಸೇರಿಸುವೆನು, ದುರ್ಬಲವಾದದ್ದನ್ನು ಬಲಗೊಳಿಸುವೆನು, ಮುರಿದ ಅಂಗವನ್ನು ಕಟ್ಟುವೆನು; ಬಲಿತ ಕೊಬ್ಬಿದ ಕುರಿಗಳನ್ನು ಸಂಹರಿಸುವೆನು; ನಾನೇ ಅವುಗಳಿಗೆ ನ್ಯಾಯದಂಡನೆ ಎಂಬ ಮೇವನ್ನು ತಿನ್ನಿಸುವೆನು.”


ಆದಕಾರಣ ನನ್ನ ಉಗ್ರರೋಷಾಗ್ನಿಯು ಸುರಿದು ಯೆಹೂದದ ಊರುಗಳಲ್ಲಿಯೂ ಯೆರೂಸಲೇಮಿನ ಬೀದಿಗಳಲ್ಲಿಯೂ ಧಗಧಗಿಸಿತು; ಅವು ಈಗಲೂ ಹಾಳು ಪಾಳಾಗಿವೆ.


ವೈರಿಯ ಹಾಗೆ ಬಿಲ್ಲನ್ನು ಬೊಗ್ಗಿಸಿ, ವಿರೋಧಿಯಂತೆ ಬಲಗೈಯೆತ್ತಿ ನಿಂತು, ಸುಂದರ ಪ್ರಜೆಯನ್ನೆಲ್ಲಾ ಸಂಹರಿಸಿದ್ದಾನೆ; ಚೀಯೋನ್ ಗುಡಾರದ ಮೇಲೆ ತನ್ನ ರೋಷಾಗ್ನಿಯನ್ನು ಸುರಿಸಿದ್ದಾನೆ.


ಪೂರ್ವ, ಪಶ್ಚಿಮ, ಉತ್ತರ ಮತ್ತು ದಕ್ಷಿಣಗಳಲ್ಲಿಯೂ, ಸಮುದ್ರದ ಕಡೆಯಲ್ಲಿಯೂ ಇರುವ ದೇಶಗಳಿಂದ ಕೂಡಿಸಿದವರೆಲ್ಲರೂ ಸ್ತುತಿಮಾಡಲಿ.


ಐಗುಪ್ತ್ಯರು ಮನುಷ್ಯ ಮಾತ್ರದವರೇ, ದೇವರಲ್ಲ. ಅವರ ಅಶ್ವಗಳು ಆತ್ಮವಲ್ಲ, ಮಾಂಸಮಯವಾದವುಗಳು. ಯೆಹೋವನು ತನ್ನ ಕೈ ಚಾಚುವಾಗ ಸಹಾಯ ಮಾಡಿದವನು ಮತ್ತು ಸಹಾಯಪಡೆದವನು ಬಿದ್ದುಹೋಗುವನು. ಅಂತೂ ಎಲ್ಲರೂ ಒಟ್ಟಿಗೆ ಲಯವಾಗುವರು.


ಇಸ್ರಾಯೇಲಿನ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, ನನ್ನ ಉಗ್ರರೋಷಾಗ್ನಿಯು ಯೆರೂಸಲೇಮಿನವರ ಮೇಲೆ ಹೇಗೆ ಸುರಿಯಿತೋ ಹಾಗೆಯೇ ನೀವು ಐಗುಪ್ತದಲ್ಲಿ ಕಾಲಿಟ್ಟ ಕೂಡಲೆ ನನ್ನ ರೋಷಾಗ್ನಿಯು ನಿಮ್ಮ ಮೇಲೆಯೂ ಸುರಿಯುವುದು; ನೀವು ಅಪವಾದ, ವಿಸ್ಮಯ, ಶಾಪ ಮತ್ತು ದೂಷಣೆಗಳಿಗೆ ಗುರಿಯಾಗುವಿರಿ; ಈ ಸ್ಥಳವು ಮತ್ತೆ ನಿಮ್ಮ ಕಣ್ಣಿಗೆ ಬೀಳದು.’”


ನಾನು ಅವರ ಮೇಲೆ ಕೈಯೆತ್ತಿ ಅವರು ವಾಸವಾಗಿರುವ ದೇಶವನ್ನೆಲ್ಲಾ ಅರಣ್ಯದಿಂದ ದಿಬ್ಲದವರೆಗೂ ಹಾಳುಪಾಳುಮಾಡುವೆನು; ನಾನೇ ಯೆಹೋವನು ಎಂದು ಅವರಿಗೆ ಗೊತ್ತಾಗುವುದು.’”


ಇಗೋ, ನಾನು ಅವರನ್ನು ಉತ್ತರ ದೇಶದಿಂದ ಬರಮಾಡುವೆನು, ದಿಗಂತಗಳಿಂದ ಅವರನ್ನು ಕೂಡಿಸುವೆನು. ಅವರೊಂದಿಗೆ ಕುರುಡರನ್ನೂ, ಕುಂಟರನ್ನೂ, ಗರ್ಭಿಣಿಯರನ್ನೂ, ದಿನತುಂಬಿದ ಬಸುರಿಯರನ್ನೂ ಒಟ್ಟಿಗೆ ಕರೆತರುವೆನು. ಅವರು ದೊಡ್ಡ ಗುಂಪಾಗಿ ಇಲ್ಲಿಗೆ ಹಿಂದಿರುಗುವರು.


‘ಇಗೋ, ನಾನು ಕೋಪ, ರೋಷ, ಮಹಾಕ್ರೋಧಭರಿತನಾಗಿ ಈ ಜನರನ್ನು ಯಾವ ದೇಶಗಳಿಗೆ ಅಟ್ಟಿದೆನೋ ಆ ಸಕಲ ದೇಶಗಳಿಂದ ಈ ಸ್ಥಳಕ್ಕೆ ಪುನಃ ಕರೆದುಕೊಂಡು ಬಂದು ನಿರ್ಭಯವಾಗಿ ವಾಸಿಸುವಂತೆ ಮಾಡುವೆನು.


“ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ಅವರನ್ನು ಜನಾಂಗಗಳೊಳಗಿಂದ ಕೂಡಿಸುವೆನು, ಚದರಿರುವ ದೇಶಗಳಿಂದ ಅವರನ್ನು ಒಟ್ಟಿಗೆ ಬರಮಾಡಿ ಇಸ್ರಾಯೇಲ್ ದೇಶವನ್ನು ಅವರಿಗೆ ದಯಪಾಲಿಸುವೆನು.’


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು