Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 21:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ನರಪುತ್ರನೇ, ನೀನು ದೈವೋಕ್ತಿಯನ್ನು ಸಾರಿ ಚಪ್ಪಾಳೆ ಹೊಡಿ; ಖಡ್ಗವು ಎರಡರಷ್ಟು, ಮೂರರಷ್ಟು ಸಂಹರಿಸಲಿ! ಪ್ರಜೆಯನ್ನು ಹತಿಸುವ ಖಡ್ಗ! ಸುತ್ತಲು ಬೀಸಿ, ಅಧಿಪತಿಯನ್ನು ಹತಿಸುವ ಖಡ್ಗ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ನರಪುತ್ರನೇ, ಪ್ರವಾದಿಸು, ಚಪ್ಪಾಳೆ ಬಡಿ, ಹತಿಸುವುದಾ ಖಡ್ಗ ಇಮ್ಮಡಿ ಮುಮ್ಮಡಿ. ಪ್ರಜೆಯನ್ನು ಸಂಹರಿಸುವುದಾ ಖಡ್ಗ ಅಧಿಪತಿಯನ್ನೇ ಸುತ್ತಲು ಬೀಸಿ ಹತಿಸುವುದಾ ಖಡ್ಗ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ನರಪುತ್ರನೇ, ನೀನು ದೈವಸಂಕಲ್ಪವನ್ನು ಸಾರಿ ಚಪ್ಪಾಳೆಬಡಿ; ಖಡ್ಗವು ಎರಡರಷ್ಟು ಮೂರರಷ್ಟು ಸಂಹರಿಸಲಿ! ಪ್ರಜೆಯನ್ನು ಹತಿಸುವ ಖಡ್ಗ! ಸುತ್ತಲು ಬೀಸಿ ಅಧಿಪತಿಯನ್ನು ಹತಿಸುವ ಖಡ್ಗ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಆತನು ಹೀಗೆ ಹೇಳಿದನು: “ನರಪುತ್ರನೇ, ಕೈತಟ್ಟಿ ನನ್ನ ಪರವಾಗಿ ಜನರೊಂದಿಗೆ ಮಾತನಾಡು. “ಖಡ್ಗವು ಎರಡು ಬಾರಿ ಕೆಳಕ್ಕೆ ಹಾಕಲ್ಪಡಲಿ, ಹೌದು, ಮೂರು ಬಾರಿ! ಈ ಖಡ್ಗವು ಜನರನ್ನು ಕೊಲ್ಲುವದಕ್ಕಾಗಿಯೇ ಇದೆ. ಇದು ಮಹಾಹತ್ಯೆ ಮಾಡುವದಕ್ಕಾಗಿ ಇದೆ. ಈ ಖಡ್ಗವು ಅವರನ್ನು ತೂರಿಹೋಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 “ಆದ್ದರಿಂದ ನೀನು ಮನುಷ್ಯಪುತ್ರನೇ, ಕೈಗೆ ಕೈತಟ್ಟಿ ಪ್ರವಾದಿಸು. ಹತರಾದವರ ಖಡ್ಗವಾದ ಆ ಖಡ್ಗವೇ ಎರಡರಷ್ಟು, ಮೂರರಷ್ಟು ಸಂಹರಿಸಲಿ. ಪ್ರಜೆಯನ್ನು ಹತಿಸುವ ಆ ಖಡ್ಗ ಸುತ್ತಲೂ ಬೀಸಿ ಆ ಕೊಠಡಿಗಳಲ್ಲಿ ಸೇರುವವರನ್ನು ಆ ದೊಡ್ಡ ಖಡ್ಗ ಸಂಹರಿಸುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 21:14
16 ತಿಳಿವುಗಳ ಹೋಲಿಕೆ  

ಯೆಹೋಯಾಕೀಮನ ಕಾಲದಲ್ಲಿ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಹೊರಟು ಬಂದನು. ಯೆಹೋಯಾಕೀಮನು ಅವನಿಗೆ ಅಧೀನನಾಗಿ ಮೂರು ವರ್ಷಗಳಾದ ನಂತರ ಅವನ ವಿರುದ್ಧವಾಗಿ ತಿರುಗಿ ಬಿದ್ದನು.


ಆಗ ಬಾಲಾಕನು ಬಿಳಾಮನ ಮೇಲೆ ಕೋಪಗೊಂಡು ಚಪ್ಪಾಳೆಹೊಡೆದು ಅವನಿಗೆ, “ನನ್ನ ಶತ್ರುಗಳನ್ನು ಶಪಿಸುವುದಕ್ಕೆ ನಿನ್ನನ್ನು ಕರೆದೆನು. ಆದರೆ ಇಗೋ, ನೀನು ಅವರನ್ನು ಮೂರು ಸಾರಿಯೂ ಆಶೀರ್ವದಿಸಿದೆ.


ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನೀನು ಚಪ್ಪಾಳೆಹೊಡೆದು ನೆಲವನ್ನು ಒದ್ದು ಹೀಗೆ ಹೇಳು, ‘ಆಹಾ, ಇಸ್ರಾಯೇಲ್ ವಂಶದವರ ಅಸಹ್ಯವಾದ ಕೆಟ್ಟಕೆಲಸಗಳೆಷ್ಟು! ಅವರು ಖಡ್ಗ, ಕ್ಷಾಮ, ವ್ಯಾಧಿಗಳಿಂದ ಸತ್ತೇ ಸಾಯುವರು.


ನಿಮ್ಮ ಪಾಪಗಳ ನಿಮಿತ್ತ ನಾನೇ ನಿಮ್ಮನ್ನು ಏಳರಷ್ಟಾಗಿ ಬಾಧಿಸುವೆನು.


“ನೀವು ನನ್ನ ಮಾತನ್ನು ಕೇಳದೆ ನನ್ನ ವಿರುದ್ಧವಾಗಿ ನಡೆದರೆ ನಾನು ನಿಮ್ಮ ಪಾಪಗಳ ನಿಮಿತ್ತ ಇನ್ನೂ ಏಳರಷ್ಟಾಗಿ ನಿಮ್ಮನ್ನು ಬಾಧಿಸುವೆನು.


ಪಾತಾಳದವರೆಗೆ ತೋಡಿಕೊಂಡು ಹೋದರೂ, ನನ್ನ ಕೈ ಅವರನ್ನು ಅಲ್ಲಿಂದ ಹಿಡಿದೆಳೆಯುವುದು, ಸ್ವರ್ಗದ ತನಕ ಹತ್ತಿದರೂ ಅಲ್ಲಿಂದಲೂ ಅವರನ್ನು ಇಳಿಸುವೆನು.


ಆಗ ನೆಬೂಕದ್ನೆಚ್ಚರನು ಕೋಪೋದ್ರೇಕದಿಂದ ಮುಖಭಾವವನ್ನು ಶದ್ರಕ್, ಮೇಶಕ್, ಅಬೇದ್ನೆಗೋ ಎಂಬುವವರ ಕಡೆಗೆ ತಿರುಗಿಸಿಕೊಂಡು ಬೆಂಕಿಯನ್ನು ನಿತ್ಯಕ್ಕಿಂತ ಏಳರಷ್ಟು ಹೆಚ್ಚಾಗಿ ಉರಿಸಬೇಕು ಎಂದು ಆಜ್ಞಾಪಿಸಿದನು.


ನಾನು ಚಪ್ಪಾಳೆ ಹೊಡೆದು ನನ್ನ ರೋಷವನ್ನು ತೀರಿಸಿಕೊಳ್ಳುವೆನು. ಕರ್ತನಾದ ನಾನೇ ಇದನ್ನು ನುಡಿದಿದ್ದೇನೆ.”


ಆಗ ಆತನು ನನಗೆ, “ನರಪುತ್ರನೇ, ಇಸ್ರಾಯೇಲ್ ವಂಶದ ಹಿರಿಯರೆಲ್ಲರೂ ನಾನಾ ರೂಪಗಳಿಂದ ಚಿತ್ರಿಸಲ್ಪಟ್ಟ ತಮ್ಮ ತಮ್ಮ ಕೋಣೆಗಳೊಳಗೆ ಕತ್ತಲೆಯಲ್ಲಿ ನಡೆಸುವ ಕೆಲಸವನ್ನು ನೋಡಿದೆಯಾ? ‘ಯೆಹೋವನು ನಮ್ಮನ್ನು ನೋಡುವುದಿಲ್ಲ, ಯೆಹೋವನು ದೇಶವನ್ನು ತೊರೆದುಬಿಟ್ಟಿದ್ದಾನೆ’ ಎಂದು ಮಾತನಾಡಿಕೊಳ್ಳುತ್ತಾರಷ್ಟೆ” ಎಂಬುದಾಗಿ ಹೇಳಿದನು.


ಮೀಕಾಯೆಹುವು, “ನೀನು ಅಡಗಿಕೊಳ್ಳುವುದಕ್ಕೆ ಒಳಗಿನ ಕೋಣೆಗೆ ಹೋಗುವ ದಿನದಲ್ಲಿ ಅದು ನಿನಗೆ ಗೊತ್ತಾಗುವುದು” ಎಂದು ಉತ್ತರಕೊಟ್ಟನು.


ಉಳಿದ ಇಪ್ಪತ್ತೇಳು ಸಾವಿರ ಮಂದಿ ಸೈನಿಕರು ಅಫೇಕ ಪಟ್ಟಣವನ್ನು ಹೊಕ್ಕರು. ಆದರೆ ಆ ಪಟ್ಟಣದ ಗೋಡೆಯು ಅವರ ಮೇಲೆ ಬಿದ್ದುದರಿಂದ ಅವರೂ ಸತ್ತರು. ಬೆನ್ಹದದನು ಆ ಪಟ್ಟಣವನ್ನು ಹೊಕ್ಕು ಒಂದು ಮನೆಯ ಒಳಕೋಣೆಯಲ್ಲಿ ಬಚ್ಚಿಟ್ಟುಕೊಂಡನು.


ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಶೋಧನೆಯು ಸಂಭವಿಸಿತು; ತಿರಸ್ಕರಿಸುತ್ತಿದ್ದ ರಾಜದಂಡವೇ ನಾಶವಾದರೆ ಗತಿಯೇನು?


ಖಡ್ಗವು ವಿಶ್ರಾಂತಿಗೊಳ್ಳುವುದು ಹೇಗೆ? ಅಷ್ಕೆಲೋನಿನ ಮತ್ತು ಕರಾವಳಿಯ ವಿಷಯವಾಗಿ ಯೆಹೋವನು ಅದಕ್ಕೆ ಅಪ್ಪಣೆಕೊಟ್ಟನಲ್ಲಾ; ಅಲ್ಲಿಗೆ ಅದನ್ನು ನೇಮಿಸಿದ್ದಾನೆ.”


‘ನಾನು ಅದರಲ್ಲಿ ವ್ಯಾಧಿಯನ್ನೂ, ಅದರ ಚೌಕಗಳಲ್ಲಿ ಸಂಹಾರವನ್ನೂ ಉಂಟು ಮಾಡುವೆನು, ಖಡ್ಗವು ಸುತ್ತುಮುತ್ತಲೂ ಅದರ ಮೇಲೆ ಬೀಸುತ್ತಿರುವಾಗ ಪ್ರಜೆಗಳು ಅದರ ನಡುವೆ ಹತರಾಗಿ ಬೀಳುವರು; ಆಗ ನಾನೇ ಯೆಹೋವನು’ ಎಂದು ಅವರಿಗೆ ತಿಳಿದು ಬರುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು