Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 21:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಖಡ್ಗವೇ, ಏಕಾಗ್ರವಾಗಿ ಬಲಕ್ಕೆ ಹೋಗು, ಸಿದ್ಧವಾಗಿ ಎಡಕ್ಕೆ ಸಾಗು, ನಿನ್ನ ಖಡ್ಗದ ಮೊನೆಯಿದ್ದ ಕಡೆಗೇ ಹೊರಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಖಡ್ಗವೇ, ಏಕಾಗ್ರವಾಗಿ ಹೋಗು ಬಲಕೆ ಸಜ್ಜಾಗಿ ಸಾಗು ಎಡಕೆ ಹೊರಡು ನಿನ್ನ ಮುಖವಿದ್ದ ಕಡೆಗೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 [ಖಡ್ಗವೇ,] ಏಕಾಗ್ರವಾಗಿ ಬಲಕ್ಕೆ ಹೋಗು, ಸಿದ್ಧವಾಗಿ ಎಡಕ್ಕೆ ಸಾಗು, ನಿನ್ನ ಮುಖವಿದ್ದ ಕಡೆಗೇ ಹೊರಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಖಡ್ಗವೇ, ಹರಿತವಾಗು, ಬಲಭಾಗದಲ್ಲಿ ತುಂಡರಿಸು; ಮುಂಭಾಗದಲ್ಲಿ ತುಂಡರಿಸು, ಎಡಭಾಗದಲ್ಲಿ ತುಂಡರಿಸು. ನಿನ್ನ ಖಡ್ಗವು ಯಾವ ಸ್ಥಳಕ್ಕೆ ನುಗ್ಗಬೇಕೆಂದಿದೆಯೋ ಆ ಸ್ಥಳಕ್ಕೆ ಹೋಗು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಖಡ್ಗವೇ ಬಲಕ್ಕೆ ಹೊಡೆ, ಎಡಕ್ಕೆ ಹೊಡೆ, ನಿನ್ನ ಅಲಗು ತಿರುಗಿದ ಕಡೆಗೆಲ್ಲಾ ಹೊಡೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 21:16
8 ತಿಳಿವುಗಳ ಹೋಲಿಕೆ  

ಅಮ್ಮೋನ್ಯರ ರಬ್ಬಾ ಎಂಬ ಪಟ್ಟಣಕ್ಕೂ, ಯೆಹೂದದೊಳಗೆ ಕೋಟೆ ಕೊತ್ತಲಗಳಿಂದ ಕೂಡಿದ ಯೆರೂಸಲೇಮಿಗೂ ಖಡ್ಗವು ಬರುವುದಕ್ಕೆ ದಾರಿಗಳನ್ನು ಮಾಡು.


ನಾನು ನಿನ್ನಲ್ಲಿನ ಶಿಷ್ಟರನ್ನೂ, ದುಷ್ಟರನ್ನೂ ಸಂಹರಿಸಬೇಕೆಂದಿರುವುದರಿಂದ ನನ್ನ ಖಡ್ಗವು ಒರೆಯಿಂದ ಹೊರಟು ದಕ್ಷಿಣದಿಂದ ಉತ್ತರದವರೆಗೆ ಸಕಲ ನರಪ್ರಾಣಿಗಳ ಮೇಲೆ ಬೀಳುವುದು.


ನಿನ್ನ ಉತ್ತರಕ್ಕೆ ತನ್ನ ಕುಮಾರ್ತೆಯರೊಂದಿಗೆ ವಾಸಿಸುವ ಸಮಾರ್ಯ ನಿನ್ನ ಅಕ್ಕ, ನಿನ್ನ ದಕ್ಷಿಣಕ್ಕೆ ನಿನ್ನ ಕುಮಾರ್ತೆಯರೊಂದಿಗೆ ವಾಸಿಸುವ ಸೊದೋಮ್ ನಿನ್ನ ತಂಗಿ.


“ಖಡ್ಗವೇ, ದೇಶವನ್ನು ಹೊಕ್ಕು ಹೋಗು ಎಂದು ಆಜ್ಞಾಪಿಸಿ, ನಾನು ಅದನ್ನು ಆ ದೇಶಕ್ಕೆ ತಂದು, ಜನ ಪಶುಗಳನ್ನು ಅದರೊಳಗಿಂದ ನಿರ್ಮೂಲಮಾಡುವ ಪಕ್ಷದಲ್ಲಿ,


ದೇಶವೆಲ್ಲಾ ನಿನ್ನ ಎದುರಿಗೆ ಇದೆ; ದಯವಿಟ್ಟು ನನ್ನನ್ನು ಬಿಟ್ಟು ಪ್ರತ್ಯೇಕವಾಗಿ ಹೋಗು. ನೀನು ಎಡಗಡೆಗೆ ಹೋದರೆ ನಾನು ಬಲಗಡೆಗೆ ಹೋಗುವೆನು; ನೀನು ಬಲಗಡೆಗೆ ಹೋದರೆ ನಾನು ಎಡಗಡೆಗೆ ಹೋಗುವೆನು” ಎಂದು ಹೇಳಿದನು.


ಅವರ ಹೃದಯವು ನೀರಾಗಿ ಬಹಳ ಜನರು ಎಡವಿ ಬೀಳುವಂತೆ ಸಂಹರಿಸುವ ಖಡ್ಗವನ್ನು ಅವರ ಪುರದ್ವಾರಗಳಿಗೆಲ್ಲಾ ತಂದಿದ್ದೇನೆ. ಆಹಾ, ಮಿಂಚಿನಂತೆ ಮಿಂಚುತ್ತದೆ, ವಧೆಗಾಗಿ ಹಂತವಾಗಿ ಸಿದ್ಧವಾಗಿದೆ!


ನಾನು ಚಪ್ಪಾಳೆ ಹೊಡೆದು ನನ್ನ ರೋಷವನ್ನು ತೀರಿಸಿಕೊಳ್ಳುವೆನು. ಕರ್ತನಾದ ನಾನೇ ಇದನ್ನು ನುಡಿದಿದ್ದೇನೆ.”


‘ನಾನು ಅದರಲ್ಲಿ ವ್ಯಾಧಿಯನ್ನೂ, ಅದರ ಚೌಕಗಳಲ್ಲಿ ಸಂಹಾರವನ್ನೂ ಉಂಟು ಮಾಡುವೆನು, ಖಡ್ಗವು ಸುತ್ತುಮುತ್ತಲೂ ಅದರ ಮೇಲೆ ಬೀಸುತ್ತಿರುವಾಗ ಪ್ರಜೆಗಳು ಅದರ ನಡುವೆ ಹತರಾಗಿ ಬೀಳುವರು; ಆಗ ನಾನೇ ಯೆಹೋವನು’ ಎಂದು ಅವರಿಗೆ ತಿಳಿದು ಬರುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು