Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 21:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಶೋಧನೆಯು ಸಂಭವಿಸಿತು; ತಿರಸ್ಕರಿಸುತ್ತಿದ್ದ ರಾಜದಂಡವೇ ನಾಶವಾದರೆ ಗತಿಯೇನು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: ಸಂಭವಿಸಿದೆ ಪರಿಶೋಧನೆ ಏನು ಗತಿ, ರಾಜದಂಡವೇ ನಾಶವಾದರೆ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಶೋಧನೆಯು ಸಂಭವಿಸಿತು; ತಿರಸ್ಕರಿಸುತ್ತಿದ್ದ ರಾಜದಂಡವೇ ನಾಶವಾದರೆ ಗತಿಯೇನು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಯಾಕೆಂದರೆ ಶೋಧನೆಯು ಸಂಭವಿಸಿತು. ಆದರೆ ನೀನು ಬೆತ್ತದ ಶಿಕ್ಷೆ ಅನುಭವಿಸಲು ನಿರಾಕರಿಸಿದಿ. ಹಾಗಾದರೆ ನಾನು ನಿನಗೆ ಏನು ಉಪಯೋಗಿಸಬೇಕು? ಹೌದು, ಖಡ್ಗವೇ?’” ನನ್ನ ಒಡೆಯನಾದ ಯೆಹೋವನು ನುಡಿದಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 “ ‘ಪರಿಶೋಧನೆಯು ಖಂಡಿತವಾಗಿ ಬರುವುದಿಲ್ಲ. ಖಡ್ಗವು ತಿರಸ್ಕರಿಸುವ ಯೆಹೂದದ ರಾಜದಂಡವು ಮುಂದುವರಿಯದಿದ್ದರೆ ಹೇಗೆ? ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.’

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 21:13
7 ತಿಳಿವುಗಳ ಹೋಲಿಕೆ  

ಆ ಸಭೆಗಳವರಿಗೆ ಬಹಳ ಸಂಕಷ್ಟಗಳು ಬಂದರೂ ತಮ್ಮ ವಿಪರೀತವಾದ ಬಡತನದಲ್ಲಿದ್ದರೂ ಬಹು ಆನಂದದಿಂದ ತುಂಬಿದವರಾಗಿ ಅತ್ಯಂತ ಔದಾರ್ಯವುಳ್ಳವರಾದರು.


ಇಸ್ರಾಯೇಲಿನ ದೊರೆಯೇ, ದುಷ್ಟನೇ, ಭ್ರಷ್ಟನೇ! ನಿನಗೆ ಸಮಯವು ಹತ್ತಿರವಾಗಿದೆ; ಇದೇ ನಿನ್ನ ಅಪರಾಧದ ಕಡೆಗಾಲ.”


ಸಂಹರಿಸುವಂತೆ ಸಾಣೆ ಹಿಡಿದಿದೆ, ಮಿಂಚುವಂತೆ ಮಸೆದಿದೆ; ನಮ್ಮ ಕುಮಾರನ ರಾಜದಂಡವು ಉಳಿದ ಎಲ್ಲಾ ದಂಡಗಳನ್ನು ತಿರಸ್ಕರಿಸುತ್ತದಲ್ಲಾ ಎಂಬುದಾಗಿ ನಾವು ಸಂಭ್ರಮಪಡಬಹುದೇ?


ವಿಪತ್ತು ಆಕಸ್ಮಾತ್ತಾಗಿ ಜನರನ್ನು ಸಂಹರಿಸಲು, ನಿರ್ಮಲಚಿತ್ತರು ಮನಗುಂದುವುದನ್ನು ಆತನು ನೋಡಿ ಹಾಸ್ಯಮಾಡುವನು.


ದುಷ್ಟನು ತನ್ನ ಹೃದಯದ ಸಂಕಲ್ಪಗಳು ನೆರವೇರಿತೆಂದು ಕೊಚ್ಚಿಕೊಳ್ಳುತ್ತಾನೆ; ಲಾಭಬಡುಕನು ಯೆಹೋವನನ್ನು ದೂಷಿಸಿ ತಿರಸ್ಕರಿಸುತ್ತಾನೆ.


ನರಪುತ್ರನೇ, ಕೂಗಿಕೋ, ಗೋಳಾಡು! ಖಡ್ಗವು ನನ್ನ ಜನರ ಮೇಲೆಯೂ ಇಸ್ರಾಯೇಲಿನ ಪ್ರಭುಗಳೆಲ್ಲರ ಮೇಲೆಯೂ ಬಿದ್ದಿದೆ; ಆ ಪ್ರಭುಗಳು ನನ್ನ ಜನರೊಂದಿಗೆ ಖಡ್ಗಕ್ಕೆ ತುತ್ತಾಗಿದ್ದಾರೆ; ತೊಡೆಯನ್ನು ಬಡಿದುಕೋ.’”


ನರಪುತ್ರನೇ, ನೀನು ದೈವೋಕ್ತಿಯನ್ನು ಸಾರಿ ಚಪ್ಪಾಳೆ ಹೊಡಿ; ಖಡ್ಗವು ಎರಡರಷ್ಟು, ಮೂರರಷ್ಟು ಸಂಹರಿಸಲಿ! ಪ್ರಜೆಯನ್ನು ಹತಿಸುವ ಖಡ್ಗ! ಸುತ್ತಲು ಬೀಸಿ, ಅಧಿಪತಿಯನ್ನು ಹತಿಸುವ ಖಡ್ಗ!


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು