Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 20:36 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

36 ನಾನು ಐಗುಪ್ತದ ಅರಣ್ಯದಲ್ಲಿ ನಿಮ್ಮ ಪೂರ್ವಿಕರ ಸಂಗಡ ವಾದಿಸಿದಂತೆ, ನಿಮ್ಮ ಸಂಗಡಲೂ ವಾದಿಸುವೆನು” ಇದು ಕರ್ತನಾದ ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

36 ನಾನು ಈಜಿಪ್ಟಿನ ಮರುಭೂಮಿಯಲ್ಲಿ ನಿಮ್ಮ ಪಿತೃಗಳ ಸಂಗಡ ವಾದಿಸಿದಂತೆ ನಿಮ್ಮ ಸಂಗಡವೂ ವಾದಿಸುವೆನು; ಇದು ಸರ್ವೇಶ್ವರನಾದ ದೇವರ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

36 ನಾನು ಐಗುಪ್ತದ ಅರಣ್ಯದಲ್ಲಿ ನಿಮ್ಮ ಪಿತೃಗಳ ಸಂಗಡ ವಾದಿಸಿದಂತೆ ನಿಮ್ಮ ಸಂಗಡಲೂ ವಾದಿಸುವೆನು; ಇದು ಕರ್ತನಾದ ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

36 ನಾನು ಈಜಿಪ್ಟಿನ ಮರುಭೂಮಿಯಲ್ಲಿ ನಿಮ್ಮ ಪೂರ್ವಿಕರನ್ನು ದಂಡಿಸಿದಂತೆ ನಿಮ್ಮನ್ನೂ ದಂಡಿಸುವೆನು.” ನನ್ನ ಒಡೆಯನಾದ ಯೆಹೋವನು ಇವುಗಳನ್ನು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

36 ಅದೇ ರೀತಿ ನಾನು ನಿಮ್ಮ ಪಿತೃಗಳ ಸಂಗಡ ಈಜಿಪ್ಟ್ ದೇಶದ ಮರುಭೂಮಿಯಲ್ಲಿ ನ್ಯಾಯತೀರ್ಪು ಮಾಡಿದೆನು. ಈಗಲೂ ನಿಮ್ಮ ಸಂಗಡ ನ್ಯಾಯತೀರ್ಪು ಮಾಡುವೆನು, ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 20:36
17 ತಿಳಿವುಗಳ ಹೋಲಿಕೆ  

“ಆದರೆ ಆ ಸಂತಾನದವರಾದರೋ ನನ್ನ ಮೇಲೆ ತಿರುಗಿ ಬಿದ್ದರು; ನನ್ನ ಆಜ್ಞೆಗಳನ್ನು ಅನುಸರಿಸಲಿಲ್ಲ; ಕೈಗೊಂಡವರಿಗೆ ಜೀವಾಧಾರವಾದ ನನ್ನ ವಿಧಿಗಳನ್ನು ಅನುಸರಿಸಿ ನಡೆಯಲಿಲ್ಲ; ನಾನು ನೇಮಿಸಿದ ಸಬ್ಬತ್ ದಿನಗಳನ್ನು ಹೊಲೆ ಮಾಡಿದರು; ಆದುದರಿಂದ ನಾನು ಅರಣ್ಯದಲ್ಲಿ ಇವರ ಮೇಲೆ ನನ್ನ ರೋಷಾಗ್ನಿಯನ್ನು ಸುರಿಸಿ, ನನ್ನ ಕೋಪವನ್ನು ತೀರಿಸಿಕೊಳ್ಳುವೆನು” ಅಂದುಕೊಂಡೆನು.


“‘ಆದರೆ ಇಸ್ರಾಯೇಲ್ ವಂಶದವರು ಅರಣ್ಯದಲ್ಲಿ ನನ್ನ ಮೇಲೆ ತಿರುಗಿ ಬಿದ್ದರು. ಕೈಗೊಳ್ಳುವವರಿಗೆ ಜೀವಾಧಾರವಾದ ನನ್ನ ಆಜ್ಞಾವಿಧಿಗಳನ್ನು ಅನುಸರಿಸದೆ ನಿರಾಕರಿಸಿದರು, ನಾನು ನೇಮಿಸಿದ ಸಬ್ಬತ್ ದಿನಗಳನ್ನು ವಿಶೇಷವಾಗಿ ಹೊಲೆಮಾಡಿದರು; ಆಗ ನಾನು ಇವರ ಮೇಲೆ ಅರಣ್ಯದೊಳಗೆ ನನ್ನ ರೋಷಾಗ್ನಿಯನ್ನು ಸುರಿಸಿ ಇವರನ್ನು ಧ್ವಂಸಮಾಡುವೆನು’ ಅಂದುಕೊಂಡೆನು.


ಆತನು ಶೂನ್ಯವೂ ಮತ್ತು ಭಯಂಕರವೂ ಆಗಿರುವ ಮರಳುಗಾಡಿನಲ್ಲಿ ಅವರನ್ನು ಕಂಡು ಗುರಾಣಿಯಂತೆ ಆವರಿಸಿಕೊಂಡನು. ಪ್ರೀತಿಯಿಂದ ಪರಾಂಬರಿಸಿ ಕಣ್ಣುಗುಡ್ಡೆಯಂತೆ ಕಾಪಾಡಿದನು.


ಯೆಹೋವನು ತನ್ನ ಜನರ ಹಿರಿಯರನ್ನು, ಅಧಿಕಾರಿಗಳನ್ನೂ ನ್ಯಾಯವಿಚಾರಣೆಗೆ ತರುವನು. ಏಕೆಂದರೆ, “ನೀವು ದ್ರಾಕ್ಷಿಯ ತೋಟವನ್ನು ನುಂಗಿಬಿಟ್ಟಿದ್ದೀರಿ. ಬಡವರಿಂದ ಕೊಳ್ಳೆಹೊಡೆದದ್ದು ನಿಮ್ಮ ಮನೆಗಳಲ್ಲಿ ಇದೆ.


ಆದಕಾರಣ ನಾನು ನಿಮ್ಮೊಂದಿಗೆ ಇನ್ನೂ ವ್ಯಾಜ್ಯ ಮಾಡುವೆನು. ನಾನು ನಿಮ್ಮ ಸಂತಾನದವರೊಂದಿಗೂ ವ್ಯಾಜ್ಯ ಮಾಡುವೆನು” ಎಂದು ಯೆಹೋವನು ನುಡಿಯುತ್ತಾನೆ.


ಆ ಶಬ್ದವು ಭೂಮಿಯ ಕಟ್ಟಕಡೆಯವರೆಗೆ ವ್ಯಾಪಿಸುವುದು, ಯೆಹೋವನಿಗೂ ಜನಾಂಗಗಳಿಗೂ ವ್ಯಾಜ್ಯವುಂಟಷ್ಟೆ, ಅವನು ನರಜನ್ಮದವರೆಲ್ಲರ ಸಂಗಡ ನ್ಯಾಯಕ್ಕೆ ನಿಲ್ಲುವನು, ದುಷ್ಟರನ್ನು ಖಡ್ಗಕ್ಕೆ ಗುರಿಮಾಡುವನು” ಇದು ಯೆಹೋವನ ನುಡಿ.


ನಾನು ಅವನಿಗೆ ನನ್ನ ಬಲೆಯೊಡ್ಡುವೆನು, ನಾನು ಹಾಕಿದ ಉರುಲಿನಲ್ಲಿ ಸಿಕ್ಕಿಬೀಳುವನು, ಅವನನ್ನು ಬಾಬಿಲೋನಿಗೆ ತಂದು ಅಲ್ಲೇ ಅವನೊಂದಿಗೆ ವಾದಿಸಿ, ಅವನು ನನಗೆ ಮಾಡಿದ ಅಪರಾಧವನ್ನು ಅವನ ಮೇಲೆ ಹೊರಿಸುವೆನು.


ಜನಾಂಗಗಳ ಮಧ್ಯದ ಅರಣ್ಯಕ್ಕೆ ಕರೆ ತಂದು ಅಲ್ಲೇ ಮುಖಾಮುಖಿಯಾಗಿ ನಿಮ್ಮೊಂದಿಗೆ ವಾದಿಸುವೆನು.


ಭೂಮಿಯ ಸಕಲ ಕುಲಗಳೊಳಗೆ ನಿಮ್ಮನ್ನು ಮಾತ್ರ ನನ್ನವರೆಂದು ಆರಿಸಿಕೊಂಡಿದ್ದೇನೆ. ಆದಕಾರಣ ನಿಮ್ಮ ಎಲ್ಲಾ ಪಾಪಗಳ ಫಲವನ್ನು ನೀವು ಅನುಭವಿಸುವಂತೆ ಮಾಡುವೆನು.


“‘ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನನ್ನ ಹಿಂಡೇ, ಇಗೋ, ನಾನು ನಿಮ್ಮಲ್ಲಿನ ಕುರಿಮೇಕೆಗಳಿಗೂ, ಟಗರುಹೋತಗಳಿಗೂ ಮಧ್ಯವರ್ತಿಯಾಗಿ ನ್ಯಾಯ ತೀರಿಸುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು