ಯೆಹೆಜ್ಕೇಲನು 20:41 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201941 ನಾನು ನಿಮ್ಮನ್ನು ಜನಾಂಗಗಳೊಳಗಿಂದ ಪಾರುಮಾಡಿ, ನೀವು ಚದರಿಹೋಗಿರುವ ದೇಶಗಳಿಂದ ತಂದು ಕೂಡಿಸುವಾಗ ನಿಮ್ಮ ಸುಗಂಧಹೋಮವನ್ನು ಅಂಗೀಕರಿಸಿ, ನಿಮಗೆ ಪ್ರಸನ್ನನಾಗುವೆನು; ಸಕಲ ಜನಾಂಗಗಳೆದುರಿಗೆ ನಿಮ್ಮ ರಕ್ಷಣೆಯ ಮೂಲಕ ನನ್ನ ಗೌರವವನ್ನು ಕಾಪಾಡಿಕೊಳ್ಳುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)41 ನಾನು ನಿಮ್ಮನ್ನು ಜನಾಂಗಗಳೊಳಗಿಂದ ಬಿಡುಗಡೆಮಾಡಿ, ನೀವು ಚದರಿಹೋಗಿರುವ ದೇಶಗಳಿಂದ ತಂದು ಸೇರಿಸುವಾಗ, ನಿಮ್ಮ ಸುಗಂಧಹೋಮವನ್ನು ಆಘ್ರಾಣಿಸಿ, ನಿಮಗೆ ಪ್ರಸನ್ನನಾಗುವೆನು; ಸಕಲ ಜನಾಂಗಗಳೆದುರಿಗೆ, ನಿಮ್ಮ ರಕ್ಷಣೆಯ ಮೂಲಕ, ನನ್ನ ಗೌರವವನ್ನು ಕಾಪಾಡಿಕೊಳ್ಳುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)41 ನಾನು ನಿಮ್ಮನ್ನು ಜನಾಂಗಗಳೊಳಗಿಂದ ಪಾರುಮಾಡಿ ನೀವು ಚದರಿಹೋಗಿರುವ ದೇಶಗಳಿಂದ ತಂದು ಕೂಡಿಸುವಾಗ ನಿಮ್ಮ ಸುಗಂಧಹೋಮವನ್ನು ಆಘ್ರಾಣಿಸಿ ನಿಮಗೆ ಪ್ರಸನ್ನನಾಗುವೆನು; ಸಕಲ ಜನಾಂಗಗಳೆದುರಿಗೆ ನಿಮ್ಮ ರಕ್ಷಣೆಯ ಮೂಲಕ ನನ್ನ ಗೌರವವನ್ನು ಕಾಪಾಡಿಕೊಳ್ಳುವೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್41 ಆಗ ನಿಮ್ಮ ಕಾಣಿಕೆಯ ಸುವಾಸನೆಯಿಂದ ಸಂತೋಷಭರಿತನಾಗುವೆನು. ಇದು ನಿಮ್ಮನ್ನು ಹಿಂದಕ್ಕೆ ನಿಮ್ಮ ದೇಶಕ್ಕೆ ಕರೆತಂದಾಗ ಆಗುವದು. ನಾನು ನಿಮ್ಮನ್ನು ಅನೇಕ ದೇಶಗಳಲ್ಲಿ ಚದರಿಸಿದೆನು. ಆದರೆ ನಾನು ನಿಮ್ಮನ್ನು ಒಟ್ಟುಗೂಡಿಸಿ ನಿಮ್ಮ ಮೂಲಕ ನನ್ನ ಪವಿತ್ರತೆಯನ್ನು ಪ್ರದರ್ಶಿಸುವೆನು. ಆ ಎಲ್ಲಾ ದೇಶಗಳವರು ಇದನ್ನು ನೋಡುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ41 ನಾನು ನಿಮ್ಮನ್ನು ಇತರ ಜನಾಂಗಗಳೊಳಗಿಂದ ಹೊರತಂದು, ನೀವು ಚದರಿಸುವ ದೇಶದೊಳಗಿಂದ ಕೂಡಿಸುವಾಗ, ನಿಮ್ಮನ್ನು ಸುವಾಸನೆಯಂತೆ ಅಂಗೀಕರಿಸುವೆನು. ಇತರ ಜನಾಂಗಗಳ ಮುಂದೆ ನನ್ನನ್ನು ಪರಿಶುದ್ಧನೆಂದು ತೋರಿಸುವೆನು. ಅಧ್ಯಾಯವನ್ನು ನೋಡಿ |