Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 20:35 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

35 ಜನಾಂಗಗಳ ಮಧ್ಯದ ಅರಣ್ಯಕ್ಕೆ ಕರೆ ತಂದು ಅಲ್ಲೇ ಮುಖಾಮುಖಿಯಾಗಿ ನಿಮ್ಮೊಂದಿಗೆ ವಾದಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

35 ಜನಾಂಗಗಳ ಮಧ್ಯೆ ಮರುಭೂಮಿಗೆ ಕರೆತಂದು ಅಲ್ಲೇ ಮುಖಾಮುಖಿಯಾಗಿ ನಿಮ್ಮೊಂದಿಗೆ ವಾದಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

35 ದೇಶಗಳಿಂದ ನಿಮ್ಮನ್ನು ಕೂಡಿಸಿ ಜನಾಂಗಗಳ ಮಧ್ಯದ ಅರಣ್ಯಕ್ಕೆ ಕರತಂದು ಅಲ್ಲೇ ಮುಖಾಮುಖಿಯಾಗಿ ನಿಮ್ಮೊಂದಿಗೆ ವಾದಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

35 ನಾನು ಹಿಂದಿನ ಕಾಲದಲ್ಲಿ ಮಾಡಿದಂತೆ ಮರುಭೂಮಿಗೆ ನಿಮ್ಮನ್ನು ನಡೆಸುವೆನು. ಆದರೆ ಇದು ಅನ್ಯಜನಾಂಗಗಳು ವಾಸಿಸುವ ಸ್ಥಳದಲ್ಲಿರುವುದು ಮತ್ತು ನಾನು ಎದುರುಬದುರಾಗಿ ನಿಂತು ನಿಮಗೆ ನ್ಯಾಯತೀರಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

35 ನಿಮ್ಮನ್ನು ಜನರಿರುವ ಮರುಭೂಮಿಯೊಳಗೆ ತಂದು, ನಿಮ್ಮೊಂದಿಗೆ ಅಲ್ಲಿ ಮುಖಾಮುಖಿಯಾಗಿ ನ್ಯಾಯತೀರ್ಪು ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 20:35
19 ತಿಳಿವುಗಳ ಹೋಲಿಕೆ  

“ಆಹಾ, ನಾನು ಅವಳನ್ನು ಒಲಿಸಿ, ಅಡವಿಗೆ ಕರೆದುಕೊಂಡು ಹೋಗಿ, ಅವಳೊಂದಿಗೆ ಹೃದಯಂಗಮವಾಗಿ ಮಾತನಾಡುವೆನು.


ನಾನು ಐಗುಪ್ತದ ಅರಣ್ಯದಲ್ಲಿ ನಿಮ್ಮ ಪೂರ್ವಿಕರ ಸಂಗಡ ವಾದಿಸಿದಂತೆ, ನಿಮ್ಮ ಸಂಗಡಲೂ ವಾದಿಸುವೆನು” ಇದು ಕರ್ತನಾದ ಯೆಹೋವನ ನುಡಿ.


ಈಗ ಅದು ನೀರಿಲ್ಲದೆ ಬೆಂಗಾಡಿನಲ್ಲಿ ನಾಟಿಕೊಂಡಿದೆ.


ನಾನು ಅವನಿಗೆ ನನ್ನ ಬಲೆಯೊಡ್ಡುವೆನು, ನಾನು ಹಾಕಿದ ಉರುಲಿನಲ್ಲಿ ಸಿಕ್ಕಿಬೀಳುವನು, ಅವನನ್ನು ಬಾಬಿಲೋನಿಗೆ ತಂದು ಅಲ್ಲೇ ಅವನೊಂದಿಗೆ ವಾದಿಸಿ, ಅವನು ನನಗೆ ಮಾಡಿದ ಅಪರಾಧವನ್ನು ಅವನ ಮೇಲೆ ಹೊರಿಸುವೆನು.


ನೀನಾದರೋ, “ನಾನು ನಿರ್ದೋಷಿ, ಆತನ ಕೋಪವು ನನ್ನ ಮೇಲಿಂದ ನಿಶ್ಚಯವಾಗಿ ತೊಲಗಿಹೋಗಿದೆ” ಎಂದುಕೊಂಡಿದ್ದಿ; “ನಾನು ಪಾಪಮಾಡಲಿಲ್ಲ” ಎಂದು ನೀನು ಹೇಳಿದ ಕಾರಣ, ಇಗೋ, ನಾನು ನಿನಗೆ ನ್ಯಾಯ ತೀರಿಸುವೆನು.


ಆದರೆ ಆ ಸ್ತ್ರೀಯು ಮರುಭೂಮಿಯಲ್ಲಿದ್ದ ತನ್ನ ಸ್ಥಳಕ್ಕೆ ಹಾರಿಹೋಗುವುದಕ್ಕಾಗಿ ಆಕೆಗೆ ದೊಡ್ಡ ಹದ್ದಿನ ಎರಡು ರೆಕ್ಕೆಗಳು ಕೊಡಲ್ಪಟ್ಟವು. ಅಲ್ಲಿ ಆಕೆಯು ಒಂದು ಕಾಲ, ಎರಡು ಕಾಲ, ಅರ್ಧ ಕಾಲ ಸರ್ಪನಿಗೆ ಸಿಗದಂತೆ ಪೋಷಣೆ ಹೊಂದಿದಳು.


ಚೀಯೋನ್ ಯುವತಿಯೇ, ಹೆರುವವಳಂತೆ ವೇದನೆಗೆ ಒಳಗಾಗು, ಯಾತನೆಪಡು. ನೀನೀಗ ಪಟ್ಟಣದಿಂದ ಹೊರಟು ಕಾಡಿನಲ್ಲಿ ವಾಸಿಸುತ್ತಾ ಬಾಬೆಲಿಗೆ ಸೇರುವಿ. ಅಲ್ಲೇ ನಿನಗೆ ಉದ್ಧಾರವಾಗುವುದು. ಅಲ್ಲೇ ಯೆಹೋವನು ಶತ್ರುಗಳ ಕೈಯಿಂದ ನಿನ್ನನ್ನು ಬಿಡಿಸುವನು.


ಇಸ್ರಾಯೇಲರೇ, ಯೆಹೋವನ ವಾಕ್ಯವನ್ನು ಕೇಳಿರಿ; ಯೆಹೋವನು ದೇಶನಿವಾಸಿಗಳ ಮೇಲೆ ವಿವಾದ ಹಾಕಿದ್ದಾನೆ. ಏಕೆಂದರೆ ಪ್ರೀತಿ, ಸತ್ಯ, ದೇವಜ್ಞಾನಗಳು ದೇಶದಲ್ಲಿಲ್ಲ.


ನಾನು ಗೋಗನ ಸಂಗಡ ವ್ಯಾಜ್ಯಮಾಡುತ್ತಾ ಅವನನ್ನು ವ್ಯಾಧಿಗೂ, ಸಾವಿಗೂ ಗುರಿಮಾಡಿ, ನಾನು ಅವನ ಮೇಲೆಯೂ, ಅವನ ದಂಡುಗಳ ಮೇಲೆಯೂ, ಅವನೊಂದಿಗಿರುವ ಅನೇಕ ಜನಾಂಗಗಳ ಮೇಲೆಯೂ ವಿಪರೀತ ಮಳೆ, ದೊಡ್ಡ ಆನೆಕಲ್ಲು, ಬೆಂಕಿ, ಗಂಧಕ, ಇವುಗಳನ್ನು ಸುರಿಸುವೆನು.


ಬಹಳ ದಿನಗಳಾದ ಮೇಲೆ ನಾನು ನಿನ್ನನ್ನು ಕರೆಯುತ್ತೇನೆ; ಕೆಲವು ವರ್ಷಗಳ ನಂತರ ಖಡ್ಗದಿಂದ ಉಳಿದುಕೊಂಡ ದೇಶಕ್ಕೂ, ಯಾವಾಗಲೂ ಹಾಳಾಗಿದ್ದ ಇಸ್ರಾಯೇಲಿನ ಪರ್ವತಗಳ ಮೇಲೆಯೂ, ಜನಾಂಗಗಳೊಳಗಿಂದ ಕೂಡಿಸಲ್ಪಟ್ಟು ಎಲ್ಲರೂ ಭದ್ರವಾಗಿ ವಾಸಿಸುವವರ ಬಳಿಗೆ ನೀನು ಬರುವಿ.


ಆ ಶಬ್ದವು ಭೂಮಿಯ ಕಟ್ಟಕಡೆಯವರೆಗೆ ವ್ಯಾಪಿಸುವುದು, ಯೆಹೋವನಿಗೂ ಜನಾಂಗಗಳಿಗೂ ವ್ಯಾಜ್ಯವುಂಟಷ್ಟೆ, ಅವನು ನರಜನ್ಮದವರೆಲ್ಲರ ಸಂಗಡ ನ್ಯಾಯಕ್ಕೆ ನಿಲ್ಲುವನು, ದುಷ್ಟರನ್ನು ಖಡ್ಗಕ್ಕೆ ಗುರಿಮಾಡುವನು” ಇದು ಯೆಹೋವನ ನುಡಿ.


ಆದಕಾರಣ ನಾನು ನಿಮ್ಮೊಂದಿಗೆ ಇನ್ನೂ ವ್ಯಾಜ್ಯ ಮಾಡುವೆನು. ನಾನು ನಿಮ್ಮ ಸಂತಾನದವರೊಂದಿಗೂ ವ್ಯಾಜ್ಯ ಮಾಡುವೆನು” ಎಂದು ಯೆಹೋವನು ನುಡಿಯುತ್ತಾನೆ.


ಇಲ್ಲಿ ನಿಂತುಕೊಂಡು ಕೇಳಿರಿ; ಯೆಹೋವನು ನಿಮಗೋಸ್ಕರವೂ, ನಿಮ್ಮ ಪೂರ್ವಿಕರಿಗೋಸ್ಕರವೂ ನಡೆಸಿದ ನೀತಿಕಾರ್ಯಗಳನ್ನು ಕುರಿತು ಆತನ ಎದುರಿನಲ್ಲಿ ನಿಮ್ಮ ನೆನಪಿಗೆ ತಂದು, ನಿಮ್ಮನ್ನು ಎಚ್ಚರಿಸುತ್ತೇನೆ.


ದೇವರೇ, ಎದ್ದು ನಿನ್ನ ನ್ಯಾಯವನ್ನು ನಡೆಸುವವನಾಗು; ದುರ್ಮತಿಯು ಯಾವಾಗಲೂ ನಿನ್ನನ್ನು ನಿಂದಿಸುತ್ತಿರುವುದನ್ನು ಜ್ಞಾಪಿಸಿಕೋ.


ಯೆಹೋವನು ತನ್ನ ಜನರ ಹಿರಿಯರನ್ನು, ಅಧಿಕಾರಿಗಳನ್ನೂ ನ್ಯಾಯವಿಚಾರಣೆಗೆ ತರುವನು. ಏಕೆಂದರೆ, “ನೀವು ದ್ರಾಕ್ಷಿಯ ತೋಟವನ್ನು ನುಂಗಿಬಿಟ್ಟಿದ್ದೀರಿ. ಬಡವರಿಂದ ಕೊಳ್ಳೆಹೊಡೆದದ್ದು ನಿಮ್ಮ ಮನೆಗಳಲ್ಲಿ ಇದೆ.


ಕರ್ತನಾದ ಯೆಹೋವನು, “ಖಡ್ಗಕ್ಕೆ ಹತರಾಗದೆ ಉಳಿದ ಜನಕ್ಕೆ ಅರಣ್ಯದಲ್ಲಿ ದಯೆ ದೊರೆಯುವುದು; ಇಸ್ರಾಯೇಲ್ ವಿಶ್ರಾಂತಿಯನ್ನು ಹುಡುಕುವುದಕ್ಕೆ ಹೋಗುವಾಗ ಯೆಹೋವನು ದೂರದಿಂದ ಬಂದು ಅದಕ್ಕೆ ದರ್ಶನಕೊಟ್ಟು,


ಯೆಹೋವನು ಇಂತೆನ್ನುತ್ತಾನೆ, “ಆ ಕಾಲದಲ್ಲಿ ನೀನು ನನ್ನನ್ನು ಇನ್ನು ‘ಬಾಳೀ’ ಅನ್ನದೆ ‘ಈಶೀ’ ಅನ್ನುವಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು