Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 20:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 “ನರಪುತ್ರನೇ, ಇವರಿಗೆ ನ್ಯಾಯತೀರಿಸಲು ನಿನ್ನ ಮನಸ್ಸು ಸ್ಥಿರವಾಗಿದೆಯೋ? ಇವರ ಪೂರ್ವಿಕರ ದುರಾಚಾರಗಳನ್ನು ಇವರಿಗೆ ಹೀಗೆ ತಿಳಿಸು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 “ನರಪುತ್ರನೇ, ಇವರಿಗೆ ನ್ಯಾಯತೀರಿಸಲು ನೀನೂ ಮನಸ್ಸು ಮಾಡಿರುವೆಯಾ? ಇವರ ಪಿತೃಗಳ ದುರಾಚಾರಗಳನ್ನು ಇವರಿಗೆ ಹೀಗೆ ತಿಳಿಸು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ನರಪುತ್ರನೇ, ಇವರಿಗೆ ನ್ಯಾಯತೀರಿಸಲು ನಿನ್ನ ಮನಸ್ಸು ಸ್ಥಿರವೋ, ಸ್ಥಿರವಾಗಿದೆಯೋ? ಇವರ ಪಿತೃಗಳ ದುರಾಚಾರಗಳನ್ನು ಇವರಿಗೆ ಹೀಗೆ ತಿಳಿಸು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ನರಪುತ್ರನೇ, ನೀನು ಅವರ ನ್ಯಾಯತೀರಿಸುವಿಯಾ? ಅವರ ಪೂರ್ವಿಕರು ಮಾಡಿದ ಭಯಂಕರ ಸಂಗತಿಗಳನ್ನು ನೀನು ಅವರಿಗೆ ಹೇಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 “ನೀನು ಅವರಿಗೆ ನ್ಯಾಯತೀರಿಸುವೆಯೋ? ಮನುಷ್ಯಪುತ್ರನೇ, ನೀನು ಅವರಿಗೆ ನ್ಯಾಯತೀರಿಸುವೆಯೋ? ಹಾಗಾದರೆ ಅವರ ಪಿತೃಗಳ ಅಸಹ್ಯವಾದವುಗಳನ್ನು ಅವರಿಗೆ ತಿಳಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 20:4
16 ತಿಳಿವುಗಳ ಹೋಲಿಕೆ  

“ನರಪುತ್ರನೇ, ರಕ್ತಮಯವಾದ ಆ ಪಟ್ಟಣಕ್ಕೆ ನ್ಯಾಯತೀರಿಸಲು ನಿನ್ನ ಮನಸ್ಸು ಸ್ಥಿರವಾಗಿದೆಯೋ? ಅದರ ದುರಾಚಾರಗಳನ್ನೆಲ್ಲಾ ಅದಕ್ಕೆ ಹೀಗೆ ತಿಳಿಸು,


ಯೆಹೋವನು ನನಗೆ ಹೀಗೆ ಹೇಳಿದನು, “ನರಪುತ್ರನೇ, ಒಹೊಲಳಿಗೂ, ಒಹೊಲೀಬಳಿಗೂ ನ್ಯಾಯತೀರುಸುವೆಯೋ? ಅವರ ದುರಾಚಾರಗಳನ್ನು ಅವರಿಗೆ ತಿಳಿಸು.


ದೇವಜನರು ಲೋಕಕ್ಕೆ ತೀರ್ಪುಮಾಡುವರೆಂಬುದು ನಿಮಗೆ ತಿಳಿಯದೋ? ಲೋಕವು ನಿಮ್ಮಿಂದ ತೀರ್ಪನ್ನು ಹೊಂದಬೇಕಾಗಿರುವಲ್ಲಿ ಅತ್ಯಲ್ಪವಾದ ಸಂಗತಿಗಳನ್ನು ಕುರಿತು ತೀರ್ಪುಮಾಡುವುದಕ್ಕೆ ನೀವು ಅನರ್ಹರಾಗಿದ್ದೀರೋ?


ನೀತಿಯುಳ್ಳ ಮನುಷ್ಯರು ಅವರಿಗೆ ನ್ಯಾಯತೀರಿಸಿ, ವ್ಯಭಿಚಾರಿಣಿಯರಿಗೂ, ರಕ್ತಸುರಿಸುವ ಹೆಂಗಸರಿಗೂ ತಕ್ಕ ದಂಡನೆಯನ್ನು ವಿಧಿಸುವರು; ಅವರು ವ್ಯಭಿಚಾರಿಣಿಯರು, ಅವರ ಕೈ ರಕ್ತಮಯವಾಗಿದೆ.”


ನೋಹ, ದಾನಿಯೇಲ, ಯೋಬ ಎಂಬುವರು ಆ ದೇಶದಲ್ಲಿದ್ದರೂ ನನ್ನ ಜೀವದಾಣೆ, ತಮ್ಮ ಸದಾಚಾರದಿಂದ ಸ್ವಂತಪ್ರಾಣಗಳನ್ನು ಉಳಿಸಿಕೊಳ್ಳುತ್ತಿದ್ದರೇ ಹೊರತು ತಮ್ಮ ಗಂಡು ಮಗನನ್ನಾಗಲಿ, ಹೆಣ್ಣು ಮಗಳನ್ನಾಗಲಿ ಉಳಿಸಿಕೊಳ್ಳುತ್ತಿರಲಿಲ್ಲ” ಇದು ಕರ್ತನಾದ ಯೆಹೋವನ ನುಡಿ.


ನೋಹ, ದಾನಿಯೇಲ, ಯೋಬ ಎಂಬ ಮೂವರು ಪುರುಷರು ಆ ದೇಶದಲ್ಲಿದ್ದರೂ ತಮ್ಮ ಸದಾಚಾರದಿಂದ ಸ್ವಂತ ಪ್ರಾಣಗಳನ್ನು ಮಾತ್ರ ಉಳಿಸಿಕೊಳ್ಳುತ್ತಿದ್ದರು” ಇದು ಕರ್ತನಾದ ಯೆಹೋವನ ನುಡಿ.


ಯೆಹೋವನು ನನಗೆ ಹೀಗೆ ಹೇಳಿದನು, “ಮೋಶೆಯು ಮತ್ತು ಸಮುವೇಲನು ನನಗೆ ವಿಜ್ಞಾಪಿಸಿದರೂ ನನ್ನ ಮನಸ್ಸು ಈ ಜನರ ಕಡೆಗೆ ತಿರುಗುವುದಿಲ್ಲ. ನನ್ನ ಕಣ್ಣೆದುರಿನಿಂದ ಇವರನ್ನು ನೂಕಿಬಿಡು, ತೊಲಗಿ ಹೋಗಲಿ!


ಆದಕಾರಣ ಈ ಜನರಿಗೋಸ್ಕರ ಬೇಡಿಕೊಳ್ಳಬೇಡ, ಇವರಿಗಾಗಿ ಮೊರೆಯಿಡಬೇಡ, ಪ್ರಾರ್ಥಿಸಲೂ ಬೇಡ. ಅವರು ತಮ್ಮ ಕೇಡಿನ ನಿಮಿತ್ತ ನನಗೆ ಮೊರೆಯಿಡುವಾಗ ನಾನು ಕೇಳುವುದಿಲ್ಲ” ಎಂದು ಹೇಳಿದನು.


“ನೀನಂತು ಈ ಜನರಿಗೋಸ್ಕರ ಬೇಡಿಕೊಳ್ಳಬೇಡ, ಇವರಿಗಾಗಿ ಮೊರೆಯಿಡಬೇಡ, ಪ್ರಾರ್ಥಿಸಬೇಡ, ನನಗೆ ವಿಜ್ಞಾಪಿಸಲೂ ಬೇಡ, ನಾನು ಕೇಳೆನು.


ಯೆರೂಸಲೇಮಿನ ನಿವಾಸಿಗಳೇ, ಯೆಹೂದದ ಜನರೇ, ಈಗ ನನಗೂ, ನನ್ನ ದ್ರಾಕ್ಷಿಯ ತೋಟಕ್ಕೂ ನ್ಯಾಯತೀರಿಸಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು