Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 21:27 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಧ್ವಂಸ, ನಾನು ಧ್ವಂಸ ಮಾಡುವೆನು; ರಾಜ್ಯಕ್ಕೆ ಬಾಧ್ಯನು ಬರುವುದರೊಳಗೆ ಒಂದೂ ಇದ್ದಂತೆ ಇರದು; ಅವನಿಗೆ ರಾಜ್ಯವನ್ನು ವಹಿಸುವೆನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಧ್ವಂಸ, ಧ್ವಂಸ, ನಾನು ಧ್ವಂಸ ಮಾಡುವೆನು; ರಾಜ್ಯಕ್ಕೆ ಬಾಧ್ಯನು ಬರುವುದರೊಳಗೆ ಒಂದೂ ಇದ್ದಂತಿರದು; ಅವನಿಗೇ ರಾಜ್ಯವನ್ನು ವಹಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ನಾನು ದೊಬ್ಬಿಬಿಡುವೆನು, ದೊಬ್ಬಿಬಿಡುವೆನು, ದೊಬ್ಬಿಬಿಡುವೆನು; [ರಾಜ್ಯಕ್ಕೆ] ಬಾಧ್ಯನು ಬರುವದರೊಳಗೆ ಒಂದೂ ಇದ್ದಂತಿರದು; ಅವನಿಗೇ ರಾಜ್ಯವನ್ನು ವಹಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ನಾನು ಆ ನಗರವನ್ನು ಸಂಪೂರ್ಣವಾಗಿ ನಾಶಮಾಡುವೆನು ಆದರೆ ನಾನು ನೇಮಿಸಿದ ವ್ಯಕ್ತಿಯು ರಾಜನಾಗುವ ತನಕ ಇದು ಸಂಭವಿಸುವುದಿಲ್ಲ; ಅವನು ರಾಜನಾದ ಮೇಲೆ ಈ ಪಟ್ಟಣವನ್ನು ಅವನಿಗೊಪ್ಪಿಸುವೆನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಬಾ, ನಾಶನ! ನಾಶನ! ನಾನು ಅದನ್ನು ಪಾಳು ಬೀಳುವಂತೆ ಮಾಡುವೆನು. ಅದು ಯಾರದೋ, ಅವನು ಬರುವವರೆಗೆ ನಾನು ಅದನ್ನು ಪುನಃ ಕಟ್ಟಿಸುವುದಿಲ್ಲ; ಅವನಿಗೆ ನಾನು ಅದನ್ನು ಒಪ್ಪಿಸುವೆನು.’

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 21:27
40 ತಿಳಿವುಗಳ ಹೋಲಿಕೆ  

ಎಫ್ರಾತದ ಬೇತ್ಲೆಹೇಮೇ, ನೀನು ಯೆಹೂದದ ಗ್ರಾಮಗಳಲ್ಲಿ ಚಿಕ್ಕದ್ದಾಗಿದ್ದರೂ ಇಸ್ರಾಯೇಲನ್ನು ಆಳತಕ್ಕವನು ನಿನ್ನೊಳಗಿಂದ ನನಗಾಗಿ ಹೊರಡುವನು. ಆತನ ಕುಲದ ಮೂಲವು ಪುರಾತನವೂ ಮತ್ತು ಅನಾದಿಯೂ ಆದದ್ದು.


ಆತನು ಮಹಾಪುರುಷನಾಗುವನು, ಪರಾತ್ಪರನಾದ ದೇವರ ಕುಮಾರನೆಂದು ಕರೆಯಲ್ಪಡುವನು; ಇದಲ್ಲದೆ ದೇವರಾಗಿರುವ ಕರ್ತನು ಆತನ ಮೂಲಪಿತನಾದ ದಾವೀದನ ಸಿಂಹಾಸನವನ್ನು ಆತನಿಗೆ ಕೊಡುವನು.


“ನಾನು ನೇಮಿಸಿದ ಅರಸನನ್ನು ಚೀಯೋನೆಂಬ ನನ್ನ ಪರಿಶುದ್ಧ ಪರ್ವತದಲ್ಲಿಯೇ ಸ್ಥಾಪಿಸಿದ್ದಾಯಿತು” ಎಂದು ಹೇಳುವನು.


ಆತನು ಪರಲೋಕಕ್ಕೆ ಹೋಗಿ ದೇವರ ಬಲಗಡೆಯಲ್ಲಿದ್ದಾನೆ, ದೇವದೂತರು, ಅಧಿಕಾರಿಗಳು ಮತ್ತು ಶಕ್ತಿಗಳೂ ಆತನ ಸ್ವಾಧೀನವಾಗಿವೆ.


