ಯೆಹೆಜ್ಕೇಲನು 20:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 “‘ಅವರಾದರೋ ನನ್ನ ಮಾತನ್ನು ನಿರಾಕರಿಸಿ, ನನ್ನ ಮೇಲೆ ತಿರುಗಿ ಬಿದ್ದರು; ತಮ್ಮ ಕಣ್ಣಿಗೆ ಕಾಣುವ ಇಷ್ಟವಾದ ಅಸಹ್ಯ ವಸ್ತುಗಳನ್ನು ಯಾರೂ ಬಿಸಾಡಿಬಿಡಲಿಲ್ಲ, ಐಗುಪ್ತದ ವಿಗ್ರಹಗಳನ್ನು ತ್ಯಜಿಸಲಿಲ್ಲ; ಆಗ ನಾನು ಇವರ ಮೇಲೆ ಐಗುಪ್ತ ದೇಶದೊಳಗೆ ನನ್ನ ರೋಷಾಗ್ನಿಯನ್ನು ಸುರಿಸಿ ನನ್ನ ಕೋಪವನ್ನು ತೀರಿಸಿಕೊಳ್ಳುವೆನು’ ಅಂದುಕೊಂಡೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಅವರಾದರೋ ನನ್ನ ಮಾತನ್ನು ಲೆಕ್ಕಿಸದೆ ನನ್ನ ವಿರುದ್ಧ ದಂಗೆಯೆದ್ದರು; ತಮ್ಮ ಕಣ್ಣಿಗೆ ಇಷ್ಟವಾದ ಅಸಹ್ಯವಸ್ತುಗಳನ್ನು ಯಾರೂ ಬಿಸಾಡಿಬಿಡಲಿಲ್ಲ. ಈಜಿಪ್ಟಿನ ವಿಗ್ರಹಗಳನ್ನು ತ್ಯಜಿಸಲಿಲ್ಲ. ಆಗ ನಾನು ಈಜಿಪ್ಟ್ ದೇಶದಲ್ಲಿ ಇವರ ಮೇಲೆ ನನ್ನ ರೋಷಾಗ್ನಿಯನ್ನು ಸುರಿಸಿ, ನನ್ನ ಕೋಪವನ್ನು ತೀರಿಸಿಕೊಳ್ಳುವೆನು ಎಂದುಕೊಂಡೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಅವರಾದರೋ ನನ್ನ ಮಾತನ್ನು ಕೇಳಲೊಲ್ಲದೆ ನನ್ನ ಮೇಲೆ ತಿರುಗಿಬಿದ್ದರು; ತಮ್ಮ ಕಣ್ಣಿಗೆ ಇಷ್ಟವಾದ ಅಸಹ್ಯವಸ್ತುಗಳನ್ನು ಯಾರೂ ಬಿಸಾಟುಬಿಡಲಿಲ್ಲ. ಐಗುಪ್ತದ ವಿಗ್ರಹಗಳನ್ನು ತ್ಯಜಿಸಲಿಲ್ಲ; ಆಗ ನಾನು ಇವರ ಮೇಲೆ ಐಗುಪ್ತದೇಶದೊಳಗೆ ನನ್ನ ರೋಷಾಗ್ನಿಯನ್ನು ಸುರಿಸಿ ನನ್ನ ಕೋಪವನ್ನು ತೀರಿಸಿಕೊಳ್ಳುವೆನು ಅಂದುಕೊಂಡೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಆದರೆ ಅವರು ನನ್ನ ವಿರುದ್ಧವಾಗಿ ಎದ್ದು ನನ್ನ ಮಾತುಗಳನ್ನು ಕೇಳದೆ ಹೋದರು. ತಮ್ಮ ವಿಗ್ರಹಗಳನ್ನು ಬಿಸಾಡಿಬಿಡಲಿಲ್ಲ. ಈಜಿಪ್ಟಿನ ವಿಗ್ರಹಗಳನ್ನು ತೊರೆದುಬಿಡಲಿಲ್ಲ. ಆದ್ದರಿಂದ ನಾನು ಅವರನ್ನು (ಇಸ್ರೇಲರನ್ನು) ಈಜಿಪ್ಟಿನಲ್ಲಿಯೇ ನಾಶಮಾಡಿ ನನ್ನ ರೋಷಾಗ್ನಿಯನ್ನು ತೀರಿಸಿಕೊಳ್ಳಲು ಆಲೋಚಿಸಿದೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 “ ‘ಆದರೆ ಅವರು ನನಗೆ ವಿರುದ್ಧವಾಗಿ ತಿರುಗಿಬಿದ್ದರು. ನನಗೆ ಕಿವಿಗೊಡಲಿಲ್ಲ. ಅವರು ತಮ್ಮ ಕಣ್ಣಿಗೆ ಅಸಹ್ಯವಾದವುಗಳನ್ನು ಬಿಸಾಡಲಿಲ್ಲ. ಅವರು ಈಜಿಪ್ಟಿನ ವಿಗ್ರಹಗಳನ್ನು ಬಿಡಲಿಲ್ಲ. ಆಗ ನಾನು ಅವರ ಮೇಲೆ ನನ್ನ ರೋಷವನ್ನು ಸುರಿಸಿ, ಈಜಿಪ್ಟ್ ದೇಶದಲ್ಲಿ ಅವರ ಮೇಲೆ ನನ್ನ ಕೋಪವನ್ನು ತೀರಿಸುವೆನೆಂದು ಹೇಳಿದೆನು. ಅಧ್ಯಾಯವನ್ನು ನೋಡಿ |