ನಿಜವಾದ ಬೆಳಕು ಲೋಕಕ್ಕೆ ಬರುವುದಾಗಿತ್ತು; ಆ ಬೆಳಕೇ ಪ್ರತಿ ಮನುಷ್ಯನಿಗೂ ಬೆಳಕನ್ನು ಕೊಡುವಂಥದು.


ಯೇಸು ಅವರ ಹತ್ತಿರಕ್ಕೆ ಬಂದು, “ಪರಲೋಕದಲ್ಲಿಯೂ, ಭೂಲೋಕದಲ್ಲಿಯೂ ಇರುವ ಎಲ್ಲಾ ಅಧಿಕಾರವು ನನಗೆ ಕೊಡಲ್ಪಟ್ಟಿದೆ.


“ಇಗೋ, ನನ್ನ ದೂತನನ್ನು ಕಳುಹಿಸುತ್ತೇನೆ, ಆತನು ನನ್ನ ಮುಂದೆ ದಾರಿಯನ್ನು ಸರಿಮಾಡುವನು; ನೀವು ಹಂಬಲಿಸುವ ಕರ್ತನು ತನ್ನ ಆಲಯಕ್ಕೆ ಪಕ್ಕನೇ ಬರುವನು; ಆಹಾ, ನಿಮಗೆ ಇಷ್ಟನಾದ ಒಡಂಬಡಿಕೆಯ ದೂತನು ಬರುತ್ತಾನೆ” ಇದು ಸೇನಾಧೀಶ್ವರನಾದ ಯೆಹೋವನ ನುಡಿ.


ಚೀಯೋನ್ ನಗರಿಯೇ, ಬಹು ಸಂತೋಷಪಡು; ಯೆರೂಸಲೇಮ್ ಪುರಿಯೇ, ಹರ್ಷಧ್ವನಿಗೈ! ನೋಡು, ನಿನ್ನ ಅರಸನು ನಿನ್ನ ಬಳಿಗೆ ಬರುತ್ತಾನೆ; ಆತನು ನ್ಯಾಯವಂತನೂ, ರಕ್ಷಿಸುವಾತನೂ, ಶಾಂತಗುಣವುಳ್ಳವನಾಗಿಯೂ ಕತ್ತೆಯನ್ನು, ಹೌದು, ಪ್ರಾಯದ ಕತ್ತೆ ಮರಿಯನ್ನು ಹತ್ತಿದವನಾಗಿಯೂ ಬರುತ್ತಾನೆ.


ಅನಂತರ ಅವರು ತಮ್ಮ ದೇವರಾದ ಯೆಹೋವನನ್ನೂ ಮತ್ತು ತಮ್ಮ ರಾಜನಾದ ದಾವೀದನನ್ನೂ ಪುನಃ ಆಶ್ರಯಿಸುವರು. ಹೌದು, ಅಂತ್ಯಕಾಲದಲ್ಲಿ ಯೆಹೋವನನ್ನೂ, ಆತನ ದಯೆಯನ್ನೂ ಭಯಭಕ್ತಿಯಿಂದ ಪಡೆಯುವರು.


ರಾಜದಂಡವನ್ನು ಹಿಡಿಯತಕ್ಕವನು ಶಿಲೋವಿನಿಂದ ಬರುವ ತನಕ ಆ ದಂಡವು ಯೆಹೂದನ ಕೈಯಿಂದ ತಪ್ಪುವುದಿಲ್ಲ. ಮುದ್ರೆ ಕೋಲು ಅವನ ಪಾದಗಳ ಬಳಿಯಿಂದ ಕದಲುವುದಿಲ್ಲ. ಅನ್ಯಜನಾಂಗಗಳೂ ಅವನಿಗೆ ವಿಧೇಯರಾಗಿರುವರು.


ಇದನ್ನು ತಿಳಿದು ಮನದಟ್ಟುಮಾಡಿಕೋ; ಯೆರೂಸಲೇಮ್ ಜೀರ್ಣೋದ್ಧಾರವಾಗಿ ಕಟ್ಟಲ್ಪಡಲಿ ಎಂಬ ದೈವೋಕ್ತಿಯು ಹರಡುವ ದಿನದಿಂದ ಅಭಿಷಿಕ್ತನಾದ ಪ್ರಭುವು ಬರುವುದರೊಳಗೆ ಏಳು ವಾರಗಳು ಕಳೆಯಬೇಕು! ಅದು ಪುನಃ ಕಟ್ಟಲ್ಪಟ್ಟು ಅರವತ್ತೆರಡು ವಾರ ಇರುವುದು; ಅದಕ್ಕೆ ಚೌಕವೂ ಕಂದಕವೂ ಇರುವವು; ಆ ಕಾಲವು ಬಹು ಕಷ್ಟಕಾಲ.


“ಆ ರಾಜರ ಕಾಲದಲ್ಲಿ ಪರಲೋಕದೇವರು ಒಂದು ರಾಜ್ಯವನ್ನು ಸ್ಥಾಪಿಸುವನು; ಅದು ಎಂದಿಗೂ ಅಳಿಯದು, ಅದರ ಪ್ರಾಬಲ್ಯವು ಬೇರೆ ಜನಾಂಗಕ್ಕೆ ಕದಲಿಹೋಗದು. ಆ ರಾಜ್ಯಗಳನ್ನೆಲ್ಲಾ ಭಂಗಪಡಿಸಿ ನಿರ್ನಾಮಮಾಡಿ ಶಾಶ್ವತವಾಗಿ ನಿಲ್ಲುವುದು.


ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಶೋಧನೆಯು ಸಂಭವಿಸಿತು; ತಿರಸ್ಕರಿಸುತ್ತಿದ್ದ ರಾಜದಂಡವೇ ನಾಶವಾದರೆ ಗತಿಯೇನು?


ಆತನಲ್ಲಿ ಜೀವವಿತ್ತು. ಆ ಜೀವವು ಮನುಷ್ಯರಿಗೆ ಬೆಳಕಾಗಿತ್ತು.


ಅದೇನೆಂದರೆ, ಈ ಹೊತ್ತು ನಿಮಗೋಸ್ಕರ ದಾವೀದನೂರಲ್ಲಿ ಒಬ್ಬ ರಕ್ಷಕನು ಹುಟ್ಟಿದ್ದಾನೆ. ಆತನು ಕರ್ತನಾಗಿರುವ ಕ್ರಿಸ್ತನೇ.


ತನ್ನ ಸೇವಕನಾದ ದಾವೀದನ ಮನೆತನದಲ್ಲಿ, ನಮಗೋಸ್ಕರ ಒಬ್ಬ ರಕ್ಷಣಾವೀರನನ್ನು ಎಬ್ಬಿಸಿದ್ದಾನೆ.


ನನ್ನ ನಾಮದಲ್ಲಿ ಭಯಭಕ್ತಿಯಿಟ್ಟಿರುವ ನಿಮಗೋ ದೇವರ ಧರ್ಮವೆಂಬ ಸೂರ್ಯನು ಸ್ವಸ್ಥತೆಯನ್ನುಂಟುಮಾಡುವ ಕಿರಣಗಳುಳ್ಳವನಾಗಿ ಮೂಡುವನು; ಕೊಟ್ಟಿಗೆಯಿಂದ ಬಿಟ್ಟ ಕರುಗಳಂತೆ ನೀವು ಹೊರಟು ಬಂದು ಕುಣಿದಾಡುವಿರಿ; ದುಷ್ಟರನ್ನು ತುಳಿದುಬಿಡುವಿರಿ.


ಆಗ ಸಮಸ್ತ ಜನಾಂಗಗಳ ಇಷ್ಟವಸ್ತುಗಳು ಬಂದು ಒದಗಲು, ಈ ಆಲಯವನ್ನು ವೈಭವದಿಂದ ತುಂಬಿಸುವೆನು’ ಇದು ಸೇನಾಧೀಶ್ವರನಾದ ಯೆಹೋವನ ನುಡಿ.


“‘ನನ್ನ ಹಿಂಡನ್ನು ಕಾಯಲಿಕ್ಕೆ ಒಬ್ಬನೇ ಕುರುಬನನ್ನು ನೇಮಿಸುವೆನು; ನನ್ನ ಸೇವಕನಾದ ದಾವೀದನೆಂಬ ಆ ಕುರುಬನು ಅದನ್ನು ಮೇಯಿಸುವನು; ಹೌದು, ಅದರ ಕುರುಬನಾಗಿ ಅದನ್ನು ಮೇಯಿಸುತ್ತಾ ಬರುವನು.


ಆಗ ನಾನು ಯಾಕೋಬನ ಸಂತಾನದವರನ್ನು ತ್ಯಜಿಸಿ ಅಬ್ರಹಾಮ, ಇಸಾಕ, ಯಾಕೋಬ, ಇವರ ಸಂತತಿಯನ್ನು ಆಳತಕ್ಕ ಒಡೆಯರನ್ನು ನನ್ನ ದಾಸನಾದ ದಾವೀದನ ವಂಶದಿಂದ ಆರಿಸದೆ ಆ ವಂಶದವರನ್ನು ನಿರಾಕರಿಸಿಬಿಟ್ಟೆನು. ನಾನು ಅವರನ್ನು ದುರವಸ್ಥೆಯಿಂದ ತಪ್ಪಿಸಿ ಕರುಣಿಸೇ ಕರುಣಿಸುವೆನು.”


ಅವರಲ್ಲೇ ಒಬ್ಬನು ಅವರಿಗೆ ಪ್ರಭುವಾಗಿರುವನು, ಅವರ ವಂಶದವನೇ ಅವರನ್ನಾಳುವನು. ನಾನು ಅವನನ್ನು ನನ್ನ ಹತ್ತಿರಕ್ಕೆ ಬರಗೊಡಿಸಲಾಗಿ ಅವನು ನನ್ನ ಸನ್ನಿಧಾನಕ್ಕೆ ಸೇರುವನು. ನನ್ನನ್ನು ಸಮೀಪಿಸುವುದಕ್ಕೆ ಯಾರು ಧೈರ್ಯಗೊಂಡಾರು? ಇದು ಯೆಹೋವನ ನುಡಿ.”


ಇಸ್ರಾಯೇಲರೋ ಬಲಗೊಂಡವರು, ಯಾಕೋಬ್ಯರಿಗೇ ದೊರೆತನವಾಯಿತು, ಪಟ್ಟಣಗಳಿಂದ ತಪ್ಪಿಸಿಕೊಂಡವರೂ ನಾಶವಾದರು” ಎಂದನು.


ಆಗ ನನ್ನ ದಾಸನಾದ ದಾವೀದನಿಗೂ, ನನ್ನ ಸೇವಕರಾಗಿರುವ ಲೇವಿಯರಾದ ಯಾಜಕರಿಗೂ ನಾನು ಮಾಡಿದ ನಿಬಂಧನೆಯು ನಿಂತು ಹೋಗಿ ದಾವೀದನ ಸಿಂಹಾಸನಾಸೀನನಾಗಿ ಆಳತಕ್ಕ ಅವನ ಸಂತಾನದವನೊಬ್ಬನೂ ಉಳಿಯದೆ ಹೋದಾನು.


ಯೆಹೋವನಾದ ನಾನು ನನ್ನ ಜನರ ದೇವರಾಗಿರುವೆನು; ನನ್ನ ಸೇವಕನಾದ ದಾವೀದನು ಅವರನ್ನಾಳುವ ಅರಸನಾಗಿರುವನು; ಯೆಹೋವನಾದ ನಾನೇ ಇದನ್ನು ನುಡಿದಿದ್ದೇನೆ.


ಇಗೋ, ಮುತ್ತಿಗೆಯ ದಿಬ್ಬಗಳು ಪಟ್ಟಣವನ್ನು ಆಕ್ರಮಿಸುವುದಕ್ಕೆ ಬಂದಿದ್ದಾರೆ; ಪಟ್ಟಣವು ಖಡ್ಗ, ಕ್ಷಾಮ ಮತ್ತು ವ್ಯಾಧಿಗಳಿಂದ ಕ್ಷೀಣವಾಗಿ ವಿರೋಧಿಗಳಾದ ಕಸ್ದೀಯರ ಕೈಗೆ ಸಿಕ್ಕಿದೆ; ನೀನು ನುಡಿದದ್ದು ನೆರವೇರಿದೆ, ಇಗೋ, ನೋಡುತ್ತಿದ್ದಿ.


ಚಿದ್ಕೀಯನ ಆಳ್ವಿಕೆಯ ಒಂಭತ್ತನೆಯ ವರ್ಷ ಹತ್ತನೆಯ ತಿಂಗಳಿನ ಹತ್ತನೆಯ ದಿನದಲ್ಲಿ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಸರ್ವಸೈನ್ಯ ಸಹಿತನಾಗಿ ಯೆರೂಸಲೇಮಿಗೆ ಬಂದು, ಅಲ್ಲಿ ಪಾಳೆಯ ಮಾಡಿಕೊಂಡು ಅದರ ಸುತ್ತಲು ಮಣ್ಣಿನ ದಿಬ್ಬವನ್ನು ಮಾಡಿ,


ಆ ನಕ್ಷೆಯ ಸುತ್ತಲು ದಿಬ್ಬಹಾಕಿ, ಅಡ್ಡಕಟ್ಟಿ, ಪಾಳೆಯಗಳನ್ನು ಮಾಡಿ, ಕತ್ತರಿಸುವ ಯಂತ್ರಗಳನ್ನು ನಿಲ್ಲಿಸಿ, ಅದಕ್ಕೆ ಮುತ್ತಿಗೆ ಹಾಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು